Friday, June 19, 2020

ನೂತನ ಕುಲಪತಿಯಾಗಿ ಪ್ರೊ.ಓಂಕಾರ ಕಾಕಡೆ ನೇಮಕ



ಈ ದಿವಸ ವಾರ್ತೆ
ವಿಜಯಪುರ: ಹಾಲಿ ಕುಲಪತಿ ಪ್ರೊ..ಸಬಿಹಾ ಭೂಮಿಗೌಡ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಜೂನ್ 19ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ವಜುಬಾಯಿ ವಾಲಾ ಅವರು ಆದೇಶ ಹೊರಡಿಸಿದ್ದಾರೆ.  

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ಈ ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ 20-6-2020ರಿಂದ 13-12-2020ರ ವರೆಗೆ ಅಥವಾ ನೂತನ ಕುಲಪತಿಗಳ ನೇಮಕ ಇದರಲ್ಲಿ ಯಾವುದು ಮೊದಲೋ ಅಲ್ಲಿಯ ವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ಪ್ರೊ.ಸಬಿಹಾ ಭೂಮಿಗೌಡ ಅವರು ನೂತನ ಕುಲಪತಿ ಪ್ರೊ.ಓಂಕಾರ ಕಾಕಡೆ ಅವರಿಗೆ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ.ಸಬಿಹಾ ಅವರನ್ನು ವಿಶ್ವವಿದ್ಯಾನಿಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರೊ.ಸಬಿಹಾ ಅವರು ತಮ್ಮ ಮಾತೃ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠಕ್ಕೆ ಮರಳಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.


ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕವಾಗಿರುವ ಪ್ರ್ರೊ.ಓಂಕಾರ ಕಾಕಡೆ ಅವರು, ಪ್ರೊ.ಸಬಿಹಾ ಭೂಮಿಗೌಡ ಅವರಿಂದ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು.  ಚಿತ್ರದಲ್ಲಿ ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ.ಪಿ.ಜಿ.ತಡಸದ, ಆರ್ಥಿಕ ಅಧಿಕಾರಿ ಪ್ರೊ.ವಿಜಯಾ ಕೋರಿಶೆಟ್ಟಿ ಮತ್ತಿತರರು ಇದ್ದಾರೆ. 

1 comment: