Tuesday, March 21, 2023

ಕಿಸಾನ್ ಸಮ್ಮಾನ ಯೋಜನೆಯಡಿ 16 ಸಾವಿರ ಕೋಟಿ ವೆಚ್ಚದಲ್ಲಿ 54 ಲಕ್ಷ ರೈತರಿಗೆ ಅನುಕೂಲ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈ ದಿವಸ ವಾರ್ತೆ

ವಿಜಯಪುರ : ನಮ್ಮದು ರೈತ ಪರ ಸರ್ಕಾರ. ಕಿಸಾನ್ ಸಮ್ಮಾನ್ ಯೋಜನೆಯಡಿ 16 ಸಾವಿರ ಕೋಟಿ ವೆಚ್ಚದಲ್ಲಿ  54 ಲಕ್ಷ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ. ಮುಧೋಳದಲ್ಲಿ 975 ಕೋಟಿ ರೂ.ಗಳ ಅನುದಾನವನ್ನು 47 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗುತ್ತಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲಾಡಳಿತ ವಿಜಯಪುರ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತವಾಡ ಪಟ್ಟಣದಲ್ಲಿ ಆಯೋಜಿಸಿರುವ “ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ” ಕಾರ್ಯಕ್ರಮವನ್ನು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ನೆರವೇರಿಸಿ ಅವರು ಮಾತನಾಡಿದರು.

ರೈತ ಮಕ್ಕಳು ವಿದ್ಯಾವಂತರಾಗಿ ಉನ್ನತ ಸ್ಥಾನ ಹೊಂದಬೇಕು ಎಂಬ ಉದ್ಧೇಶದಿಂದ ರೈತ ವಿದ್ಯಾನಿಧಿ ಯೋಜನೆ, ರೈತಶಕ್ತಿ ಯೋಜನೆಯಡಿ 386 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ಭೂ ಶಕ್ತಿ ಯೋಜನೆಯಡಿ ಬೀಜ ಗೊಬ್ಬರಕ್ಕೆ 10 ಸಾವಿರ ರೂ.ಗಳನ್ನು ನೀಡಲಾಗುವುದು. ರೈತರಿಗೆ ಜೀವ ವಿಮೆಗಾಗಿ 180 ಕೋಟಿ ಮೀಸಲಿಡಲಾಗಿದೆ. 53 ಲಕ್ಷ ಜನರಿಗೆ ಇದರ ಪ್ರಯೋಜನವಾಗಲಿದೆ. ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ಸಾಲದ ವ್ಯವಸ್ಥೆ, 3500 ಕೋಟಿ ರೂ.ಗಳ ಆವರ್ತ ನಿಧಿಯಡಿ  ಮೀಸಲಿಡಲಾಗಿದೆ. ಸಿರಿಧಾನ್ಯ ಬೆಳೆದವರಿಗೆ 1 ಹೆಕ್ಟೇರಿಗೆ 10 ಸಾವಿರ ರೂ.ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಸ್ತ್ರೀ ಶಕ್ತಿ ಸಂಘಗಳಿಗೆ ಸ್ವಯಂ ಉದ್ಯೋಗಕ್ಕಾಗಿ 20 ಸಾವಿರ  ಹಣ ಬಿಡುಗಡೆ ಮಾಡಲಾಗುತ್ತಿದೆ.     ಸ್ವಾಮಿ ವಿವೇಕಾನಂದ ಯೋಜನೆಯನ್ನು 23 ರಂದು  13 ಸಾವಿರ ಯುವಶಕ್ತಿ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಮೂಲಕ ಕಾಯಕ ಕ್ರಾಂತಿ ಮಾಡಬೇಕು ಎಂದರು. ಎಸ್.ಸಿ/ ಎಸ್.ಟಿ ಗಳಿಗೆ ಮೀಸಲಾತಿ ಹೆಚ್ವಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ. ಎಲ್ಲಾ ವರ್ಗಕ್ಕೆ ನ್ಯಾಯ ನೀಡುವ ಕೆಲಸ ಮಾಡಿದ್ದೇವೆ. ಮುದ್ದೇಬಿಹಾಳ ಮಾದರಿಯಾಗುವಂತೆ ಕೆಲಸ ಮಾಡಲಾಗಿದೆ. ಈಗ ನಮ್ಮ ಸರ್ಕಾರ ಕೆರೆ ತುಂಬಿಸುವ ಯೋಜನೆಗಳನ್ನು ಸಂಪೂರ್ಣಗೊಳಿಸಲಾಗುತ್ತಿದೆ. ರೇವಣಸಿದ್ದೇಶ್ವರ ಏತ ನೀರಾವರಿಗೆ ಅಡಿಗಲ್ಲು ಹಾಕಲಾಗಿದೆ. ನಮ್ಮ ಪಾಲಿನ ನೀರನ್ನು ಸದ್ಬಳಕೆ ಮಾಡಲು  ನಮ್ಮ ಸರ್ಕಾರ ಆದ್ಯತೆ ನೀಡಿದೆ. 

ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ.ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದಲ್ಲಿ 12 ಕೋಟಿ ಮನೆಗಳಿಗೆ ನೀರು ಒದಗಿಸಲಾಗಿದೆ.  ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲಾಗಿದೆ.  ಜಲಧಾರೆಯಲ್ಲಿ ನಗರ ಪ್ರದೇಶಗಳಲ್ಲಿ 3000 ಕೋಟಿ ರೂ.ಗಳನ್ನು ಒದಗಿಸಿದ್ದು, ಮುಂಬರುವ  ದಿನಗಳಲ್ಲಿ ಎಲ್ಲಾ ಪ್ರದೇಶಗಳಲ್ಲಿ ನೀರು ಒದಗಿಸಲಾಗುವುದು ಎಂದು ಅವರು ಹೇಳಿದರು.



ಈ ಭಾಗದಲ್ಲಿ ವಿಶೇಷವಾಗಿ ನೀರಾವರಿಗೆ ಮೂಲಭೂತ ಸೌಕರ್ಯ, ಕುಡಿಯುವ ನೀರು, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಪರಿಣಾಮ ಇಷ್ಟು ದೊಡ್ಡ ಪ್ರಮಾಣದಲ್ಲಿ ಈ ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಕಿತ್ತೂರು ಅಭಿವೃದ್ಧಿ ಮಂಡಳಿ ರಚನೆ ಮಾಡಲಾಗಿದೆ. ಅದಕ್ಕೆ ಅನುದಾನ ನೀಡಿ, ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕಟಿ ಬದ್ದರಾಗಿ ಕೆಲಸ ಮಾಡುವುದಾಗಿ ಅವರು  ತಿಳಿಸಿದರು. 

ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ  ಅವರು ಮಾತನಾಡಿ, ನೀರಾವರಿ ಅಭಿವೃದ್ಧಿಯಾಗಿ ಪ್ರತಿ ಹಳ್ಳಿಗೂ ರೈತರ ಹೊಲಕ್ಕೆ ನೀರು ಹರಿಯುತ್ತಿದೆ. ಚಿಮ್ಮಲಗಿ ಏತ ನೀರಾವರಿ, ಮುಳವಾಡ ಏತ ನೀರಾವರಿ ಕಾಮಗಾರಿ ಕೈಗೊಳ್ಳಲಾಗಿದೆ. ಒಟ್ಟು 21 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೊಳ್ಳಲಾಗಿದೆ. ಕ್ಷೇತ್ರದ 126 ಹಳ್ಳಿಗಳಲ್ಲಿ 118 ಹಳ್ಳಿಗಳಿಗೆ ಸುಮಾರು 380 ಕೋಟಿ ರೂ ವೆಚ್ಚದಲ್ಲಿ ಹಳ್ಳಿಗಳಲ್ಲಿನ ಒಳಚರಂಡಿ ವ್ಯವಸ್ಥೆ, ರಸ್ತೆ ನಿರ್ಮಾಣ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಗ್ರಾಮೀಣ ಭಾಗಗಳು ಅಭಿವೃದ್ಧಿಗೊಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸುಮಾರು 6 ಸಾವಿರ ಮನೆಗಳನ್ನು ಒದಗಿಸಿದ್ದು, 2 ಸಾವಿರ ಮನೆಗಳನ್ನು ನಿರ್ಮಿಸಲು ಮುಂಜೂರಾತಿ ಪತ್ರಗಳನ್ನು  ನೀಡಲಾಗಿದೆ. ಗ್ರಾಮೀಣ ಪ್ರದೇಶದ 28 ಗ್ರಾಮ ಪಂಚಾಯತಿಗಳಿಗೆ 4ಸಾವಿರ ಮನೆಗಳಿಗೆ ಅಧಿಕೃತ ಆದೇಶ ಪತ್ರವನ್ನು ಮುಖ್ಯಮಂತ್ರಿಗಳು 4 ಜನರಿಗೆ ನೀಡುವ ಮುಖಾಂತರ ಇಂದು ಚಾಲನೆ ನೀಡಲಾಗಿದೆ. ಉಳಿದ ಫಲಾನುಭವಿಗಳಿಗೆ ಮುಂದಿನ ಎರಡು ದಿನಗಳಲ್ಲಿ ತಲುಪಿಸುತ್ತೇವೆ.  ಮುದ್ದೇಬಿಹಾಳದಲ್ಲಿರುವ ಐತಿಹಾಸಿಕ ಸ್ಥಳಗಳ ರಕ್ಷಣೆ, ಅಭಿವೃದ್ಧಿಗೆ ಬಜೆಟಿನಲ್ಲಿ ಅನುದಾನವನ್ನು ಘೋಷಣೆ ಮಾಡಲಾಗಿದೆ.  ನೀರಾವರಿಗೆ ಸರ್ಕಾರ ಸಾಕಷ್ಟು ಅನುಕೂಲವನ್ನು ಮಾಡಿಕೊಟ್ಟಿದೆ ಎಂದು ಹೇಳಿದರು.  

ದೆವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ್, ಸಿಂದಗಿ ರಮೇಶ್ ಭೂಸನೂರ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ ಆನಂದಕುಮಾರ   ಉಪಸ್ಥಿತರಿದ್ದರು.

Saturday, March 18, 2023

ಬಡ-ದಿನ ದಲಿತ ಜನರಿ ಸಮರ್ಪಿತವಾದ ಸರ್ಕಾರ : ಜನರ ಅಭಿವೃದ್ದಿಗೆ ಹಲವು ಯೋಜನೆ ಜಾರಿ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ

 


ಈ ದಿವಸ ವಾರ್ತೆ

ವಿಜಯಪುರ : ಬಡ, ದಿನ ದಲಿತ ಶೋಷಿತ, ವಂಚಿತರಿಗಾಗಿ ಯೋಚಿಸಿ,ಯೋಜನೆ ರೂಪಿಸಿ ಜಾರಿಗೊಳಿಸಿದ ನಮ್ಮ ಸರ್ಕಾರ ಜನರಿಗೆ ಸಮರ್ಪಿತವಾದ ಸರ್ಕಾರವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಿ ಜನರ ಬದುಕು ಕಟ್ಟಿಕೊಡಲು ಪ್ರಯತ್ನಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ತೊರವಿ ರಸ್ತೆಯಲ್ಲಿರುವ ಸೈನಿಕ ಶಾಲೆ ಆವರಣದಲ್ಲಿ  ಹಮ್ಮಿಕೊಂಡ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಾಜದ ಪ್ರತಿಯೊಂದು ವರ್ಗದ ಕಟ್ಟಕಡೆಯ ವ್ಯಕ್ತಿಯ ಬದುಕು ಸುಧಾರಣೆಗೆ ಹಲವು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿದ್ದರೂ ಸಹ  ದೇಶದ ಪ್ರತಿ ಹಳ್ಳಿ ಹಳ್ಳಿಗಳ ಜನರ ಬಗ್ಗೆ ಚಿಂತಿಸುವ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಮಗೆ ದೊರೆತಿದ್ದು ಸೌಭಾಗ್ಯವಾಗಿದೆ ಎಂದು ಹೇಳಿದರು. 

 ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ಹಲವು ಅಭಿವೃದ್ದಿ ಯೋಜನೆಗಳನ್ನು ಜಾರಿಗೊಳಿಸಿ ಜನರ ಕಷ್ಟ-ಸುಖಗಳನ್ನ ನಿವಾರಿಸಲು ಪ್ರಯತ್ನಿಸಲಾಗಿದೆ. ಜಲಜೀವನ ಮಿಷನ್, ಜಲಧಾರೆ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ 11.45 ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಸುವ ನಳಗಳ ಸಂಪರ್ಕ ಕಲ್ಪಿಸಲಾಗಿದೆ. ಬರುವ 2026ನೇ ವರ್ಷದೊಳಗಾಗಿ ದೇಶದದಲ್ಲಿರುವ ಪ್ರತಿ ಮನೆಗಳಿಗೆ ನಳಗಳಿಂದ ನೀರು ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಜಲಜೀವನ ಯೋಜನೆಯಡಿ ಜಿಲ್ಲೆಯ ಪ್ರತಿ ಮನೆಗೆ ನೀರು ಒದಗಿಸಲಾಗುತ್ತಿದೆ.   ವಿಜಯಪುರ ಜಿಲ್ಲೆಗೆ ಒಂದು ಸಾವಿರ ಕೋಟಿ ರೂ. ಪ್ರಧಾನಮಂತ್ರಿ ಜಲಜೀವನ ಯೋಜನೆಯಡಿ  ಹಾಗೂ ಜಲಧಾರೆ ಯೋಜನೆಯಡಿ  ಮೂರು ಸಾವಿರ ಕೋಟಿ ರೂ. ಸೇರಿದಂತೆ ನಾಲ್ಕು ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗಿದೆ.  42 ಕೋಟಿ ಪ್ರಧಾನಮಂತ್ರಿ ಜನಧನ ಹೊಸ ಖಾತೆಗಳನ್ನು ತೆರೆಯಲಾಗಿದೆ. ಈ ಖಾತೆಗಳಿಗೆ ಆಧಾರ ಹಾಗೂ ಮೋಬೈಲ್ ಸಂಖ್ಯೆಗೆ ಜೋಡಣೆ ಮಾಡುವ ಮೂಲಕ  ಈ ಹಿಂದೆ ಯೋಜನೆಗಳ ಲಾಭ ಫಲಾನುಭವಿಗಳಿಗೆ ದೊರೆಯದೇ ಮಧ್ಯವರ್ತಿಗಳ ಪಾಲಾಗುತ್ತಿರುವುದನ್ನು ತಪ್ಪಿಸಲಾಗಿದೆ.  ಸರ್ಕಾರ ಡಿಬಿಟಿ ಮೂಲ ನೇರ ನಗದು ವರ್ಗಾವಣೆಯನ್ವಯ ಸರ್ಕಾರದ ಯೋಜನೆಯ ಹಣ ಪ್ರತಿ ಫಲಾನುಭವಿ ಖಾತೆ ನೇರವಾಗಿ ಜಮೆ ಮಾಡುವ ಯೋಜನೆ ಜಾರಿಗೊಳಿಸಿದ್ದು, ಡಿಬಿಟಿ ಮೂಲಕ 25 ಲಕ್ಷ ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.



 ಕೋವಿಡ್‍ದಂತಹ ಕ್ಲೀಷ್ಟಕರ್ ಪರಿಸ್ಥಿತಿಯನ್ನು ನಮ್ಮ ಸರ್ಕಾರಗಳು ಸಮರ್ಥವಾಗಿ ನಿಭಾಯಿಸಿದೆ. ಈ ಪರಿಸ್ಥಿಯಲ್ಲಿ ಅವಲೋಕಿಸಿದ ನಮ್ಮ ಸರ್ಕಾರ, ಪ್ರಧಾನಮಂತ್ರಿಯವರ ದೂರದೃಷ್ಟಿಯುಳ್ಳ ಯೋಚನೆಯಿಂದ ಲಕ್ಷಾಂತರ ರೂ. ವ್ಯಯಿಸಿ ಬೇರೆ ದೇಶದಿಂದ ಕೋವಿಡ್ ವ್ಯಾಕ್ಸೀನ್ ಖರೀದಿಸುವ ಬದಲು, ನಮ್ಮ ದೇಶದಲ್ಲಿಯೇ ತಯಾರು ಮಾಡಿ, ಲಸಿಕೆ ನೀಡುವುದರಿಂದಲೇ ಇಂದು ಎಲ್ಲರೂ ಸುರಕ್ಷಿತವಾಗಿ, ಮಾಸ್ಕ ಇಲ್ಲದೇ ಬದುಕುವಂತಾಗಿದೆ. ಈ ಕ್ಲೀಷ್ಟಕರ್ ಪರಿಸ್ಥಿತಿಯಲ್ಲಿಯೂ ಸಹ ನಮ್ಮ ಸರ್ಕಾರಗಳು ಉಚಿತವಾಗಿ ವ್ಯಾಕ್ಸಿನೇಶನ್ ಸೇರಿದಂತೆ ಸಹಾಯಧನ, 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ಒದಗಿಸುವ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಿದೆ. ಆಯುಷ್ಮಾನ ಭಾರತ ಆರೋಗ್ಯ ಯೋಜನೆಯಡಿ 39 ಲಕ್ಷ ಜನರಿಗೆ ಉಚಿತ ಚಿಕಿತ್ಸೆ ಒದಗಿಸಲಾಗಿದೆ ಎಂದು ಹೇಳಿದರು.  


ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಾತನಾಡಿ, ವಿಜಯಪುರ ಅಭಿವೃದ್ದಿಗಾಗಿ ಸಾವಿರಾರು ಕೋಟಿ ರೂ. ಅನುದಾನ ಒದಗಿಸಲಾಗಿದೆ. ವಿವಿಧ ರಸ್ತೆಗಳನ್ನು ಅಭಿವೃದ್ದಿಗೊಳಿಸಲಾಗಿದೆ. ವಿಜಯಪುರದಲ್ಲಿ ಟೆಕ್ಸಿಟೈಲ್ ಪಾರ್ಕ್ ಅತ್ಯಾಧುನಿಕ ಕೋಲ್ಡ್ ಸ್ಟೋರೇಜ್ ನಿರ್ಮಿಸಲಾಗುತ್ತಿದೆ. ಇದರಿಂದ ಇಲ್ಲಿಯ ಸಾವಿರಾರು ಜನರಿಗೆ ಉದ್ಯೋಗ ದೊರೆಯಲಿದೆ. ತೊರವಿಯಲ್ಲಿ ವಿಶ್ವ ಮಾರುಕಟ್ಟೆ ಸ್ಥಾಪನೆಯಾಗಿ ವಿಜಯಪುರದಲ್ಲಿ ಬೆಳೆಯುವ ಬೆಳೆಗಳಿಗೆ ಅಂತರರಾಷ್ಟ್ರೀಯ ದರ ದೊರೆತು ಇಲ್ಲಿನ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. 

ಶಾಸಕ , ಸೋಮನಗೌಡ ಪಾಟೀಲ ಸಾಸನೂರ ಅವರು ಮಾತನಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಾಮಾಣಿಕವಾಗಿ ಪ್ರಯತ್ನಿಸಿ, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಒದಗಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜಿಲ್ಲೆಯ ಪ್ರತಿ ಮನೆಗೆ ಸರ್ಕಾರಗಳ ಯೋಜನೆಗಳ ಲಾಭ ತಲುಪಿಸಲು ಪ್ರಯತ್ನಿಸಲಾಗಿದೆ. ಸಮಾವೇಶದಲ್ಲಿ ಪಾಲ್ಗೊಂಡಿರುವ ಫಲಾನುಭವಿಗಳೇ ಸಾಕ್ಷಿ.  ಪ್ರತಿ ಮನೆಗೆ ನೀರೊದಗಿಸುವ ಪ್ರಧಾನಮಂತ್ರಿಗಳ ಕನಸಿನಂತೆ ಜಿಲ್ಲೆಯಾದ್ಯಂತ ಜಲಜೀವನ ಮಿಷನ್ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು. 

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೊಳಿಸಿರುವ ಪ್ರಧಾನಮಂತ್ರಿ ಸ್ವಚ್ಛ ಭಾರತ ಮೀಷನ್ ಯೋಜನೆ, ವಸತಿ ಯೋಜನೆ, ಮಹಾತ್ಮಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆ, ಆಯುμÁ್ಮನ್ ಭಾರತ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಹಾಗೂ ಆರೋಗ್ಯ ಕರ್ನಾಟಕ ಅನ್ನಭಾಗ್ಯ ಯೋಜನೆಗಳು, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ (ಸಮಗ್ರ ಪ್ಯಾಕ್ ಹೌಸ್), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ), ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ (ಶೀತಲ ಗೃಹ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಗೃಹ ಲಕ್ಷ್ಮೀ ಸುಕನ್ಯ ಸಮೃದ್ಧಿ ಖಾತೆ ಯೋಜನೆಗಳ ಮಾಹಿತಿ ನೀಡಿ, ಬಿಪಿಎಲ್ ಕುಟುಂಬಕ್ಕೆ 5 ಲಕ್ಷವರೆಗೆ ಉಚಿತ ಚಿಕಿತ್ಸೆ, ಗರ್ಭೀಣಿ ಮಹಿಳೆಗೆ ಮಾತೃವಂದನಾ ಯೋಜನೆಯಡಿ 5 ಸಾವಿರ ರೂ,, ಅಶಕ್ತ ನಿರ್ಗತಿಕರಿಗೆ, ಹಿರಿಯರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಯೋಜನೆ, ಕಲಾವಿದರಿಗೆ 2 ಸಾವಿರ ರೂ. ಮಾಶಾಸನ,, ಮುಖ್ಯಮಂತ್ರಿ ರೈತ ವಿದ್ಯಾನಿಧಿಯಡಿ 2 ರಿಂದ 11 ಸಾವಿರ ರೂ. ವರೆಗೆ ರೈತ ಮಕ್ಕಳಿಗೆ ವಿದ್ಯಾರ್ಥಿ ವೇತನ, ಬಡ ಮತ್ತು ಮಧ್ಯಮ ಕುಟುಂಬಕ್ಕೆ ಬೆಳಕು ಯೋಜನೆಯಡಿ ಉಚಿತ ವಿದ್ಯುತ್ ಪೂರೈಕೆ, ಡೇನಲ್ಮ ಯೋಜನೆಯಡಿ 10 ಸಾವಿರ ರೂ. ಸಾಲ ಸೇರಿದಂತೆ ಹಲವು ಯೋಜನೆಗಳು ಜಾರಿಯಲ್ಲಿದ್ದು, ಈ ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ವಿವಿಧ ಯೋಜನೆಗಳ ಕಾರ್ಯಾದೇಶ, ಪರಿಕರ ವಿತರಿಸುವ ಫಲಾನಾಭುವಿಗಳ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಒಳನಾಡು ಮೀನುಗಾರರಿಗೆ ಮೀನು ಸಲಕರಣೆ ಕಿಟ್ಟು ವತರಣೆ ಯೋಜನೆ, ನೀಲಿ ಕಾಂತ್ರಿ ಯೋಜನೆಯಡಿ ಇನ್ಸುಲೇಟೆಡ್ ಟ್ರಕ್ ಖರೀದಿಗೆ  ಸಹಾಯಧನ, ಹೊಸ ಕಂದಾಯ ಗ್ರಾಮಗಳ ಹಕ್ಕು ಪತ್ರ ವಿತರಣೆ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆ, ಡೇ-ನಲ್ಮ್ ಯೋಜನೆ, ದ್ವಿ-ಚಕ್ರ ವಾಹನ ಯೋಜನೆ, ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಣೆ,  ಸಾಹಿತಿ,ಕಲಾವಿದರಿಗೆ ಮಾಸಾಶಾಸನ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (ಪಿ.ಎಂ.ಕೆ.ಎಸ್.ವೈ) ಮೈಕ್ರೋ ಇರಿಗೇಶನ್,  ಸಬ್ ಮಿಷನ್ ಆನ್ ಅಗ್ರಿಕಲಚರ್ ಮೆಕನೈಜೇಶನ್ (ಎಸ್.ಎಂ.ಎ.ಎಂ.) ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ, ಮುಖ್ಯ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ, ಮುಖ್ಯ ಮಂತ್ರಿ ರೈತ ವಿದ್ಯಾನಿಧಿ ಯೋಜನೆ, ಜಲ ಜೀವನ ಮಿಷನ್ ಯೋಜನೆ, ವಿಕಲಚೇತನರಿಗೆ ಸಾಧನ ಸಲಕರಣೆ, ಶ್ರವಣ ಸಾಧನೆ ಯಂತ್ರ, ಟಾಕಿಂಗ್ ಲ್ಯಾಪ್ ಟಾಪ್ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು. 

ವೇದಿಕೆಯಲ್ಲಿ ನಾಗಠಾಣ ಶಾಸಕರಾದ ಡಾ.ದೇವಾನಂದ ಚವ್ಹಾಣ, ಸಿಂದಗಿ ಶಾಸಕ ರಮೇಶ ಭೂಸನೂg, Àಕರ್ನಾಟಕ ಸಾವಯವ ಬೀಜ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ದ್ರಾಕ್ಷಿ-ವೈನ್ ಬೋರ್ಡ್ ಅಧ್ಯಕ್ಷ ಎಂ.ಎಸ್. ರುದ್ರಗೌಡರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮ ರಜಪೂತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ ಉಪಸ್ಥಿತರಿದ್ದರು.

Wednesday, March 15, 2023

ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಲಕ್ಷ್ಮಣ ನೇಮಕ

 



ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ ರವರ ಹಾಗೂ ವಿಜಯಪೂರ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ  ರಾಜು ಆಲಗೂರ ಅವರ ಆದೇಶದ ಮೇರೆಗೆ ವಿಜಯಪುರ ನಗರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್‌ ಸಮಿತಿಯ ಉಪಾಧ್ಯಕ್ಷರನ್ನಾಗಿ  ಲಕ್ಷ್ಮಣ ಶರಣಪ್ಪ ಚಲವಾದಿ ಅವರನ್ನು ನೇಮಕ ಮಾಡಿ‌  ಆದೇಶ ಹೊರಡಿಸಲಾಗಿದೆ.

ಲಕ್ಷ್ಮಣ ಅವರ ಸಮಾಜ ಸೇವೆ ಕಾರ್ಯ ಗಳನ್ನು ಗುರುತಿಸಿ ಅವರನ್ನು ಈ ಗುರುತರ ಜವಾಬ್ದಾರಿಯನ್ನು ನೀಡಲಾಗಿದೆ.

ಕೂಡಲೇ ತಮ್ಮ ಅಧಿಕಾರ ವಹಿಸಿಕೊಂಡು ವಿಜಯಪುರ ನಗರ ಬ್ಲಾಕ್ ಪ್ರದೇಶದಲ್ಲಿ ಸ್ಥಳೀಯ ನಾಯಕರ ಸಹಯೋಗದಿಂದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಕರಾಗಬೇಕೆಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ. 

ಆದೇಶ ಪತ್ರವನ್ನು ವಿಜಯಪುರ ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸೈಯ್ಯದ ಜಮೀರ ಅಹ್ಮದ ಬಕ್ಷಿ, ವಿಜಯಪುರ ಮಹಾನಗರ ಪಾಲಿಕೆ ಸದಸ್ಯೆ ಆರತಿ ಶಹಾಪುರ ನೀಡಿದರು.