Wednesday, December 28, 2022

ನೌಕರ-ವಿರೋಧಿ NPS ಯೋಜನೆಯನ್ನು ರದ್ದುಗೊಳಿಸಿ : ಜಿಲ್ಲಾ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರು ಸುರೇಶ್ ಜೀಬಿ ಆಗ್ರಹ

 ಈ ದಿವಸ ವಾರ್ತೆ

ವಿಜಯಪುರ: ದಿನಾಂಕ: 01.04.2006 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಗಿರುವ ಪಿ.ಎಫ್.ಆರ್.ಡಿ.ಎ ಕಾಯಿದೆ ಪ್ರಾಯೋಜಿತ ಎನ್.ಪಿ.ಎಸ್‌ಯೋಜನೆಯಿಂದಾಗಿ ರಾಜ್ಯ ಸರ್ಕಾರಿ ನೌಕರರಿಂದ ನಿಶ್ಚಿತ ಪಿಂಚಣ ಯನ್ನು ಕಸಿದುಕೊಳ್ಳಲಾಗಿರುತ್ತದೆ. ಎನ್.ಪಿ.ಎಸ್‌ಯೋಜನೆಯಡಿ ಸಂಗ್ರಹವಾಗುವ ಶೇ. 10ರಷ್ಟು ನೌಕರರ ವಂತಿಕೆ ಮತ್ತು ಶೇ. 12 ರಷ್ಟು ಸರ್ಕಾರದ ವಂತಿಕೆಯನ್ನು ಪಿ. ಎಫ್. ಆರ್. ಡಿ. ಎ ಸಂಸ್ಥೆಯು ಫಂಡ್‌ಮ್ಯಾನೇಜರುಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ತೊಡಗಿಸುತ್ತಿದ್ದು, ಕಳೆದ 18 ವರ್ಷಗಳ ಅನುಭವ ತೋರಿಸಿಕೊಟ್ಟಿರುವುದೇನೆಂದರೆ, ಸರ್ಕಾರಿ ನೌಕರರ ಹಣ ಖಾಸಗೀ ಕಂಪನಿಗಳ ಷೇರು ಖರೀದಿಗೆ ವಿನಿಯೋಗವಾಗುತ್ತಿದ್ದು, ಷೇರು ಮಾರುಕಟ್ಟೆಯು ಜೂಜುಕೋರ ವ್ಯವಸ್ಥೆಯಾಗಿರುವುದರಿಂದ, ನಿವೃತ್ತಿಯಾಗುತ್ತಿರುವ ನೌಕರರಿಗೆ/ ಮರಣ ಹೊಂದಿರುವ ನೌಕರರ ಕುಟುಂಬಕ್ಕೆ ಮಾಸಿಕ ಪಿಂಚಣ  ಕೇವಲ ರೂ. 2,000 ದಿಂದ ರೂ. 3,000 ಮಾತ್ರವೇ ಬರುತ್ತಿದ್ದು, ಇದು ಮನೆಯ ಬಾಡಿಗೆಯಿರಲಿ, ವಿದ್ಯುತ್ ಮತ್ತು ನೀರಿನ ಶುಲ್ಕ ಕಟ್ಟಲು ಸಾಕಾಗುತ್ತಿಲ್ಲ ಎಂದು ಜಿಲ್ಲಾ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರು ಸುರೇಶ್ ಜೀಬಿ ಅವರು ತಿಳಿಸಿದ್ದಾರೆ.

ನೌಕರ-ವಿರೋಧಿ NPS ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ  ಪಿಂಚಣ  ಯೋಜನೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಓPS ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ನೌಕರ-ಪರ ಸಂಘಟನೆಗಳು ಒಡಗೂಡಿ ದಿನಾಂಕ: 19/12/2022 ರಿಂದ  ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣ  ಕಾರ್ಯಕ್ರಮವನ್ನು ನಡೆಸುತ್ತಿವೆ. ಇದಕ್ಕೆ ಬೆಂಬಲವಾಗಿ ಹಲವಾರು ನೌಕರ ಪರ ಸಂಘಟನೆಗಳು ಬೆಂಬಲವನ್ನು ವ್ಯಕ್ತಪಡಿಸಿ ನೌಕರ ಪರ ಈ  ಬೇಡಿಕೆಯನ್ನು ಈಡೇರಿಸುವಂತೆ  ಸರ್ಕಾರವನ್ನು ಚಂದ್ರಶೇಖರ ಎಚ್ ಲೆಂಡಿ ಜಿಲ್ಲಾ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣ ದಾರರ ಒಕ್ಕೂಟ ರಾಜ್ಯ ಉಪಾಧ್ಯಕ್ಷರು ಆಗ್ರಹಿಸಿದರು.    

ದೇಶದ ಸರ್ವೋಚ್ಛ ನ್ಯಾಯಾಲಯವು ಪಿಂಚಣ  ಎಂಬುವುದು ನೌಕರರಿಗೆ ನೀಡುವ ಭಿಕ್ಷೆಯಲ್ಲ, ನೌಕರರು ದೀರ್ಘಾವಧಿಗೆ ಮಾಡಿದ ಸೇವೆ ಹಾಗೂ ಸದರಿ ಸೇವಾವಧಿಯಲ್ಲಿ ನೌಕರರ ಶ್ರಮಕ್ಕೆ ಮಾರುಕಟ್ಟೆ ದರಕ್ಕಿಂತ ಕಡಿಮೆ ವೇತನ ನೀಡಿ ಉಳಿದ ಮೊತ್ತವನ್ನು ಪಿಂಚಣ ಯ ರೂಪದಲ್ಲಿ ಇಳಿವಯಸ್ಸಿನ ಸಾಮಾಜಿಕ-ಆರ್ಥಿಕ ಭದ್ರತೆಗಾಗಿ ನೀಡುವಂತಹುದ್ದಾಗಿದೆ. ಇದನ್ನು “ಆeಜಿeಡಿeಜ Wಚಿges”  ಎಂದು ಅರ್ಥೈಸಲಾಗಿದೆ. 'ಪಿಂಚಣ ' ಎಂಬುದು ನೌಕರರು ಮಾಡಿದ ಸರ್ಕಾರಿ ಸೇವೆಗಾಗಿ, ಇಳಿ ವಯಸ್ಸಿನಲ್ಲಿ ನೌಕರರ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ನೀಡುವ ಹಕ್ಕಿನಂಶದ ಹಣವೆಂದು ಪರಿಗಣ ಸುವಂತೆ ಹೇಳಿದೆ (ಂIಖ- 1983-Sಅ-130) ಚಂದ್ರಶೇಖರ ಎಚ್ ಲೆಂಡಿ ಅವರು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ರಾಜ್ಯದ ಎನ್.ಪಿ.ಎಸ್ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಮಕ್ಕಳು ಮತ್ತು ಕುಟುಂಬವರ್ಗದವರೊAದಿಗೆ ಸೇರಿ ಅಹೋರಾತ್ರಿ ಧರಣ ಯನ್ನು ನಡೆಸುತ್ತಿದ್ದಾರೆ. ಆದರೆ, ಇದುವರೆಗೂ ರಾಜ್ಯ ಸರ್ಕಾರವು ಈ ಕುರಿತು ಗಮನ ಹರಿಸದೇ ಇರುವುದು ನೌಕರರ ಜ್ವಲಂತ ಬೇಡಿಕೆಯ ಕುರಿತು ಇರುವ ಉದಾಸೀನ ಎನ್ನಬೇಕಾಗುತ್ತದೆ. ಹಲವು ವರ್ಷಗಳ ನಂತರ ರಾಜಸ್ಥಾನ/ಛತ್ತೀಸ್ ಗಡ್/ ಜಾರ್ಖಂಡ್/ ಪಂಜಾಬ್ ರಾಜ್ಯ ಸರ್ಕಾರಗಳು ಮಹತ್ವದ ನಿರ್ಧಾರಗಳನ್ನು ಹೊರಡಿಸಿವೆ.  ಅದೇ ರೀತಿಯಲ್ಲಿ, ನಮ್ಮ ರಾಜ್ಯ ಸರ್ಕಾರವೂ ಸಹ ನೌಕರ-ವಿರೋಧಿ ಓPS ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ  ಪಿಂಚಣ  ಯೋಜನೆಯನ್ನು ಮರುಸ್ಥಾಪಿಸುವ ಬೇಡಿಕೆಯನ್ನು ಈಡೇರಿಸುವ ಮೂಲಕ ಮಾದರಿ ರಾಜ್ಯಗಳಲ್ಲೊಂದಾಗಬೇಕೆAದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು  ಸರ್ಕಾರವನ್ನು ಆಗ್ರಹಿಸುತ್ತದೆ ಎಂದು  ಅಶೋಕ ಇಲಕಲ್ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಅವರು ತಿಳಿಸಿದ್ದಾರೆ.

Saturday, December 24, 2022

ದಸಾಪ ಜಿಲ್ಲಾಧ್ಯಕ್ಷರಾಗಿ ಬಸವರಾಜ ಜಾಲವಾದಿ ಆಯ್ಕೆ



 ಈ ದಿವಸ ವಾರ್ತೆ

ವಿಜಯಪುರ: ನಗರದ ಬಸವರಾಜ ಜಾಲವಾದಿ ಅವರನ್ನು ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ದಲಿತ ಸಾಹಿತ್ಯ ಪರಿಷತ್ ಬೆಳ್ಳಿ ಹಬ್ಬ ಆಚರಿಸುತ್ತಿರುವ ಈ ಸಂದರ್ಭ ರಾಜ್ಯದ ಜಿಲ್ಲಾ ಘಟಕಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಬಸವರಾಜ ಜಾಲವಾದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಅರ್ಜುನ ಗೊಳಸಂಗಿ, ಕಾರ್ಯದರ್ಶಿ ಸುಭಾಷ ಹೊದ್ಲೂರ, ದಲಿತ ಸಾಹಿತ್ಯ ಪರಿಷತ್ ಬೆಳಗಾವಿ ವಿಭಾಗೀಯ ಸಂಯೋಜಕ ಡಾ.ಸುಜಾತಾ ಚಲವಾದಿ ಅವರು ಜಂಟಿ ಪತ್ರಿಕಾ ಪ್ರಕಟನೆ ನೀಡಿದ್ದಾರೆ.

ವಿಜಯಪುರ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ತಾಲೂಕು ಅಧ್ಯಕ್ಷರಾಗ ಬಯಸುವವರು ದಲಿತ ಸಾಹಿತ್ಯ, ಸಂಸ್ಕೃತಿ, ಕಲೆಯ ಬಗೆಗೆ ಆಸಕ್ತಿಯುಳ್ಳವರು ಜಿಲ್ಲಾ ಅಧ್ಯಕ್ಷ ಬಸವರಾಜ ಜಾಲವಾದಿ ಅವರನ್ನು (ಮೊ.9449292062) ಸಂಪರ್ಕಿಸಬಹುದಾಗಿದೆ ಎಂದು ಕೋರಲಾಗಿದೆ.

Wednesday, December 21, 2022

೨೦೨೧-೨೨ನೇ ಸಾಲಿನ "ಬಹುತ್ವ ಭಾರತೀಯ" ಪ್ರಶಸ್ತಿ ಪ್ರಕಟ; ಅನೀಲ ಹೊಸಮನಿ, ಶಿವಾನಂದ ತಗಡೂರ, ಬಸವರಾಜ್ ಸೂಳಿಬಾವಿ, ದು.ಸರಸ್ವತಿ ಸೇರಿದಂತೆ ೬ ಜನರಿಗೆ ಪ್ರಶಸ್ತಿ


ಈ ದಿವಸ ವಾರ್ತೆ

ವಿಜಯಪುರ : ಕನ್ನಡನೆಟ್ ಡಾಟ್ ಕಾಂ, ಬಹುತ್ವ ಭಾರತ ಪತ್ರಿಕೆ ಹಾಗೂ ಬಹುತ್ವ ಭಾರತ ಬಳಗ ಕೊಪ್ಪಳ ಇವರಿಂದ ನೀಡಲಾಗುವ ೨೦೨೧-೨೨ನೇ ಸಾಲಿನ ಬಹುತ್ವ ಭಾರತೀಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಇಡೀ ವಿಶ್ವಕ್ಕೆ ಮಾದರಿಯಾಗಿರುವ ಬಹುಸಂಸ್ಕೃತಿಯ ಭಾರತದ ಬಹುತ್ವವನ್ನು ಎತ್ತಿ ಹಿಡಿಯುವ ಮೂಲಕ ಇತರರಿಗೆ ಮಾದರಿಯಾಗಿ ಸೇವೆ ಸಲ್ಲಿಸುತ್ತಿರುವ ವಿವಿಧ ಕ್ಷೇತ್ರಗಳ ಮಹನೀಯರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 

ಪತ್ರಿಕೋದ್ಯಮ, ಹೋರಾಟ ಮತ್ತು ಸಂಘಟನೆಯ  ಗಣನೀಯ ಸೇವೆಗಾಗಿ ಬೆಂಗಳೂರಿನ ಹಿರಿಯ  ಪತ್ರಕರ್ತರಾದ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ,   ಮಾನವ ಹಕ್ಕುಗಳ ಹೋರಾಟಗಾರರು, ಚಿಂತಕರಾದ ದಾವಣಗೆರೆಯ ಹಿರಿಯ ವಕೀಲರಾದ ಅನೀಸ್ ಪಾಷಾ,  ಧಾರವಾಡದ ಲಡಾಯಿ ಪ್ರಕಾಶನದ ಮೂಲಕ ಇಡೀ ನಾಡಿನಾದ್ಯಂತ ಹೆಸರಾಗಿರುವ ಜನಪರ ಹೋರಾಟಗಾರರು,ಚಿಂತಕರಾದ ಬಸವರಾಜ್ ಸೂಳಿಬಾವಿ, ಸಾಮಾಜಿಕ ಕಾರ್ಯಕರ್ತೆಯಾಗಿ, ಬರಹಗಾರ್ತಿಯಾಗಿ, ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ದು.ಸರಸ್ವತಿ ಬೆಂಗಳೂರ, ಶಿಕ್ಷಣ ಸಂಸ್ಥೆಗಳ ಮೂಲಕ ಇಡೀ ನಾಡಿನಾದ್ಯಂತ ಮನೆ ಮಾತಾಗಿರುವ, ಸಮಾಜಮುಖಿ ಶಿಕ್ಷಣ ಪ್ರೇಮಿ ನೆಕ್ಕಂಟಿ ಸೂರಿಬಾಬು ಗಂಗಾವತಿ ಹಾಗೂ ದಲಿತ ಚಿಂತಕರು,ಬರಹಗಾರರು,ಹಿರಿಯ ಪತ್ರಕರ್ತರಾದ ವಿಜಯಪುರದ ಅನಿಲ್ ಹೊಸಮನಿಯವರಿಗೆ ೨೦೨೧-೨೨ನೇ ಸಾಲಿನ ಬಹುತ್ವ ಭಾರತೀಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಡಿ.೨೪ರಂದು ಸಾಹಿತ್ಯ ಭವನದಲ್ಲಿ  ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘಟಕರಾದ ಸಿರಾಜ್ ಬಿಸರಳ್ಳಿ, ರಾಜಾಬಕ್ಷಿ ಎಚ್.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಪ್ರೊ.ಓಂಕಾರ ಕಾಕಡೆ ಆಯ್ಕೆ


 ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಅವರನ್ನು ಪ್ರೆಸ್ ಕ್ಲಬ್ ಆಫ್ ಬೆಂಗಳೂರು- 2022ರ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ವಿಶೇಷ ಪ್ರಶಸ್ತಿಗೆ ಸಚಿವರಾದ ಮುರುಗೇಶ ನಿರಾಣ ಮತ್ತು ಎಸ್.ಟಿ.ಸೋಮಶೇಖರ್ ಅವರು ಆಯ್ಕೆಯಾಗಿದ್ದು ವಾರ್ಷಿಕ ಪ್ರಶಸ್ತಿಗೆ ಪ್ರೊ.ಓಂಕಾರ ಕಾಕಡೆ ಸೇರಿದಂತೆ ವಿವಿಧ ಮಾಧ್ಯಮಗಳ 33 ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್ ಶ್ರೀಧರ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಪಿ.ಮಲ್ಲಪ್ಪ ಅವರು ನೀಡಿರುವ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Sunday, December 18, 2022

ಊರ್ಧ್ವರೇತ ಟೆಲಿ ಫಿಲ್ಮಿಂಗೆ ಅತ್ಯುತ್ತಮ ಕಥಾ ಪ್ರಶಸ್ತಿ

 


ಧಾರವಾಡದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಊರ್ಧ್ವರೇತ ಟೆಲಿ ಫಿಲ್ಮಿಂಗೆ ಅತ್ಯುತ್ತಮ ಕಥಾ ಹಾಗೂ ಪೋಷಕ ನಟ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ದಿವಸ ವಾರ್ತೆ 

ವಿಜಯಪುರ: ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ- 2022 ರ ಸ್ಪರ್ಧೆಯಲ್ಲಿ ಸಿಂದಗಿ ಹಿರಿಯ ಸಾಹಿತಿ ಡಾ.ಚನ್ನಪ್ಪ ಕಟ್ಟಿ ಅವರ ಊರ್ಧ್ವರೇತ ಕಥೆ ಆಧಾರಿತ ಟೆಲಿ ಫಿಲ್ಮಿಂಗೆ ಅತ್ಯುತ್ತಮ ಕಥೆ ಹಾಗೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿವೆ.

ಧಾರವಾಡದಲ್ಲಿ ಡಿ.15, 16 ಮತ್ತು 17 ರಂದು ಉತ್ತರ ಕರ್ನಾಟಕ ಚಲನಚಿತ್ರ ವಾಣ ಜ್ಯ ಮಂಡಳಿ ಹಮ್ಮಿಕೊಂಡ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಲನಚಿತೋತ್ಸವದಲ್ಲಿ ಪ್ರದರ್ಶನ ಕಂಡು, ಉರ್ಧ್ವರೇತ ಟೆಲಿ ಫಿಲ್ಮಿಂ ಪ್ರಶಸ್ತಿಗೆ ಭಾಜನವಾಗಿದ್ದು, ಶೇಷಾಚಲ ಹವಾಲ್ದಾರ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ (ನಾಮಿನಿ) ಲಭಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ನಿರ್ದೇಶಕ ಜಯತೀರ್ಥ, ಚಲನಚಿತ್ರ ಕಲಾವಿದೆ ರೂಪಿಕಾ, ದೂರದರ್ಶನ ನಿರ್ದೇಶಕಿ ಡಾ.ನಿರ್ಮಲಾ ಯಲಿಗಾರ, ನಿರ್ಮಾಪಕ ಮಾರುತಿ ಜಡಿ, ಜಾರ್ಜ್ ಸೊಲೊಮನ್, ಉತ್ತರ ಕರ್ನಾಟಕ ಚಲನಚಿತ್ರ ವಾಣ ಜ್ಯ ಮಂಡಳಿಯ ಅಧ್ಯಕ್ಷ ಶಂಕರ ಸುಗತೆ, ಮಂಜುನಾಥ ಹಗೆದಾರ, ರಾಹುಲ್ ದತ್ತಪ್ರಸಾದ ಇದ್ದರು.

ಊರ್ಧ್ವರೇತ ಟೆಲಿ ಫಿಲ್ಮಂ ಅನ್ನು ನೆಲೆ ಸಿನಿಕ್ರಿಯೆಷನ್ಸ್ ಅಡಿಯಲ್ಲಿ ಡಾ.ಎಂ.ಎಂ. ಪಡಶೆಟ್ಟಿ ನಿರ್ಮಿಸಿದ್ದಾರೆ. ಡಾ.ಚನ್ನಪ್ಪ ಕಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ನೀಡಿದ್ದಾರೆ. ಸುನೀಲಕುಮಾರ ಸುಧಾಕರ ನಿರ್ದೇಶನ, ಛಾಯಾಗ್ರಹಣ ಮತ್ತು ಸಂಕಲನ ಮಾಡಿದ್ದಾರೆ. ಡಾ. ಹರೀಶ ಹೆಗಡೆ ಸಂಗೀತ ನೀಡಿದ್ದಾರೆ. ಗ್ರಾಮೀಣ ಪ್ರದೇಶದ ಬಾಲಕ ಶಿಲ್ಪಕಲೆ ಬಗ್ಗೆ ಸಂಶೋಧನೆ ಆಸಕ್ತಿ ಬೆಳೆಸಿಕೊಂಡು, ಸಂಶೋಧನೆಯ ಜೊತೆಗೆ ಯೋಗಸಾಧಕನಾಗುವುದು ಕಥೆಯ ತಿರುಳಾಗಿದೆ. ಚಿತ್ರದಲ್ಲಿ ಶೇಷಾಚಲ ಹವಾಲ್ದಾರ, ಲಕ್ಷ್ಮೀ ಬಾಗಲಕೋಟಿ, ಪಲ್ಲವಿ ಪಾಟೀಲ, ಪೊನ್ನಪ್ಪ ಕಡೆಮನಿ, ಅಂಬಾದಾಸ ಜೋಶಿ, ಚಂದ್ರಶೇಖರ ಅಂಬಲಿ, ಕಾರ್ತಿಕ, ಸೃಜನ, ಕಾಶಿನಾಥ, ಕಲ್ಲಪ್ಪ ಶಿವಶರಣ , ಗೌಡಪ್ಪ ಶಹಾಪುರ, ವಿನೋದ ರಾಠೋಡ, ಮಂಜು ಕಟ್ಟಿಮನಿ, ಅಮೋಘ ಸೇರಿದಂತೆ ಮುಂತಾದವರು ನಟಿಸಿದ್ದಾರೆ.

ಚಿತ್ರ ವೀಕ್ಷಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿರಿ.

https://youtu.be/AXms-M-09W4

ಸುಧಾರಾಣಿ, ತ್ರಿವೇಣಿಗೆ ಪಿಎಚ್‌ಡಿ ಪದವಿ

ಸುಧಾರಾಣಿ ಮಣೂರ
                        ಮಣೂರ ಸುಧಾರಾಣಿ ಶಿವಪ್ಪಾ

                                   ತ್ರಿವೇಣಿ ಬನಸೋಡೆ

ಈ ದಿವಸ ವಾರ್ತೆ

 ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಮಣೂರ ಸುಧಾರಾಣಿ  ಶಿವಪ್ಪಾ ಅವರು ಸಲ್ಲಿಸಿದ್ದ “ಪ.ಗು ಸಿದ್ದಾಪುರ ಅವರ ಜೀವನ ಮತ್ತು ಸಾಹಿತ್ಯ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.

ಮಣೂರ ಸುಧಾರಾಣಿ  ಶಿವಪ್ಪಾ ಅವರು ಕನ್ನಡ ವಿಭಾಗದ ಪ್ರೊ. ಮಹೇಶ ಚಿಂತಾಮಣಿ  ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. 

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ತ್ರಿವೇಣಿ  ಬನಸೋಡೆ ಅವರು ಸಲ್ಲಿಸಿದ್ದ “ಎ. ಪಿ. ಮಾಲತಿ ಅವರ ಜೀವನ ಮತ್ತು ಸಾಹಿತ್ಯ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.

ತ್ರಿವೇಣಿ   ಬನಸೋಡೆ ಅವರು ಕನ್ನಡ ವಿಭಾಗದ ಪ್ರೊ, ಮಹೇಶ ಚಿಂತಾಮಣಿ  ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು.

ಡಾಕ್ಟರೇಟ್ ಪದವಿ ಪಡೆದಿರುವ ಮಣೂರ ಸುಧಾರಾಣಿ  ಶಿವಪ್ಪಾ ಹಾಗೂ ತ್ರಿವೇಣಿ ಬನಸೋಡೆ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ. ಬಿ.ಎಸ್.ನಾವಿ, ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ್.ಕೆ. ಅಭಿನಂದಿಸಿದ್ದಾರೆ.

Saturday, December 10, 2022

ಫೆ.15ರೊಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸುವಂತೆ -ಸಚಿವ ಗೋವಿಂದ ಕಾರಜೋಳ ಸೂಚನೆ

ಈ ದಿವಸ‌ ವಾರ್ತೆ

ವಿಜಯಪುರ : ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳು ಭರದಿಂದ ಸಾಗಿದ್ದು, ಫೆ.15ರೊಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವಿಮಾನ ನಿಲ್ದಾಣ ಹಾಗೂ ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ಪರಿಸರ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆದುಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ನವದೆಹಲಿಗೆ ತೆರಳಿ ಕೇಂದ್ರ ಸಚಿವ ಭೂಪೇಂದ್ರ ಯಾದವ ಅವರನ್ನು ಭೇಟಿ ಮಾಡಿ ಚರ್ಚಿಸಿ ಅನುಮತಿಯನ್ನು ಸಹ ಪಡೆದುಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಶನಿವಾರ ವಿಜಯಪುರ ಹೊರವಲಯದ ಬುರಾಣಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು, ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, ಇ.ಟಿ.ಸಿ. ಬಿಲ್ಡಿಂಗ್, ಬೌಂಡ್ರಿ ವಾಲ್ಸ್, ಸೇರಿದಂತೆ ರನ್‍ವೇ ಕಾಮಗಾರಿ ಗಳನ್ನು ವೀಕ್ಷಿಸಿದ ಸಚಿವರು   ಸರ್ವೇ ಪೆÇೀಲ್‍ನ್ನು ವೀಕ್ಷಿಸಿ ಕಾಮಗಾರಿಯನ್ನು ತಾಂತ್ರಿಕವಾಗಿ ಪರಿಶೀಲನೆ ನಡೆಸಿದರು.

 


ಈ ಸಂದರ್ಭದಲ್ಲಿ ಮಾತನಾಡಿದ ಅವರು,  ಈಗಾಗಲೇ ಅಧಿಕಾರಿಗಳಿಗೆ ಸ್ಪಷ್ಟವಾದ ನಿರ್ದೇಶನ ನೀಡಲಾಗಿದೆ, ಜಮೀನು ಸಮತಟ್ಟು ಮಾಡುವ ಕಾರ್ಯ ಕೈಗೊಳ್ಳುವ ಉದ್ದೇಶದಿಂದ ಕಾಮಗಾರಿ ಸ್ವಲ್ಪ ವಿಳಂಬವಾಗಿದೆ, ಆದರೂ ವೇಗದಿಂಧ ಕಾಮಗಾರಿ ಕೈಗೊಂಡು ಬರುವ ಫೆಬ್ರವರಿ 15ರೊಳಗೆ ಕಾಮಗಾರಿ ಸಂಪೂರ್ಣಗೊಂಡು ವಿಮಾನಗಳು ಹಾರಾಟ ನಡೆಸಲಿವೆ ಎಂದು ಹೇಳಿದರು.

ವಿಮಾನ ನಿಲ್ದಾಣ ರಸ್ತೆಗೆ ಸಂಬಂಧಿಸಿದಂತೆ ಈಗಾಗಲೇ 727 ಎಕರೆ ಜಮೀನನ್ನು ಡಿನೋಟಿಫಿಕೇಶನ್ ಮಾಡಲಾಗಿದೆ. ವಿಜಯಪುರ ತಾಲೂಕಿನ ಬುರಣಾಪುರ-ಮದಭಾವಿ ಜಿಲ್ಲಾ ಮುಖ್ಯ ರಸ್ತೆಯಿಂದ  ವಿಮಾನ ನಿಲ್ದಾಣದ ಕೂಡುವ ರಸ್ತೆಗೆ 4.95 ಕೋಟಿ ರೂ. ಲೋಕೋಪಯೋಗಿ ಇಲಾಖೆಯಿಂದ, ಇನ್ನೂ ಎರಡು ರಸ್ತೆಗಳಾದ ಮದಬಾವಿ ಲಂಬಾಣಿ ತಾಂಡಾದಿಂದ ದೊಡ್ಡಿ ದ್ಯಾಬೇರಿಯವರೆಗೆ ಪರಿಶಿಷ್ಟ ಜಾತಿ ಕಾಲನಿಗೆ ಕೂಡುವ ರಸ್ತೆ 4.50 ಕೋಟಿ ರೂ.ದಲ್ಲಿ, ಮತ್ತು ಬುರಣಾಪುರ ಎಸ್.ಸಿ. ಕಾಲೋನಿಯಿಂದ ಅಲಿಯಾಬಾದ್ ಎಸ್.ಸಿ. ಕಾಲೋನಿಯವರೆಗೆ ಹೋಗುವ ರಸ್ತೆ, ವಿಮಾನ ನಿಲ್ದಾಣದ ಸುತ್ತ-ಮುತ್ತ ಯಾವುದೇ ಅಡೆ-ತಡೆ ಉಂಟಾಗಬಾರದು ಎಂಬ  ದೃಷ್ಟಿಯಿಂದ ರಸ್ತೆ ನಿರ್ಮಾಣಕ್ಕಾಗಿ ಜಲಸಂಪನ್ಮೂಲ ಇಲಾಖೆಯಿಂದ ಕೂಡ 9.50 ಕೋಟಿ ರೂ.ಅನುದಾನಕ್ಕೆ ಮಂಜೂರಾತಿ ನೀಡಲಾಗಿದ್ದು, ಕೂಡಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.



ವಿಜಯಪುರ ವಿಮಾನ ನಿಲ್ದಾಣವನ್ನು ಎಟಿಆರ್-72 ದಿಂದ ಏರ್‍ ಬಸ್ 320 ವಿಮಾನಗಳ ಹಾರಾಟಕ್ಕಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಸಹ ಭರದಿಂದ ಸಾಗಿದ್ದು,  ಒಟ್ಟು 347.92 ಕೋಟಿ ರೂ.ಗಳ ಕಾಮಗಾರಿಯನ್ನು ಎರಡು ಹಂತಗಳಲ್ಲಿ  ಅನುಷ್ಟಾನಗೊಳಿಸಲಾಗುತ್ತಿದೆ. ಮೊದಲನೇ ಹಂತದ ಕಾಮಗಾರಿಗಾಗಿ 222.92 ಕೋಟಿ ರೂ.ಗಳು ಹಾಗೂ ಎರಡನೇ ಹಂತದ ಕಾಮಗಾರಿಗೆ 125 ಕೊಟಿ ರೂ.ಗಳನ್ನು ನಿಗದಿಪಡಿಸಲಾಗಿದ್ದು, ಎಟಿಆರ್-72 ವಿಮಾನಗಳ ಹಾರಾಟಕ್ಕಾಗಿ 95 ಕೋಟಿ ರೂ.ಹಾಗೂ ಏರ್‍ಬಸ್-320 ವಿಮಾನಗಳ ಹಾರಾಟಕ್ಕಾಗಿ ಮೇಲ್ದರ್ಜೆಗೇರಿಸಿರುವುದರಿಂದ ಹೆಚ್ಚುವರಿಯಾಗಿ 127.92 ಕೋಟಿ ರೂ.ಗಳ ಕಾಮಗಾರಿಗಳು ಚಾಲ್ತಿಯಲ್ಲಿವೆ ಎಂದು ಹೇಳಿದರು.

ಮೊದಲನೇ ಹಂತದಲ್ಲಿ 222.92 ಕೋಟಿ ರೂ.ಗಳಲ್ಲಿ ರನ್‍ವೇ, ಟ್ಯಾಕ್ಸಿ ವೇ, ಎಪ್ರಾನ್, ಇಸೋಲೇಶನ್ ಬೇ, ಕೂಡು ರಸ್ತೆ, ಒಳ ರಸ್ತೆಗಳು, ಪೆರಿಪೆರಲ್ ರಸ್ತೆಗಳು ಹಾಗೂ ಇತರೆ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ದಿಪಡಿಸಲಾಗುತ್ತಿದೆ  ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ, ಟರ್ಮಿನಲ್ ಬಿಲ್ಡಿಂಗ್ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

 ನಿಸರ್ಗ ಸಂಪತ್ತಿನಿಂದ ಕೂಡಿರುವ ವಿಜಯಪುರ ಜಿಲ್ಲೆಯಲ್ಲಿ ಸಂಪನ್ಮೂಲ, ಹವಾಮಾನ, ನೀರು ಹೀಗೆ ಎಲ್ಲ ರೀತಿಯ ವ್ಯವಸ್ಥೆ ಇದೆ. ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಉದ್ಯಮಪತಿಗಳು ಬೇರೆ-ಬೇರೆ ಸ್ಥಳಗಳಿಂದ  ಕೆಲವೇ ಗಂಟೆಗಳಲ್ಲಿ ವಿಜಯಪುರ ತಲುಪಲು ಸಾಧ್ಯವಾಗುತ್ತದೆ, ಹೀಗಾಗಿ ಈ ನಿಲ್ದಾಣ ಸ್ಥಾಪನೆಯಿಂದ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ದೊರಕಿ ಉದ್ಯೋಗ ಸೃಜನೆಗೆ ಅನುಕೂಲವಾಗಲಿದೆ ಎಂದು ಹೇಳಿದರು.

ವಿಜಯಪುರ ಉತ್ಕೃಷ್ಟ ಗುಣಮಟ್ಟದ ದ್ರಾಕ್ಷಿ ಮೊದಲಾದ ಬೆಳೆಗಳಿಗೆ ಹೆಸರುವಾಸಿ, ಈ ಎಲ್ಲ ಬೆಳೆಗಳನ್ನು ರಫ್ತು ಮಾಡಲು ಹಾಗೂ ವಿಶ್ವದ ಶ್ರೇಷ್ಠ ಸ್ಮಾರಕಗಳನ್ನು ಸಂದರ್ಶಿಸಲು ಪ್ರವಾಸಿಗರಿಗೆ ವಿಮಾನ ನಿಲ್ದಾಣ ಅನುಕೂಲವಾಗಲಿದ್ದು, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಅಭಿಯಂತರ ರಾಜು ಮುಜುಂದಾರ, ಸಹಾಯಕ ಅಭಿಯಂತರ ರೇವಣ್ಣ ಮಸಳಿ, ಗುತ್ತಿಗೆದಾರ ಸಿ.ಬಿ.ಆಲೂರ, ಪ್ಯಾಕೇಜ್-2 ಪ್ರಾಜೆಕ್ಟ್ ಮ್ಯಾನೇಜರ್ ಸರವಣನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.