Monday, June 8, 2020

ಪೊಲೀಸ್ ಇಲಾಖೆ ಅಧಿಕಾರಿ ಸಿಬ್ಬಂದಿಗಳಿಗೆ ಇಂದಿನಿಂದ ಜಿಲ್ಲಾ ಪ್ರಮಾಣಿತ ಕಾರ್ಯಾಚರಣೆ ವಿಧಾನ ಜಾರಿ -ಎಸ್.ಪಿ. ಅನುಪಮ್ ಅಗರವಾಲ್


ಈ ದಿವಸ ವಾರ್ತೆ
ವಿಜಯಪುರ: ಕೋವಿಡ್-19 ಸಾಂಕ್ರಾಮಿಕ ರೋಗದ ಸಂಕಷ್ಠದ ಪರಿಸ್ಥಿತಿಯಲ್ಲಿ ಸಾರ್ವಜನಿಕರೊಂದಿಗೆ ಬೆರೆಯುವುದರ ಜೊತೆಗೆ ರಕ್ಷಣೆಗೆ ಶ್ರಮಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದ್ಧಿಗಳಿಗೆ ಜಿಲ್ಲಾ ಪ್ರಮಾಣಿತ ಕಾರ್ಯಾಚರಣೆ ವಿಧಾನ ಇಂದಿನಿಂದ ಜಾರಿಗೆ ತಂದಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರು ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್.ಓ.ಪಿ ಬಿಡುಗಡೆ ಸಮಾರಂಭ ಅಂಗವಾಗಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೋವಿಡ್-19 ಸಾಂಕ್ರಮಿಕ ರೋಗದ ವಿರುದ್ದ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಹಗಲು ರಾತ್ರಿ ಹೋರಾಡುತ್ತಿದ್ದು, ಜಿಲ್ಲಾ ಪ್ರಮಾಣಿತ ಕಾರ್ಯಾಚರಣೆ ವಿಧಾನ ಇಂದಿನಿಂದ ಜಾರಿಗೆ ತಂದ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದ್ಧಿಗಳ ಕಾರ್ಯಾಚರಣೆ ವಿಭಿನ್ನವಾಗಲಿದೆ ಎಂದರು.
ಈ ಜಿಲ್ಲಾ ಪ್ರಮಾಣಿತ ಕಾರ್ಯಾಚರಣೆ ವಿಧಾನ ಅಂಗವಾಗಿ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ. ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕರ ದೂರುಗಳಿಗೆ, ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಗಳು ಸೇರಿದಂತೆ ಶಾಂತಿ ಸೂವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ತಮ್ಮ ಸುರಕ್ಷತೆಯು ಗಮನದಲ್ಲಿಡುವ ಅಗತ್ಯವಿದೆ. ಕಾರಣ ಈ ವಿಧಾನ ಕೋವಿಡ್ ಪರಿಸ್ಥಿತಿಯ ಈ ಸಂದರ್ಭದಲ್ಲಿ ಹೆಚ್ಚು ನೆರವಾಗಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಜಿಲ್ಲಾ ಪ್ರಮಾಣಿತ ಕಾರ್ಯಾಚರಣೆ ವಿಧಾನ ಇಂದಿನಿಂದ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಎಸ್.ಓ.ಪಿ ರಾಜ್ಯಾದ್ಯಂತ ಪ್ರಾರಂಭವಾದ ನಂತರ ಮತ್ತಷ್ಟು ಮುತುವರ್ಜಿ ವಹಿಸಲಾಗುವುದು. ಈವರೆಗೆ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಮಾಧ್ಯಮ ಸ್ನೆಹಿತರು ತೋರಿರುವ ಸಹಕಾರ ಅಮೋಘವಾಗಿದೆ. ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಮಾತನಾಡಿ ಕೋವಿಡ್-19 ಸಂಕಷ್ಠದ ಪರಿಸ್ಥಿತಿಯಲ್ಲಿ ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಸಾರ್ವಜನಿಕರು ಸಮಾಜದಲ್ಲಿ ನೆಮ್ಮದಿ ಬದುಕು ಸಾಗಿಸಲು ಎಲ್ಲರು ನೀಡುತ್ತಿರುವ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ್ ರೆಡ್ಡಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅವರು ಆಸ್ಪತ್ರೆಯಿಂದ ಚೇತರಿಕೆಯಾಗಿ ಇಂದು ಕಚೇರಿಗೆ ಹಾಜರಾದ ಹಿನ್ನಲೆಯಲ್ಲಿ ಸರಳ ಸಮಾರಂಭ ಏರ್ಪಡಿಸಿ ಅವರನ್ನು ಆತ್ಮಿಯವಾಗಿ ಸ್ವಾಗತಿಸಲಾಯಿತು. ಡಿ.ವೈ.ಎಸ್.ಪಿಗಳು, ಸಿ.ಪಿ.ಐ ಅಧಿಕಾರಿಗಳು, ಮತ್ತು ಇತರೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

No comments:

Post a Comment