Thursday, June 4, 2020

ಜಿಲ್ಲೆಯಲ್ಲಿ ಗುರುವಾರ ಮತ್ತೆ ಒಬ್ಬರಿಗೆ ಕೋವಿಡ್-೧೯ ಸೋಂಕು ದೃಢ : ಸೋಂಕಿತರ ಸಂಖ್ಯೆ ೧೩೪ಕ್ಕೆ ಏರಿಕೆ


ಈ ದಿವಸ ವಾರ್ತೆ
ವಿಜಯಪುರ: ಜಿಲ್ಲೆಯಲ್ಲಿ ಈವರೆಗೆ ಒಟ್ಟು ೧೩೪ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯಲ್ಲಿ ೬೭ ರೋಗಿಗಳು ಕೋವಿಡ್-೧೯ ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ. ಇಂದು ಒಬ್ಬರಿಗೆ ಜಿಲ್ಲೆಯ ಕಂಟೇನ್ಮೆಂಟ್ ಜೋನ್‌ದಿಂದ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಅದರಂತೆ ರೋಗಿ ಸಂಖ್ಯೆ ೪೦೮೦ (೬೨ ವರ್ಷದ ಮಹಿಳೆ) ಇವರಿಗೆ ಜಿಲ್ಲೆಯ ಕಂಟೇನ್ಮೆಂಟ್ ಜೋನ್‌ದಿಂದ ಕೋವಿಡ್-೧೯ ಸೋಂಕು ತಗುಲಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ ೨೭೩೮೪ ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು ೧೩೪ ಕೋವಿಡ್ -೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. ೭೮೩೬ ಜನರು ೨೮ ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. ೧೯೪೮೧ ಜನರು (೧ ರಿಂದ ೨೮ ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ೫ ಜನ ಕೋವಿಡ್-೧೯ ರೋಗಿಗಳು ಮೃತಪಟ್ಟಿದ್ದಾರೆ. ೬೨ ಜನರು ಕೋವಿಡ್-೧೯ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ೬೭ ಜನರು ಆಸ್ಪತ್ರೆಯಲ್ಲಿರುವ ಕೋವಿಡ್-೧೯ ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ ೨೫೧೧೨ ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, ೨೧೫೮೮ ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ ೩೪೦೦ ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಂಟೇನ್ಮೆಂಟ್ ವಲಯಗಳಲ್ಲಿನ ನಾಗರಿಕರು ಆರೋಗ್ಯ ಸಮೀಕ್ಷಾ ತಂಡಗಳಿಗೆ ಅಧಿಕೃತ ಮಾಹಿತಿ ನೀಡಿ ಸಹಕರಿಸಿ’’ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ



ಈ ದಿವಸ ವಾರ್ತೆ
ವಿಜಯಪುರ: ಜಿಲ್ಲೆಯ ಕಂಟೇನ್ಮೆಂಟ್ ವಲಯಗಳಲ್ಲಿ ಆರೋಗ್ಯ ಸಮೀಕ್ಷೆಗಾಗಿ ಆಗಮಿಸುವ ತಂಡಗಳಿಗೆ ಸಮರ್ಪಕ ಮತ್ತು ವಸ್ತುನಿಷ್ಠ ಮಾಹಿತಿ ನೀಡುವ ಮೂಲಕ ಸಹಕರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಮನವಿ ಮಾಡಿದ್ದಾರೆ. 

ಇಂದು ನಗರದ ಅಲ್ಲಾಪೂರ ಬೇಸ್ ಹಾಗೂ ಪೈಲ್ವಾನ್‍ಗಲ್ಲಿ ಕಂಟೇನ್ಮೆಂಟ್ ವಲಯಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ ಅವರು ಕೋವಿಡ್-19 ಅಪಾಯಕಾರಿ ಮತ್ತು ಸಾಂಕ್ರಾಮಿಕ ರೋಗವಾಗಿರುವ ಹಿನ್ನಲೆಯಲ್ಲಿ ಎಲ್ಲರು ಒಟ್ಟುಗೂಡಿ ಕಾರ್ಯ ನಿರ್ವಹಿಸುವ ಅಗತ್ಯವಿದೆ. ಈ ವಲಯಗಳಲ್ಲಿ ಪ್ರತಿ ಮನೆಗೆ ಆರೋಗ್ಯ ಸಮೀಕ್ಷೆಗಾಗಿ ಆರೋಗ್ಯ ಕಾರ್ಯಕರ್ತರು ಭೇಟಿ ನೀಡುತ್ತಿದ್ದು, ಅವರಿಗೆ ಸಹಕರಿಸುವಂತೆ ತಿಳಿಸಿದ್ದಾರೆ.

ಜಿಲ್ಲೆಯ ಕಂಟೇನ್ಮೆಂಟ್ ವಲಯಗಳಲ್ಲಿ ಆಶಾ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಮಹಿಳಾ ಕಾರ್ಯಕರ್ತೆಯರು ಆರೋಗ್ಯ ಸಮೀಕ್ಷೆ ಕೈಗೊಳ್ಳುತ್ತಿದ್ದು, ಇವರಿಗೆ ಸ್ವ ಸಹಾಯ ಗುಂಪುಗಳು ಮತ್ತು ಸಮೂದಾಯ ಕಾರ್ಯಕರ್ತರು ಕೈಜೋಡಿಸಿ ಸೂಕ್ತ ಆರೋಗ್ಯ ಮಾಹಿತಿ ಸಂಗ್ರಹಿಸಬೇಕು. ಸಾರ್ವಜನಿಕರು ಕೂಡಾ ಯಾವುದೇ ರೀತಿಯ ಕಾನೂನಿನ ರಿತ್ಯ ಕ್ರಮಕ್ಕೆ ಅವಕಾಶ ನೀಡದೆ ತೀವ್ರ ಉಸಿರಾಟ ತೊಂದರೆ, ನೆಗಡಿ, ಕೆಮ್ಮು, ಜ್ವರದ ಬಗ್ಗೆ ವಸ್ತುನಿಷ್ಠ ಮಾಹಿತಿ ನೀಡುವಂತೆ ಸಲಹೆ ನೀಡಿದರು.

ಇಂತಹ ಆರೋಗ್ಯ ಸಂಬಂಧಿತ ಲಕ್ಷಣಗಳನ್ನು ಹೊಂದಿದವರು ಯಾವುದೇ ಸಂದರ್ಭದಲ್ಲಿ ಕಂಟೇನ್ಮೆಂಟ್ ವಲಯದ ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಚಿಕಿತ್ಸೆ ಪಡೆಯುವಂತಿಲ್ಲ. ಈ ಕುರಿತು ತಕ್ಷಣ ಆರೋಗ್ಯ ಸಮೀಕ್ಷಾ ತಂಡಕ್ಕೆ ಅಥವಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ಅವರು ನೀಡಿದ್ದಾರೆ. 

ಈ ಕಂಟೇನ್ಮೆಂಟ್ ವಲಯಗಳಲ್ಲಿನ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಲಾಗುವುದು. ಅವಶ್ಯಕ ಆಹಾರ ಕಿಟ್‍ಗಳನ್ನು ಪೂರೈಸಲಾಗುವುದು. ಶೌಚಾಲಯಗಳ ನಿರ್ಮಾಣಕ್ಕೆ ಪಾಲಿಕೆ ಆಯುಕ್ತರಿಂದ ಸೂಕ್ತ ಕ್ರಮ ಆಗಲಿದೆ ಎಂದ ಅವರು ಸಾರ್ವಜನಿಕರು ಯಾವುದೆ ರೀತಿಯ ತಪ್ಪು ಮಾಹಿತಿ ನೀಡದೆ ಆರೋಗ್ಯ ಸಮೀಕ್ಷಾ ತಂಡಗಳಿಗೆ ಅಧಿಕೃತ ಮಾಹಿತಿ ನೀಡಿ ಕೋವಿಡ್-19 ನಿಯಂತ್ರಣಕ್ಕೆ ನೆರವಾಗುವಂತೆ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರು ಮಾತನಾಡಿ ಕಂಟೇನ್ಮೆಂಟ್ ವಲಯಗಳಲ್ಲಿನ ಸಾರ್ವಜನಿಕರು ಯಾವುದೇ ಪರಿಸ್ಥಿತಿಯಲ್ಲಿ ಮನೆಗಳಿಂದ ಹೊರಗೆ ಬಂದು ತಿರುಗಾಡಬಾರದು. ಆರೋಗ್ಯ ಸಮೀಕ್ಷೆಗೆ ಸರುವ ತಂಡಗಳಿಗೆ ಅವಶ್ಯಕ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು. ಯಾವುದೆ ರೀತಿಯ ತಪ್ಪು ಮಾಹಿತಿ ನೀಡುವುದಾಗಲಿ, ಅಸಹಕಾರ ಕಂಡುಬಂದಲ್ಲಿ ತಕ್ಷಣ ಪ್ರಕರಣ ದಾಖಲಿಸುವುದಾಗಿ ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮೂದಾಯ ಕಾರ್ಯಕರ್ತರು, ಸ್ವಸಹಾಯ ಗುಂಪುಗಳ ಸದಸ್ಯರು ಸ್ವಯಂ ಪ್ರೇರಣೆಯಿಂದ ಆರೋಗ್ಯ ಸಮೀಕ್ಷಾ ತಂಡಗಳಿಗೆ ಸಹಕರಿಸುವುದಾಗಿ ಒಪ್ಪಿಕೊಂಡರು. ಈ ಸಂದರ್ಭದಲ್ಲಿ ಡಿವೈಎಸ್‍ಪಿ ಗಳಾದ ಲಕ್ಷ್ಮಿನಾರಾಯಣ, ಗೋಲ್‍ಗುಂಬಜ್ ಡಿವೈಎಸ್‍ಪಿ ಸುಲ್ಫಿ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶಟ್ಟಿ, ವಿಶ್ವ ಆರೋಗ್ಯ ಸಂಸ್ಥೆ ಕಲ್ಸಲಟಂಟ್ ಡಾ. ಮುಕುಂದ ಗಲಗಲಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಕವಿತಾ, ಪಿಎಸ್‍ಐ ರಾಜೇಶ ಚವ್ಹಾಣ, ಪೈಲ್ವಾನ್‍ಗಲ್ಲಿ ಜಮಾತ್ ಮುಖ್ಯಸ್ಥ ಮಹೇಬೂಬ್ ಪಾಷಾ ಹಕಿಂ, ಶ್ರೀ ಪೀಟರ್ ಅಲೆಜ್ಸಾಂಡರ್, ಡಾ. ಝೆನಂತ್, ಡಾ. ಗುಂದಬಾವಡಿ, ಡಾ. ಬಾಲಕೃಷ್ಣ, ಡಾ. ಸಂತೋಷ ಶಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಡೆಂಗ್ಯೂ ರೋಗ ನಿಯಂತ್ರಣಕ್ಕೆ ವರ್ಷದ 12 ತಿಂಗಳು ಸರ್ವೇ ಕಾರ್ಯ ಪ್ರಾರಂಭ -ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜೇಬುನ್ನಿಸಾಬೇಗಂ ಬೀಳಗಿ




ಈ ದಿವಸ ವಾರ್ತೆ
ವಿಜಯಪುರ : ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣದ ಜೊತೆಗೆ ಡೆಂಗ್ಯೂ ರೋಗ ನಿವಾರಣೆ ಹಾಗೂ ನಿಯಂತ್ರಣಕ್ಕೆ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು  ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜೇಬುನ್ನಿಸಾಬೇಗಂ ಬೀಳಗಿ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಡೆಂಗ್ಯೂ ರೋಗ ನಿಯಂತ್ರಣಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ತಿಳಿಹೇಳುವ ಕಾರ್ಯವನ್ನು ಈಗಾಗಲೇ ಕೈಗೊಳ್ಳಲಾಗಿದ್ದು. ಇದರ ಜೊತೆಗೆ ಆಶಾ ಕಾರ್ಯಕರ್ತೆಯರಿಂದ ಮನೆ-ಮನೆಗೆ ತೆರಳಿ ಲಾರ್ವಾ ಸಾಂದ್ರತೆ ಬಗ್ಗೆ ಸರ್ವೇ ಹಾಗೂ ಜನರಿಗೆ ತಿಳಿಹೇಳುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.

ವರ್ಷದ 12 ತಿಂಗಳು ನಗರ ಹಾಗೂ ಗ್ರಾಮಿಣ ಪ್ರದೇಶಗಳಿಗೆ ತೆರಳಿ ಆಶಾಕಾರ್ಯಕರ್ತೆಯರು ಹಾಗೂ ಕಿರಿಯ ಆರೋಗ್ಯ ಸಹಾಯಕಿಯರು ಕೋವಿಡ್-19 ಸರ್ವೇಯಂತೆ ಮನೆಮನೆಗೆ ತೆರಳಿ ಡೇಟಾ ಸಂಗ್ರಹ ಮಾಡುವುದರ ಜೊತೆಗೆ ಸಾರ್ವಜನಿಕರಿಗೆ ತಿಳಿಹೇಳುವ ಕಾರ್ಯ ಮಾಡುತ್ತಿದ್ದಾರೆ. ಜೋತೆಗೆ ಸಾರ್ವಜನಿಕ ಸ್ಥಳಗಳಿಗೆ ಬೇಟಿ ನೀಡಿ ಡೆಂಗ್ಯೂ ರೋಗದ ಲಕ್ಷಣಗಳು ಹಾಘೂ ಅದನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯಯಿಂದ ಭಿತ್ತಿಪತ್ರ ಹಾಗೂ ಬ್ಯಾನರ್‍ಗಳನ್ನು ಅಳವಡಿಸಲಾಗುತ್ತಿದೆ ಎಂದರು.
 
ಡೆಂಗ್ಯೂ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಈ ಹಿಂದಿನ ಮೂರು ವರ್ಷಗಳ ದಾಖಲೆಗಳನ್ನು ಸಂಗ್ರಹಿಸಿ ಯಾವ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಕಂಡುಬಂದಿದೆ ಹಾಗೂ ಸ್ಲಂ ಪ್ರದೇಶದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಲಾಗುತ್ತಿದ್ದು, ಅಂತಹ ಪ್ರದೇಶಗಳಿಗೆ ತೆರಳಿ ಸೊಳ್ಳೆ ಪರದೆಗಳನ್ನು ವಿತರಿಸುವುದು ಹಾಗೂ ಧೂಮಿಕರಣ ಮಾಡಲಾಗುತ್ತಿದೆ. ಸೊಳ್ಳೆಗಳ ಸಂತಾನೊತ್ಪತ್ತಿಯಾಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಿಗೆ ತಿಳಿಹೇಳುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪರೀಕ್ಷಿಸಲು ಲ್ಯಾಬ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಡಿ.ಪಿ.ಎಚ್.ಎಲ್ ಎನ್ನುವ ಲ್ಯಾಬ್ ಕಾರ್ಯ ನಿರ್ವಹಿಸುತ್ತಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಬ್ಲಡ್ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದೆ, ಜಿಲ್ಲೆಯಲ್ಲಿ ಜನೇವರಿ ಮಾಸದಿಂದ ಮೇ ತಿಂಗಳವರೆಗೆ ಒಟ್ಟು 310 ಬ್ಲಡ್‍ಸ್ಯಾಂಪಲ್‍ಗಳನ್ನು ಸಂಗ್ರಹಿಸಲಾಗಿದ್ದು ಅವುಗಳಲ್ಲಿ 102 ಜನರಿಗೆ ಡೆಂಗ್ಯೂ ಪಾಸಿಟಿವ್ ದೃಡಪಟ್ಟಿದೆ. ಕಳೆದ 2019ರ ಸಾಲಿನಲ್ಲಿ ಒಟ್ಟು 271 ಬ್ಲಡ್‍ಸ್ಯಾಂಪಲ್‍ಗಳನ್ನು ಸಂಗ್ರಹಿಸಲಾಗಿದ್ದು ಅವುಗಳಲ್ಲಿ 77 ಜನರಿಗೆ ಡೆಂಗ್ಯೂ ಪಾಸಿಟಿವ್ ದೃಡಪಟ್ಟಿತ್ತು. ಕಳೆದ ಸಾಲಿಗಿಂಗ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ರಕ್ತ ಮಾದರಿಯನ್ನು ಪರೀಕ್ಷಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಡೆಂಗ್ಯೂ ರೋಗ ನಿಯಂತ್ರಣಕ್ಕಾಗಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಸಿಮದಗಿ ತಾಲೂಕಿನಲ್ಲಿ ಒಟ್ಟು 57 ಜನರ ರಕ್ತ ಮಾದರಿಯಲ್ಲಿ 22 ಜನರಿಗೆ ಡೆಂಗ್ಯೂ ದೃಡಪಟ್ಟಿದ್ದು, ಬ,ಬಾಗೇವಾಡಿಯಲ್ಲಿ 59 ಜನರ ಪೈಕಿ 15 ಜನರಿಗೆ ದೃಡ, ಮುದ್ದೆಬಿಹಾಳ ತಾಲೂಕಿನಲ್ಲಿ 26 ಜನರ ಪೈಕಿ 12 ಜನರಿಗೆ ದೃಡ, ಇಂಡಿ ತಾಲೂಕಿನಲ್ಲಿ 74 ಜನರ ಪೈಕಿ 23 ದೃಡ, ವಿಜಯಪುರ ತಾಲೂಕಿನಲ್ಲಿ 94 ಜನರ ಪೈಕಿ 30 ಜನರಿಗೆ ಡೆಂಗ್ಯೂ ದೃಡ ಪಟ್ಟಿದ್ದು ಇದರಲ್ಲಿ ವಿಜಯಪುರ ನಗರದಲ್ಲಿ 12 ಜನರಿಗೆ ದೆಂಗ್ಯೂ ಕಾಣೀಸಿಕೊಂಡಿದೆ ಎಂದು ತಿಳಿಸಿದರು.

ಡೆಂಗ್ಯೂ ರೋಗ ನಿಯಂತ್ರಣಕ್ಕಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳು ಒಳಚರಂಡಿ ಹಾಗೂ ಕೊಳಚೆ ಪ್ರದೇಶಗಳನ್ನು ಸ್ವಚ್ಛವಾಗಿಡಲು ತಿಳಿಸಲಾಗಿದ್ದು. ಮಳೆಗಾಲ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಯಾವದೇ ರೀತಿಯಲ್ಲಿ ಒಳಚರಂಡಿ ಸಮಸ್ಯೆ ಹಾಗೂ ಕೊಳಚೆ ಪ್ರದೇಶಗಳಲ್ಲಿ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಸಂಗ್ರಹ ಸಾಮಗ್ರಿಗಳಲ್ಲಿ ಸೊಳ್ಳೆಗಳು ಉತ್ಪಾದನೆಯಾಗದಂತೆ ಸ್ವಚ್ಛತೆ ಕಾಪಾಡಲು ತಿಳಿಸಿದ್ದು ಟಾಯರ್ ಸಂಗ್ರಹದ ಮೇಲೆ ನೀರು ನಿಲ್ಲದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹಾಕಿಸಲಾಗಿದೆ. ನಗರ ಹಾಗೂ ಪಟ್ಟಣ ಪ್ರದೇಶಗಳ ಪರಿಸರದಲ್ಲಿ ಸೊಳ್ಳೆ ಉತ್ಪತ್ತಿ ನಿಯಂತ್ರಣಗೊಳಿಸುವ ಸಲುವಾಗಿ ಈಗಿರುವ ನಾಗರಿಕ ಬೈಲಾಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಹಾಗೂ ಅನುಪಯುಕ್ತ ಹಾಗೂ ಘನತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡುವಂತೆ ತಿಳಿಸಲಾಗಿದೆ ಎಂದರು.

ಮಹಾನಗರ ಪಾಲಿಕೆ ವತಿಯಿಂದ ಸೊಳ್ಳೆ ನಾಶಕ್ಕೆ ವಾರಕ್ಕೊಮ್ಮೆ ಸೂಕ್ತ ಕೀಟನಾಶಕ ದ್ರಾವಣವನ್ನು ಸಿಂಪಡನೆ ಹಾಗೂ ಧೂಮಿಕರಣ ಕೈಗೊಳ್ಳಲಾಗುತ್ತಿದೆ. ಸೊಳ್ಳೆ ರಹಿತ ಓವರ್‍ಹೆಡ್ ಟ್ಯಾಂಕ್ ಹಾಗೂ ಅಂಡರ್‍ಗ್ರೌಂಡ್ ಟ್ಯಾಂಕ್‍ಗಳನ್ನು ನಿರ್ಮಿಸಲು ತಿಳಿಸಿದ್ದು.ನೀರು ಸರಬರಾಜು ಮಾಡುವ ಮೊದಲು ಸೂಕ್ತ ಕ್ಲೋರಿನೇಶನ್ ಮಾಡಲಾಗುತ್ತಿದೆ. ಜೊತೆಗೆ ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಸೋರಿಕೆಯನ್ನು ತಡೆಗಟ್ಟಲಾಗುತ್ತಿದೆ.
ಮೀನುಗಾರಿಕೆ ಇಲಾಖೆಯಿಂದ ಲಾರ್ವಾಹಾರಿ ಮೀನುಗಳಾದ ಶಪ್ಪಿ ಮತ್ತು ಗ್ಯಾಂಬ್ಯುಸಿಯಾ ಇವುಗಳನ್ನು ಬೆಳೆಸಿ ಜಿಲ್ಲೆಯಾದ್ಯಂತ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದ್ದು, ಈಗಾಗಲೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶಪ್ಪಿ ಹಾಗೂ ಗ್ಯಾಂಬ್ಯುಸಿಯಾ ಮೀನುಗಳನ್ನು ಬಿಡಲಾಗಿದೆ. ಅಗತ್ಯ ಸ್ಥಳಗಳಲ್ಲಿ ಈ ಮೀನುಗಳನ್ನು ಸೂಕ್ತ ಸಮಯದಲ್ಲಿ ಉಚಿತವಾಗಿ ಒದಗಿಸಲಾಗುತ್ತಿದೆ. ಕರೆ, ಬಾವಿ, ಕೊಳ್ಳಗಳಲ್ಲಿ ಜಿಲ್ಲಾವಾರು ಜಿಐಎಸ್ ನಕ್ಷೆಗಳನ್ನು ತಯಾರಿಸಬೇಕು ಹಾಗೂ ಅದರ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ನೀಡಲು ಸಹ ಸೂಚಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಜಿಲ್ಲಾ ಕೀಟಶಾಸ್ತ್ರಜ್ಞ ಡಾ. ರಿಯಾಝ್ ದೇವಳ್ಳಿ ಸೇರಿದಂತೆ ಪತ್ರಕರ್ತರಾದ ರಾಹುಲ್ ಆಪ್ಟೆ, ಕಲ್ಲಪ್ಪ ಶಿವಶರಣ, ಭಿಮು ಕುಂಟೋಜಿ
ಇತರರಿದ್ದರು.