Friday, September 29, 2023

ಮಾನವ- ವನ್ಯಮೃಗಗಳ ಸಂಘರ್ಷಗಳನ್ನು ತಡೆಯುವ ಕೆಲಸವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

 ಈ ದಿವಸ ವಾರ್ತೆ

ಬೆಂಗಳೂರು, ಸೆಪ್ಟೆಂಬರ್ 29 :

 ಮಾನವ- ವನ್ಯಮೃಗಗಳ ಸಂಘರ್ಷಗಳನ್ನು ತಡೆಯುವ ಕೆಲಸವಾಗಬೇಕು. ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಬಾರದಂತೆ ಬ್ಯಾರಿಕೇಡ್ ನಿರ್ಮಿಸಲು ಹೆಚ್ಚಿನ  ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಕಾಡು ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಅರಣ್ಯ ಪ್ರದೇಶದೊಳಗೆ ಲಭ್ಯವಾಗಿಸುವುದು ಅರಣ್ಯ ಇಲಾಖೆಯ ಜವಾಬ್ದಾರಿಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

 ಅವರು ಇಂದು ಕರ್ನಾಟಕ  ಅರಣ್ಯ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿರುವ “ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಹೆಚ್ಚಿನ ಸಸಿಗಳನ್ನು ನೆಡುವ ಮೂಲಕ ಕಾಡು ಬೆಳೆಸುವ ಕೆಲಸವಾಗಬೇಕು. ಅರಣ್ಯ ಪ್ರದೇಶದ ವಿಸ್ತೀರ್ಣಗೊಂಡರೆ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ. ಕಾಡುಗಳಲ್ಲಿ ಹುಲಿ, ಆನೆಗಳ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿರುವುದು ಸಂತೋಷದ ವಿಷಯ. ಆದರೆ ಕಾಡುಪ್ರಾಣಿಗಳು ಜನರಿರುವ ಪ್ರದೇಶಕ್ಕೆ ಬರುತ್ತಿದ್ದು, ಅರಣ್ಯ ಇಲಾಖೆಯವರು ಹಾಗೂ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

*ಅರಣ್ಯ ಪ್ರದೇಶ ಹೆಚ್ಚಳದಿಂದ ಹವಾಮಾನ ವೈಪರೀತ್ಯಗಳನ್ನು ತಡೆಯಬಹುದು:*

ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ಜವಾಬ್ದಾರಿ. ಅರಣ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ರಾಜ್ಯದ ಭೂ ಪ್ರದೇಶದಲ್ಲಿ ಶೇ. 20 ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಕನಿಷ್ಠ ಶೇ. 33 ಕ್ಕೆ ಅರಣ್ಯ ಪ್ರದೇಶದ ವಿಸ್ತರಣೆಯಾಗಬೇಕಿದೆ. ಆಗಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ. ಈ ವರ್ಷ ಮಳೆಯಿಲ್ಲದೇ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಕಾವೇರಿ ನೀರು , ಬರಗಾಲ, ಆಹಾರ ಉತ್ಪತ್ತಿ ಕೊರತೆಗಳನ್ನು ತಲೆದೋರುತ್ತದೆ. ಈ ಪರಿಸ್ಥಿತಿ ರಾಜ್ಯದ ಜಿಡಿಪಿ, ತಲಾವಾರು ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿ 40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇ. 50 ರಷ್ಟು ಬೆಳೆ ಹಾನಿಯಾಗಿದೆ. ಪ್ರತಿ ನಾಲ್ಕೈದು ವರ್ಷಕ್ಕೊಮ್ಮೆ ಇಂತಹ ಬರಗಾಲ ಪರಿಸ್ಥಿತಿ ಎದುರಾಗುತ್ತಿದ್ದು, ಅರಣ್ಯ ಪ್ರದೇಶ ಹೆಚ್ಚಿದರೆ ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಸಾಧ್ಯವಿದೆ ಎಂದರು.

*ಪ್ರತಿ ವರ್ಷವೂ ಮುಖ್ಯಮಂತ್ರಿಗಳ ಪದಕ ಪ್ರದಾನ :*

ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರು ಅತ್ಯಂತ ಕ್ಲಿಷ್ಟ ಪರಿಸ್ಥಿತಿ ಯಲ್ಲಿ ಕಾರ್ಯನಿರ್ವಹಿಸುತ್ತಾ ಅರಣ್ಯ ಸಂರಕ್ಷಣೆ ಮಾಡುತ್ತಾರೆ. ವನ್ಯಜೀವಿಗಳನ್ನು ರಕ್ಷಣೆ  ಮಾಡುವುದಲ್ಲದೆ ಕಾಡು ಬೆಳೆಸುವ ಕೆಲಸವನ್ನೂ ಮಾಡುತ್ತಾರೆ. ಅಸಾಧಾರಣ ಸೇವೆ ಮಾಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಉತ್ತೇಜಿಸುವ ಕೆಲಸವನ್ನು  2017 ರಿಂದ  ಮಾಡಲಾಗುತ್ತಿದೆ. 2017, 2018, 2019 ರಲ್ಲಿ ನೀಡಲಾಗಿದೆ. ಎರಡು ವರ್ಷಗಳಿಂದ ಪದಕ ವಿತರಣಾ ಸಮಾರಂಭ ನಡೆದಿರಲಿಲ್ಲ. 2020 ಹಾಗೂ 21 ನೇ ಸಾಲಿನ ಪದಕ ವಿತರಣೆಯನ್ನು ಅರಣ್ಯ ಇಲಾಖೆ ವತಿಯಿಂದ 50 ಪದಕಗಳನ್ನು ವಿತರಣೆ ಮಾಡಿದೆ. 2- 3 ವರ್ಷಗಳ ಪದಕಗಳನ್ನು ಒಟ್ಟಿಗೆ ನೀಡುವ ಪರಿಪಾಠ ಇರಬಾರದು .ಪ್ರಶಸ್ತಿ ವಿಜೇತರ ಆಯ್ಕೆಯ ನಂತರ ಎರಡು ಮೂರು ವರ್ಷ ಕಾಯುವ ಅಗತ್ಯವಿಲ್ಲ. ಪ್ರತಿ ವರ್ಷವೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಬೇಕೆಂದು ಅರಣ್ಯ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವ  ಪ್ರಿಯಾಂಕ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅ ಖ್ತರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ , ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿಎಂ ಹಾಗೂ ಡಿಸಿಎಂ ರಿಂದ ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ

 ಈ ದಿಸವ ವಾರ್ತೆ

ಬೆಂಗಳೂರು:

ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು. 

ಗೃಹಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕರೆದಿದ್ದ ಸಭೆಗೆ ನ್ಯಾಯಮೂರ್ತಿಗಳಾದ ಎಂ ಎನ್ ವೆಂಕಟಾಚಲಯ್ಯ, ಶಿವರಾಜ ಪಾಟೀಲ್, ವಿ ಗೋಪಾಲಗೌಡ, ಆರ್ ವಿ ರವೀಂದ್ರನ್, ಪಿ. ವಿಶ್ವನಾಥಶೆಟ್ಟಿ, ಎ ಎನ್ ವೇಣುಗೋಪಾಲಗೌಡ, ಕಾನೂನು ಸಚಿವರಾದ ಸಚಿವ ಎಚ್ ಕೆ ಪಾಟೀಲ್, ಸಿಎಂ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ರಾಜಕೀಯ ಸಲಹೆಗಾರರಾದ ನಸೀರ್ ಅಹ್ಮದ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮಾಜಿ ಅಡ್ವೋಕೇಟ್ ಜನರಲ್ ಗಳಾದ ಬಿ ವಿ ಆಚಾರ್ಯ, ಮಧುಸೂದನ್ ನಾಯಕ್, ವಿಜಯಶಂಕರ್, ಉದಯ್ ಹೊಳ್ಳ, ಪ್ರೊ ರವಿವರ್ಮಕುಮಾರ್, ಪ್ರಭುಲಿಂಗ ನಾವದಗಿ, ಕಾನೂನು, ಜಲ ಸಂಪನ್ಮೂಲ ಇಲಾಖೆ ಸೇರಿದಂತೆ ಮುಖ್ಯಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಶ್ವಾಸಾರ್ಹತೆ ಆರ್ಥಿಕ ಪ್ರಗತಿಗೆ ಕಾರಣ-ಮಲ್ಲಿಕಾರ್ಜುನ ಲೋಣಿ


 ಈ ದಿವಸ ವಾರ್ತೆ

ವಿಜಯಪುರ: ನಂಬಿಕೆ, ವಿಶ್ವಾಸ ಮತ್ತು ಪ್ರಾಮಾಣಿಕತೆಯಿಂದ ಮಾತ್ರ ಸಹಕಾರಿ ವಲಯ ಉಳಿಯಲು ಸಾಧ್ಯವಿದೆ. ಪರಸ್ಪರ ಸಹಕಾರ ಮನೋಭಾವನೆ ಮೂಡಿದರೆ ಸಂತೋಷ, ಸಮಾನತೆ ಕಾಣಬಹುದು ಎಂದು ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
       ಅವರು ನಗರದ ವನಶ್ರೀ ಭವನದಲ್ಲಿ ದಿ ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ. ಬ್ಯಾಂಕಿನ 23 ನೇ ವಾರ್ಷಿಕ ಸರ್ವಸಾಧರಣ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
         ಸಹಕಾರ ಮನೋಭಾವ,ಪ್ರಾಮಾಣಿಕತೆ, ನಿಷ್ಠೆ,
ಸಹಕಾರಿ ತತ್ವದಡಿ ಹಲವು ಯೋಜನೆಗಳ ಮೂಲಕ ಜನರನ್ನು ಆರ್ಥಿಕವಾಗಿ ಸದೃಢಗೊಳಿಸುತ್ತಿದ್ದು, ಇಂದಿನ ಆಧುನಿಕ ಯುಗದಲ್ಲಿ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ರಾಷ್ಟ್ರೀಕೃತ ಬ್ಯಾಂಕುಗಳ ಹಾಗೆಯೇ ಸೌಲಭ್ಯ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದರು.
        ಒಂದು ಮುಖ್ಯ ಕಚೇರಿ, ಐದು ಶಾಖೆಗಳುಳ್ಳ ಬ್ಯಾಂಕು 1816 ಜನ ಸದಸ್ಯರನ್ನು ಹೊಂದಿದೆ.ಪ್ರಸಕ್ತ ವರ್ಷದ ಆದಾಯ ತೆರಿಗೆ ಮುಂಗಡ ಪಾವತಿಸಿದ ನಂತರದಲ್ಲಿ ಒಟ್ಟು ರೂ.23,06,464 ಲಕ್ಷ ಲಾಭ ಗಳಿಸಿದೆ. ಪ್ರತಿವರ್ಷ 15 ℅ ಡಿವಿಡೆಂಡ್ ಕೊಡಲಾಗುತ್ತಿದೆ. ಮುಂದಿನ ವರ್ಷಗಳಲ್ಲಿಯೂ ಇದನ್ನು ಮುಂದುವರೆಸಲಾಗುವುದು.ರಾಜ್ಯದ ವಿವಿಧ ಸ್ಥಳಗಳಲ್ಲಿ 25 ಶಾಖೆಗಳನ್ನು ಆರಂಭಿಸಲು ನಿರ್ಣಯಿಸಲಾಯಿತು. ವೈಯಕ್ತಿಕ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ  25 ಲಕ್ಷ ರೂ. ಗಳಿಗೆ ಹೆಚ್ಚಿಸಲಾಯಿತು. ಈ ವರ್ಷದಿಂದ ಬಂಗಾರದ ಮೇಲಿನ ಸಾಲ ನೀಡಲು ತೀರ್ಮಾನ ಕೈಗೊಳ್ಳಲಾಯಿತು. ಸಾಲಗಾರರು ನಿಯಮಗಳಂತೆ ಸಕಾಲಕ್ಕೆ ಬಡ್ಡಿ, ಸಾಲ ಮರುಪಾವತಿಸಬೇಕು ಎಂದು ಹೇಳಿದರು.
       ಸೊಸೈಟಿಯ ಉಪಾಧ್ಯಕ್ಷ ಎ ಆರ್ ಉಕ್ಕಲಿ,
ನಿರ್ದೇಶಕರಾದ ಬಿ ಜಿ ಪಾಟೀಲ, ಎಸ್ ಎಸ್ ಶಿರಾಡೋಣ, ಜಿ ಟಿ ಪಾಟೀಲ,ಎಸ್ ಎಸ್ ಅರಕೇರಿ,ಆರ್ ಎಲ್ ಇಂಗಳೇಶ್ವರ,ಎ ಎಸ್ ಹೊಸಮನಿ, ಎಸ್ ಜಿ ಗಡಗಿ,ಎಸ್ ಜಿ ಹಿಟ್ನಳ್ಳಿ ಹಾಗೂ ಮಹಿಳಾ ನಿರ್ದೇಶಕರಾದ ಎಸ್ ಎಂ ಕಡಿ,ಶೋಭಾ ಕತ್ನಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
        ವ್ಯವಸ್ಥಾಪಕರಾದ ಮೇಘಾ ಅರ್ಜುಣಗಿ ವರದಿ ವಾಚಿಸಿದರು.ಸೊಸೈಟಿ ಸಿಬ್ಬಂದಿ ವರ್ಗ ಹಾಜರಿದ್ದರು.
ಶಿಕ್ಷಕ ಸಂತೋಷ ಬಂಡೆ ಕಾರ್ಯಕ್ರಮ ನಿರ್ವಹಿಸಿದರು.ಇದೇ ಸಂದರ್ಭದಲ್ಲಿ ಉತ್ತಮ ಗ್ರಾಹಕರನ್ನು ,ಪಿಗ್ಮಿ ಸದಸ್ಯರನ್ನು, ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು.

ಮಹಾತ್ಮ ಗಾಂಧೀಜಿ ಮಾನವ ಪ್ರಪಂಚಕ್ಕೆ ಮಾರ್ಗದರ್ಶಿ - ಸಿಪಿಐ ಅಶೋಕ್ ಚವ್ಹಾಣ್


 ಈ ದಿವಸ ವಾರ್ತೆ

ನಿಡಗುಂದಿ:

ಭಾರತ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನೇತಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಪಶ್ಚಿಮ ಭಾರತದ ಗುಜರಾತ್ ನಲ್ಲಿ ಜನಿಸಿರಬಹುದು ಆದರೆ ಅವರು ಪ್ರತಿಪಾದಿಸಿದ ತತ್ವ - ಸಿದ್ದಾಂತಗಳಿಂದ ಮಾನವ ಪ್ರಪಂಚಕ್ಕೆ ಮಾರ್ಗದರ್ಶಿಯಾಗಿದ್ದಾರೆ, 

ಎಂದು ನಿಡಗುಂದಿ ಸಿಪಿಐ ಅಶೋಕ್ ಚವ್ಹಾಣ್ ಅಭಿಪ್ರಾಯ ಪಟ್ಟರು.

ಪಟ್ಟಣದ ನ್ಯೂ ಇಂಗ್ಲೀಷ್ ಪದವಿ ಪೂರ್ವ ಕಾಲೇಜಿನಲ್ಲಿ ಬೇನಾಳದ ರಾಷ್ಟ್ರಪಿತ ಮಹಾತ್ಮ ಗಾಂಧಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ' ಬಾಪೂ ಎಂಬ ಜಗದ ಬೆಳಕು'  ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದರು. 

ಆಂಗ್ಲ ಸೂರ್ಯನನ್ನು ಅಸ್ತಂಗತ ಗೊಳಿಸಿ ಸತ್ಯ- ಅಹಿಂಸೆಗಳೆಂಬ ಅಸ್ತ್ರಗಳನ್ನು ಹಿಡಿದು ಶಾಂತಿಯ ಪಥದಲ್ಲಿ ಸಾಗಿ ಭರತ ವರ್ಷದ ಬಾನಂಗಳದಲ್ಲಿ ಸ್ವತಂತ್ರ ಸೂರ್ಯ ನನ್ನು ಉದಯಿಸುವಂತೆ ಮಾಡಿದ ಸ್ವಾತಂತ್ರ್ಯ ಶಿಲ್ಪಿ ಮಹಾತ್ಮ ಗಾಂಧೀಜಿಯವರು ಎಂದರು.

ಆರ್.ಎಂ.ಜಿ.ಎಫ್.ಸಂಸ್ಥಾಪಕ ಅಧ್ಯಕ್ಷ ನೇತಾಜಿ ಗಾಂಧಿ ಮಾತನಾಡಿ, ಬ್ರಿಟಿಷ್  ರೂಲ್ಡ್ ಭಾರತದಲ್ಲಿ ಜರ್ನಲಿಸ್ಟ್  ಗಾಂಧಿ ಆಂಗ್ಲರ ಯಾವುದೇ ಬೆದರಿಕೆಗಳಿಗೆ ಬಗ್ಗದೆ, ಯಾವುದೇ ಎಚ್ಚರಿಕೆಗಳಿಗೆ ಜಗ್ಗದೆ  52 ವರುಷ ಪತ್ರಕರ್ತನಾಗಿ ಇಂಡಿಯನ್ ಒಪಿನಿಯನ್, ಯಂಗ್ ಇಂಡಿಯಾ, ನವ ಜೀವನ, ಹರಿಜನ, ಹರಿಜನ ಸೇವಕ, ಹರಿಜನ ಬಂಧು ಹೀಗೆ 6 ಪತ್ರಿಕೆಗಳನ್ನು ಪ್ರಕಟಿಸಿ 10 ದಶಲಕ್ಷ ಪದಗಳನ್ನು ಬರೆದರು.

ಯಂಗ್ ಇಂಡಿಯಾ ಜರ್ನಲ್ ನಲ್ಲಿ ಬ್ರಿಟಿಷ್ ಪ್ರಭುತ್ವದ ವಿರುದ್ಧ ಕಠಿಣವಾಗಿ ಬರೆದ ಕಾರಣಕ್ಕಾಗಿ 1922 ಮಾರ್ಚ್ 10ರಂದು ರಾಷ್ಟ್ರದ್ರೋಹದ ಕೇಸ್ ಆಗಿ 6 ವರುಷ ಜೈಲು ಶಿಕ್ಷೆಗೂ ಗುರಿಯಾಗಿದ್ದರು ಎಂದು ನೆನಪಿಸಿದರು.

ಉಪನ್ಯಾಸಕ ಎಂ.ಬಿ.ಮುಲ್ಲಾ ತಮ್ಮ ಉಪನ್ಯಾಸದಲ್ಲಿ

ನಡೆ - ನುಡಿಗೆ ವ್ಯತ್ಯಾಸ ಇಲ್ಲದಂತೆ ಬದುಕಿದ ಮಹಾನ್ ನಾಯಕ ಮಹಾತ್ಮ ಗಾಂಧೀಜಿ ಎಂದರು.

ಪ್ರಿನ್ಸಿಪಾಲ್ಸಿ.ಎಸ್.ರಾಥೋಡ್ 

ಅಧ್ಯಕ್ಷೀಯ ನುಡಿಗಳ ನ್ನಾಡಿದರು.

ಎಸ್.ಎಲ್.ಚಿಂತಾಮಣಿ, ಎಂ.ಎಲ್.ಹೊಸಮನಿ, ಕೆ.ವಿ.ಪಾರಶೆಟ್ಟಿ, ರಾಜು ಗುಂಡಿನಮನಿ, ಸಿ.ಬಿ.ಮುಲ್ಲಾ 

 ಸೇರಿದಂತೆ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಆರ್.ಪಿ.ಲಮಾಣಿ ಸ್ವಾಗತಿಸಿದರು,

ಶಿವು ಬೀಳಗಿ ನಿರೂಪಿಸಿದರು,

ಪಿ.ಎಂ. ನಡಕಟ್ಟಿವಂದಿಸಿದರು.

ಗಾಂಧಿ ಕ್ವಿಜ್ : 

ಬಾಪೂ ಕುರಿತು ಜರುಗಿದ ರಸ ಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿ/ನಿಯರಿಗೆ ಗಾಂಧಿ ಪುಸ್ತಕ ಹಾಗೂ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು.

ಛಾಯಾಚಿತ್ರಗಳ ಪ್ರದರ್ಶನ :

ಮಹಾತ್ಮ ಗಾಂಧೀಜಿಯವರ ಬಾಲ್ಯ ಜೀವನ, ಶಿಕ್ಷಣ, ಅವರು ಭಾಗವಹಿಸಿದ ಸ್ವಾತಂತ್ರ್ಯ ಸಂಗ್ರಾಮದ ಘಟನಾವಳಿಗಳ ಕುರಿತು 50 ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

Thursday, September 28, 2023

ಬಂದ್‍ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಟಿ.ಭೂಬಾಲನ

ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ಬಂದ್‍ ಹಿನ್ನೆಲೆ  ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.  ಮುಂಜಾಗ್ರತಾ ಕ್ರಮವಾಗಿ ವಿಜಯಪುರ ಜಿಲ್ಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ  ಕೈಗೊಳ್ಳಲಾಗಿದ್ದು, ಶಾಲಾ-ಕಾಲೇಜುಗಳು ಹಾಗೂ ಸಾರಿಗೆ ಬಸ್‍ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ

ಕರ್ನಾಟಕ ವ್ಹೀಲ್ ಚೇರ್ ಪ್ರೀಮಿಯರ್ ಲೀಗ್ ಬಿಜಾಪುರ ಬ್ಲಾಸ್ಟರ್ ಚಾಂಪಿಯನ್

 

ಈ ದಿವಸ ವಾರ್ತೆ 

ವಿಜಯಪುರ:  ಕರ್ನಾಟಕ ವ್ಹೀಲ್ ಚೇರ್ ಪ್ರೀಮಿಯರ್ ಲೀಗ್ ಬಿಜಾಪುರ ಬ್ಲಾಸ್ಟರ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಕರ್ನಾಟಕ ವ್ಹೀಲ ಚೇರ ಪ್ರೀಮಿಯ ಲೀಗ್ ಎರಡನೇಯ ಆವೃತ್ತಿಯಲ್ಲಿ ಸಾಗರ ಲಮಾಣಿ ಅವರ ಮೊದಲ ನಾಯಕತ್ವದಲ್ಲಿ ಬಿಜಾಪುರ ಬ್ಲಾಸ್ಟರ್ ತಂಡ ಚಾಂಪಿಯನಾಗಿ ಟೋಪಿ ತನ್ನದಾಗಿಸಿಕೊಂಡಿದೆ.

ಫಾಯಿನಲ್ ಪಂದ್ಯದಲ್ಲಿ ಬೆಂಗಳೂರ ಈಗಲ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಬೆಂಗಳೂರ ಈಗಲ್ಸ್ ತಂಡ 6 ವಿಕೆಟ್ ಕಳೆದುಕೊಂಡು 108 ರನ್ ಕಲೆ ಹಾಕಿತ್ತು 108 ರನ್ ಗುರಿ ಇಟ್ಟುಕೊಂಡ ಬಿಜಾಪುರ ಬ್ಲಾಸ್ಟರ್‌ ತಂಡವು ಯಾವುದೇ ವಿಕೆಟ್ ನಷ್ಟ ಇಲ್ಲದೆ 11.3 ಓವರಗಳಲ್ಲಿ 111 ರನ್ ಗಳಸಿ ಸುಲಬವಾಗಿ ಬಿಜಾಪುರ ಬ್ಲಾಸ್ಟರ ತಂಡವು ಗೆಲವು ತನ್ನದಾಗಿಸಿ ಕೊಂಡಿದೆ.

ಈ ಟೂರ್ನಿಯು ಬೆಂಗಳೂರಿನ ವಾಯ್‌ ಎಂಸಿಎ ಕ್ರಿಕೇಟ್ ಮೈದಾನದಲ್ಲಿ ದಿವ್ಯಾಂಗ್, ಮೈತ್ರಿ ಸ್ಪೋಟ್ಸ್ ಆಕಾಡೆಮಿಯ ನೇತೃತ್ವದಲ್ಲಿ ಜರುಗಿತು. ಸೆಮಿ ಫಾಯಿನಲ್ ಪಂದ್ಯದಲ್ಲಿ ಸಾಗರ ಲಮಾಣಿ 20 ಎಸೆತಗಳಲ್ಲಿ 35 ರನ್ ಗಳಿಸಿ ಮತ್ತೆ ಉತ್ತಮ ವಿಕೇಟ್ ಕೀಪಿಂಗ್ ಮಾಡುವುದರ ಮೂಲಕ ತನ್ನ ತಂಡವನ್ನು ಫಾಯಿನಲ್ ಪ್ರವೇಶಿಸಲು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Tuesday, September 26, 2023

27-09-2023 EE DIVASA KANNADA DAILY NEWS PAPER

"ರಾಷ್ಟ್ರೀಯ ಸೇವಾ ಯೋಜನೆ "ದಿನ NSS DAY

ಈ ದಿವಸ ವಾರ್ತೆ

ವಿಜಯಪುರ: ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಎನ್ಎಸ್ಎಸ್ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಸಿ ಬಿ ನಾಟಿಕಾರ್ರವರು ವಹಿಸಿಕೊಂಡಿದ್ದರು.

 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಮೀನಾಕ್ಷಿ ಪಾಟೀಲ್  ಎನ್ಎಸ್ಎಸ್ ದಿನದ ಆಚರಣೆಯ ಉದ್ದೇಶ ಮತ್ತು ಆಶಯವನ್ನು ಹೇಳುತ್ತಾ, ಮಹಾತ್ಮ ಗಾಂಧೀಜಿಯವರ ಜನ್ಮ ಶತಾಬ್ದಿಯ ನೆನಪಿಗೋಸ್ಕರ ಕೇಂದ್ರ ಸರ್ಕಾರ ದಿನಾಂಕ 24.09 1969ರಲ್ಲಿ ಎನ್ಎಸ್ಎಸ್ ದಿನವೆಂದು ಆಚರಿಸಲು ನಿರ್ಧರಿಸಲಾಯಿತು. ಅಂದಿನ ಕೇಂದ್ರ ಶಿಕ್ಷಣ ಮಂತ್ರಿಗಳಾದ ಡಾಕ್ಟರ್ ವಿ.ಕೆ.ಆರ್ .ವಿ ರಾವ್ ಅವರಿಂದ ಉದ್ಘಾಟನೆಗೊಂಡಿತು. ಅಂದು ಕೇವಲ ದೇಶಾದ್ಯಂತ 37 ವಿಶ್ವವಿದ್ಯಾಲಯಗಳ 40,000 ವಿದ್ಯಾರ್ಥಿಗಳಿಂದ ಆರಂಭವಾದ ಈ ಘಟಕವು ಇಂದು 1 ಕೋಟಿ 48 ಲಕ್ಷ 999,400 ಸ್ವಯಂಸೇವಕರನ್ನು ಹೊಂದಿದ ಒಂದು ಬೃಹತ್ ಘಟಕವಾಗಿದೆ.

ವಿದ್ಯಾರ್ಥಿಗಳು ಪಠ್ಯದ ಜೊತೆಜೊತೆಗೆ ಪಠ್ಯೇತರ ಚಟುವಟಿಕೆ ಅಂದರೆ ಏನ್ ಎಸ್ ಎಸ್ ದ ಮೂಲಕ ಸಮಾಜೋಪಯೋಗಿ ಕೆಲಸ ಮಾಡುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು, ಮತ್ತು ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಸಮಾಜ ಮುಖಿಯಾಗಿ ಕೆಲಸ ಮಾಡಲು ಅವರಿಗೆ ಒಂದು ವೇದಿಕೆಯನ್ನು ಒದಗಿಸಿಕೊಡುವುದೇ ಈ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ದೇಶ. ಈ ಮೂಲಕ ಶ್ರಮದಾನಕ್ಕೆ ಹೆಚ್ಚು ಮಹತ್ವ ಕೊಟ್ಟು ಪರಿಸರದ ರಕ್ಷಣೆಗೆ ಮುಂದಾಗಬೇಕು. ತಮ್ಮ ಶಾಲಾ ಆವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ ಶ್ರಮದಾನವನ್ನು ಕೈಕೊಳ್ಳುವುದು ಇಲ್ಲಿ ಬಹು ಮುಖ್ಯವಾದದ್ದು. ಜೊತೆಗೆ ಈ ಮೂಲಕ ನೈತಿಕ ಶಿಕ್ಷಣವನ್ನು ಪಡೆಯುವದು, ಬೇರೆ ಬೇರೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರವನ್ನ ಸ್ವಚ್ಚವಾಗಿಡುವಂತ ಕಾರ್ಯಕ್ಕೂ ಮುಂದಾಗಬೇಕು. ಇದರಿಂದ ಸಮಾಜದ ಜನರೊಂದಿಗೆ ಬೆರೆತು ಮುಂದೆ ನಾಯಕನಾಗುವ ಅವಕಾಶವನ್ನು ಪಡೆಯಬಹುದು ಇಂಥ ನಾಯಕತ್ವದ ಗುಣಗಳನ್ನು ಬೆಳೆಸುವುದು ಈ ಎನ್ಎಸ್ಎಸ್ ಘಟಕದ ವೇದಿಕೆಯ ಉದ್ದೇಶವೆಂದು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಎನ್ಎಸ್ಎಸ್ ಘಟಕದ ಸ್ವಯಂಸೇವಕರಾಗಿರುವ ವಿದ್ಯಾರ್ಥಿನಿಯರು ಎನ್ಎಸ್ಎಸ್ ಗೀತೆಯೊಂದಿಗೆ ಪ್ರಾರ್ಥನ ಗೀತೆಯನ್ನು ಹೇಳಿದರು ಎನ್ ಎಸ್ ಎಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಡಾಕ್ಟರ್ ಮಹದೇವಿ ಸುಂಗಾರೆ ಅವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಮಾನ್ಯ ಪ್ರಾಚಾರ್ಯರು ಹಾಗೂ ಹಿರಿಯ ಉಪನ್ಯಾಸಕರು ಅತಿಥಿ ಮಹೋದಯರು ಸಸಿಗೆ ನೀರು ಹನಿಸುವದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವೇದಿಕೆಯ ಮೇಲೆ ಉಪಸ್ಥಿತರಿರುವ ಹಿರಿಯರಾದ ಶ್ರೀ ಎಸ್ ಬಿ ಸಾವಳಸಂಗ , ಶ್ರೀಮತಿ ಎಂಎಂ ದಖನಿ ಶ್ರೀಎಂ ಬಿ ರಜಪೂತ್, ಶ್ರೀ ತೋಳ್ನೂರ್ ಉಪನ್ಯಾಸಕರು, ಶ್ರೀಮತಿ ಶೈಲಜಾ ಕರಣಿ ಶ್ರೀ ಆರ್ ಸಿ ಹಿರೇಮಠ, ಮೇತ್ರಿ , ಡಾ. ಸವಿತಾ ಜಳಕಿ, ಮುಂತಾದವರು ಉಪಸ್ಥಿತರಿದ್ದರು.  ಪ್ರಾಚಾರ್ಯರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಹಿತನುಡಿಗಳನ್ನುಹೇಳಿದರು. ಶ್ರೀಮತಿ ಶೈಲಜಾ ಕರಣಿ ಮೇಡಮ್ ಅವರು ವಂದಿಸಿದರು.ವಿದ್ಯಾರ್ಥಿನಿ ಜೈ ರಾಬಿ ಕಾರ್ಯಕ್ರಮ ನಿರೂಪಣೆ ಮಾಡಿದರು..ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಉಪನ್ಯಾಸಕ ವೃಂದ ಹಾಜರಿದ್ದರು .

ನಮ್ಮ ನಾಡಿನ ರೈತರ ಹಿತ ಕಾಪಾಡುವ ವಿಚಾರದಲ್ಲಿ ಯಾವತ್ತೂ ಹಿಂದೆ ಬೀಳುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ

 

ಈ ದಿವಸ ವಾರ್ತೆ

ಮೈಸೂರು ಸೆ 26: ಪಶುಸಂಗೋಪನೆ, ಗೋ ಸಂಪತ್ತು ಹೆಚ್ಚಿದಷ್ಟೂ ನಾಡಿನ ಸಂಪತ್ತು ಹೆಚ್ಚಿ ನಾಡಿನ ಆರ್ಥಿಕತೆಯೂ ಪ್ರಗತಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪಶುಸಖಿಯರ ತರಬೇತಿ ಕಾರ್ಯಕ್ರಮ, ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿ ಮಾತನಾಡಿದರು. 

ಹಾಲು ಉತ್ಪಾದಕರು ಸಹಕಾರಿ ಕ್ಷೇತ್ರದಲ್ಲಿ ಆರ್ಥಿಕ ಹರಿವಿಗೆ ಕಾರಣರಾಗಿದ್ದಾರೆ. ಹಾಲು ಒಕ್ಕೂಟಗಳು ರಚನೆಯಾಗಿದ್ದೇ ರೈತರ, ಹಾಲು ಉತ್ಪಾದಕರ ಶೋಷಣೆ ತಪ್ಪಿಸುವುದಕ್ಕಾಗಿ. ಕೆಎಂಎಫ್ ಮತ್ತು ಡೈರಿಗಳಲ್ಲಿ ಅಧಿಕಾರಿಗಳ ಏಕಸ್ವಾಮ್ಯ ತಪ್ಪಿಸಲು ಹಾಲು ಒಕ್ಕೂಟಗಳಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಪಶುಸಂಗೋಪನಾ ಸಚಿವನಾಗಿ ಮಾಡಿದ್ದೆ ಎಂದು ಸ್ಮರಿಸಿದರು. 

ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇನ್ನಷ್ಟು ಹೆಚ್ಚಿಸಲು ಮತ್ತು ಅದನ್ನು ಮಾರಾಟ ಮಾಡುವುದಕ್ಕೂ ಸಾಕಷ್ಟು ಅವಕಾಶಗಳಿವೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿತ್ತು. ಆಗ ನಾನು ಕ್ಷೀರಭಾಗ್ಯ ಕಾರ್ಯಕ್ರಮವನ್ನು ಜಾರಿಗೆ ತಂದು ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ಜತೆಗೆ ರೈತರಿಗೆ ಪ್ರತಿ ಲೀಟರ್ ಗೆ 5ರೂ ಪ್ರೋತ್ಸಾಹದನದ ಮೂಲಕ ಅನುಕೂಲ ಆಗುವ ಕಾರ್ಯಕ್ರಮವನ್ನು ರೂಪಿಸಿದ್ದೆ ಎಂದು ವಿವರಿಸಿದರು. 

ನಾನು ಈ ಹಿಂದೆ ಪಶುಸಂಗೋಪನಾ ಸಚಿವನಾಗಿ ಮಾಡಿದ ಒಳ್ಳೆಯ ಕೆಲಸಗಳು ನನ್ನನ್ನು ಎರಡು ಬಾರಿ ಮುಖ್ಯಮಂತ್ರಿ ಆಗುವವರೆಗೂ ಕೈಹಿಡಿದಿವೆ. 14 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ನನ್ನನ್ನು ಚಾಮುಂಡೇಶ್ವರಿ, ವರುಣ ಮತ್ತು ಬಾದಾಮಿಯ ಮತದಾರರು 9 ಬಾರಿ ಗೆಲ್ಲಿದ್ದಾರೆ. ಪ್ರಜಾಪ್ರಭುತ್ವಕ್ಕೆ ಜನರೇ ನಿಜವಾದ ಮಾಲೀಕರು ಎಂದು ಕೃತಜ್ಞತೆ ಸಲ್ಲಿಸಿದರು. 

ಹಸು, ಎಮ್ಮೆ, ಕುರಿ, ಮೇಕೆ ತಳಿಗಳ ಉಳಿಸುವ ಮತ್ತು ಅಭಿವೃದ್ಧಿ ಪಡಿಸುವ ಹೊಣೆಗಾರಿಕೆಯನ್ನು ಪಶುಸಂಗೋಪನಾ ಇಲಾಖೆ ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಆಶಾ ಕಾರ್ಯಕರ್ತರು ಮಾಡುತ್ತಿರುವ ಉತ್ತಮ ಕಾರ್ಯವನ್ನೇ ಪಶು ಇಲಾಖೆಯಲ್ಲಿ ಪಶುಸಖಿಯರು ನಿರ್ವಹಿಸುತ್ತಾರೆ. ಇವರು ಪಶುಪಾಲಕರು, ರೈತರು ಮತ್ತು ಸರ್ಕಾರದ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಾರೆ ಎಂದು ಮೆಚ್ಚುಗೆ ಸೂಚಿಸಿದರು. 

ಸರ್ಕಾರ ರೈತರಿಗೆ, ಪಶುಪಾಲಕರಿಗೆ, ಕುರಿ, ಕೋಳಿ ಸಾಕಾಣಿಕೆದಾರರಿಗೆ ಹಲವು ಪ್ರಯೋಜನಕಾರಿ ಕಾರ್ಯಕ್ರಮಗಳನ್ನು ನೀಡಿದೆ. ಇವೆಲ್ಲವನ್ನೂ ರೈತರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ.ಮಹದೇವಪ್ಪ ಅವರು ಅಧ್ಯಕತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲೆಯ ಶಾಸಕರುಗಳಾದ ಸಿ.ಅನಿಲ್ ಕುಮಾರ್, ಡಿ.ರವಿಶಂಕರ್, ಕೆ.ಹರೀಶ್ ಗೌಡ, ದರ್ಶನ್ ದ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ ಮತ್ತು ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 

Monday, September 25, 2023

ಇತಿಹಾಸ ಸೃಷ್ಟಿಸಿದ ಜನತಾ ದರ್ಶನ ಕಾರ್ಯಕ್ರಮ

ವಿಜಯಪುರ : ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡೀ ರಾಜ್ಯಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನಕ್ಕೆ ನಾಡಿಗೆ ನಾಡೇ ಸಾಕ್ಷಿಯಾಗಿದೆ.

ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ಸದಾಶಯದೊಂದಿಗೆ ಜಿಲ್ಲಾಮಟ್ಟದಲ್ಲಿ ಜನತಾದರ್ಶನ ನಡೆಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಿಜಯಪುರ ನಗರದಲ್ಲಿ ಸೆ. 25 ರಂದು ನಗರ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರ ವೇದಿಕೆಯಲ್ಲಿ ಹಮ್ಮಿಕೊಂಡ ಜನತಾ ದರ್ಶನ ಕಾರ್ಯಕ್ರಮಕ್ಕೆ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ್ ಕಟಕದೊಂಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ,  ಎಸ್ಪಿ ಋಷಿಕೇಶ ಸೋನಾವನೆ  ಅವರು  ಚಾಲನೆ ನೀಡಿ, ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನ ಸ್ವೀಕರಿಸಿ ತಾಂತ್ರಿಕ ಹಾಗೂ ಕಾನೂನಾತ್ಮಕ ಅಡಚಣೆಗಳಿಲ್ಲದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಗಿದ್ದು, ಗಂಭೀರ ಸ್ವರೂಪದ ಅಡಚಣೆಗಳಿರುವ ಅರ್ಜಿಗಳನ್ನು ಸ್ವೀಕರಿಸಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್‍ಎಸ್) ತಂತ್ರಾಂಶದಲ್ಲಿ ದಾಖಲಿಸಿ, ಸದರಿ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಿ ಕಾಲಮಿತಿಯಲ್ಲಿ ಇತ್ಯರ್ಥಕ್ಕೆ ಸೂಚನೆ ನೀಡಲಾಯಿತು.

ಜನತಾ ದರ್ಶನದಲ್ಲಿ 651 ಅರ್ಜಿಗಳ ಸ್ವೀಕಾರ:

ಸೆ. 25 ರಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 17 ಕೌಂಟರ್‍ಗಳನ್ನು ಸ್ಥಾಪಿಸಲಾಗಿದ್ದು,  651 ಅರ್ಜಿಗಳು ಸ್ವೀಕೃತಗೊಂಡಿವೆ.

ಜಿಲ್ಲಾ ಮಟ್ಟದ ಇಲಾಖೆಗಳಲ್ಲಿ ದಾಖಲಾದ ಅರ್ಜಿ ಸ್ವೀಕೃತಿಗಳ ವಿವರ :
ಅನುಕ್ರಮವಾಗಿ ಕಂದಾಯ ಇಲಾಖೆ 193, ಗ್ರಾಮೀಣಾಭಿವೃದ್ಧಿ  ಹಾಗೂ ಪಂಚಾಯತ್ ರಾಜ್ ಇಲಾಖೆ 55, ಪೊಲೀಸ್ ಇಲಾಖೆ 31,  ಪುನರ್ ವಸತಿ ಮತ್ತು ಪುನರ್ ನಿರ್ಮಾಣ (ಯಕೆಪಿ) 27, ನಗರಾಭಿವೃದ್ಧಿ ಮತ್ತು ಮಹಾನಗರ ಪಾಲಿಕೆ 113, ಹೆಸ್ಕಾಂ 35,  ಕೃಷಿ ಇಲಾಖೆ 07, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ 07,  ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 21, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 04, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 54, ಅರಣ್ಯ ಇಲಾಖೆ 03, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 13, ಸಹಕಾರಿ ಸಂಘಗಳ ಇಲಾಖೆ 12,  ನೋಂದಣಿ ಮತ್ತು ಮುದ್ರಾಂಕ ಇಲಾಖೆ 33, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ 35 ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 08 ಅರ್ಜಿಗಳು ಸೇರಿದಂತೆ ಒಟ್ಟು 651 ಅರ್ಜಿಗಳು ಸ್ವೀಕೃತಗೊಂಡಿವೆ.

ಸಾರ್ವಜನಿಕ ಸಮಸ್ಯೆಗಳಿಗೆ ಧ್ವನಿಯಾದ ಜನತಾ ದರ್ಶನ: ನಗರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಿದ ಮರಣ ಪತ್ರಾನುಸಾರ ಹೆಸರು ದಾಖಲು, ಜಮೀನಿನ ಸರ್ವೇ, ತಂದೆಯ ವಿಲ್ಲಾ ಪ್ರಕಾರ ದಾಖಲಾತಿ, ವೃದ್ಧಾಪ್ಯ ವೇತನ ಸೌಲಭ್ಯ, ಮಾಜಿ ಯೋಧರಿಗೆ ನಿವೇಶನ, ನ್ಯಾಯಬೆಲೆ ಅಂಗಡಿ ಮಂಜೂರಾತಿ, ಗೃಹಲಕ್ಷ್ಮೀ ಯೋಜನೆ ಸೌಲಭ್ಯ, ರಸ್ತೆ ನಿರ್ಮಾಣ, ಕಟ್ಟಡ ಕಾರ್ಮಿಕರಿಗೆ ಪಿಂಚಣಿ, ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಅವರ ಮನದಾಳದ ಮಾತುಗಳ ಸಮಸ್ಯೆಗಳನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟರು. ಅದಕ್ಕೆ ಪ್ರತಿಯಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಯಿತು. 

ಸಾರ್ವಜನಿಕರ ನೂರಾರು ಪ್ರಶ್ನೆಗಳ ಸರಮಾಲೆಗೆ  ಪ್ರತ್ಯುತ್ತರ ನೀಡಿದ ಜನತಾ ದರ್ಶನ ವೇದಿಕೆ.
ಅದೆಷ್ಟೋ ಕಷ್ಟ ನೋವುಗಳನ್ನು ಹೊತ್ತು ಬಂದ ಮನಸ್ಸುಗಳಿಗೆ ಎಲ್ಲ ಅಧಿಕಾರಿಗಳ ಸಹಕಾರ, ಸ್ಪಂದನೆ, ಪರಿಹಾರ ದೊರಕಿಸುವ ಹಣಾಹಣಿಯ ಮಹತ್ವಪೂರ್ಣ ಕಾರ್ಯ ನಿಜಕ್ಕೂ ಶ್ಲಾಘನೀಯ, ಸ್ಫೂರ್ತಿದಾಯಕವಾಗಿತ್ತು. 

                         - ಶುಭಲಕ್ಷ್ಮಿ ಹೊಸಮನಿ
                                   ವಿಜಯಪುರ 

26-09-2023 EE DIVASA KANNADA DAILY NEWS PAPER

ಮನೆ-ಮನಗಳನ್ನು ತಲುಪಿದ ಜನತಾ ದರ್ಶನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ಸೂಚನೆಗೆ ಸಿಕ್ಕ ಯಶಸ್ಸು


 ಈ ದಿವಸ ವಾರ್ತೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. 

ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾದರ್ಶನ ನಡೆದಿದೆ. 

ಸಂಜೆ 6:30 ರ ವೇಳೆಗೆ ಲಭ್ಯವಿದ್ದ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ. (ಇದರಲ್ಲಿ ಮೌಖಿಕ ದೂರುಗಳು ಮತ್ತು ಪರಿಹಾರಗಳು ದಾಖಲಾಗಿಲ್ಲ). 

ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6:30 ಗಂಟೆವರೆಗೂ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. 


ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ. 


ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. 774 ಅಹವಾಲುಗಳ ಮೂಲಕ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. 

 ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. 

ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ. 

ರಾಜ್ಯಾದ್ಯಂತ ಏಕ ಕಾಲಕ್ಕೆ ನಡೆಸಿದ ಜನತಾ ದರ್ಶನ ನಮಗೂ ಮೊದಲ ಅನುಭವ. ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ ಎನ್ನುವ ಅಭಿಪ್ರಾಯಗಳು ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ.

Wednesday, September 20, 2023

21-09-2023 EE DIVASA KANNADA DAILY NEWS PAPER

ಭಕ್ತಿಗೀತೆ ಸ್ಪರ್ಧೆಯಲ್ಲಿ ಮೇಘನಾ ಶಿವಶರಣ ಪ್ರಥಮ

 ಈ ದಿವಸ ವಾರ್ತೆ

ವಿಜಯಪುರ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಮಾರಿ ಮೇಘನಾ ಶಿವಶರಣ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,  ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರ ವಲಯ, ವಿಜಯಪುರ ಕಕ್ಷಾ ಪಬ್ಲಿಕ್ ಸ್ಕೂಲ್,  ವಿಜಯಪುರ ಸಮೂಹ ಸಂಪನ್ಮೂಲ ಕೇಂದ್ರ,  ಕೆಜಿಎಸ್  ನಂ.1 ಗಾಂಧಿ ಚೌಕ  2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಲೋಯೋಲಾ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ಮೇಘನಾ ಮಹೇಶ ಶಿವಶರಣ (1 ರಿಂದ 4) ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.

ವಿದ್ಯಾರ್ಥಿನಿ ಮೇಘನಾ ಶಿವಶರಣಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯರು ಸಿಬ್ಬಂಧಿ ವರ್ಗ ಸೇರಿದಂತೆ ಪಾಲಕ, ಪೋಷಕರು ಅಭಿನಂದಿಸಿದ್ದಾರೆ ಎಂದು ಪತ್ರಿಕಾ ಪ್ರಟಕಣೆಯಲ್ಲಿ ಕಲ್ಲಪ್ಪ ಶಿವಶರಣ ಅವರು ತಿಳಿಸಿದ್ದಾರೆ.

Monday, September 18, 2023

ಜಿಲ್ಲೆಯಲ್ಲಿ ಮೂರನೇ ಶನಿವಾರ ನಡೆದ ಸಭೆಯಲ್ಲಿ 48,315 ಪಾಲಕರು ಭಾಗಿ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಹಾಗೂ ಮಕ್ಕಳ ಸೃಜನಾತ್ಮಕ -ಕ್ರಿಯಾತ್ಮಕ ಚಟುವಟಿಕೆ ತಿಳಿದುಕೊಳ್ಳಲು ಪಾಲಕರ ಸಭೆ ಯಶಸ್ವಿ : ಜಿಪಂ ಸಿಇಓ ರಾಹುಲ್ ಶಿಂಧೆ

 ಈ ದಿವಸ ವಾರ್ತೆ

ವಿಜಯಪುರ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಗ್ರಾಮ ಪಂಚಾಯತಿ ಮೂಲಕ  ಮಕ್ಕಳ ಸ್ನೇಹಿ ಚೇರ್ ಹಾಗೂ ಟೇಬಲ್ ದೊರಕಿಸಿಕೊಡುವ ಮೂಲಕ ಅಂಗನವಾಡಿ ಕೆಂದ್ರದಲ್ಲಿನ ದಾಖಲಾದ ಮಕ್ಕಳು ಓದಿನಲ್ಲಿ ಆಸಕ್ತಿ ತಾಳುವುದಷ್ಷೇ ಅಲ್ಲದೇ, ಉತ್ಸುಕತೆ, ಉಲ್ಲಾಸದಿಂದ ಅಂಗನವಾಡಿ ಕೇಂದ್ರಕ್ಕೆ ಬರಲು ಪ್ರೇರೇಪಣೆಯಾಗಿದೆ. 

ಇದೇ ಮೂರನೇ ಶನಿವಾರ ಪಾಲಕರ ಸಭೆಯಲ್ಲಿ ತಮ್ಮ  ಮಕ್ಕಳ ವಿವಿಧ ಸೃಜನಾತ್ಮಕ- ಕ್ರಿಯಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸುವುದನ್ನು ಪಾಲಕರು ತಿಳಿದುಕೊಳ್ಳಲು ಈ ಸಭೆ  ಅತ್ಯಂತ ಯಶಸ್ವಿಯಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದ್ದಾರೆ. 

ಜಿಲ್ಲೆಯಲ್ಲಿನ 2,755 ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 48,315 ಕ್ಕೂ ಹೆಚ್ಚು ಪಾಲಕರು ಭಾಗವಹಿಸಿದ್ದರು. ಜಿಲ್ಲೆಯಾದ್ಯಂತ  ಇರುವ ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಪಾಲಕರ ಸಭೆ ಆಯೋಜಿಸಲಾಗುತ್ತಿದ್ದು, ಪಾಲಕರು ಭಾಗವಹಿಸಿ, ತಮ್ಮ ಮಕ್ಕಳ ಶೈಕ್ಷಣಿಕ, ಆಟೋಟ ಪ್ರಗತಿ ತಿಳಿದುಕೊಳ್ಳಬಹುದಾಗಿದೆ.

ಅಂಗನವಾಡಿಯಲ್ಲಿ ದೊರೆಯುವ ಪೌಷ್ಟಿಕ ಆಹಾರದಿಂದ ಮಕ್ಕಳು ದೈಹಿಕ ಹಾಗೂ ಬೌದ್ಧಿಕವಾಗಿ ಸದೃಢರಾಗುವಲ್ಲಿಯೂ ಯಶ ಕಾಣಲಾಗುತ್ತಿದೆ.

0-6 ವರ್ಷದ ವಯೋಮಾನದ ಮಕ್ಕಳ ಆರೋಗ್ಯ ತಪಾಸಣೆ, ಮಕ್ಕಳ ಪೌಷ್ಠಿಕ ಮಟ್ಟ ಹೆಚ್ಚಿಸಲು ಹಾಲು, ಮೊಟ್ಟೆ ಹಾಗೂ ಮೊಳಕೆ ಕಾಳು ವಿತರಣೆ ಹಾಗೂ ಕೇಂದ್ರಗಳಿಗೆ ನಿಯಮಿತವಾಗಿ ಆಹಾರ ಸಾಮಗ್ರಿ ಪೂರೈಕೆ, ಮಗುವಿನ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಭದ್ರ ಅಡಿಪಾಯ ಹಾಕಲು ಐಸಿಡಿಎಸ್ ಮಿಷನ್ ಮೂಲಕ ಮಕ್ಕಳಿಗೆ ಅನೌಪಚಾರಿಕ ಶಿಕ್ಷಣದಡಿ ದಿನಬಳಕೆ ಸ್ಥಳೀಯ ಸಾಮಗ್ರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿ ಅಂಗನವಾಡಿ ಕೇಂದ್ರವನ್ನು ಮಕ್ಕಳ ಕಲಿಕಾ ಸ್ನೇಹಿ ಕೇಂದ್ರವಾಗಿರುವ ಬಗ್ಗೆ ತಿಳಿಸಲಾಯಿತು.ಶಾಲಾ ಪೂರ್ವ ಶಿಕ್ಷಣದ ಚಟುವಟಿಕೆಗಳನ್ನು ಕೇಂದ್ರಗಳಲ್ಲಿ ಏರ್ಪಡಿಸುತ್ತಿರುವ ಹಾಗೂ ಅದರಲ್ಲಿ ಮಕ್ಕಳು ಭಾಗವಹಿಸುವಿಕೆ ಕುರಿತು ಮಕ್ಕಳಿಂದ ಅಭಿನಯ ಗೀತೆ, ಕಥೆ ಹೇಳಿಸುವ ಪ್ರಾತ್ಯಕ್ಷಿಕೆ ನೋಡಿ ಪಾಲಕರು ಅಭಿಮಾನ ಪಟ್ಟು ಸಂಭ್ರಮಿಸಿದರು. ಮಕ್ಕಳು ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ನಿಗದಿಯಂತೆ  ಚುಚ್ಚುಮದ್ದುಗಳನ್ನು ನೀಡಲು ಅರಿವು ಮೂಡಿಸಲಾಯಿತು.  ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆಯೂ ತಮ್ಮ ಮಕ್ಕಳ ಆರೋಗ್ಯ ಮತ್ತು ಪೌಷ್ಠಿಕತೆಯ ಅಗತ್ಯತೆ ಸರಿಯಾಗಿ ನೋಡಿಕೊಳ್ಳುವಂತೆಯೂ ತಾಯಂದಿರಿಗೆ ತಿಳಿಸಲಾಯಿತು.    

ಇಲಾಖೆಯ ಭಾಗ್ಯಲಕ್ಷ್ಮಿ, ಸುಕನ್ಯಾ ಸಮೃದ್ದಿ, ಪ್ರಧಾನಮಂತ್ರಿ ಮಾತೃವಂದನಾ ಹಾಗೂ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆಯೂ,

ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕಾಗಿ ನಿವೇಶನ ನೀಡಲು ದಾನಿಗಳನ್ನು ಗುರುತಿಸುವುದು ಹಾಗೂ ಶಾಲಾ ಆವರಣದಲ್ಲಿ ಕೊಠಡಿಗಳನ್ನು ಪಡೆಯಲು ಪಾಲಕರು ಸಹಭಾಗಿತ್ವದ ಮಹತ್ವ ತಿಳಿಸಲಾಯಿತು. ಕೇಂದ್ರಗಳಲ್ಲಿ ವಿದ್ಯುತ್, ಫ್ಯಾನ್, ಕುಡಿಯುವ ನೀರು, ಶೌಚಾಲಯ, ಕೈ ತೋಟ ಸೇರಿದಂತೆ ಮೂಲಭೂತ ಸೌಕರ್ಯಗಳ ಕಲ್ಪಿಸಿಕೊಡಲು ಪಾಲಕರಲ್ಲಿ ಮನವಿ ಮಾಡಲಾಯಿತು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರು, ಬಾಣಂತಿಯರು ಕೇಂದ್ರಕ್ಕೆ ಆಗಮಿಸಿ, ಪೂರಕ ಪೌಷ್ಠಿಕ ಆಹಾರ ಪಡೆಯಲು ಫಲಾನುಭವಿಗಳನ್ನು ಪ್ರೇರೆಪಿಸುವಂತೆ ತಿಳಿಸಲಾಯಿತು. ಮಕ್ಕಳು ದಿನನಿತ್ಯ ಅಂಗನವಾಡಿಗೆ ಕಳುಹಿಸಬೇಕು.ಮಕ್ಕಳ ವೈಯಕ್ತಿಕ ಶುಚಿತ್ವಕ್ಕೆ ಗಮನ, ಶೌಚಾಲಯದ ಬಳಕೆಯ ಮಹತ್ವ, ಮಕ್ಕಳಲ್ಲಿ ಶಿಸ್ತು ರೂಢಿಸುವುದರ ಬಗ್ಗೆ ತಿಳಿಸಲಾಯಿತು. ಬಾಲ ವಿಕಾಸ ಸಮಿತಿ, ತಾಯಂದಿರ ಸಭೆ, ಮಕ್ಕಳ ಕಾವಲು ಸಮಿತಿ ಹಾಗೂ ಪೋಷಕರ ಸಭೆಯಲ್ಲಿ ತಾಯಿ-ತಂದೆ ಹಾಗೂ ಕುಟುಂಬದ ಸದಸ್ಯರು ಭಾಗವಹಿಸಿ ತಮ್ಮ ಸಹಭಾಗಿತ್ವ ಇರುವಂತೆ ನೋಡಿಕೊಳ್ಳಲೂ, ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯ ಪಡೆಯದಿರುವ ಯಜಮಾನಿ ಮಹಿಳೆಯರಿಗೆ  ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು, ಸೆಪ್ಟೆಂಬರ್ ತಿಂಗಳನ್ನು ‘ಪೋಷಣ್ ಮಾಹೆ’ ಎಂದು ಆಚರಿಸುತ್ತಿರುವುದರಿಂದ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ  ಪಾಲಕರಲ್ಲಿ ಕೋರಲಾಯಿತು.

*ಸಭೆಗೆ ಹಾಜರಾದ ಪಾಲಕರ ವಿವರ* : 

ವಿಜಯಪುರ ನಗರ ವಲಯದಲ್ಲಿ 351 ಅಂಗನವಾಡಿ ಕೇಂದ್ರಗಳಿದ್ದು, 15,874 ಮಕ್ಕಳು ಈ ಕೇಂದ್ರದಲ್ಲಿ ದಾಖಲಾಗಿದ್ದಾರೆ. 9,400 ಪಾಲಕರು, ವಿಜಯಪುರ ಗ್ರಾಮೀಣ ವಲಯದಲ್ಲಿನ  400 ಅಂಗನವಾಡಿ ಕೇಂದ್ರಗಳಲ್ಲಿ 18,256 ದಾಖಲಾತಿ ಇದ್ದು, 10,865 ಪಾಲಕರು, ಸಿಂದಗಿ ವಲಯದಲ್ಲ 486 ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ ಮಕ್ಕಳ ಸಂಖ್ಯೆ38,432 ಇದ್ದು, 5,400 ಪಾಲಕರು ಭಾಗವಹಿಸಿದ್ದರು. ಚಡಚಣ ವಲಯದಲ್ಲಿ 198 ಅಂಗನವಾಡಿ ಕೇಂದ್ರಗಳಲ್ಲಿ 21,509 ಮಕ್ಕಳು ದಾಖಲಾಗಿದ್ದು, 3,200 ಪಾಲಕರು, ಮುದ್ದೇಬಿಹಾಳ ವಲಯದಲ್ಲಿ  458 ಅಂಗನವಾಡಿ ಪೈಕಿ, 33,065 ದಾಖಲಾಗಿದ್ದು,6450 ಪಾಲಕರು, ಇಂಡಿ ವಲಯದ 406 ಅಂಗನವಾಡಿ ಕೇಂದ್ರಗಳಲ್ಲಿ 37,455 ಮಕ್ಕಳ ದಾಖಲಾತಿ ಇದ್ದು, 5,735 ಪಾಲಕರು ಹಾಗೂ ಬಸವನ ಬಾಗೇಡಿ ವಲಯದ 456 ಅಂಗನವಾಡಿಯಲ್ಲಿ 37,384 ಮಕ್ಕಳ ದಾಖಲಾತಿ ಇರುವ ಈ ಅಂಗನವಾಡಿ ಕೇಂದ್ರಗಳಲ್ಲಿ 7,265 ಪಾಲಕರು ಸೇರಿದಂತೆ,  ಒಟ್ಟಾರೆ ಜಿಲ್ಲೆಯ 2,755 ಅಂಗನವಾಡಿ ಕೇಂದ್ರಗಳಲ್ಲಿ ನಡೆದ ಸಭೆಯಲ್ಲಿ 48,315 ಪಾಲಕರು ಭಾಗವಹಿಸಿದ್ದರು ಎಂದು ರಾಹುಲ್ ಶಿಂಧೆ ತಿಳಿಸಿದ್ದಾರೆ. 

ಮುಂಬರುವ ಪಾಲಕರ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಸಹಕರಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಪಾಠೋಪಕರಣ ಹಾಗೂ ಪೀಠೋಪಕರಣ, ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವ ಮೂಲಕ ತಮ್ಮೂರಿನ ಎಳೆಯ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು  ಕೋರಲಾಯಿತು.

ಉಪ ನಿರ್ದೇಶಕರು ಹಾಗೂ ಪ್ರತಿ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಅಂಗನವಾಡಿ  ಪಾಲಕರ ಸಭೆಯಲ್ಲಿ ಪಾಲ್ಗೊಂಡಿದ್ದರು.  

*ಸಭೆಯಲ್ಲಿ ಪಾಲ್ಗೊಂಡಿದ್ದ  ಪಾಲಕರ-ಪೋಷಕರ ಅಭಿಪ್ರಾಯಗಳು*:

ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆಯನ್ನು ಕರೆದಿರುವುದರಿಂದ ಸಂತಸ ತಂದಿದೆ.ಅಂಗನವಾಡಿಯಲ್ಲಿ ಮಕ್ಕಳ ಶಾಲಾ ಪೂರ್ವ ಶಿಕ್ಷಣವನ್ನು ಗಮನಿಸಲು ಸಹಾಯಕವಾಗಿದೆ. ಮಕ್ಕಳಲ್ಲಿ ಶೈಕ್ಷಣಿಕ ಪ್ರಗತಿ ಹಂತ-ಹಂತವಾಗಿ ಕಾಣಬಹುದಾಗಿದೆ. ಮಕ್ಕಳಲ್ಲಿ ಸೂಪ್ತವಾಗಿ ಹುದುಗಿರುವ ವಿವಿಧ ಕೌಶಲ್ಯ- ಸೃಜನಾತ್ಮಕತೆ  ಅವರ ಭಾಗವಹಿಸುವಿಕೆಯಿಂದ ತಿಳಿದುಕೊಳ್ಳಬಹುದಾಗಿದೆ. ಕುಂಠಿತ ಬೆಳವಣಿಗೆಯಿರುವ ಮಕ್ಕಳ ಬಗ್ಗೆ ಮುಂಜಾಗ್ರತಾ ಕ್ರಮಗಳು ಹಾಗೂ ಇಲಾಖೆಯಿಂದ ಇರುವ ಸೌಲಭ್ಯಗಳ ಬಗ್ಗೆ ತಿಳಿಯಲು ಸಹಾಯಕವಾಗುವುದು.  ಕೇಂದ್ರಗಳ ಉನ್ನತೀಕರಣದ ಬಗ್ಗೆ ಚರ್ಚಿಸಲು ಸಹಾಯಕವಾಗಿದೆ. ಅಂಗನವಾಡಿ ಕೇಂದ್ರದಲ್ಲಿ ಪಾಲಕರ ಪಾಲ್ಗೊಳ್ಳುವಿಕೆ ಹೆಚ್ಚಾಗಿದೆ.  ಮಕ್ಕಳ ಮುಂದಿನ ಶಾಲಾ ಜೀವನದ ನಿಯಮಗಳನ್ನು ಅಂಗನವಾಡಿ ಕೇಂದ್ರದಲ್ಲಿ ಬುನಾದಿಯಾಗಿ ಪರಿವರ್ತಿಸಿಕೊಳ್ಳಲು ಸಹಾಯಕವಾಗಿದೆ. ಕೇಂದ್ರದ ಎಲ್ಲ ಚಟುವಟಿಕೆ, ಬೆಳವಣಿಗೆಯ ಪರಿಶೀಲನೆ ಹಾಗೂ ಮೇಲ್ವಿಚಾರಣೆ ಮಾಡಲು ಪಾಲಕರ ಸಭೆ ಒಂದು ವೇದಿಕೆಯಾಗಿದೆ ಎಂದು ಸಭೆಯಲ್ಲಿ ಭಾಗವಹಿಸಿದ ಪಾಲಕರ ಅನಿಸಿಕೆ ಹಂಚಿಕೊಂಡರು  ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sunday, September 17, 2023

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

 

ಈ ದಿವಸ ವಾರ್ತೆ

ಚಡಚಣ: ನಗರದ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ  ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

ಸಂವಿಧಾನದ ಪೀಠಿಕೆ ಬೋಧಿಸಿ, ಮಾತನಾಡಿದ ಪ್ರಾಚಾರ್ಯರಾದ ಡಾ. ಎಸ್.ಬಿ.ರಾಠೋಡ ಅವರು 

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು  ವಿಶ್ವದಲ್ಲಿನ ಪ್ರಜಾಪ್ರಭುತ್ವದ ಸ್ಥಿತಿಯನ್ನು ತಿಳಿಸುತ್ತದೆ. ಪ್ರಜಾಪ್ರಭುತ್ವದ ಆದರ್ಶ ತತ್ವವನ್ನು ಎಲ್ಲರೂ, ಎಲ್ಲೆಡೆ ಪಾಲಿಸುವದು ನಮ್ಮೆಲ್ಲರ ಆದ್ಯ ಕರ್ತವ್ಯ ಕೂಡ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಂಥಪಾಲಕರಾದ ಶ್ರೀ ಎಂ.ಕೆ.ಬಿರಾದಾರ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಮಾಹತೇಂಶ ಜನವಾಡ ಕಾರ್ಯಕ್ರಮ ನಿರ್ವಹಣೆ ಮಾಡಿದರು 

ಪ್ರೋ. ಐ.ಆರ್,ಜೋರಾಪುರ,ಪ್ರೋ. ವಿನೋದ ಘೇವಂಡೆ, ಪ್ರೋ.ಎಸ್.ಎಸ್.ಪಾಟೀಲ, ಮಹಾವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮುತ್ತು ರಾಷ್ಟ್ರೀಯ ಸ್ವಯಂ ಸೇವಕರು ಇದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


18-09-2023 EE DIVASA KANNADA DAILY NEWS PAPER

Saturday, September 16, 2023

17-09-2023 EE DIVASA KANNADA DAILY NEWS PAPER

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸಹಕಾರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ

ಈ ದಿವಸ ವಾರ್ತೆ

ವಿಜಯಪುರ: ಮಕ್ಕಳ ಸರ್ವಾಂಗೀಣ ಬೆಳವಣಿಗೆ ಅಂಗನವಾಡಿ ಕೇಂದ್ರಗಳು ಸಹಕಾರಿಯಾಗಿವೆ ಎನ್ನುವ ನಂಬಿಕೆ ಕೂಡ ಪಾಲಕರಲ್ಲಿ ಮೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಹೇಳಿದರು.

ಅವರು ನಗರದ ವಜ್ರಹನುಮಾನ ನಗರ ಕೊಡ್ ಸಂಖ್ಯೆ-522 ಅಂಗನವಾಡಿ ಕೇಂದ್ರದಲ್ಲಿ ನಗರ ವ್ಯಾಪ್ತಿಯಲ್ಲಿ ಬರುವ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಶಿಕ್ಷಣ ಕಲಿಯಬೇಕು. ಶಿಕ್ಷಣದಿಂದ ಮಾತ್ರ ಸುಂದರವಾದ ಬದುಕನ್ನು ನಿರ್ಮಿಸಿಕೊಳ್ಳಬಹುದಾಗಿದೆ ಎಂದರು. ಇಲಾಖೆಯಲ್ಲಿ ಸಾಕಷ್ಟು ಸೌಲಭ್ಯಗಳಿವೆ ಪ್ರತಿಯೊಬ್ಬ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದರು.

ಶಿಶು ಅಭಿವೃದ್ಧಿ ವಿಜಯಪುರ ನಗರ ಯೋಜನಾಧಿಕಾರಿಗಳಾದ ದೀಪಾಕ್ಷಿ ಜಾನಕಿ ಸ್ವಾಗತ ನುಡಿಗಳನ್ನಾಡಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿಗೆ ಆಗಮಿಸಿದ  ಪಾಲಕರು ಅಂಗನವಾಡಿ ಕೇಂದ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. 

ಕಾರ್ಯಕ್ರಮಕ್ಕೂ ಮುನ್ನ ಅಂಗನವಾಡಿ ಕೇಂದ್ರದಲ್ಲಿನ ಪುಟಾಣಿ ಅನ್ವಿಕಾ ಪಂಡೆಪಿವಳ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು.

ವಲಯದ ಮೇಲ್ವಿಚಾರಕಿ ಪ್ರತಿಭಾ ಅಂಗಡಿಮಠ   ಕಾರ್ಯಕ್ರಮ ನಿರೂಪಿಸಿದರು.

ಈ ಕಾರ್ಯಕ್ರಮದಲ್ಲಿ ಎಲ್ಲಾ ತಾಯಂದಿರು ಗರ್ಭಿಣಿ, ಬಾಣಂತಿಯರು ಕಾರ್ಯಕರ್ತೆ, ಸಹಾಯಕಿಯರು ಮುದ್ದು ಮಕ್ಕಳು ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಧಾನಿ ನರೇಂದ್ರ ಮೋದಿ ಅವರ 73 ಜನ್ಮದಿನ : ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ

ವಿಜಯಪುರ : ಪ್ರಧಾನಿ ನರೇಂದ್ರ ಮೋದಿ ಅವರ 73 ಜನ್ಮದಿನ ಹಾಗೂ ದೇಶ ರಕ್ಷಕರ ಪಡೆ 5 ನೇ ವರ್ಷಾಚರಣೆ ಪ್ರಯುಕ್ತ ಜೆ.ಎಸ್.ಎಸ್ ಆಸ್ಪತ್ರೆ, ಶ್ರೀ ರಾಮಸುಧಾ ಕಣ್ಣಿನ ಆಸ್ಪತ್ರೆ , ವಿಜಯಪುರ ರಕ್ತನಿಧಿ ಕೇಂದ್ರ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಸಹೋಗದಲ್ಲಿ ಇದೇ ದಿ.17 ರವಿವಾರ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರವನ್ನು ವಿಜಯಪುರ ನಗರದ ಶ್ರೀ ರುಕ್ಮಾಂಗದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಖ್ಯಾತ ನೇತ್ರ ತಜ್ಞ ಡಾ.ಗುರುರಾಜ ಕುಲಕರ್ಣಿ, ಡಾ.ವಿಕಾಸ ಸೊನಗೆ, ಡಾ.ಭಾಗ್ಯಶ್ರೀ ಪೂಜಾರಿ ಚಿಕಿತ್ಸೆ ನೀಡಲಿದ್ದಾರೆ. ಖ್ಯಾತ ಮಧುಮೇಹ ತಜ್ಞ ಬಾಬೂರಾಜೆಂದ್ರ ನಾಯಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಶರಣ ಮಲಖೇಡಕರ, ಜೆ.ಎಸ್.ಎಸ್ ಆಸ್ಪತ್ರೆ ಸಿಇಓ, ಮಹಾನಗರ ಪಾಲಿಕೆ ಸದಸ್ಯ ಕಿರಣ ಪಾಟೀಲ, ವಿಶ್ವನಾಥ ಜೋಶಿ, ಗಿರೀಶ ನೀಲಗುಂದ ಉಪಸ್ಥಿತರಿರಲಿದ್ದಾರೆ ಎಂದು ದೇಶ ರಕ್ಷಕರ ಪಡೆ ಸಂಸ್ಥಾಪಕ ರೋಹನ ಆಪ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

ಚಿದಂಬರೇಶ್ವರ ಭಾವಚಿತ್ರ ಹಾಗೂ ಪಾಲಿಕೆ ಉತ್ಸವ ಮೂರ್ತಿಯ ಅದ್ಧೂರಿ ಮೆರವಣಿಗೆ


ವಿಜಯಪುರ: ಚಿದಂಬರೇಶ್ವರ ಭಾವಚಿತ್ರ ಹಾಗೂ ಪಾಲಿಕೆ ಉತ್ಸವ ಮೂರ್ತಿಯೊಂದಿಗೆ ಅದ್ಧೂರಿ ಮೆರವಣಿಗೆ ಜರುಗಿತು.

ವಿಜಯಪುರ ನಗರದ ಇಂಬ್ರಾಹಿAಪೂರ ವೆಂಕಟೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಶೋಭಾಯಾತ್ರೆಯು ಗಣೇಶ ನಗರ ಮುಖಾಂತರ ಚಿದಂಬರ ದೇವಸ್ಥಾನಕ್ಕೆ ತಲುಪಿತು.

ಈ ಸಂದರ್ಭದಲ್ಲಿ ಚಿದಂಬರ ಭಜನಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಕರಡಿ ಮಜಲು, ಗೊಂಬೆ ಕುಣಿತವು ಮೆರವಣಿಗೆ ಮೆರಗು ತಂದವು. 

ಈ ಸಂಭರ್ದದಲ್ಲಿ ಚಿದಂಬರ ಸೇವಾ ಸಮಿತಿ ಅಧ್ಯಕ್ಷರಾದ ಪಿ.ಬಿ. ಹಂಗರಗಿ, ವೇದ ಮೂರ್ತಿ ಶಂಕರಭಟ ಅಗ್ನಿಹೋರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀಹರಿಗೊಳಸಂಗಿ, ಶ್ರೀನಿವಾಸ ಬೆಟಗೇರಿ, ಲಕ್ಷಿö್ಮÃಕಾಂತ ಕುಲಕರ್ಣಿ, ವಿಜಯ ಜೋಶಿ, ಮಧುಸೂಧನ ಜೋಶಿ, ಮಾಧವ ಜೋಶಿ, ರಮೇಶ ಕುಲಕರ್ಣಿ, ಪ್ರಾಣೇಶ ಕುಲಕರ್ಣಿ, ಸಚಿನಭಟ ಜೋಶಿ, ಜ್ಯೋತಿ ಹುನಗುಂದ, ವೆಂಕಟೇಶ ಜೋಶಿ, ವೆಂಕಟೇಶ ಜೋಶಿ ನಂದವಾಡಗಿ, ದೀಪಕ ಜೋಶಿ,ಸುಧೀಂದ್ರ ಕುಲಕರ್ಣಿ, ಸಿ.ಕೆ.ಪಾಟೀಲ ಪದ್ಮನಾಬ ಜೋಶಿ, ಅಜೀತ ಜೋಶಿ, ಚಿದಂಬರ ಜೋಶಿ, ರಾಘವೇಂದ್ರ ಕುಲಕರ್ಣಿ, ರಘೋತ್ತಮ ಪಾಟೀಲ, ಮಾಲತೇಶ ಕುಲಕರ್ಣಿ, ನಾಗರಾಜ ಜೋಶಿ, ಉಮೇಶ ಜೋಶಿ, ಉದಯ ಔರಸಂಗ, ರಾಘವೇಂದ್ರ ಜೋಶಿ ಸಂಕನಾಳ, ವಿಕಾಸ ಪದಕಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

ಸೆ. 17 ರಂದು ದೂರದರ್ಶನ ಚಂದನ ವಾಹಿನಿಯಲ್ಲಿ ಮೂಕನಾಗಬೇಕು ಸಾಕ್ಷ್ಯಚಿತ್ರ ಪ್ರಸಾರ

 ಈ ದಿವಸ ವಾರ್ತೆ 

ವಿಜಯಪುರ: ವಿಜಯಪುರದ ಹೊಂಗನಸು ಮೀಡಿಯಾ ಪ್ರೈ.ಲಿ. ಅಡಿಯಲ್ಲಿ ತಯಾರಾದ ಮೊದಲ ಕಾಣಿಕೆ, ಬಾಗಲಕೋಟೆ ನಗರದ ಸಮಾಜ ಸೇವಕ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೂ ವಿ ನಾಯ್ಕರ ಅವರ ನಿರ್ಮಾಣದ, ಪ್ರಿನ್ಸ್ ಟಿವಿ ಅರ್ಪಿಸುವ, ಕರ್ನಾಟಕದ ಮಹಾನ್ ತತ್ವಜ್ಞಾನಿ, ಉತ್ತರ ಕರ್ನಾಟಕದ ಹೆಮ್ಮೆಯ ತತ್ವಪದಕಾರ ಕಡಕೋಳ ಮಡಿವಾಳಪ್ಪನವರ ಜೀವನ ಕುರಿತು ತಯಾರಾದ ಸಾಕ್ಷ್ಯಚಿತ್ರ ಮೂಕನಾಗಬೇಕು ದೂರದರ್ಶನ ಚಂದನ ವಾಹಿನಿಲ್ಲಿ ಇದೇ ದಿನಾಂಕ: 17.09.2023 ರಂದು ಭಾನುವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ ಎಂದು ಚಿತ್ರದ ನಿರ್ದೇಶಕ ಶಿವಾನಂದ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕದ ಕಲಾವಿದರು, ತಂತ್ರಜ್ಞರು ಸೇರಿ ಮಾಡಿರುವ ಈ ಚಿತ್ರವನ್ನು, ಪ್ರೇಕ್ಷಕರು ವೀಕ್ಷಿಸುವುದರ ಮೂಲಕ ಆಶೀರ್ವಾದಿಸಬೇಕೆಂದು ಕೋರಿದ್ದಾರೆ. 

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

Friday, September 15, 2023

16-09-2023 EE DIVASA KANNADA DAILY NEWS PAPER

ನಾಳೆ ದಕ್ಷಿಣ ವಾರಣಾಸಿ ವಿಜಯಪುರ ನರಸಿಂಹ ದೇವರು ಗ್ರಂಥ ಲೋಕಾರ್ಪಣೆ


ಈ ದಿವಸ ವಾರ್ತೆ

ವಿಜಯಪುರ: ನರಸಿಂಹ ದೇವ ಟ್ರಸ್ಟ್ ದೇವಸ್ಥಾನ ಜೀರ್ಣೋದ್ಧಾರ ಸಮಿತಿ (ರಿ), ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಕ.ವಿ.ವಿ. ಧಾರವಾಡ ಗೌರವ ಉಪನ್ಯಾಸಕ ಹಾಗೂ ರಾಷ್ಟೀಯ ಸಂಶೋಧನಾ ವೇದಿಕೆಯ ಗೌರವ ಅಧ್ಯಕ್ಷರಾದ ಡಾ. ಸಂಗಮೇಶ ಕಲ್ಯಾಣಿ ವಿರಚಿತ ದಕ್ಷಿಣ ವಾರಣಾಸಿ ವಿಜಯಪುರ ನರಸಿಂಹ ದೇವರು ಗ್ರಂಥ ಲೋಕಾರ್ಪಣೆ ಸಮಾರಂಭ ಕಾರ್ಯಕ್ರಮವು ನಗರದ ಶ್ರೀ ನರಸಿಂಹ ದೇವಸ್ಥಾನ ವಿಜಯಪುರದಲ್ಲಿ ದಿನಾಂಕ : 16-09-2023 ರಂದು ಬೆಳಿಗ್ಗೆ 10.30 ಗಂಟೆಗೆ ಜರುಗಲಿದೆ.


ವಿಜಯಪುರ ನಗರ ಶಾಸಕರಾದ ಬಸನಗೌಡ. ಆರ್. ಪಾಟೀಲ ಯತ್ನಾಳ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ. ವಿಜಯಪುರದ ಗಣ್ಯ ವ್ಯಾಪಾರಸ್ಥರಾದ ವಿಶ್ವನಾಥ ಭೋಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ನರಸಿಂಹ ದೇಷ ಟ್ರಸ್ಟ್ ವಿಜಯಪುರದÀ ಅಧ್ಯಕ್ಷರಾದ ಸುಭಾಷ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರೀಯ ಸಂಶೋಧನಾ ವೇದಿಕೆ ಅಧ್ಯಕ್ಷರಾದ ಲಾಯಪ್ಪ ಇಂಗಳೆ ಗ್ರಂಥ ಪರಿಚಯಿಸಲಿದ್ದಾರೆ.

ಕ.ವಿ.ವಿ. ಧಾರವಾಡ ಗೌರವ ಉಪನ್ಯಾಸಕರಾದ ಡಾ. ಸಂಗಮೇಶ ಕಲ್ಯಾಣಿ, ಕರ್ನೂಲಿನ ಗಣ್ಯವರ್ತಕರಾದ ಸಾಯಿ ಶಿವಕುಮಾರ, ಪೂಜಾರಿ ಮನೆತನದ ಹಿರಿಯರಾದ ಮಹಾದೇವಿ ಪೂಜಾರಿ, ನರಸಿಂಹ ದೇವರ ಟ್ರಸ್ಟ್ ಹಾಗೂ ಸಿದ್ಧಸಿರಿ ಸೌಹಾರ್ದ ನಿರ್ದೇಶಕರಾದ ಶಿವಾನಂದ ಅಣ್ಣೆಪ್ಪನವರ, ಶ್ರೀ ಸಿದ್ದೇಶ್ವರ ಕಲಾ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯರಾದ ಪ್ರೊ. ವಿ.ವಿ ಹಿರೇಮಠ, ಶ್ರೀ ನರಸಿಂಹ ದೇವ ಟ್ರಸ್ಟ್ ವಿಜಯಪುರ ಕಾರ್ಯದರ್ಶಿ ಶಿವಶರಣ ಕಲ್ಲೂರ, ಹಾಗೂ ಟ್ರಸ್ಟಿನ ನಿರ್ದೇಶಕರಾದ ರಮೇಶ ಬನ್ನಟ್ಟಿ ಉಪಸ್ಥಿತಿ ವಹಿಸಲಿದ್ದಾರೆ ಎಂದು ಶ್ರೀ ನರಸಿಂಹದೇವ ಟ್ರಸ್ಟಿಗಳಾದ ಮಹೇಂದ್ರ ಪೂಜಾರಿ ಹಾಗೂ ವಿರೇಂದ್ರ ಪಾಟೀಲ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Thursday, September 14, 2023

ಜಿಲ್ಲಾಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ಅವರ ಮಾತೋಶ್ರೀ ಇನ್ನಿಲ್ಲ.

 

ಬಸವ್ವ ಸಿದ್ಧಪ್ಪ ಕಿತ್ತೂರ

ಈ ದಿವಸ ವಾರ್ತೆ

ವಿಜಯಪುರ : ಇಲ್ಲಿನ ಜಿಲ್ಲಾಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ಅವರ ಮಾತೋಶ್ರೀ ಬಸವ್ವ  ಸಿದ್ಧಪ್ಪ ಕಿತ್ತೂರ ( 82) ಗುರುವಾರ ಹೃದಯಾಘಾತದಿಂದ ನಿಧನರಾದರು. 

ಮೃತರಿಗೆ ಪತಿ, ಎಂಟು ಜನ ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. 


15-09-2023 EE DIVASA KANNADA DAILY NEWS PAPER

Wednesday, September 13, 2023

14-09-2023 EE DIVASA KANNADA DAILY NEWS PAPER

ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ

 ಈ ದಿವಸ ವಾರ್ತೆ

ಜೇಬಲ್ಲಿ ಇಟ್ಕೊಂಡು ಏನ್ ಮಾಡ್ತಾ ಇದೀರ?

ವಿದ್ಯುತ್ ಉಪಕೇಂದ್ರ ಆರಂಭಿಸಲು ಮತ್ತು ಟ್ರಾನ್ಸ್ ಫಾರ್ಮರ್ ಲೈನ್ ಗೆ ಭೂಮಿ ಒದಗಿಸುವಂತೆ ಎಷ್ಟು ಅರ್ಜಿಗಳು ಬಂದಿವೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಯೊಬ್ಬರ ಉತ್ತರದಿಂದ ಅಸಮಾಧಾನಗೊಂಡ ಸಿಎಂ ಆ ಅರ್ಜಿಗಳನ್ನು ಜೇಬಿನಲ್ಲಿ ಇಟ್ಕೊಂಡು ಏನ್ ಮಾಡ್ತಾ ಇದೀರ ಮೊದಲು ಆ ಎಲ್ಲಾ ಅರ್ಜಿಗಳ ಬೇಡಿಕೆ ಪೂರ್ಣಗೊಳಿಸಿ ಎಂದು ಸೂಚಿಸಿದರು.


ಬೆಂಗಳೂರು ಸೆ 23: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. 

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಂದುವರೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.                    

ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ ಪಾವತಿಸಿಲ್ಲ ಎಂದು ಬಾಕಿ ಉಳಿಸಿಕೊಳ್ಳಬಾರದು. ಇದಕ್ಕೆ ಟ್ರಾನ್ಸ್‌ಫಾರ್ಮರ್‌ ಗಳು ಇಲ್ಲ, ಕಂಬಗಳಿಲ್ಲ ಎಂಬ ನೆಪಗಳನ್ನು ಹೇಳಬಾರದು ಎಂದು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜೆಸ್ಕಾಂ ಮತ್ತು ಹೆಸ್ಕಾಂ ಗಳಲ್ಲಿ ಬಾಕಿ ಅರ್ಜಿಗಳ ಸಂಖ್ಯೆ ಹೆಚ್ಚಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಅಭಿಯಾನ ಕೈಗೆತ್ತಿಕೊಂಡು ವಿದ್ಯುದೀಕರಣ ಕೈಗೊಳ್ಳಲು ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ ವೆಲ್‌ ಕೊರೆಯುವುದು ಹಾಗೂ ವಿದ್ಯುದೀಕರಣದಲ್ಲಿ ಅನಗತ್ಯವಾಗಿ ವಿಳಂಬ ಮಾಡಬಾರದು. ಈ ವಿಳಂಬ ನೀತಿ ಅಪರಾಧ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

Wednesday, September 6, 2023

ಧರ್ಮಕ್ಕೋಸ್ಕರ ಮನುಷ್ಯ ಅಲ್ಲ-ಮನುಷ್ಯನಿಗಾಗಿ ಧರ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ

 


ಈ ದಿವಸ ವಾರ್ತೆ

ಬೆಂಗಳೂರು ಸೆ 6 : ಧರ್ಮಕ್ಕೋಸ್ಕರ ಮನುಷ್ಯ  ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿಯನ್ನು‌ ಉದ್ಘಾಟಿಸಿ ಮಾತನಾಡಿದರು. 

ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷದ ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ ಶಸ್ತ್ರ ಹಿಡಿಯದೆ ಹೋರಾಡಿ ಧರ್ಮ ಸ್ಥಾಪನೆ ಮಾಡಿದ ಎಂದರು. 

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ಕೂಡ ಮನುಷ್ಯ ಪ್ರೀತಿಯ ಸಮಾನತೆಯ ಸಮಾಜ ಸೃಷ್ಟಿ ಆಗಬೇಕು ಎನ್ನುವುದಾಗಿತ್ತು. ಸ್ವತಂತ್ರ ಭಾರತಕ್ಕೆ ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವೂ ಇದೇ ಆಗಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದ ಧರ್ಮವನ್ಮು ಒಪ್ಪಿಕೊಳ್ಳುವ, ಆಚರಿಸುವ ಸ್ವಾತಂತ್ರ್ಯವನ್ನು ನೀಡಿತು. ಜಾತಿ, ಧರ್ಮ ಆಧಾರಿತ ತಾರತಮ್ಯ ಮತ್ತು ಅಸಮಾನತೆಯನ್ನು ಸಂವಿಧಾನಬಾಹಿರ ಎಂದು ಅಂಬೇಡ್ಕರ್ ಘೋಷಿಸಿದರು. 

ಹೀಗಾಗಿ ಸಂವಿಧಾನವನ್ನು ರಕ್ಷಿಸುವವರ ಕೈಯಲ್ಲಿ ಅಧಿಕಾರ ಇರಬೇಕು. ಸಂವಿಧಾನ ವಿರೋಧಿಗಳ ಕೈಗೆ ದೇಶದ ಅಧಿಕಾರವನ್ನು ನೀಡಿ ಪರಿತಪಿಸಬೇಡಿ ಎಂದು ಕಿವಿಮಾತು ಹೇಳಿದರು. 

ಯಾದವ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಮಾತ್ರ ತಾರತಮ್ಯದಿಂದ ಹೊರಗೆ ಬರಬಹುದು. ಶಿಕ್ಷಣದ ಮೂಲಕ ಅಸಮಾನತೆಯನ್ನು ತೊಡೆದು ಹಾಕಬಹುದು. ಯಾದವ ಸಮುದಾಯದ ಯಾರೊಬ್ಬರೂ ಶಾಸಕರಾಗಿ ಗೆಲ್ಲದ ಕಾರಣದಿಂದ ನಾನು ಈ ಸಮುದಾಯಕ್ಕೆ ಸೇರಿದ ನಾಗರಾಜ ಯಾದವರನ್ನು ಕರೆದು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೆ. ಇದೇ ರೀತಿ ಸಮುದಾಯದ ಹಲವು ಮಂದಿಗೆ ನಾನಾ ರೀತಿಯ ರಾಜಕೀಯ ಪ್ರಾತಿನಿಧ್ಯ , ಅವಕಾಶಗಳನ್ನು ನಾನು ಒದಗಿಸಿದ್ದೇನೆ ಎಂದರು. 

ಗೊಲ್ಲ, ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಗೆ ಸೇರಿಸಿ ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದೇನೆ. ಕೇಂದ್ರ ಸರ್ಕಾರ ಹಿಡ್ಕೊಂಡು ಕುಳಿತಿದೆ. ರಾಜ್ಯ ಸರ್ಕಾರಕ್ಕೆ ಅಧಿಕಾರ ಇದ್ದಿದ್ದರೆ ಇಷ್ಟೊತ್ತಿಗೆ ನಾನೇ ಮಾಡಿ ಮುಗಿಸುತ್ತಿದ್ದೆ.  ಆದರೂ ನಮ್ಮ ಶಿಫಾರಸ್ಸನ್ನು ಜಾರಿ ಮಾಡುವಂತೆ ಕೇಂದ್ರಕ್ಕೆ ಒತ್ತಡ ಹಾಕುತ್ತೇವೆ. ಮೀಸಲಾತಿ ಪ್ರಮಾಣವನ್ನು ಶೇ 50 ಕ್ಕಿಂತ ಹೆಚ್ಚಿಸಲು ಕಾನೂನು ತರಲು ಅಗತ್ಯ ಕ್ರಮ ಕೈಮ ಕೈಗೊಂಡು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. 

ಯಾದವ ಸಮುದಾಯದ ಒಬ್ಬರನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿ ಎನ್ನುವ ಬೇಡಿಕೆ ಇದೆ. ಮುಂದೆ ಅವಕಾಶ ಒದಗಿಸುತ್ತೇನೆ. ನಾನು ಸಾಮಾಜಿಕ ನ್ಯಾಯದಿಂದ ವಂಚಿತರಾದ ಎಲ್ಲಾ ಜಾತಿ ಸಮುದಾಯಗಳ ಪರವಾಗಿ ನಾನು ಇರುತ್ತೇನೆ‌. ಸಾಮಾಜಿಕ ನ್ಯಾಯದ ಹಿತಾಸಕ್ತಿ ಕಾಪಾಡುತ್ತೇನೆ ಎಂದು ಭರವಸೆ ನೀಡಿದರು. 

ಚಿತ್ರದುರ್ಗ ಜಿಲ್ಲೆ ಶ್ರೀ ಕೃಷ್ಣ ಯಾದವ ಮಹಾಸಂಸ್ಥಾನ ಮಠದ ಯಾದವಾನಂದ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ವಿಧಾನ‌ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

07-09-2023 EE DIVASA KANNADA DAILY NEWS PAPER

Sunday, September 3, 2023

ಸಿದ್ದಸಿರಿ ಸೌಹಾರ್ದ ಸಹಕಾರಿಯ 17ನೇ ವಾರ್ಷಿಕೋತ್ಸವ ಸಿದ್ದಸಿರಿ ಸಹಕಾರಿಗೆ ರೂ.11.11 ಕೋಟಿ ನಿವ್ವಳ ಲಾಭ

 

ಈ ದಿವಸ ವಾರ್ತೆ

ವಿಜಯಪುರ: ಸಿಬ್ಬಂದಿ ಹಾಗೂ ಗ್ರಾಹಕರ ಸಹಕಾರದಿಂದ ಸಿದ್ದಸಿರಿ ಸೌಹಾರ್ದ ಸಹಕಾರಿ ರೂ. 2,244 ಕೋಟಿ ಠೇವಣಿ ಹೊಂದಿದ್ದು, 2022-23ನೇ ಸಾಲಿನಲ್ಲಿ ರೂ.11,11,11,111 ನಿವ್ವಳ ಲಾಭ ಗಳಿಸಿದೆ ಎಂದು ಸೌಹಾರ್ದದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಹೇಳಿದರು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಭಾನುವಾರ ನಡೆದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 17ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ನಂಬರ್-1 ಸೌಹಾರ್ದ ಸ್ಥಾನದಲ್ಲಿರುವ ನಮ್ಮ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ, ಸತತ 3ನೇ ವರ್ಷವೂ ಶೇ 25 ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಹಕಾರಿಯ ಶೇರು ಬಂಡವಾಳ ರೂ.33 ಕೋಟಿ, ದುಡಿಯುವ ಬಂಡವಾಳ  ರೂ.2319 ಕೋಟಿ ಇದ್ದು, ಠೇವಣಿಗಳು ರೂ.2,244 ಕೋಟಿ, ಸಾಲವ ಮುಂಗಡ ರೂ.1,555, ಕಾಯ್ದಿಟ್ಟ ನಿಧಿ ರೂ.42 ಕೋಟಿ, ನಿಶ್ಚಿತ ಆಸ್ತಿಗಳು ರೂ.39 ಕೋಟಿ, ಹೂಡಿಕೆಗಳು ರೂ.171 ಕೋಟಿ ಹೊಂದಿದೆ. ರಾಜ್ಯಾದ್ಯಂತ ಸಂಪೂರ್ಣ ಗಣಕೀಕೃತ 154 ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, 14 ಸ್ವಂತ ಕಟ್ಟಡಗಳು, 20 ಖಾಲಿ ನಿವೇಶನ ನಗಳನ್ನು ಹೊಂದಿದೆ. 21,941 ಸದಸ್ಯರು ಇರುತ್ತಾರೆ  ಎಂದು ತಿಳಿಸಿದರು.

ಸಹಕಾರಿ ಲೇವಾದೇವಿ ವ್ಯವಹಾರ ಅಲ್ಲದೆ 3 ಸಿದ್ದಸಿರಿ ಭಾರತೀಯ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರಗಳು, ಜೇವರ್ಗಿಯಲ್ಲಿ ಸಿದ್ದಸಿರಿ ರೈತರ ಉಗ್ರಾಣ, ಸಿದ್ದಸಿರಿ ಇಂಧನ ಕೇಂದ್ರ, ವಿಜಯಪುರ, ಸಿಂದಗಿ, ಬಬಲೇಶ್ವರ, ಬಿಜ್ಜರಗಿ, ಝಳಕಿಯಲ್ಲಿ ಸಿದ್ದಸಿರಿ ಕೃಷಿ ಕೇಂದ್ರಗಳು ಸ್ಥಾಪನೆ. ವಿಜಯಪುರದಲ್ಲಿ 5 ಸಾವಿರ ಮೆಟ್ರಿಕ್ ಟನ್ ಸಾಮಾರ್ಥ್ಯದ ಸಿದ್ದಸಿರಿ ಶೀತಲ ಘಟಕ ಮತ್ತು ಸಂಸ್ಕರಣ ಘಟಕ, 28 ಸಿದ್ದಸಿರಿ ಇ- ಸ್ಟಾಂಪ್ ಕೇಂದ್ರಗಳು, ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ಸಿದ್ದಸಿರಿ ಎಥೆನಾಲ್ ಮತ್ತು ಪವರ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಿರಿಯ ನಾಗರಿಕರು, ಸೈನಿಕರು, ಮಾಜಿ ಸೈನಿಕರು, ವಿಧವೆಯರು ಮತ್ತು ದಿವ್ಯಾಂಗ ಠೇವಣಿದಾರರಿಗೆ ಶೆ 0.5 ಹೆಚ್ಚಿನ ಬಡ್ಡಿದರ ನೀಡಲಾಗುತ್ತದೆ. 6 ವರ್ಷಕ್ಕೆ ಹಣ ದ್ವಿಗುಣ ನೀಡಲಾಗುತ್ತಿದ್ದು, ಹಿರಿಯ ನಾಗರಿಕರಿಗೆ 5 ವರ್ಷ 8 ತಿಂಗಳಿಗೆ ಕೊಡಲಾಗುತ್ತದೆ. ಇದಲ್ಲದೇ, ಸಿದ್ದಸಿರಿ ಲಕ್ಕಿ ಗೋಲ್ಡ್ ಆರ್.ಡಿ ಸ್ಲಿಮ್ ಸೌಲಭ್ಯ ಇರುತ್ತದೆ ಎಂದು ಹೇಳಿದರು.

ಇದೇ ವೇಳೆ ಈಚೆಗೆ ಲಿಂಗೈಕ್ಯರಾದ ಸಿದ್ದೇಶ್ವರ ಶ್ರೀಗಳು, ನಿಧನರಾದ ರಾಜಕೀಯ ಮುಖಂಡರು, ಬ್ಯಾಂಕಿನ ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಚಂದ್ರಯಾನ-3 ಯಶಸ್ಸಿಗೆ ಬೆನ್ನೆಲುಬಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಹೆಮ್ಮೆಯ ವಿಜ್ಞಾನಿಗಳಿಗೆ ಗೌರವ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ನಿರ್ದೇಶಕರಾಗಿ ಆಯ್ಕೆಯಾದ ರಾಮನಗೌಡ ಬ. ಪಾಟೀಲ ಯತ್ನಾಳ ಅವರನ್ನು ಹಾಗೂ ಅತ್ಯುತ್ತಮ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು. ಸಿದ್ದಸಿರಿ ಒಣದ್ರಾಕ್ಷಿ ಬ್ರಾಂಡ್ ಬಿಡುಗಡೆಗೊಳಿಸಲಾಯಿತು.

ಸೌಹಾರ್ದದ ಉಪಾಧ್ಯಕ್ಷರಾದ ಬಸಯ್ಯ ಹಿರೇಮಠ, ನಿರ್ದೇಶಕರಾದ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ, ರಮೇಶ ಬಿರಾದಾರ, ವಿಜಯಕುಮಾರ್ ಚವ್ಹಾಣ, ಅಶೋಕಗೌಡ ತೊರವಿ, ಶೈಲಜಾ ಪಾಟೀಲ, ಸೀಮಾ ಕೋರೆ, ಸೋಮಶೇಖರ್ ಬಂಡಿ, ಡಾ.ಬಸನಗೌಡ ಪಾಟೀಲ ನಾಗರಾಳ ಹುಲಿ, ಗಣಪತಿ ಜಾಧವ, ವ್ಯವಸ್ಥಾಪಕ ನಿರ್ದೇಶಕರು ಜೋತಿಬಾ ಖಂಡಗಾಳೆ, ಜಂಟಿ ವ್ಯವಸ್ಥಾಪಕ ನಿರ್ದೇಶಕರು ರಾಘವ ಅಣ್ಣಿಗೇರಿ ಮತ್ತಿತರರು ಇದ್ದರು.

Saturday, September 2, 2023

03-09-2023 EE DIVASA KANNADA DAILY NEWS PAPER

ರಾಘವೇಂದ್ರ ಮಹಾಸ್ವಾಮಿಗಳ ಆರಾಧಾನಾ ಮಹೋತ್ಸವ


 ವಿಜಯಪುರ : ವಿಜಯಪುರದ ದಿವಟಗೇರಿಗಲ್ಲಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಆರಾಧಾನಾ ಮಹೋತ್ಸವ ಪ್ರಯುಕ್ತ ಉತ್ತರಾರಾಧನೆ ಭಕ್ತಿಪರ‍್ವಕವಾಗಿ ನಡೆಯಿತು.

ಕರ‍್ಯಕ್ರಮದ ಅಂಗವಾಗಿ ಬೆಳಿಗ್ಗೆ ಸುಪ್ರಭಾತ ಆರಂಭವಾಯಿತು, ನಂತರ ರಥಾಂಗಹವನ, ಶ್ರೀ ಹರಿ ವಾಯುಸ್ತುತಿ ಪುನಶ್ಚರಣ, ಸಪ್ತಕಹವನ, ಶ್ರೀ ಗುರು ಸ್ತೊçÃತ್ರ ಅಷ್ಟೋತ್ತರ ಶತ:ಪಠಣ ಪರ‍್ವಕ ಭಕ್ತಿಭಾವದಿಂದ ನಡೆಯಿತು.

ನಂತರ ಶ್ರೀ ಗುರುಸಾರ್ವಭೌಮರಿಗೆ ಕ್ಷೀರಾಭಿಷೇಕ, ಮಹಾ ಪಂಚಾಮೃತ ಅಭೀಷೇಕ ಸಲ್ಲಿಸಲಾಯಿತು. ಪಲ್ಲಕ್ಕಿ ಸೇವೆ, ರಜತ ರಥೋತ್ಸವ ವೈಭವದಿಂದ ನಡೆಯಿತು. ನಂತರ ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ಮಂತ್ರಪುಷ್ಪ, ಸ್ವಸ್ತಿವಾಚನ, ಶ್ರೇಯ: ಪ್ರರ‍್ಥನೆ ನೆರವೇರಿತು. ನಂತರ ಮಹಾಪೂಜೆ, ನೈವೇದ್ಯ ಸರ‍್ಪಣೆ ಹಾಗೂ ಮಹಾಮಂಗಳಾರತಿ ನಡೆಯಿತು.

ಪ್ರಕಾಶ್ ಅಕ್ಕಲಕೋಟ, ಅಪ್ಪಣ್ಣಾಚಾರ್ಯ, ಡಿ.ಜಿ. ಹರಿದಾಸ್,  ನಾರಾಯಣ ಕುಲಕರ್ಣಿ, ವೆಂಕಟೇಶ್ ಖಾಸನಿಸ್, ಗೋವಿಂದರಾಜ ದೇಶಪಾಂಡೆ ,ವಿಜಯ ಜೋಶಿ ವಿಕಾಸ್ ಪದಕಿ, ರಾಕೇಶ್ ಕುಲಕರ್ಣಿ, ಶ್ರೀಹರಿ ಕುಲಕರ್ಣಿ, ವೆಂಕಟೇಶ್ ಗುಡಿ, ಉಮೇಶ ಕುಲಕರ್ಣಿ ಪಾಲ್ಗೊಂಡಿದ್ದರು.

ಅಖಂಡ ಕರ್ನಾಟಕ: ಉತ್ತರ/ದಕ್ಷಿಣ ಎಂಬ ತಾರತಮ್ಯ ಇಲ್ಲ ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯ

 

ಈ ದಿವಸ ವಾರ್ತೆ

ವಿಜಯಪುರ :  ಕೃಷ್ಣಾ  ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಆಲಮಟ್ಟಿಯ ಸಂಗ್ರಹಣೆ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್  ನೀರು. ಇಡೀ ಕರ್ನಾಟಕದ  ಜಲಾಶಯಗಳಲ್ಲಿ  ಕೃಷ್ಣಾ ಮೇಲ್ದಂಡೆ ಪೂರ್ಣ ಭರ್ತಿಯಾಗಿದೆ. ನಾರಾಯಣಪುರ ಜಲಾಶಯ ತುಂಬಿದೆ. ಭರ್ತಿಯಾಗಿರುವುದರಿಂದ ನಾಲೆಗಳಿಗೆ, ಕುಡಿಯುವ ನೀರು, ವಿದ್ಯುಚ್ಛಕ್ತಿ ಉತ್ಪಾದನೆಗೆ ನೀರು ಹರಿಸಲಾಗುತ್ತಿದೆ. ಕುಡಿಯುವ  ನೀರು ಬಿಟ್ಟಿರುವುದರಿಂದ ಒಂದು ಟಿಎಂಸಿ ನೀರು ಕಡಿಮೆ ಇದೆ. ನಾರಾಯಣಪುರದಲ್ಲಿಯೂ ಕೂಡ 492 ಮೀ. ನೀರು ಇದೆ. 105.46 ಟಿಎಂಸಿ ನೀರು  ಲೈವ್ ಸ್ಟೋರೇಜೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ 11 ಟಿಎಂಸಿ ನೀರಿನ ಸಂಗ್ರಹ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಹೆಚ್ಚಿತ್ತು.25450 ಕ್ಯೂಸೆಕ್ಸ್ ನೀರಿತ್ತು , ಆದರೆ ಈಗ 3730 ಕ್ಯೂಸೆಕ್ಸ್ ನೀರಿನ ಸಂಗ್ರಹ ಇದೆ ಎಂದರು.

 ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ

ಒಟ್ಟಾರೆಯಾಗಿ ಈ ವರ್ಷ  ಕೃಷ್ಣಾ ಮೇಲ್ದಂಡೆ ಪ್ರದೇಶದ ಅಚ್ಚುಕಟ್ಟಿನಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ. ಶೇ. 56% ಕೊರತೆಯಾಗಿದೆ.  ಆಗಸ್ಟ್ ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ  ಮೂರು ಸಭೆಗಳನ್ನು ನಡೆಸಿದೆ.  ಪುನ: ಸೆ.04 ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿ  ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ  ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.

ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪರಿಷ್ಕರಣೆಗೆ ಮನವಿ :

ಬರ ಘೋಷಣೆಯ ನಂತರ ಕೇಂದ್ರಸರ್ಕಾರಕ್ಕೆ  ಬರಪೀಡಿತ ತಾಲ್ಲೂಕುಗಳಿಗೆ ನೆರವು ಕೋರಿ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಸಮಿತಿಯು ಸಮೀಕ್ಷೆ ನಡೆಸಿದ ನಂತರ , ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಹಣ ಬಿಡುಗಡೆ ಮಾಡುತ್ತದೆ. ರಾಜ್ಯಸರ್ಕಾರ  ಈ ಅನುದಾನದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ . ಅದಲ್ಲದೇ ರಾಜ್ಯ ಸರ್ಕಾರವೂ ಪರಿಹಾರ ಕಾರ್ಯಗಳಿಗೆ ಹಣ ವಿನಿಯೋಗಿಸಲಿದೆ. 2020 ರಿಂದ  ಇಲ್ಲಿಯವರೆಗೆ  ಪರಿಷ್ಕರಣೆ ಆಗಿಲ್ಲ. ಎನ್ ಡಿ ಆರ್ ಎಫ್ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಹಾಗೂ ರಾಜ್ಯಗಳಿಗೆ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಅಖಂಡ ಕರ್ನಾಟಕ: ಉತ್ತರ/ದಕ್ಷಿಣ ಎಂಬ ತಾರತಮ್ಯ ಇಲ್ಲ

ಕೃಷ್ಣಾ ಕಾವೇರಿ ಜೀವನದಿಗಳು. ಕಾವೇರಿ, ಕೃಷ್ಣಾ ನದಿ ಪಾತ್ರದಲ್ಲಿರುವವರೆಲ್ಲರೂ ನಮ್ಮ ರೈತರೇ. ತಾರತಮ್ಮ ಮಾಡುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕದಲ್ಲಿ ದಕ್ಷಿಣ, ಉತ್ತರ ಎಂಬ ಪ್ರಶ್ನೇ ಇಲ್ಲ ಎಂದರು.

ತಮಿಳುನಾಡಿಗೆ ಕಾವೇರಿ  ನೀರು: ದೆಹಲಿಗೆ ಶೀಘ್ರ ಸರ್ವ ಪಕ್ಷ ನಿಯೋಗ

ಕಾವೇರಿ ನೀರಿಗೆ ಸಂಬಂಧಿಸಿದಂತೆ ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರ ಸಮಯವನ್ನು ಕೋರಿದ್ದೇವೆ. ಈಗಾಗಲೇ ನಮ್ಮ ಜಲಸಂಪನ್ಮೂಲ  ಸಚಿವರು ನಮ್ಮ ರಾಜ್ಯದ ಪರವಾಗಿ ವಾದ ಮಂಡಿಸುವ ವಕೀಲರನ್ನು ಭೇಟಿ ಮಾಡಿ ಅವರಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಬುಧವಾರ ಪ್ರಕರಣ ವಿಚಾರಣೆಗೆ ಬರಲಿದ್ದು ನಮ್ಮ ವಾದ ಏನಿರಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆಗೆ ಆಗ್ರಹ :

ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿದ್ದಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು. ಮಹಾದಾಯಿ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿದ್ದರೂ, ಅರಣ್ಯ ಹಾಗೂ ಪರಿಸರ  ತೀರುವಳಿ ದೊರೆತಿರುವುದಿಲ್ಲ.ಈ ಯೋಜನೆಗೆ ತೀರುವಳಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.  ಇಂದು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಲ್ಲದ ಕಾರಣ ಹಾಗೂ ಕುಡಿಯುವ ನೀರಿನ ಕೊರತೆಯಿಂದಾಗಿ ಸಂಕಷ್ಟದ ಸಮಯವನ್ನು ಎದುರಿಸುವಂತಾಗಿದೆ. ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗುತ್ತದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು 1 ಲಕ್ಷ ಕೋಟಿ ರೂ. ಅಗತ್ಯ :

ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 1 ಲಕ್ಷ ಕೋಟಿ ರೂ.ಗಳ ಅಗತ್ಯವಿದೆ. 2023 ರ ಅಂದಾಜಿನ ಪ್ರಕಾರ 83700 ಕೋಟಿ ರೂ. ಇದ್ದು, ಯೋಜನೆ ಪೂರ್ಣಗೊಳ್ಳುವವರೆಗೆ 1 ಲಕ್ಷ ಕೋಟಿ ವೆಚ್ಚವಾಗುವ ಸಾಧ್ಯತೆ ಇದೆ. ರಾಜ್ಯಸರ್ಕಾರ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲು ಸಿದ್ಧವಿದ್ದು, ಕೇಂದ್ರಸರ್ಕಾರ ತ್ವರಿತಗತಿಯಲ್ಲಿ ಅಧಿಸೂಚನೆ  ಹೊರಡಿಸಬೇಕಾಗಿದೆ. ಆದಾಗ್ಯೂ  ಯೋಜನೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ :

ಇಸ್ರೋ ಸಂಸ್ಥೆಯು ಆದಿತ್ಯ -ಎಲ್1 ಉಪಗ್ರಹವನ್ನು ಯಶಸ್ಸಿಯಾಗಿ ಉಡಾವಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಸ್ರೋ ವಿಜ್ಞಾನಿಗಳಿಗೆ ಶುಭ ಕೋರಲಾಗಿದೆ. ಚಂದ್ರಯಾನ -3 ರ ಯಶಸ್ಸಿಗೆ ದ್ಯೋತಕವಾಗಿ ಇಸ್ರೋ ವಿಜ್ಞಾನಿಗಳಿಗೆ ಸರ್ಕಾರದ ವತಿಯಿಂದ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗುವುದು ಎಂದರು.

ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ .ಎಂ.ಬಿ ಪಾಟೀಲ್ , ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಚ್.ವೈ. ಮೇಟಿ, ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಸಂಸದ ರಮೇಶ್ ಜಿಗಜಿಣಗಿ, ಪಿ.ಸಿ ಗದ್ದಿಗೌಡ  ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

 


ಈ ದಿವಸ ವಾರ್ತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.‌

ಈ ಸಂಸರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Friday, September 1, 2023

02-09-2023 EE DIVASA KANNADA DAILY NEWS PAPER

ಪ್ರಪ್ರಥಮ ಬಾರಿಗೆ ವಿನೂತನ ಶಿಕ್ಷಣ ಅದಾಲತ್ ಕಾರ್ಯಕ್ರಮ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಕುಂದು ಕೊರತೆ ನಿವಾರಣೆ ಅತ್ಯವಶ್ಯಕ : ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ

 ವಿಜಯಪುರ: ಮಕ್ಕಳ ಶೈಕ್ಷಣಿಕ ಅಭಿವೃದ್ದಿಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಶಿಕ್ಷಕರ ಕುಂದು ಕೊರತೆ ನಿವಾರಣೆ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದರು. 

ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಗಂಣದಲ್ಲಿ ಶಿಕ್ಷಕರ ಕುಂದು ಕೊರತೆಗಳನ್ನು ಬಗೆಹರಿಸಲು  ಹಮ್ಮಿಕೊಂಡ ಶಿಕ್ಷಣ ಅದಾಲತ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅವರು, ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಹೊತ್ತಿಕೊಂಡಿರುವ ಶಿಕ್ಷಣ ಇಲಾಖೆ ಕಾರ್ಯ ಅತಿ ಮುಖ್ಯ ಹಾಗೂ ಮಹತ್ವದ್ದಾಗಿದೆ. ಶಿಕ್ಷಕರ ಹಲವಾರು ಕುಂದು ಕೊರತೆಗಳ ನಿವಾರಣೆಗೆ ಪ್ರತಿ ದಿನ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಿಕ್ಷಕರ ಕುಂದು ಕೊರತೆಗಳನ್ನು ನಿವಾರಿಸಲು ರಾಜ್ಯದಲ್ಲಿಯೇ ಪ್ರಪ್ರಥಮಬಾರಿಗೆ ಶಿಕ್ಷಣ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. 

ಶಿಕ್ಷಕರು ಶಾಲಾ ಭೋಧನೆ ಬಿಟ್ಟು ಕಚೇರಿ ಕಚೇರಿ ಅಲೆದಾಡಿದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದು ಅಸಾಧ್ಯ. ಆದ್ದರಿಂದ ಇಂದಿನ ಮಕ್ಕಳು ನಮ್ಮ ದೇಶದ ಮುಂದಿನ ಸತ್ಪ್ರಜೆಯನ್ನಾಗಿ ಮಾಡಲು ಶಿಕ್ಷಕರ ಕುಂದು ಕೊರತೆಗಳನ್ನು ನಿವಾರಿ ಸಲು ಏಕಗವಾಕ್ಷಿ ಪದ್ಧತಿಯಲ್ಲಿ ಶಿಕ್ಷಣ ಅದಾಲತ್ ಎಂಬ ವಿನೂತನ ಕಾರ್ಯ ಕ್ರಮ ಆಯೋಜಿಸಿಲಾಗಿದೆ. ಇದರ ನಿವಾರಣೆಗಾಗಿ ಇಂದು ಈ ಶಿಕ್ಷಣ ಅದಾಲತ್ ಹಮ್ಮಿಕೊಳ್ಳಲಾಗಿದೆ. ನಿರೀಕ್ಷೆ ಗೂ ಮೀರಿ ಶಿಕ್ಷಕರು ಈ ಅದಾಲತ್ ನಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಂಡಿದ್ದು ನಿಜಕ್ಕೂ ಖುಷಿ ತಂದಿದೆ. ಮುಂದಿನ ದಿನಗಳಲ್ಲಿ  ಜಿಲ್ಲಾ ಪಂಚಾಯತಿ ಅಧೀನ ದಲ್ಲಿ ಬರುವ ಎಲ್ಲ ಇಲಾಖೆಯ ಅಧಿಕಾ ರಿಗಳ ಮತ್ತು ಸಿಬ್ಬಂದಿಗಳ ಹಿತದೃಷ್ಠಿ ಯಿಂದ ಎಲ್ಲ ಇಲಾಖೆಗಳ ಕುಂದು ಕೊರತೆ ಅದಾಲತ್ ಹಮ್ಮಿಕೊಳ್ಳಲಾಗು ವುದು ಎಂದು ಅವರು ಹೇಳಿದರು. 

ಶಿಕ್ಷಣ ಅದಾಲತ್ ಕಾರ್ಯಕ್ರಮದಲ್ಲಿ ಇಂಡಿ ಮತ್ತು ವಿಜಯಪುರ ಗ್ರಾಮೀಣ ಭಾಗದ ನೂರಾರು ಶಿಕ್ಷಕರು ಬಾಗವಹಿಸಿ ಗಳಿಕೆ ರಜೆ ನಗದೀಕರಣ, ಹಬ್ಬದ ಮುಂಗಡ, ವೇತನ ಬಡ್ತಿ, ಕಾಲಮಿತಿ ಬಡ್ತಿ, ಸ್ಥಗಿತ ವೇತನ ಬಡ್ತಿ, ಸೇವಾ ಪುಸ್ತಕ ಅಪಡೇಟ್ ಮಾಡುವುದು, ಶಿಸ್ತು ಕ್ರಮ, ಪಿಂಚಣಿ, ಜಿಪಿಎಫ್ ಮತ್ತು ವೈಧ್ಯಕೀಯ ಬಿಲ್ಲುಗಳಿಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಅದಾಲತ್ ನಲ್ಲಿ ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲಾಯಿತು. 

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಕರು, ತಮ್ಮ ಕುಂದು ಕೊರತೆಗಳನ್ನು ಪರಿಹಾರ ಮಾಡಿಕೊಳ್ಳುವಲ್ಲಿ ಸಫಲರಾಗಿ ಹರ್ಷವನ್ನು ವ್ಯಕ್ತಪಡಿಸಿದರು. ಜಿಲ್ಲಾ ಶಿಕ್ಷಕರ ಸಂಘದ ಪ್ರತಿನಿದಿ ಅರ್ಜುನ ಲಮಾಣಿ ತಮ್ಮ ಸಂತಸವನ್ನು ವ್ಯಕ್ತಪಡಿಸಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನಮ್ಮ ಜಿಲ್ಲೆಯಲ್ಲಿ ಇಂತಹ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಿರುವುದರಿಂದ  ಜಿಲ್ಲೆಯ ಶಿಕ್ಷಕ ವರ್ಗಕ್ಕೆ ಉಪಯುಕ್ತವಾಗಿದೆ ಎಂದು ಹೇಳಿದರು. 

ಇಂತಹ ವಿನೂತನ ಕಾರ್ಯಕ್ರಮ ಆಯೋಜನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿಗಳಿಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. 

  ಈ ಸಂದರ್ಭದಲ್ಲಿ  ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಆಡಳಿತ) ಎನ್.ಎಚ್.ನಾಗೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಎಸ್.ಆಲಗೂರ, ಶ್ರೀಮತಿ ಪ್ರಮೋದಿನಿ ಬಳೋಲಮಟ್ಟಿ, ಉಪ ಯೋಜನಾ ಸಮನ್ವಯಾಧಿಕಾರಿ ಎಮ್.ಎ.ಗುಳೆದಗುಡ್ಡ, ಶ್ರೀಮತಿ ಟಿ.ಎಚ್.ಕೊಲ್ಹಾರ, ರಾಜಶೇಖರ ದೈವಾಡಿ ಸೇರಿದಂತೆ ಜಿಲ್ಲಾ ಪಂಚಾಯತಿ ಮತ್ತು ಬಿಇಒ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೋಷಣ್ ಮಾಸಾಚರಣೆ ಕಾರ್ಯಕ್ರಮ

 


ವಿಜಯಪುರ: ಶಿಶು ಅಭಿವೃದ್ಧಿ ಯೋಜನೆ ವಿಜಯಪುರ (ನಗರ) ಯೋಜನೆಯಲ್ಲಿ ಪೋಷಣ್ ಅಭಿಯಾಯಾನ ಯೋಜನೆಯಡಿಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಜರುಗಿತು.

ಸಂತೋಷ ಕುಂದರ್ ಹಿರಿಯ ಸಿವಿಲ್ ನ್ಯಾಯಾಧೀಶರು ಕಾನೂನು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ರವರು ಕಾರ್ಯಕ್ರಮ ಉದ್ಘಾಟಣೆ ನೆರವೆರಿಸಿ ಪೌಷ್ಠಿಕ ಆಹಾರ ಆರೋಗ್ಯಕ್ಕೆ ಎಷ್ಟು ಉತ್ತಮ ಅದರ ಮಹತ್ವವ ಏನು ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿವಿಧ ಪೌಷ್ಟಿಕಾಂಶ ಸಂಬಂಧಿತ ಯೋಜನೆಗಳ ಒಮ್ಮುಖವನ್ನು ಖಾತ್ರಿಪಡಿಸುವ ಮೂಲಕ ಅಪೌಷ್ಟಿಕತೆ ಮತ್ತು ಇತರ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಗುರಿಯಾಗಿದೆ. ಇದು ಕುಂಠಿತ, ಅಪೌಷ್ಟಿಕತೆ, ರಕ್ತಹೀನತೆ (ಚಿಕ್ಕ ಮಕ್ಕಳು, ಮಹಿಳೆಯರು ಮತ್ತು ಹದಿಹರೆಯದ ಹುಡುಗಿಯರಲ್ಲಿ) ಮತ್ತು ಕಡಿಮೆ ಜನನ ಪ್ರಮಾಣವನ್ನು ಗುರಿಯಾಗಿಸುತ್ತದೆ ಎಂದರು.

ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರು ದಿನೇಶ ಹಳ್ಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ದೀಪಾಕ್ಷಿ ಜಾನಕಿ ವಿಜಯಪುರ(ನಗರ) ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಹೇಬಗೌಡ ಝುಂಜರವಾಡ, ರಾಜಶೇಖರ ಜಿಲ್ಲಾ ಸಂಯೋಜಕರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. 

ಶ್ರೀಮತಿ ಅಶ್ವಿನಿ ಸನದಿ ಮೇಲ್ವಿಚಾರಕಿ ನಿರೂಪಿಸಿದರು.

ಇದೇ ಸಂಧರ್ಭದಲ್ಲಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು. ಇದಕ್ಕು ಮುನ್ನ ಸಹಿ ಕ್ಯಾಂಪಿಯನ್ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತು. ಕೇಕ್ ಕಟ್ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಮೇಲ್ವಿಚಾರಕಿಯರು, ಗರ್ಭಿಣಿ/ಬಾಣಂತಿಯರು ಕಾರ್ಯಕರ್ತೆ, ಸಹಾಯಕಿಯರು ಮುದ್ದು ಮಕ್ಕಳು ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.