Thursday, June 4, 2020

ಜಿಲ್ಲೆಯಲ್ಲಿ ಗುರುವಾರ ಮತ್ತೆ ಒಬ್ಬರಿಗೆ ಕೋವಿಡ್-೧೯ ಸೋಂಕು ದೃಢ : ಸೋಂಕಿತರ ಸಂಖ್ಯೆ ೧೩೪ಕ್ಕೆ ಏರಿಕೆ


ಈ ದಿವಸ ವಾರ್ತೆ
ವಿಜಯಪುರ: ಜಿಲ್ಲೆಯಲ್ಲಿ ಈವರೆಗೆ ಒಟ್ಟು ೧೩೪ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯಲ್ಲಿ ೬೭ ರೋಗಿಗಳು ಕೋವಿಡ್-೧೯ ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ. ಇಂದು ಒಬ್ಬರಿಗೆ ಜಿಲ್ಲೆಯ ಕಂಟೇನ್ಮೆಂಟ್ ಜೋನ್‌ದಿಂದ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಅದರಂತೆ ರೋಗಿ ಸಂಖ್ಯೆ ೪೦೮೦ (೬೨ ವರ್ಷದ ಮಹಿಳೆ) ಇವರಿಗೆ ಜಿಲ್ಲೆಯ ಕಂಟೇನ್ಮೆಂಟ್ ಜೋನ್‌ದಿಂದ ಕೋವಿಡ್-೧೯ ಸೋಂಕು ತಗುಲಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ ೨೭೩೮೪ ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು ೧೩೪ ಕೋವಿಡ್ -೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. ೭೮೩೬ ಜನರು ೨೮ ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. ೧೯೪೮೧ ಜನರು (೧ ರಿಂದ ೨೮ ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ೫ ಜನ ಕೋವಿಡ್-೧೯ ರೋಗಿಗಳು ಮೃತಪಟ್ಟಿದ್ದಾರೆ. ೬೨ ಜನರು ಕೋವಿಡ್-೧೯ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ೬೭ ಜನರು ಆಸ್ಪತ್ರೆಯಲ್ಲಿರುವ ಕೋವಿಡ್-೧೯ ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ ೨೫೧೧೨ ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, ೨೧೫೮೮ ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ ೩೪೦೦ ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

No comments:

Post a Comment