Friday, May 29, 2020

30-05-2020 EE DIVASA KANNADA DAILY NEWS PAPER

ಜಿಲ್ಲೆಯಲ್ಲಿ ಇಂದು ಮತ್ತೆ ೪ ಜನರಿಗೆ ಕೋವಿಡ್-೧೯ ಸೋಂಕು ದೃಢ – ಸೋಂಕಿತರ ಸಂಖ್ಯೆ ೮೫ ಕ್ಕೆ ಏರಿಕೆ


ಈ ದಿವಸ
ವಿಜಯಪುರ : ಜಿಲ್ಲೆಯಲ್ಲಿ ಇಂದು ಮಹಾರಾಷ್ಟçದಿಂದ ಆಗಮಿಸಿದ್ದ ೪ ಜನರಲ್ಲಿ ಕೋವಿಡ್-೧೯ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು, ಒಟ್ಟು ೮೫ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಸಧ್ಯಕ್ಕೆ ೨೬ ರೋಗಿಗಳು ಮಾತ್ರ ಕೋವಿಡ್-೧೯ ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದು ಪರಿಣಾಮಕಾರಿಯಾದ ಚಿಕಿತ್ಸೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ,ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ ೨೭,೩೮೩ ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು ೮೫ ಕೋವಿಡ್ -೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. ೬೭೨೬ ಜನರು ೨೮ ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. ೨೦೫೯೯ ಜನರು (೧ ರಿಂದ ೨೮ ದಿನಗಳ) ರಿರ್ಪೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ೫ ಜನ ಕೋವಿಡ್-೧೯ ರೋಗಿಗಳು ಮೃತಪಟ್ಟಿದ್ದಾರೆ. ೫೪ ಜನರು ಕೋವಿಡ್-೧೯ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ೨೬ ಜನರು ಆಸ್ಪತ್ರೆಯಲ್ಲಿರುವ ಕೋವಿಡ್-೧೯ ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ ೨೩,೦೬೩ ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, ೧೧,೮೯೪ ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ ೧೧,೦೮೪ ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ್ ಕುಮಾರ್ ಅಮಾನತು


ಈ ದಿವಸ ವಾರ್ತೆ
ಸಿಂದಗಿ: ಇಲ್ಲಿಯ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಅವರನ್ನು ಅಮಾನತುಗೊಳಿಸಿ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಎಸ್.ಹಿರೇಮಠ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ತಾಲ್ಲೂಕಿನ ಅನುದಾನಿತ ಶಿಕ್ಷಣ ಸಂಸ್ಥೆ ಕೊಂಡಗೂಳಿ ಕೇಶೀರಾಜ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಸಹ ಶಿಕ್ಷಕ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ
ಮಟ್ಟದ ದಿನಪತ್ರಿಕೆಯ ರಾಜ್ಯ ಪುಟದಲ್ಲಿ ಅರ್ಜಿ ಆಹ್ವಾನ ಮಾಡಿಲ್ಲ. ಹೀಗಾಗಿ ರಾಜ್ಯದ ಎಲ್ಲ ಮೆರಿಟ್ ಹೊಂದಿರುವ ಅಭ್ಯರ್ಥಿಗಳು ಅವಕಾಶ ವಂಚಿತರಾಗಿದ್ದಾರೆ. ನಿಯಮ ಉಲ್ಲಂಘನೆ ಆಗಿದ್ದು, ನೇಮಕಾತಿಯಲ್ಲಿ ಲೋಪವಾಗಿದೆ. ಈ ಕುರಿತು ಕಾರಣ ಕೇಳಿ ನೀಡಿದ ನೋಟಿಸ್‌ಗೆ ಸಮಂಜಸ ಉತ್ತರ ನೀಡಿಲ್ಲ. ಹೀಗಾಗಿ ಸೇವೆಯಿಂದ ಅಮಾನತುಗೊಳಿಸುವುದು ಸೂಕ್ತ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.