Wednesday, February 22, 2023

ಗ್ರಾಮ ಒನ್ ಕೇಂದ್ರಗಳ ಮೂಲಕ ಅತಿ ಹೆಚ್ಚು ಸೇವೆಗಳನ್ನು ಒದಗಿಸಿದ ವಿಜಯಪುರ ಜಿಲ್ಲೆ ಮುಖ್ಯಮಂತ್ರಿಗಳಿಂದ ಪ್ರಶಂಸನಾ ಪತ್ರ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಈ ದಿವಸ ವಾರ್ತೆ                                        

ವಿಜಯಪುರ: ವಿಜಯಪುರ ಜಿಲ್ಲೆಯು ಮಾರ್ಚ್-2022ರ ಮಾಹೆಯಲ್ಲಿ ಅತಿ ಹೆಚ್ಚು ನಾಗರಿಕರಿಗೆ ಗ್ರಾಮ ಒನ್ ಕೇಂದ್ರಗಳ ಮೂಲಕ ಸೇವೆಯನ್ನು ಒದಗಿಸುವ ಮೂಲಕ ವಿಶಿಷ್ಟ ಸಾಧನೆಗೈದ ವಿಜಯಪುರ ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿಗಳು ಪ್ರಶಂಶನಾ ಪತ್ರ ನೀಡಿದ್ದಾರೆ. 

ಬುಧವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಜರುಗಿದ  ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಮ್ಮಿಕೊಂಡ ಗ್ರಾಮ ಒನ್ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಮಹಾಂತೇಶ ದಾನಮ್ಮನವರ ಅವರು ಮುಖ್ಯಮಂತ್ರಿಗಳಿಂದ ಪ್ರಶಂಸನಾ ಪತ್ರ  ಹಾಗೂ ಒಂದು ಲಕ್ಷ ರೂ. ಚೆಕ್‍ನ್ನು ಸ್ವೀಕರಿಸಿದರು. 

ಜಿಲ್ಲೆಯಲ್ಲಿ 291 ಗ್ರಾಮ ಒನ್ ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು, 13 ಲಕ್ಷ ಅರ್ಜಿಗಳನ್ನು ಸ್ವೀಕರಿಸಿ ನಾಗರಿಕರಿಗೆ ವಿವಿಧ ಸೇವೆಗಳನ್ನು ಈ ಕೇಂದ್ರಗಳ ಮೂಲಕ ಒದಗಿಸಲಾಗಿದೆ.

ಪಠ್ಯದತ್ತ ಲಕ್ಷ್ಯ ವಹಿಸಿ: ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ


ಈ ದಿವಸ ವಾರ್ತೆ

ವಿಜಯಪುರ : ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ಮಹತ್ತರ ಘಟ್ಟವಾಗಿದ್ದು, ಈ ಹಂತದಲ್ಲಿ ಮೊಬೈಲ್ ಬಳಕೆ ಕೈ ಬಿಟ್ಟು, ಪಠ್ಯಕ್ರಮದತ್ತ ಲಕ್ಷ್ಯ ವಹಿಸಿದರೆ, ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬಹುದು ಎಂದು ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ ಹೇಳಿದರು.

ನಗರದ ಶ್ರೀ ಅಭಿನವ ವಿದ್ಯಾ ಸಂಸ್ಥೆಯ ಶ್ರೀ ಅಭಿನವ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಈಗ ಬಹುತೇಕ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಿದ್ದಿದ್ದು, ಶೈಕ್ಷಣಿಕ ದೃಷ್ಟಿಯಿಂದ ಸರಿಯಲ್ಲ. ಅದರ ಬದಲಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಗೀಳು ಬೆಳೆಸಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಇಳುವರಿ ಪಡೆದುಕೊಂಡರೆ, ಭವಿಷ್ಯದಲ್ಲಿ ಉನ್ನತ ಹುದ್ದೆ ಅಲಂಕರಿಸಬಹುದಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಮನೆಯಲ್ಲಿ ಮಕ್ಕಳ ಚಟುವಟಿಕೆಗಳತ್ತ ಗಮನ ಹರಿಸಬೇಕು. ಆ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದರು.

ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಧ್ಯಕ್ಷತೆ ವಹಿಸಿ, ತಲೆತಗ್ಗಿಸಿ ಪುಸ್ತಕ ಓದಿದವರು ತಲೆಎತ್ತಿ ಜೀವನ ನಡೆಸುತ್ತಿದ್ದಾರೆ. ಆದರೆ ಇಂದು ಬಹುತೇಕರು ತಲೆತಗ್ಗಿಸಿ ಎಗ್ಗಿಲ್ಲದೇ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಪೋಷಕರು ಹೊರತಾಗಿಲ್ಲ. ಈ ಹೀನ ಸಂಪ್ರದಾಯಕ್ಕೆ ಮೊದಲು ಪೋಷಕರು ಗುಡ್ ಬೈ ಹೇಳಬೇಕು. ನಂತರ ಮನೆಯಲ್ಲಿ ಮಕ್ಕಳಿಗೆ ತಲೆತಗ್ಗಿಸಿ ಪುಸ್ತಕ ಓದುವ ರುಚಿ ಬೆಳೆಸುವುದರ ಮೂಲಕ ಭವಿಷ್ಯದ ದಿನಗಳಲ್ಲಿ ಅವರು ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸುವಂತೆ ಪ್ರೇರಣೆಯಾಗಿ ನಿಲ್ಲಬೇಕು ಎಂದು ಪೋಷಕರಿಗೆ ಸಲಹೆ ಮಾಡಿದರು.

ಅಭಿನವ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ, ವಿವಿಧ ಕ್ಷೇತ್ರದ ಗಣ್ಯರಾಗಬೇಕು. ಆ ಮೂಲಕ ಈ ನಾಡು ಹಾಗೂ ಇದೇ ದೇಶದ ಸೆಲೆಬ್ರೆಟಿಗಳಾಗಿ ನಿಲ್ಲಬೇಕೆಂದರು.

ವೇದಿಕೆಯಲ್ಲಿ ಸಶಸ ಮೀಸಲು ಪಡೆಯ ಡಿವೈಎಸ್ಪಿ ಧೂಳಪ್ಪ ಧನಗರ, ಸಂಚಾರಿ ಠಾಣೆ ಸಿಪಿಐ ಪರಮೇಶ್ವರ ಕವಟಗಿ, ಆರ್‌ಪಿಐ ಜಾರ್ ಶೇಖ್, ಸಂಸ್ಥೆಯ ಅಧ್ಯಕ್ಷ ಮೋಹನ ದಳವಾಯಿ, ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೇಶನ್ ಕಾರ್ಯದರ್ಶಿ ರಮೇಶ ಪಾಟೀಲ, ಬಿಆರ್‌ಸಿ ಎ.ಕೆ. ದಳವಾಯಿ, ಸಿಆರ್‌ಸಿ ಸವಿತಾ ಧನಗೊಂಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಇದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಶಬಾನಾ ಚಿತ್ತರಗಿ, ಮೋಹನ ದಳವಾಯಿ, ರವಿ ಕಿತ್ತೂರ, ದೈಹಿಕ ಶಿಕ್ಷಕ ಚನ್ನಪ್ಪ ಸೈದಾಪುರ, ಬಸವರಾಜ ಬಿರಾದಾರ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಜ್ಯೋತಿ ಮತ್ತು ನಿಖಿತಾ ನಿರೂಪಿಸಿದರು.

ಉದ್ಘಾಟನೆ ಕಾರ್ಯಕ್ರಮದ ನಂತರ ಮಕ್ಕಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.


Tuesday, February 21, 2023

ಜಿ.ಪಂ.ಸಿಇಓ ಮುದ್ರಣಾಲಯಕ್ಕೆ ಭೇಟಿ : ಪರಿಶೀಲನೆ

ಈ ದಿವಸ ವಾರ್ತೆ 

ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಫೆ.21 ರಂದು ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯ ಅಧೀನದಲ್ಲಿರುವ ಮುದ್ರಣಾಲಯಕ್ಕೆ ಭೇಟಿ ನೀಡಿ ಕಾರ್ಯಚಟುವಟಿಕೆಗಳ ಪರಿಶೀಲನೆ ನಡೆಸಿದರು.  ನಗದು ಪುಸ್ತಕ, ಸ್ಟಾಕ್ ರಜಿಸ್ಟರ್, ಡೆಡ್‍ಸ್ಟಾಕ್ ರಜಿಸ್ಟರ !ಹಾಗೂ ಇತರೆ  ಕಡತವನ್ನು ಪರಿಶೀಲಿಸಿದರು.



 ಮುದ್ರಣಾಲಯದಲ್ಲಿ ನಡೆಯುತ್ತಿರುವ ವಿವಿಧ ಪ್ರಿಂಟಿಂಗ್ ಕೆಲಸಗಳನ್ನು ವೀಕ್ಷಿಸಿ ತೃಪ್ತಿ ವ್ಯಕ್ತಪಡಿಸಿದ್ದಲ್ಲದೆ, ಜಿಲ್ಲೆಯ ವಿವಿಧ ಕಛೇರಿಗಳಿಂದ ಬೇಕಾಗುವ ನಮೂನೆಗಳು, ಕರಪತ್ರಗಳು ಮತ್ತು ಇತರೆ ಅವಶ್ಯಕ ಪ್ರಿಂಟಿಂಗ್ ಕೆಲಸಗಳನ್ನು ಪಡೆದು ಕೆಲಸ ನಿರ್ವಹಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ  ಉಪನಿರ್ದೇಶಕ ಸಿದರಾಯ ಎಂ.ಬಳೂರಗಿ ಅವರು ಮುದ್ರಣಾಲಯದಲ್ಲಿ ನಡೆಯುವ ಪ್ರಿಟಿಂಗ್ ಕೆಲಸಗಳ ಬಗ್ಗೆ ಸಿಇಓ ಅವರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಮುದ್ರಣಾಲಯದ ಸಿಬ್ಬಂದಿಗಳಾದ ಸಿ.ಎಸ್.ಬುರಾಣಪೂರ, ಮಹಾದೇವಿ ಅ. ಬಜಂತ್ರಿ ಮತ್ತು ವಿಜಯಪುರ ತಾಲೂಕ ಕೈಗಾರಿಕಾ ವಿಸ್ತರಣಾಧಿಕಾರಿಗಳಾದ ಎಸ್.ಎಂ. ಪಾಟೀಲ ಉಪಸ್ಥಿತರಿದ್ದರು.

ಗುಣಮಟ್ಟದ ಕಾಮಗಾರಿ ನಿರ್ವಹಣೆಗೆ ಸಿಇಓ ರಾಹುಲ್ ಶಿಂಧೆ ಸೂಚನೆ

ಈ ದಿವಸ ವಾರ್ತೆ

ವಿಜಯಪುರ: ತಿಕೋಟಾ ತಾಲೂಕಿನ ಲೋಹಗಾಂವ ಮತ್ತು ಸಿದ್ಧಾಪುರ (ಕೆ) ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು  ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಭೇಟಿ ನೀಡಿದ ಸಂದರ್ಭದಲ್ಲಿ ಸಿಇಓ ರಾಹುಲ್ ಶಿಂಧೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ಕಾಮಗಾರಿಗಳ ಗುಣ್ಣಮಟ್ಟದಲ್ಲಿ ಯಾವದೇ ಕಾರಣಕ್ಕೂ ರಾಜಿ ಮಾಡಿಕೊಳ್ಳದೇ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು.

ಮುಖ್ಯವಾಗಿ ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಅತ್ಯಂತ ಉತ್ತಮ ಗುಣಮಟ್ಟದಿಂದ ನಿರ್ವಹಣೆ ಮಾಡಬೇಕು. ಹೆಚ್ಚುವರಿ ಕ್ರಿಯಾ ಯೋಜನೆಗಳ ಬದಲಿಗೆ ಹಳೆ ವರ್ಷದ ಕ್ರಿಯಾ ಯೋಜನೆಗಳಲ್ಲಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಮುಂದಿನ ಆರ್ಥಿಕ ವರ್ಷದ ಆರಂಭದಲ್ಲಿ ಹೊಸ ಕ್ರಿಯಾ ಯೋಜನೆಗಳನ್ನು ಸಲ್ಲಿಸುವಂತೆ ಅವರು ತಿಳಿಸಿದರು. 


 ಲೋಹಗಾಂವ ಗ್ರಾಮ ಪಂಚಾಯತಿಯ ಇಟ್ಟಂಗಿಹಾಳ ಗ್ರಾಮದ ಪ್ರೌಢ ಶಾಲೆಗೆ ಭೇಟಿ ನೀಡಿದ ಅವರು, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಶಾಲಾ ಕಂಪೌಂಡ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ನಂತರ 10ನೇ ತರಗತಿಯ ಮಕ್ಕಳೊಡನೆ ಸಮಾಲೋಚನೆ ನಡೆಸಿದ ಅವರು, ಗ್ರಾಮೀಣ ಭಾಗದ ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಈ ಸಲ ರಾಜ್ಯಕ್ಕೆ ಪ್ರಥಮ ದರ್ಜೆಯಲ್ಲಿ ಬರಲು ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ಪ್ರಯತ್ನಿಸುವಂತೆ ಮಕ್ಕಳಿಗೆ ಪ್ರೇರಣೆ ನೀಡಿದರು.


 ಶಾಲಾ ಶಿಕ್ಷಕರೊಂದಿಗೆ ಶಾಲೆಯಲ್ಲಿ ಲಭ್ಯವಿರುವ ಕುಡಿಯುವ ನೀರು & ಶೌಚಾಲಯದ ಕುರಿತು ಚರ್ಚಿಸಿ ಮಕ್ಕಳಿಗೆ ಯಾವದೇ ಕಾರಣಕ್ಕೂ ಕುಡಿಯುವ ನೀರಿನ ಮತ್ತು ಶೌಚಾಲಯದ ಸಮಸ್ಯೆಗಳು ಉಂಟಾಗದಂತೆ ಕ್ರಮ ವಹಿಸಲು ಸೂಚನೆ ನೀಡಿದರು.

ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಠಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಶಾಲಾ ಆಟದ ಮೈದಾನವನ್ನು ಅಭಿವೃದ್ಧಿ ಪಡಿಸುವಂತೆ ಸ್ಥಳದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಪದ್ಮಿನಿ ಬಿರಾದಾರ ಅವರಿಗೆ ಸೂಚಿಸಿದರು. 

ಗ್ರಾಮ ಪಂಚಾಯತಿ ವ್ಯಾಪ್ತಿಯ ಸೇವಾಲಾಲ ನಗರದಲ್ಲಿ ಪ್ರಗತಿಯಲ್ಲಿರುವ ಜಲ ಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಟ್ಯಾಂಕ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು, ಪ್ರತಿ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕದ ತಂತ್ರಾಂಶದಲ್ಲಿ ಗ್ರಾಮದ ಎಲ್ಲ ಫಲಾನುಭವಿಗಳ ಆಧಾರ ಕಾರ್ಡ್‍ಗಳು ಅಳವಡಿಕೆ ಕುರಿತು ಪರಿಶೀಲನೆ ನಡೆಸಿ, ಆಧಾರ ಕಾರ್ಡ ಅಳವಡಿಕೆಗೆ ಕೂಡಲೇ ಕ್ರಮ ವಹಿಸುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು. 

ಲೋಹಗಾಂವ ತಾಂಡಾ ನಂ:1 ಹಾಗೂ ಸೋಮದೇವರ ಹಟ್ಟಿ ತಾಂಡಾ ನಂ.3  ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ-ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಯ ಸ್ಥಾನಿಕ ಪರಿಶೀಲನೆ ನಡೆಸಿದರು. ಸೋಮದೇವರ ಹಟ್ಟಿ ತಾಂಡಾದಲ್ಲಿರುವ ಜಲ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪ್ರತಿ ದಿನ ನೀರಿನ ಪರೀಕ್ಷೆ  ಮಾಡಬೇಕು. ಮತ್ತು ಕುಡಿಯುವ ನೀರಿನ ಕುರಿತು ಗ್ರಾಮೀಣ ಜನರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ತಾಂಡಾ 1 ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶಾಲೆಯ ಆವರಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬಿಸಿಯೂಟದ ಅಡುಗೆ ಕೋಣೆಯನ್ನು ನಿರ್ಮಾಣ ಮಾಡಬೇಕು. ಇದೇ ವೇಳೆ ಲೋಹಗಾಂವ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ತೆರಿಗೆ ಸಂಗ್ರಹಣೆ ಮಾಡುವ ಕುರಿತು ಗ್ರಾಮ ಪಂಚಾಯತಿ ಸಿಬ್ಬಂದಿಗಳೊಡನೆ ಚರ್ಚಿಸಿ, ಶೀಘ್ರ ಗತಿಯಲ್ಲಿ ತೆರಿಗೆ ಪರಿಷ್ಕರಣೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿರುವ 10 ಜನ ಕ್ರಿಯಾತ್ಮಕ ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಆಯ್ಕೆ ಮಾಡಿ ಉಡುಪಿ ಜಿಲ್ಲೆಗೆ ಹೆಚ್ಚಿನ ಅಧ್ಯಯನಕ್ಕಾಗಿ ಪ್ರವಾಸಕ್ಕೆಂದು ಕಳುಹಿಸಿ ಕೂಡಲಾಗುವುದು ಎಂದು ಹೇಳಿದರು.

ತಿಕೋಟಾ ತಾಲೂಕಿನ ಸಿದ್ಧಾಪುರ(ಕೆ) ಗ್ರಾಮ ಪಂಚಾಯತಿಯ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ ಅವರು, ಸಿದ್ಧಾಪುರ (ಕೆ) ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಶಾಲಾ ಆವರಣದಲ್ಲಿ ಅನುμÁ್ಠನಗೊಂಡ ರನ್ನಿಂಗ್ ಟ್ರ್ಯಾಕ್, ಭೋಜನಾಲಯ ಕಾಮಗಾರಿಗಳನ್ನು  ಪರಿಶೀಲನೆ ನಡೆಸಿ, ಕಾಮಗಾರಿಗಳನ್ನು ಡ್ರೋನ್ ಕ್ಯಾಮೆರಾ ಮುಖಾಂತರ ವಿಡಿಯೋ ಚಿತ್ರೀಕರಣ ಹಾಗೂ ರನ್ನಿಂಗ್ ಟ್ರ್ಯಾಕ್‍ನ ಮಧ್ಯದಲ್ಲಿ ಹಾಕಿ ಅಥವಾ ಫುಟ್‍ಬಾಲ್ ಅಂಕಣಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನಿಡಿದ ಅವರು, ಖುದ್ದಾಗಿ ಗ್ರಾಮದ ಸಾರ್ವಜನಿಕರ ಮತದಾನ ಗುರುತಿನ ಚೀಟಿಯನ್ನು ತೆಗೆದುಕೊಂಡು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ನಲ್ಲು ಗುರುತಿನ ಚೀಟಿ ಚಾಲ್ತಿ ಇರುವ ಬಗ್ಗೆ ಪರಿಶೀಲಿಸಿ ಖಾತರಿಪಡಿಸಿಕೊಂಡರು, ಮತದಾನದ ಬಗ್ಗೆ ಶೇ.100ರಷ್ಟು ಜಾಗೃತಿ ಮೂಡಿಸಬೇಕು ಜೊತೆಗೆ ಶೇ.100 ರಷ್ಟು ಮತದಾನ ಆಗಬೇಕು ಎಂದು ಪಂಚಾಯತಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಿಕೋಟಾ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ಲೊಹಗಾಂವ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಜುಗೌಡ ಬಿರಾದಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಿ.ಬಿ.ಜಂಗಮಶೆಟ್ಟಿ, ಪಂಚಾಯತ್ ರಾಜ್ ಇಂಜನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಿ. ಎಸ್ ಚವ್ಹಾಣ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರು (ಗ್ರಾ.ಉ) ಎಂ.ಬಿ. ಮನಗೂಳಿ, ಲೋಹಗಾಂವ ಪಿಡಿಓ ಶ್ರೀಮತಿ. ಪದ್ಮಿನಿ ಬಿರಾದಾರ, ಸಿದ್ಧಾಪುರ (ಕೆ)  ಪಿಡಿಓ. ಜಿ.ವಾಯ್ ಮಸಳಿ ಹಾಗೂ ಇತರರು ಉಪಸ್ಥಿತರಿದ್ದರು.

Saturday, February 18, 2023

ಕಾಯಕ ಶರಣರ ಆದರ್ಶಗಳು ಸಮಾಜಕ್ಕೆ ದಾರಿದೀಪ : ಕ್ಯಾಪ್ಟನ್ ಮಹೇಶ ಮಾಲಗಿತ್ತಿ

 


ಈ ದಿವಸ ವಾರ್ತೆ

ವಿಜಯಪುರ: 12ನೇ ಶತಮಾನದ ಶರಣರು ಮೌಲ್ಯಯುತ ಕಾಯಕ ಜೀವನ ನಡೆಸುವ ಮೂಲಕ ಸಮಾಜಕ್ಕೆ ಜ್ಞಾನದ, ಸುಜ್ಞಾನದ ಬೆಳಕು ತೋರಿದ ಕಾಯಕ ಶರಣರ ಆದರ್ಶ ವಿಚಾರಗಳು ಹಾಗೂ ಅವರು ನೀಡಿದ ವಚನಗಳೂ ಸಮಾಜಕ್ಕೆ ದಾರಿದೀಪವಾಗುವುದರೊಂದಿಗೆ ಇಂದಿಗೂ ಪ್ರಸ್ತುತವಾಗಿವೆ ಎಂದು ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 'ಕಾಯಕ ಶರಣರ' ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಯಕ ಶರಣರು ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ನೀಡಿದ್ದಾರೆ. ಇಂತಹ ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಅವರು ಹೇಳಿದರು.

ಸಾಹಿತಿ ಜಂಬುನಾಥ ಕಂಚ್ಯಾಣಿ ಅವರು ಉಪನ್ಯಾಸ ನೀಡಿ, 12ನೇ ಶತಮಾನದಲ್ಲಿನ ಬಸವಾದಿ ಶರಣರ ಅನುಭವ ಮಂಟಪವೂ ಇಂದಿನ ಸಂಸತ್ತಿನ ಮಾದರಿ. ಅಲ್ಲಿ ಆಧ್ಯಾತ್ಮಿಕ, ಆರ್ಥಿಕ, ಸಾಮಾಜಿಕ ಹಲವು ಕ್ಷೇತ್ರದ ವಿಷಯಗಳ ಚರ್ಚೆ, ಚಿಂತನ ಮಂಥನ ನಡೆಯುತ್ತಿತ್ತು. ಸಮಾಜದಲ್ಲಿನ ಮೌಢ್ಯತೆಯನ್ನು ತೊಡೆದು ಹಾಕಲು ಬಸವಾದಿ ಶರಣರು ತಮ್ಮ ವಚನಗಳ ಮೂಲಕ ತಿಳಿಸಿದರು. ಎಲ್ಲ ಶರಣರು ತಮ್ಮ ಕಾಯಕ ನಿಷ್ಠೆಯೊಂದಿಗೆ ವಚನಗಳ ಮೂಲಕ ಜ್ಞಾನದ ದೀವಿಗೆಯಾಗಿದ್ದರು. ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ ಹಾಗೂ ಉರಿಲಿಂಗ ಪೆದ್ದಿ ಇವರ ಜೀವನ ಹಾಗೂ ಅವರ ವಚನಗಳ ಕುರಿತಾಗಿ ಉಪನ್ಯಾಸ ನೀಡಿದರು. 

ತಾಳಿಕೋಟೆಯ ಎಸ್ ಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.‌ಸುಜಾತ ಚಲವಾದಿ ಅವರು ಮಾತನಾಡಿ, ಸತ್ಯ, ಶುದ್ಧ, ಕಾಯಕದ ಮೂಲಕ ಜೀವನ ನಡೆಸಿದ ಶರಣರು ಕಾಯಕ, ಶಾಂತಿಮಂತ್ರ, ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ಇಂದಿಗೂ ವಚನಗಳು ಪ್ರಸ್ತುತವಾಗಿವೆ. ಕಾಯಕ ಶರಣರಾದ ಮಾದರ ಚನ್ನಯ್ಯ ಹಾಗೂ ಮಾದರ ಧೂಳಯ್ಯ ಅವರ ವಚನಗಳು ಹಾಗೂ ಕಾಯಕದ ಮಹತ್ವದ ಕುರಿತಾಗಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ವಿಜಯಪುರ  ತಹಶೀಲ್ದಾರ ಸುರೇಶ ಮುಂಜೆ,ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಅನುಸೂಯ ಕೆ.ಚಲವಾದಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ವಿವಿಧ ಸಮಾಜದ ಮುಖಂಡರಾದ ಭೀಮರಾಯ ಜಿಗಜಿಣಗಿ, ದೇವೇಂದ್ರ ಮಿರೇಕರ, ಗಿರಿಶ ಕುಲಕರ್ಣಿ, ಅಶೋಕ ಸೌದಾಗರ,  ಆರ್.ವಾಯ್.ಕಟ್ಟಿಮನಿ, ಎಂ.ಆರ್.ಸೌದಾಗರ, ಹೊನ್ನಕಾಂಬಳೆ, ಮಹಾದೇವ ಬಿಜಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶ್ರಝಮತಿ ದಾನಮ್ಮ ಆಲ್ದ ಅವರು ವಚನ ಸಂಗೀತ ಪ್ರಸ್ತುತಪಡಿಸಿದರು. ಸುಭಾಸ ಕನ್ನೂರ ನಿರ್ವಹಿಸಿ, ವಂದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಊರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಭಾವಚಿತ್ರದ ಮೆರವಣಿಗೆಗೆ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಚಾಲನೆ ನೀಡಿದರು. ಮೆರವಣಿಗೆಯು ಗಾಂಧಿವೃತ್ತ, ಬಸವೇಶ್ವರ ವೃತ್ತದಿಂದ ಹಾಯ್ದು ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಜರುಗಿ, ಸಮಾವೇಶಗೊಂಡಿತು.

Tuesday, February 14, 2023

15-02-2023 EE DIVASA KANNADA DAILY NEWS PAPER

14-02-2023 EE DIVASA KANNADA DAILY NEWS PAPER

13-02-2023 EE DIVASA KANNADA DAILY NEWS PAPER

12-02-2023 EE DIVASA KANNADA DAILY NEWS PAPER

11-02-2023 EE DIVASA KANNADA DAILY NEWS PAPER

10-02-2023 EE DIVASA KANNADA DAILY NEWS PAPER

09-02-2023 EE DIVASA KANNADA DAILY NEWS PAPER

08-02-2023 EE DIVASA KANNADA DAILY NEWS PAPER

07-02-2023 EE DIVASA KANNADA DAILY NEWS PAPER

06-02-2023 EE DIVASA KANNADA DAILY NEWS PAPER

05-02-2023 EE DIVASA KANNADA DAILY NEWS PAPER

04-02-2023 EE DIVASA KANNADA DAILY NEWS PAPER

03-02-2023 EE DIVASA KANNADA DAILY NEWS PAPER

02-02-2023 EE DIVASA KANNADA DAILY NEWS PAPER

01-02-2023 EE DIVASA KANNADA DAILY NEWS PAPER

29-01-2023 EE DIVASA KANNADA DAILY NEWS PAPER

28-01-2023 EE DIVASA KANNADA DAILY NEWS PAPER

27-01-2023 EE DIVASA KANNADA DAILY NEWS PAPER

26-01-2023 EE DIVASA KANNADA DAILY NEWS PAPER

25-01-2023 EE DIVASA KANNADA DAILY NEWS PAPER

24-01-2023 EE DIVASA KANNADA DAILY NEWS PAPER

23-01-2023 EE DIVASA KANNADA DAILY NEWS PAPER

22-01-2023 EE DIVASA KANNADA DAILY NEWS PAPER

21-01-2023 EE DIVASA KANNADA DAILY NEWS PAPER

20-01-2023 EE DIVASA KANNADA DAILY NEWS PAPER

19-01-2023 EE DIVASA KANNADA DAILY NEWS PAPER

18-01-2023 EE DIVASA KANNADA DAILY NEWS PAPER

17-01-2023 EE DIVASA KANNADA DAILY NEWS PAPER

16-01-2023 EE DIVASA KANNADA DAILY NEWS PAPER

15-01-2023 EE DIVASA KANNADA DAILY NEWS PAPER

14-01-2023 EE DIVASA KANNADA DAILY NEWS PAPER

13-01-2023 EE DIVASA KANNADA DAILY NEWS PAPER

12-01-2023 EE DIVASA KANNADA DAILY NEWS PAPER

11-01-2023 EE DIVASA KANNADA DAILY NEWS PAPER

10-01-2023 EE DIVASA KANNADA DAILY NEWS PAPER

09-01-2023 EE DIVASA KANNADA DAILY NEWS PAPER

08-01-2023 EE DIVASA KANNADA DAILY NEWS PAPER

07-01-2023 EE DIVASA KANNADA DAILY NEWS PAPER

06-01-2023 EE DIVASA KANNADA DAILY NEWS PAPER

Tuesday, February 7, 2023

ರಿತೇಶ ರಾಠೋಡ ಆದರ್ಶ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆ

ಈ ದಿವಸ ವಾರ್ತೆ

ವಿಜಯಪುರ: ವಿಜಯಪುರದ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಎಲ್‍ಕೆಜಿ ವಿದ್ಯಾರ್ಥಿಯಾದ ರಿತೇಶ ಸಂತೋಷ ರಾಠೋಡ ಪ್ರಸಕ್ತ ಸಾಲಿನಲ್ಲಿ ಆದರ್ಶ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾನೆ.

 ರವಿವಾರ ನಗರದ ಉಕ್ಕಲಿ ರಸ್ತೆಯ ಶಿವಗಿರಿ ಹತ್ತಿರವಿರುವ ಶಾಲೆಯಲ್ಲಿ ಜರುಗಿದ ಶ್ರೀ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗ್‍ಗಳ ಜಾತ್ರಾ ಮಹೋತ್ಸವ ಹಾಗೂ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ  ಮುತ್ತಗಿ ಹಿರೇಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕುಮಾರ ರಿತೇಶ ರಾಠೋಡನ್ನು ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಿದರು. ಗುಂಡಕನಾಳದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. 

 ಆದರ್ಶ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆಯಾದ ಕುಮಾರ ರಿತೇಶ ಸಂತೋಷ ರಾಠೋಡಗೆ  ಮುಖ್ಯ ಗುರುಗಳಾದ ಕೆ.ಎಚ್. ಪವಾರ, ಶಿಕ್ಷಕಿ, ಶ್ರೀಮತಿ ಲಿಲಾವತಿ ಶೆಟ್ಟಿ, ಜೆ.ಎಸ್.ಹಳ್ಳಿ, ಶ್ರೀಮತಿ ಬಸಮ್ಮ ಇಂಡಿ, ಶ್ರೀಮತಿ ಅನ್ನಪೂರ್ಣೇಶ್ವರಿ ಹೂಗಾರ,  ಶ್ರೀಮತಿ ಶೋಭಾ ಹಂಜಗಿ, ರಾಹುಲ್ ಹಜೇರಿ  ವೇದವ್ಯಾಸ ಶೆಟ್ಟಿ ಸೇರಿದಂತೆ ಇತರ ಶಿಕ್ಷಕರು ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿಗೆ ಶುಭ ಹಾರೈಸಿದ್ದಾರೆ.

ಕುಮಾರಿ ತಂಜೀಮ್ ಬಾಗೇವಾಡಿ ಶಾಲಾ ಆದರ್ಶ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆ



 ಈ ದಿವಸ ವಾರ್ತೆ

ವಿಜಯಪುರ: ವಿಜಯಪುರದ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ತಂಜೀಮ್ ಬಾಗೇವಾಡಿ ಸತತವಾಗಿ ಎರಡನೆ ಬಾರಿಗೆ ಪ್ರಸ್ತಕ್ತ ಸಾಲಿನಲ್ಲಿ ಆದರ್ಶ ವಿದ್ಯಾರ್ಥಿನಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. 

ರವಿವಾರ ನಗರದ ಉಕ್ಕಲಿ ರಸ್ತೆಯ ಶಿವಗಿರಿ ಹತ್ತಿರವಿರುವ ಶಾಲೆಯಲ್ಲಿ ಜರುಗಿದ ಶ್ರೀ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗ್‍ಗಳ ಜಾತ್ರಾ ಮಹೋತ್ಸವ ಹಾಗೂ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ  ಮುತ್ತಗಿ ಹಿರೇಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಇವರು ಕುಮಾರಿ ತಂಜೀಮ್ ಬಾಗೇವಾಡಿಗೆ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಿದರು. ಗುಂಡಕನಾಳದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. 

 ಕಳೆದ ಶೈಕ್ಷಣಿಕ ಸಾಲಿನಲ್ಲಿಯೂ ಸಹ ಕುಮಾರಿ ತಂಜೀಮ್ ಬಾಗೇವಾಡಿ ಆದರ್ಶ ವಿದ್ಯಾರ್ಥಿನಿಗೆ ಪ್ರಶಸ್ತಿಗೆ ಪಾತ್ರಳಾಗಿದ್ದು, ಈ ವರ್ಷವೂ ಸಹ ಎರಡನೇ ಬಾರಿಗೆ ಪ್ರಶಸ್ತಿಗೆ ಪಾತ್ರರಾಗಿರುವುದರಿಂದ  ಮುಖ್ಯ ಗುರುಗಳಾದ ಕೆ.ಎಚ್. ಪವಾರ, ಶಿಕ್ಷಕಿ, ಶ್ರೀಮತಿ ಲಿಲಾವತಿ ಶೆಟ್ಟಿ, ಜೆ.ಎಸ್.ಹಳ್ಳಿ, ಶ್ರೀಮತಿ ಬಸಮ್ಮ ಇಂಡಿ, ಶ್ರೀಮತಿ ಅನ್ನಪೂರ್ಣೇಶ್ವರಿ ಹೂಗಾರ,  ಶ್ರೀಮತಿ ಶೋಭಾ ಹಂಜಗಿ, ರಾಹುಲ್ ಹಜೇರಿ  ವೇದವ್ಯಾಸ ಶೆಟ್ಟಿ ಸೇರಿದಂತೆ ಇತರ ಶಿಕ್ಷಕರು ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.