Thursday, November 30, 2023

01-12-2023 EE DIVASA KANNADA DAILY NEWS PAPER

ಪುರಂದರದಾಸರು ಹಾಗೂ ಕನಕದಾಸರು ದಾಸ ಸಾಹಿತ್ಯದ ಎರಡು ಕಣ್ಣುಗಳು

ಈ ದಿವಸ ವಾರ್ತೆ

ವಿಜಯಪುರ:

ವಿಜಯನಗರ ಅರಸರ ಪರವಾಗಿ ಯುದ್ಧದಲ್ಲಿ ಭಾಗವಹಿಸಿ, ಸೋಲನ್ನು ಅನುಭವಿಸಿ, ಅನೇಕ ಸಾವು- ನೋವುಗಳನ್ನು ನೋಡಿದ ದಾಸ ಶ್ರೇಷ್ಠ ಕನಕದಾಸರು ವೈರಾಗ್ಯ ಹೊಂದಿ, ಸಂಸಾರವನ್ನು ತ್ಯಾಗ ಮಾಡಿದರು. ದೇಶ ಸಂಚಾರ ಮಾಡುತ್ತ, ತಮ್ಮ ಕೀರ್ತನೆಗಳ ಮೂಲಕ ಜಾತಿ, ಮತ, ಪಂಥ, ಅಸಮಾನತೆ, ಅನ್ಯಾಯ, ಮೌಡ್ಯತೆಗಳನ್ನು ಹೋಗಲಾಡಿಸಲು ನಿರಂತರ ಶ್ರಮಿಸಿದರು. ತಿಮ್ಮಪ್ಪ ನಾಯಕನೆಂದು ಕರೆಸಿಕೊಳ್ಳುತ್ತಿದ್ದ ಇವರು ಗುರುಗಳಾದ ವ್ಯಾಸರಾಯರಿಂದ ಕನಕದಾಸರೆಂದು ಮರುನಾಮಕರಣ ಹೊಂದಿದರು. ತಮ್ಮ ಆರಾಧ್ಯ ದೈವ ‘ಕಾಗಿನೆಲೆ ಆದಿ ಕೇಶವರಾಯ’ ಎಂಬ ಹೆಸರಿನಿಂದ ಹಲವಾರು ಕೀರ್ತನೆಗಳನ್ನು ರಚಿಸಿ, ಸಮಾಜವನ್ನು ಸುಧಾರಣೆ ಮಾಡಲು ಅವಿರತ ಪ್ರಯತ್ನ ಮಾಡಿದರು ಎಂದು  ಕನ್ನಡ ಹಿರಿಯ ಉಪನ್ಯಾಸಕರಾದ ಪ್ರೊ.  ಸಿದ್ದು ಸಾವಳಸಂಗ ತಮ್ಮ ಉಪನ್ಯಾಸ ನೀಡುತ್ತಾ  ಹೇಳಿದರು.

ಇಂದು ಕನಕದಾಸರ ಜಯಂತಿ ಪ್ರಯುಕ್ತ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜು, ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅವರು ಹಾವೇರಿ ಜಿಲ್ಲೆಯ ಬಾಡ ಎನ್ನುವಂತ ಚಿಕ್ಕ ಗ್ರಾಮದಲ್ಲಿ ಕ್ರಿ.ಶ.೧೫೦೮ ರಲ್ಲಿ ಬೀರಪ್ಪ ನಾಯಕ  ಹಾಗೂ ಬಚ್ಚಮ್ಮ ದಂಪತಿಗಳ ಮಗನಾಗಿ ಕನಕದಾಸರು ಜನಿಸಿದರು. ಅವರ ಪೂರ್ವನಾಮ ತಿಮ್ಮಪ್ಪನಾಯಕ. ಮುಂದೆ ವಿಜಯನಗರ ಅರಸರಿಂದ ೭೮ ಗ್ರಾಮಗಳನ್ನು ಪಡೆದು ಅವರು ನಾಯಕರಾಗಿದ್ದರು.

ಆನಂತರ  ಯುದ್ಧದ ಸಾವು ನೋವುಗಳನ್ನು ಅರಿತು ಸಂಸಾರ ತ್ಯಾಗ ಮಾಡಿ ಸಂತರಾದರು.

ಕುಲ ಕುಲವೆಂದು ಹೊಡೆದಾಡದಿರಿ

ನಿಮ್ಮ ಕುಲದ ನೆಲೆಯನ್ನೇನಾದರೂ ಬಲ್ಲಿರಾ ಬಲ್ಲಿರಾ 

ಎಂದು ಜಾತಿ-ಮತಗಳ ವಿರುದ್ಧ ದನಿಯೆತ್ತಿದರು. ಹಾಗೆಯೇ ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎಂದು ಇನ್ನೊಂದು ಕೀರ್ತನೆಯಲ್ಲಿ ಹೇಳುತ್ತಾರೆ. ಪುರಂದರದಾಸರು ಹಾಗೂ ಕನಕದಾಸರು ದಾಸ ಸಾಹಿತ್ಯದ ಎರಡು ಕಣ್ಣುಗಳು ಎಂದು ಪ್ರೊ. ಸಿದ್ದು ಸಾವಳಸಂಗ ಹೇಳಿದರು. 

ಇನ್ನೋರ್ವ ಹಿರಿಯ ಉಪನ್ಯಾಸಕರಾದ ಪ್ರೊ. ಎಸ್. ಆರ್. ಬಿರಾದಾರ ಮಾತನಾಡುತ್ತಾ ಶ್ರೇಷ್ಠ ಸಂತನಾದ ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿ, ಅವುಗಳನ್ನು ಹಾಡುತ್ತಾ ದೇಶ ಸಂಚಾರ ಮಾಡಿ, ಜನರಲ್ಲಿ ಜಾಗೃತಿಯನ್ನು ಮೂಡಿಸಿದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅತ್ಯಂತ ಅವಿಸ್ಮರಣೀಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸಿ.ಬಿ . ನಾಟೀಕಾರ ಮಾತನಾಡುತ್ತಾ ತಮ್ಮ ಭಕ್ತಿಯಿಂದ ಉಡುಪಿಯ ಶ್ರೀ ಕೃಷ್ಣನನ್ನು ಒಲಿಸಿಕೊಂಡಿರುವ ಸಂತ ಕನಕದಾಸರು ಸಮಾಜಕ್ಕೆ ಹಾಗೂ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆಯನ್ನು ನಾವು ಮರೆಯುವಂತಿಲ್ಲ. ಕೇವಲ ಕಾಟಾಚಾರಕ್ಕಾಗಿ ಅವರ ಜಯಂತಿಯನ್ನು ಆಚರಿಸದೆ, ಅವರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ನಾವು ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು ಎಂದು ಹೇಳಿದರು.

ಇದಕ್ಕೂ ಮೊದಲು ದಾಸ ಶ್ರೇಷ್ಠ ಸಂತನಾದ ಕನಕದಾಸರ ಭಾವಚಿತ್ರಕ್ಕೆ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರು ಕನಕದಾಸರ ಕುರಿತು ಮಾತನಾಡಿದರು. ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಸಮೃದ್ದಿ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಭಕ್ತ ಕನಕದಾಸರ ಜಯಂತಿ

 


ಈ ದಿವಸ ವಾರ್ತೆ

ವಿಜಯಪುರ: ನಗರದ ಡಾ. ರಾಜಕುಮಾರ ಲೇಔಟನಲ್ಲಿರುವ ಸಮೃದ್ದಿ ಶಾಲೆಯ ವಿದ್ಯಾಥಿ  ಗಳು ಹಾಗೂ ಶಿಕ್ಷಕವೃಂದದಿಂದ ಸಂತ ಭಕ್ತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದರು. ಸಂಸ್ಥೆಯ ಮುಖ್ಯಸ್ಥರಾದ ರಮೇಶ ಅವರು ಮಾತನಾಡಿ , ಸಂತ ಭಕ್ತ ಕನಕದಾಸರ ಜೀವನ ಹಾಗೂ ಅವರು ನಡೆದು ಬಂದ ದಾರಿ ಜೀವನದಲ್ಲಿ ಅಳವಡಿಸಿಕೊಂಡ ಮಾನವವೀಯ ಮೌಲ್ಯಗಳನ್ನು ಇಡೀ ಮಾನವ ಕುಲಕೋಟಿಗೆ ಸಾರಿ ಸಾರಿ ಹೇಳಿದ ಮಹಾನ್ ಸಂತ ಎಂದರು.

ಮುಖ್ಯ ಗುರುಮಾತೆ ಶ್ರೀಮತಿ ಕಾಂತಾ ಬಿಂದುರಾವ ಕುಲಕರ್ಣಿ ಮಾತನಾಡಿ ಭಕ್ತ ಕನಕದಾಸರು ಉಡುಪಿಯ ಶ್ರೀ ಕೃಷ್ಣನ  ದಶ  ನ ಪಡೆದ ಮಹಾನ ಘಟನೆಯನ್ನು ತುಂಬಾ ಸ್ವಾರಸ್ಯಕರವಾಗಿ ಮಕ್ಕಳ ಮನ ಮುಟ್ಟುವಂತೆ ತಿಳಿಸಿದರು.  ಶ್ರೀಮತಿ ಸುನಂದಾ ಕುಲಕರ್ಣಿ ಭಾಗವಹಿಸಿದ್ದರು. ಹಾಗೆ ಈ ಒಂದು ಶುಭ ಕಾರ್ಯಕ್ರಮದಲ್ಲಿ ಶ್ರೀಮತಿ ರೇಖಾ ಶಿರೋಳಕರ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಬಿಳ್ಕೋಡಲಾಯಿತು .

ಈ ಒಂದು ಕಾರ್ಯಕ್ರಮದಲ್ಲಿ ಸಹಶಿಕ್ಷಕಿಯರಾದ ಸವಿತಾ ಭಜಂತ್ರಿ  ರೇಖಾ ಶಿರೋಳಕರ , ಅರಚನಾ ಕನಮಡಿ ,ಭವಾನಿ ಪತ್ತಾರ, ಕವಿತಾ ರಾಠೋಡ, ಮಾಧವಿ ಗಡದಾನಿ, ವಿಷಾಲಾಕ್ಷಮಿ ಅಥಣಿ,  ಮುಂತಾದವರು ಪಾಲ್ಗೊಂಡಿದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

Tuesday, November 28, 2023

29-11-2023 EE DIVASA KANNADA DAILY NEWS PAPER

ಮೂಲ ಜಾನಪದ ಕಲೆಗಳನ್ನು ಪ್ರೊತ್ಸಾಹಿಸಬೇಕು : ಸಿ.ಬಿ.ನಾಟೀಕಾರ

ವಿಜಯಪುರ : ನಮ್ಮ ದೇಶವು ಭವ್ಯ ಪರಂಪರೆ ಇತಿಹಾಸ ಹೊಂದಿದ ದೇಶವಾಗಿದೆ. ಜಗತ್ಪಸಿದ್ಧಿಯಾದ ನಮ್ಮ ಸಂಸ್ಕೃತಿ, ಕಲೆ, ಸಾಹಿತ್ಯ, ಜಾನಪದ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಸಿ.ಬಿ ನಾಟೀಕಾರ ಹೇಳಿದರು.

ಇಂದು ನಗರದ ಬಾಲಕೀಯರ ಸರ್ಕಾರಿ ಪದವ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸಂಭ್ರಮ-50 ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದ ಅವರು, ಜನಪದರು ತಮ್ಮ ದೈನಂದಿನ ಬದುಕಿನಲ್ಲಿ ಜಾನಪದ ಸೊಗಡನ್ನು ಮೈಗೂಡಿಸಿಕೊಂಡಿದ್ದು, ಅವುಗಳಲ್ಲಿ ಪ್ರಮುಖವಾಗಿ ಲಾವಣಿ, ಹಂತಿ ಪದ, ಸಂಪ್ರದಾಯ ಪದ ಸೇರಿದಂತೆ ಅನೇಕ ಜಾನಪದ ಕಲೆಗಳೊಂದಿಗೆ ಸ್ವಚ್ಛಂದದ ಬದುಕನ್ನು ರೂಪಿಸಿಕೊಂಡಿದ್ದಾರೆ. ನಮ್ಮ ಜನಪದರ ಇಂತಹ ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಇಂದಿನ ಯುವ ಜನತೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಗುರುತರ ಹಿರಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಾಂಸ್ಕೃತಿಕÀ ನೆಲಗಟ್ಟಿನ ಬೆಸುಗೆ ಬೆಸೆಯುವ ಅತ್ಯಮೂಲ್ಯವಾದ ಕಲೆಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಉಳಿಸಿಕೊಳ್ಳಬೇಕು ನಶಿಸಿ ಹೋಗುತ್ತಿರುವ ಕಲೆಗಳನ್ನು ಮುಂದಿನ ಯುವ ಪೀಳಿಗೆಗೆ ಕೊಂಡೊಯ್ಯಬೇಕು ಯುವ ಜನತೆಯಲ್ಲಿನ ಸೃಜನಾತ್ಮಕ ಕಲೆಗಳ ಪ್ರಸ್ತುತಪಡಿಸಲು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಇಂತಹ ವೇದಿಕೆ ಕಲ್ಪಿಸಿಕೊಡಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಾಟಕಕಾರರಾದ ಡಿ.ಎಚ್ ಕೊಲ್ಹಾರ ಮಾತನಾಡಿ, ಇಂದಿನ ಯುವಕರು ತಾಂತ್ರಿಕತೆಯೊAದಿಗೆ ಯುವಕರು ನಮ್ಮ ಕಲೆ, ಸಂಸ್ಕೃತಿ ಹಾಗೂ ಪಂರಪರೆ ಉಳಿಯುವಿಕೆಗೆ ಇಂತಹ ಕಾರ್ಯಕ್ರಮ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸಬೇಕು. ನಮ್ಮ ಪೂರ್ವಜರು ಕಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು ಈಗಲೂ ಅದು ಮುಂದುವರೆಯಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಂಚೆ ಗಾಂಧೀ ವೃತ್ತದಿಂದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್‌ವರೆಗೆ ಗೊಂಬೆ ಹಾಗೂ ಡೊಳ್ಳು ಕುಣಿತದೊಂದಿಗೆ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕುಮಾರಿ ರಕ್ಷಂದ ತಿಳಗೊಳ ಅವರಿಂದ ಸುಗಮ ಸಂಗೀತ, ಕುಮಾರಿ ದಿವ್ಯಾ ಭಿಸೆ ಮತ್ತು ದೀಕ್ಷಾ ಭಿಸೆ ಸಮೂಹ ನೃತ್ಯ, ವಿನೋದ ಕಟಗೇರಿ ಜಾನಪದ ಗೀತೆ, ಕುಮಾರಿ ಶುಭನಂ ದಂದರಗಿ ಮತ್ತು ಸಂಗಡಿಗರಿAದ ಕರುಳಿನ ಕೂಗು ನಾಟಕ, ಬಬಲೇಶ್ವರದ ರಾಕೇಶ ಮಾಳಪ್ಪಗೋಳ ಹಾಗೂ ಸಂಗಡಿಗರಿAದ ಗೊಂಬೆ ಕುಣಿತ ಹಾಗೂ ಬಬಲೇಶ್ವರದ ಕಾಶಿಲಿಂಗ ಲೋಕೂರಿ ಅವರಿಂದ ಡೊಳ್ಳು ಕುಣಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ವೇದಿಕೆ ಮೇಲೆ ಉಪನ್ಯಾಸಕಾದ ಎಸ್. ಲೇಸನ್ನವರ, ಮೇತ್ರಿ ಕಲಾವಿದರಾದ ವೀರೇಶ ವಾಲಿ, ಕಾಲಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರದ ಬಿ. ನಾಗರಾಜ ಸ್ವಾಗತಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರ : ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ

ವಿಜಯಪುರ : ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಕಾನೂನು ಬದ್ಧವಾಗಿ ಅಗತ್ಯ ದಾಖಲಾತಿಗಳೊಂದಿಗೆ ದತ್ತು ಸ್ವೀಕಾರ ಕೇಂದ್ರ ಸಂಪರ್ಕಿಸಿ ದತ್ತು ಪಡೆದುಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಆಯೋಜಿಸಲಾದ ಅಂತರರಾಷ್ಟಿçÃಯ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಂಡಿತ ಜವಾಹರಲಾಲ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

 ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಜವಾಬ್ದಾರಿ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಸೃಜನಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು. ಮಕ್ಕಳ ಸುಂದರ ಬಾಲ್ಯವನ್ನು ರೂಪಿಸುವ ಹೊಣೆ ಪ್ರತಿ ಪೋಷಕ-ಪಾಲಕರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರಿಗೆ ದೇಶದ ಆಸ್ತಿಯನ್ನಾಗಿಸಬೇಕು. ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು. ದೇಶದ ಸಂಪದ್ಭರಿತ ಸಂಸ್ಕೃತಿ ಹಿರಿಮೆ ಗರಿಮೆ ಕುರಿತು ಬಾಲ್ಯದಿಂದಲೇ ಮಕ್ಕಳಲ್ಲಿ ಬೆಳೆಸಬೇಕು ಎಂದು ಹೇಳಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟಲು ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಅರಿವು ಮತ್ತು ಜಾಗೃತಿ ಅಭಿಯಾನ ಹಲವು ಇಲಾಖೆಗಳ ಮೂಲಕ ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರತಿಯೊಬ್ಬರು ಆದ್ಯತೆ ನೀಡಬೇಕು. ಹೆಣ್ಣು-ಗಂಡು ಎಂಬ ಭೇಧ ಮಾಡದೇ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರವು ಸಹ ಹಲವು ಯೋಜನೆಗಳನ್ನು ಜಾರಿಗೊಳಿಸಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಮಕ್ಕಳ ಕಲ್ಯಾಣಕ್ಕಾಗಿ, ಹಕ್ಕಳ ಹಕ್ಕುಗಳ ರಕ್ಷಣೆಗಾಗಿ ವಿವಿಧ ಸಂಘ-ಸAಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಕಾನೂನಾತ್ಮಕ ದತ್ತು ಪ್ರಕ್ರಿಯೆ ಸಾರ್ವಜನಿಕರು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ಬಾಲ ನ್ಯಾಯ ಕಾಯ್ದೆ 2015 ಸೆಕ್ಷನ್ 81ರನ್ವಯ 5 ವರ್ಷಗಳವರೆಗೆ ಸೆರೆಮನೆ ವಾಸದೊಂದಿಗೆ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾಗಿದ್ದಲ್ಲಿ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ ಮಾಡಬಹುದಾಗಿದ್ದು, ಕಾನೂನು ಬಾಹಿರವಾಗಿ ಮಕ್ಕಳನ್ನು ಸಾಕಿಕೊಳ್ಳುವುದು ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಅವರು ಮನವಿ ಮಾಡಿಕೊಂಡರು. 

ಈ ಸಂದರ್ಭದಲ್ಲಿ ಇಂಡಿಯಾ ವರ್ಲ್ಡ ರೆಕಾರ್ಡ್ ಪ್ರಶಸ್ತಿ ಪಡೆದ ಯಂಗ್ ಸೂಪರ್ ಟ್ಯಾಲೆಂಟೆಡ್ ಧಿತಿ ಹಣಮಂತ ಶಿರಶ್ಯಾಡ ಅವರಿಗೆ ಸನ್ಮಾನಿಸಲಾಯಿತು. 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಾಲಮಂದಿರದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ವಿಕಲಚೇತನರ ಅಧಿಕಾರಿ ರಾಜಶೇಖರ ಧೈವಾಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಬಸವರಾಜ ಜಗಳೂರ, ವಿಜಯಪುರ ಗ್ರಾಮೀಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮ್ಯಾಗೇರಿ, ನಗರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ದೀಪಾಕ್ಷಿ ಜಾನಕಿ, ಚಡಚಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಅನೀಲ, ಮುದ್ದೇಬಿಹಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಡಾ.ಬಾಬುರಾಜೇಂದ್ರ ನಾಯಿಕ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

 

ವಿಜಯಪುರ: ನಗರದ ವೈದ್ಯ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

 ಬೆಂಗಳೂರಿನಲ್ಲಿ ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ ಆಶ್ರಯದಲ್ಲಿ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಹಮ್ಮಿಕೊಂಡ 68 ನೇ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವೈದ್ಯಕೀಯ ಕ್ಷೇತ್ರದ ಸಾಧನೆಗೆ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ಜಸ್ಟೀಸ್ ಸಂತೋಷಕುಮಾರ ಹೆಗಡೆ, ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಡಾ.ಸಿ ಎನ್ ಮಂಜುನಾಥ್, ನಿವೃತ್ತ ಪೊಲೀಸ್ ಅಧಿಕಾರಿ ಟೈಗರ್ ಅಶೋಕ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದ ಸಂಘಟಕರು ಶ್ರವಣ ಲಕ್ಷ್ಮಣ ಹಾಗೂ ಇನ್ನಿತರ ಪ್ರಮುಖರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

Monday, November 20, 2023

21-11-2023 EE DIVASA KANNADA DAILY NEWS PAPER

ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ :ಮುಖ್ಯಮಂತ್ರಿ ಸಿದ್ದರಾಮಯ್ಯ


ಈ ದಿವಸ ವಾರ್ತೆ

ವಿಜಯಪುರ, ನವೆಂಬರ್ 20 : ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ  ಬ್ಯಾಂಕುಗಳಲ್ಲಿಯೇ  ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅಖಿಲ ಬಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.


ಸಹಕಾರಿ  ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೇ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ. ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಕ್ಕರೆ ವ್ಯವಸಾಯ ಮಾಡಲು ಅನುಕೂಲವಾಗಿ ಉತ್ಪಾದನೆಯೂ ಹೆಚ್ಚಾಗಲಿದೆ ಎಂದರು. ಸರ್ಕಾರ ಒಂದು ವರ್ಷಕ್ಕೆ 1200 ಕೋಟಿ ರೂ.ಗಳನ್ನು ಹಾಲು ನೀಡು ಕ್ಷೀರ ಭಾಗ್ಯ ಕಾರ್ಯಕ್ರಮಕ್ಕೆ ಖರ್ಚು ಮಾಡುತ್ತಿದೆ. ಹಿಂದೆ  ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲವನ್ನು ಮನ್ನಾ ಮಾಡಲು 50 ಸಾವಿರದವರಗೆ ಸಂಪೂರ್ಣ ಮನ್ನಾ  ಮಾಡಲಾಯಿತು. ಹೀಗೆ ಮನ್ನಾ ಮಾಡದ್ದರಿಂದ ಸಹಕಾರಿ ಸಂಘಗಳು ಹಾಗೂ ಸಹಕಾರ  ಬ್ಯಾಂಕುಗಳಿಗೆ ಶಕ್ತಿ ಬರಲು ಸಾಧ್ಯವಾಯಿತು ಎಂದರು.

ರೈತರಿಗೆ ಸಾಲ ನೀಡಲು  ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ನವರಿಗೆ ಕೂಡಲೇ ಪತ್ರ

ನಮ್ಮ ಸರ್ಕಾರ ಬಜೆಟ್ ಮಂಡಿಸಿದಾಗ ಜೀರೋ ಪರ್ಸೆಂಟ್ ಸಾಲವನ್ನು 3 ರಿಂದ 5 ಲಕ್ಷದವರೆಗೆ ಏರಿಸುವ ಕೆಲಸ ಮಾಡಿದ್ದೇವೆ.  ರೈತರಿಗೆ ಸಾಲ ನೀಡಬೇಕೆಂದು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ನವರಿಗೆ ಕೂಡಲೇ ಪತ್ರ ಬರೆಯುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ 3 ಲಕ್ಷದವರೆಗೆ ಶೇ. 3 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಈಗ ಅದನ್ನು ಬಡ್ಡಿ ರಹಿತವಾಗಿ 3-5 ಲಕ್ಷದವರೆಗೆ ಸಾಲ ನೀಡುವ ಕೆಲಸ ಮಾಡಲಾಗಿದೆ. ಶೇ 3 ರಷ್ಟು  ಬಡ್ಡಿಯನ್ನು 15 ಲಕ್ಷ ಆಗುವವರೆಗೆ ಮಾತ್ರ ನೀಡಬೇಕು.

ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಬ್ಯಾಂಕುಗಳು  ಲಾಭದಾಯಕವಾಗಿ ನಡೆಯುತ್ತವೆ

ಯಾವುದೇ  ಬ್ಯಾಂಕಿನಲ್ಲಿ ಎಲ್ಲರೂ ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಅದು ಲಾಭದಾಯಕವಾಗಿ ನಡೆಯುತ್ತದೆ.  ಸ್ವಾರ್ಥ ಬಿಟ್ಟು ಸೇವೆ ಮಾಡುವ ಕ್ಷೇತ್ರವಿದು ಎಂದರು.  ಆ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ನಾಯಕತ್ವ ಬೆಳೆಸಿಕೊಳ್ಳುವ ಅವಕಾಶ ದೊರಯುತ್ತದೆ. ವಿಜಯಪುರ ಡಿಸಿಸಿ ಬ್ಯಾಂಕ್ ಪ್ರಾರಂಭವಾಗಿ 105 ವರ್ಷಗಳಾಗಿರುವ ಸ್ಮರಾಣಾರ್ಥ 15-16 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟಿರುವುದರ ಅರ್ಥ ಬ್ಯಾಂಕು ಆರ್ಥಿಕವಾಗಿ ಸುಸ್ಥಿರವಾಗಿರುವುದರ ದ್ಯೋತಕ ಎಂದರು.  

ಸಹಕಾರಿ ತತ್ವದ ಮೇಲೆ ಜಾಗೃತಿ, ಸಮಾಜದಲ್ಲಿನ ಬಡ ಬಡತನ, ಅಸಮಾನತೆ ಹೋಗಲಾಡಿಸುವ ಪ್ರಯತ್ನ ಮಾಡಬೇಕು  ನಮ್ಮ ಸರ್ಕಾರ ಅಸಮಾನತೆ ತೊಲಗಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಶಕ್ತಿ  ಯೋಜನೆಯಡಿ 1 ಕೋಟಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಸಣ್ಣ ಪುಟ್ಟ ದೋಷಗಳ ಹೊರತಾಗಿಯೂ  ನೂರಕ್ಕೆ 90 ಭಾಗ ಬಡವರಿಗೆ, ಮಹಿಳೆಯರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಈ ಕಾರ್ಯಕ್ರಮ  ರೂಪಿಸಿ ಆರ್ಥಿಕ ಶಕ್ತಿಯನ್ನು ತುಂಬಲಾಗಿದೆ. ಸಹಕಾರ ಕ್ಷೇತ್ರ ಹೇಗೆ ಜಾತಿ ಧರ್ಮಗಳಿಂದ ಹೊರತಾಗಿದೆಯೋ ಅದೇ ರೀತಿ ನಮ್ಮ ಕಾರ್ಯಕ್ರಮಗಳು ಎಲ್ಲಾ ಜಾರಿ ಧರ್ಮಗಳ ಜನರಿಗೆ, ಮೇಲ್ವರ್ಗದ ಬಡವರಿಗೂ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ.

ಬರಗಾಲವನ್ನು ಸಮರ್ಥವಾಗಿ ನಿಭಾಯಿಸುತ್ತೇವೆ

12 ರಾಜ್ಯಗಳಲ್ಲಿ ಬರಗಾಲವಿದ್ದು, ಕರ್ನಾಟಕದಲ್ಲಿಯೂ ಕೂಡ 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಬರ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸುವ ಕೆಲಸವನ್ನು ನಮ್ಮ ಸಂಸದರು ಮಾಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗಬಾರದೆಂದ ಡಿಸಿ, ಸಿಇಒ ಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಬಳಿ 800 ಕೋಟಿ ರೂ.ಗಳು ಲಭ್ಯವಿದೆ. ಮೇವಿಗೆ, ಉದ್ಯೋಗ ನೀಡಲು, ಕುಡಿಯುವ ನೀರಿಗೆ ರಾಜ್ಯ ಸರ್ಕಾರ ಈಗಾಗಲೇ 800 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.  ಬರಗಾಲವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತದೆ ಎಂದು ಬರವಸೆ ನೀಡಿದರು.

ಸಹಕಾರಿ ರಂಗ ಜಾತಿ ಧರ್ಮರಹಿತ ಕ್ಷೇತ್ರ:

ಸ್ವಾತಂತ್ರ್ಯಪೂರ್ವದಿಂದಲೂ ಸಹಕಾರಿ ಕ್ಷೇತ್ರ ಬೆಳೆಯುತ್ತಾ ಬಂದಿದೆ. ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರು ಸಹಕಾರ ಸಂಘ ಪ್ರಾರಂಭಿಸಿದರು, ಇಂದು ರಾಜ್ಯದಲ್ಲಿ 45600 ಸಹಕಾರ ಸಂಘಗಳಿದ್ದು, ಭಾರತದಲ್ಲಿ ಸುಮಾರು 8.50 ಲಕ್ಷ ಸಹಕಾರ ಸಂಘಗಳಿದ್ದು, 31 ಕೋಟಿ ಸದಸ್ಯರಿದ್ದಾರೆ. ಸಹಕಾರಿ ಕ್ಷೇತ್ರದ ದೇಶದಾದ್ಯಂತ ವ್ಯಾಪಕವಾಗಿ ಬೆಳೆದಿರುವುದಕ್ಕೆ ಇದೇ ಸಾಕ್ಷಿ. ಈ ಬೆಳವಣಿಗೆ ದೇಶದ ಆರ್ಥಿಕ  ಹಾಗೂ ಸಾಮಾಜಿಕ ಬೆಳವಣಿಗೆಯನ್ನೂ ಬಿಂಬಿಸುತ್ತದೆ.  ಸಹಕಾರಿ ರಂಗ ಒಂದು ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಬದುಕಿನ ಎಲ್ಲ ಕ್ಷೇತ್ರಗಳಲ್ಲಿ ಸಹಕಾರ ರಂಗ ವ್ಯಾಪಿಸಿಕೊಂಡಿದೆ.  ಸಹಕಾರಿ ರಂಗದ ಅಭಿವೃದ್ಧಿ , ರಾಜ್ಯ ಮತ್ತು ದೇಶದ ಜಿಡಿಪಿಯ ಬೆಳವಣಿಗೆಯ ಮೇಲೂ ಪರಿಣಾಮವನ್ನು ಬೀರುತ್ತದೆ. ದೇಶದ ಆಂತರಿಕ ಕೊಡುಗೆಯ ಹೆಚ್ಚಳದಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ದೇಶದಲ್ಲಿ ಅನೇಕ ಜಾತಿ ಧರ್ಮಗಳಿವೆ. ಆದರೆ ಸಹಕಾರಿ ರಂಗಕ್ಕೆ ಯಾವ ಜಾತಿ ಧರ್ಮಗಳ ಸೋಂಕು ಇಲ್ಲ.  ಜಾತಿ ರಹಿತವಾದ ಧರ್ಮರಹಿತವಾದ ಕ್ಷೇತ್ರವೆಂದರೆ ಸಹಕಾರಿ ಕ್ಷೇತ್ರ ಎಂದರು.

ದಲಿತರು, ಮಹಿಳೆಯರು ಸಹಕಾರಿ ಸದಸ್ಯರಾಗಲು ಪ್ರೋತ್ಸಾಹ:

ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಸಹಕಾರ ಸಂಘದ ಸದಸ್ಯರಾಗಲು ಸರ್ಕಾರವೇ ಜನರ ಪರವಾಗಿ ಶೇರು ಮೊತ್ತವನ್ನು ಭರಿಸಲಾಗಿತ್ತು. ಈ ಕಾರ್ಯಕ್ರಮ ಇಂದಿಗೂ ಮುಂದುವರೆಯುತ್ತಿದೆ. ಎಲ್ಲ ದಲಿತರು ಹಾಗೂ ಮಹಿಳೆಯರು ಸಹಕಾರ ಸಂಘದ ಸದಸ್ಯರಾಗಬೇಕು. ಸರ್ಕಾರದ ಸಹಾಯದಿಂದಾಗಿ ದಲಿತರು ಹಾಗೂ ಮಹಿಳೆಯರು ಹಾಲು ಸಹಕಾರ ಸಂಘದಲ್ಲಿ ಸದಸ್ಯರಾಗುತ್ತಿದ್ದಾರೆ. ನಮ್ಮ ಸರ್ಕಾರ ಹಾಲಿನ ಪ್ರತಿ ಲೀ.ಗೆ ರೂ. 5 ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈಗ ಪ್ರೋತ್ಸಾಹ ಧನವನ್ನು ಪ್ರತಿ ಲೀ.ಗೆ 5 ರೂ. ನಿಂದ ಹಿಡಿದು 8 ರೂ.ಗೆ ಹೆಚ್ಚಳ ಮಾಡಿ ನೀಡಲಾಗುತ್ತಿದ್ದು, ಈ ಮೊತ್ತ ರೈತರಿಗೆ ನೇರವಾಗಿ ತಲುಪುತ್ತಿದೆ ಎಂದರು.

ಹಾಲು ಉತ್ಪಾದಕರ ಸಹಕಾರ ಸಂಘದವರು ಹಾಲು ಉತ್ಪಾದನೆ ಜಾಸ್ತಿಯಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಸಹಾಯ ಮಾಡಬೇಕೆಂಬ ಬೇಡಿಕೆಯನ್ನು ಸಲ್ಲಿಸಿತ್ತು. ಆದ್ದರಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಹಾಲು ನೀಡುವ ಯೋಜನೆಯನ್ನು ಹಮ್ಮಿಕೊಂಡು , ಹಾಲು ಉತ್ಪಾದಕರ ಸಮಸ್ಯೆ ಬಗೆಹರಿಸುವ ಜೊತೆಗೆ ಮಕ್ಕಳ ಪೌಷ್ಟಿಕತೆ ಹೆಚ್ಚಳಕ್ಕೂ ಅನುಕೂಲ ಕಲ್ಪಿಸಲಾಯಿತು ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


Sunday, November 19, 2023

ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ : ಹಿರಿಯ ಪತ್ರಕರ್ತ ಕೆ.ಎನ್. ರಮೇಶ

ಈ ದಿವಸ ವಾರ್ತೆ

ವಿಜಯಪುರ : ಪ್ರಶಸ್ತಿ ಕೇಳಿ ಪಡೆಯುವುದಾಗಬಾರದು. ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ ನೀಡುತ್ತದೆ ಎಂದು ಹಿರಿಯ ಪತ್ರಕರ್ತ ಕೆ.ಎನ್. ರಮೇಶ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಪತ್ರಿಕಾ ಭವನದಲ್ಲಿ ಭಾನುವಾರ ರಾಜ್ಯ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಆದರೆ ಪ್ರಶಸ್ತಿಗಳು ಅಷ್ಟು ಸುಲಭವಾಗಿ ದೊರಕುವುದಿಲ್ಲ. ಪ್ರಶಸ್ತಿ ಲಭಿಸಿದರೂ ಅದರ ಹಿಂದೆ ಅವರ ಸಾಧನೆ ಇದ್ದೇ ಇರುತ್ತದೆ ಎಂದರು.

ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಫೀ ಭಂಡಾರಿ ಸನ್ಮಾನ ಸ್ವೀಕರಿಸಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಾಧನೆಯನ್ನು ಪರಿಗಣ ಸಿ ರಾಜ್ಯ ಸರಕಾರ ನನಗೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು, ಸಂತಸವನ್ನುಂಟು ಮಾಡಿದೆ ಎಂದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಸೀತಾರಾಮ ಕುಲಕರ್ಣಿ, ಷಡಕ್ಷರಿ ಕಂಪೂನವರ ಸನ್ಮಾನ ಸ್ವೀಕರಿಸಿ, ತಮಗೆ ಗೌರವ ಸನ್ಮಾನ ನೀಡಿದ ಕಾನಿಪ ಸಂಘಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಕಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸಿ, ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವಾಗ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಎರಡನ್ನೂ ಪರಿಗಣ ಸುತ್ತಿದೆ. ಆದರೆ ವಯೋಮಿತಿಯಲ್ಲಿಯೂ ಸಡಿಲಿಕೆಯಾಗಬೇಕು ಎಂದರು.

ಹಿರಿಯ ಪತ್ರಕರ್ತ ಸುಶಿಲೇಂದ್ರ ನಾಯಕ, ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಫಿರೋಜ್ ರೋಜಿನದಾರ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿಗಳಾದ ರಾಹುಲ ಆಪ್ಟೆ, ದೀಪಕ ಶಿಂತ್ರೆ, ಸಂಘದ ರಾಜ್ಯ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ಐಎಫ್ ಡಬ್ಲೂಜೆ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಜಿಲ್ಲಾ ಕಾರ್ಯಕಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಗುರುರಾಜ ಗದ್ದನಕೇರಿ, ಸದಸ್ಯರಾದ ಗೋಪಾಲ ಕಣ ಮನಿ, ಇಸ್ಮಾಯಿಲ್ ಮುಲ್ಲಾ, ಮಾಧವರಾವ್ ಕುಲಕರ್ಣಿ ಮತ್ತಿತರರಿದ್ದರು.

ಸಂಘದ ಸಲಹಾ ಸಮಿತಿ ಸದಸ್ಯ ಅಶೋಕ ಯಡಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವೇಂದ್ರ ಹೆಳವರ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಉಳ್ಳಾಗಡ್ಡಿ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


20-11-2023 EE DIVASA KANNADA DAILY NEWS PAPER

Friday, November 17, 2023

18-11-2023 EE DIVASA KANNADA DAILY NEWS PAPER

ನ.20ರಂದು ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ಉದ್ಘಾಟನೆ

ವಿಜಯಪುರ : ಅಖಿಲ ಭಾರತ ಸಹಕಾರ ಸಪ್ತಾಹದ 70ನೇ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಶತಮಾನೋತ್ಸವ ಭವನ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಮತ್ತು ಸಹಕಾರ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಸಮಾರಂಭದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.

ನಗರದ ಕೇಂದ್ರ ಸಹಕಾರಿ ಬ್ಯಾಂಕ್‍ನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೆಂಬರ್ 20 ರಂದು ನಡೆಯು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲೆಯ ಡಿಸಿಸಿ ಸಂಘಗಳ ಸದಸ್ಯರು, ವಿವಿಧ ಸಹಕಾರಿ ಸಂಘಗಳ ಸಹಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ವೈಯಕ್ತಿಕವಾಗಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಬ್ಯಾಂಕಿನ ಎಲ್ಲಾ ನಿರ್ದೇಶಕರು, ಸದಸ್ಯರು ಸೇರಿ ಸಮಾರೋಪ ಸಮಾರಂಭದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಮಾರಂಭದಲ್ಲಿ ಸಹಕಾರಿ ಇಲಾಖೆ ಎಲ್ಲಾ ಹಿರಿಯ, ಮಾಜಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ ಎಲ್ಲರಿಗಿಂತಲು ಮೊದಲು ರಾಜ್ಯದಲ್ಲಿ ಸಹಕಾರಿ ಚಳುವಳಿ ಪ್ರಾರಂಭವಾದರೂ ಮಹಾರಾಷ್ಟ್ರ, ಗುಜರಾತ್ ಸಹಕಾರಿ ರಂಗದಲ್ಲಿ ಮುಂದಿದೆ. ಮಹಾರಾಷ್ಟ್ರ, ಗುಜರಾತ್ ಮಾದರಿಯಲ್ಲಿ ರಾಜ್ಯಕ್ಕೆ ಪೆÇ್ರೀತ್ಸಾಹ ಸಿಗಬೇಕು ಎನ್ನುವುದು  ಎಲ್ಲಾ ಸಹಕಾರಿಗಳ ಮಹದಾಸೆಯಾಗಿದೆ.  ನಮ್ಮಲ್ಲೂ ಸಹಕಾರ ಪೆÇ್ರೀತ್ಸಾಹ ನೀಡಿದರೆ ಜನರಿಗೆ ಇನಷ್ಟು ಆಸಕ್ತಿ ಮೂಡಿ ಸಹಕಾರಿ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಇದಕ್ಕೆ ಪೂರಕವಾಗಿ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ಸಚಿವರುಗಳಿಗೆ ಎಲ್ಲಾ ಸಹಕಾರಿಗಳು ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ನಿರ್ದೇಶಕರು ಸೇರಿ ಮನವಿ ಮಾಡಿಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು.

ಇದು ಪಕ್ಷಾತೀತ ಸಮಾರಂಭ. ಕೇವಲ ಸಹಕಾರಿ ರತ್ನಗಳಿಗೆ ಪ್ರಶಸ್ತಿ, ಪೆÇ್ರೀತ್ಸಾಹ ನೀಡುವ  ಕಾರ್ಯಕ್ರಮ ಅμÉ್ಟೀ ಅಲ್ಲ. ಜೊತೆಗೆ ಸಹಕಾರಿ ತತ್ವಕ್ಕೆ  ಶಕ್ತಿ ತುಂಬಬೇಕು ಎನ್ನುವ ಪ್ರಯತ್ನವಾಗಿದೆ. ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕಟ್ಟಡಗಳು ಉದ್ಘಾಟನೆ ನೆರವೇರಲಿವೆ. ಸಮಾರಂಭಕ್ಕೆ  ಅಂದಾಜು ಮೂವತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಸಿದ್ಧತೆಗಳ ಪರಿಶೀಲನೆ : ನವೆಂಬರ್ 20 ರಂದು ನಡೆಯುವ ಸಮಾರಂಭಕ್ಕೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಹಕಾರ ಸಚಿವರು ಸೇರಿದಂತೆ ವಿವಿಧ ಗಣ್ಯರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆ ವಿನ್ಯಾಸ, ಆಸನಗಳ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳ ಕುರಿತು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಪರಿಶೀಲನೆ ನಡೆಸಿದರು.


Thursday, November 16, 2023

17-11-2023 EE DIVASA KANNADA DAILY NEWS PAPER

ನ.18ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಿಜಯಪುರ : 110 ಕೆವಿ ದೇವರಹಿಪ್ಪರಗಿ-ಸಿಂದಗಿ ವಿದ್ಯುತ್ ಪ್ರಸರಣ  ಜೋಡಿ ಮಾರ್ಗದಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ 33 ಕೆವಿ ಗೋಲಗೇರಿ ಹಾಗೂ 33 ಕೆವಿ ಕಲಕೇರಿ ಮತ್ತು 11 ಕೆವಿ ಬ್ಯಾಕೋಡ ಹಾಗೂ 11 ಕೆವಿ ಬಂದಾಳ ಐಪಿ ಮಾರ್ಗಗಳಲ್ಲಿ  ನವೆಂಬರ್ 18ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ. 


ಅತೀಸಾರ ಬೇಧಿಯಿಂದಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ : ಡಾ.ಬಸವರಾಜ ಹುಬ್ಬಳ್ಳಿ

ವಿಜಯಪುರ : ಅತೀಸಾರ ಭೇದಿಯಿಂದ ಉಂಟಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅತೀಸಾರ ಭೇದಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ತೀವ್ರಗೊಂಡ ಅತೀಸಾರ ಬೇಧಿ ನಿಯಂತ್ರಣ ಪಾಕ್ಷಿಕ (ಐಡಿಸಿಎಫ್) ಕಾರ್ಯಕ್ರಮ ಅನುಷ್ಟಾನ ಮಾಡಲಾಗುತ್ತಿದೆ. ಇಲಾಖೆಯ ವೈದ್ಯಾಧಿಕಾರಿಗಳು ನರ್ಸಿಂಗ್ ಅಧಿಕಾರಿಗಳು ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಅತೀಸಾರ ಬೇಧಿಯಿಂದಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ  ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತೀವ್ರತರ ಅತೀಸಾರ ನಿಯಂತ್ರಣ ಪಾಕ್ಷಿಕ, ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಹಾಗೂ ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯೆ ಕಾರ್ಯಕ್ರಮದ ಬಗ್ಗೆ ಆಶಾ ಮತ್ತು ಪಿ.ಹೆಚ್.ಸಿ.ಓ ಅವರು ಮನೆ ಮನೆಗೆ ತೆರಳಿ ನ್ಯೂಮೊನಿಯಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮಕ್ಕಳಲ್ಲಿ ಶ್ವಾಸಕೋಶದ ಸೋಂಕು, ಕಫ ಗಟ್ಟುವಿಕೆಯ ಲಕ್ಷಣಗಳು ಕಂಡು ಬಂದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕರು ಮಾತನಾಡಿ, ನವಜಾತ ಶಿಶು ಕಾರ್ಯಕ್ರಮ ಬಹು ಮುಖ್ಯವಾದದ್ದು, ಶಿಶು ಮರಣ ದರ ಕಡಿಮೆ ಮಾಡಲು ಇದೊಂದು ಪ್ರಮುಖ ಅಸ್ತ್ರವಾಗಿದೆ. ಬಾಲ್ಯದಿಂದ 7 ದಿನದೊಳಗಾಗಿ ನವಜಾತ ಶಿಶುಗಳಿಗೆ ತೊಂದರೆಯಾದರೆ ತಕ್ಷಣ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಕೆ.ಡಿ.ಗುಂಡಬಾವಡಿ ಅವರು ಮಾತನಾಡಿ, ಈ ಕಾರ್ಯಕ್ರಮ ಸಮರ್ಪಕ ಅನುಷ್ಠಾನಕ್ಕೆ ಇಲಾಖೆಯ ಸಮನ್ವಯತೆ ಅಗತ್ಯವಾಗಿದ್ದು,  ತೀವ್ರತರ ಅತೀಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ರೂಪಿಸಿ ಅನುಷ್ಟಾನಕ್ಕೆ ತರಲಾಗುತ್ತಿದ್ದು, ಅತೀಸಾರ ಭೇದಿಯಿಂದ ಅಪೌಷ್ಟಿಕತೆ, ನಿರ್ಜಲೀಕರಣ ಮತ್ತು ಧೀರ್ಘಾವಧಿ ಕಾಯಿಲೆಗಳಿಗೆ ಶಿಶುಗಳು ತುತ್ತಾಗುತ್ತಾರೆ. ಅತೀಸಾರ ಬೇಧಿಗೆ ಪ್ರಮುಖವಾಗಿ ಅನೈರ್ಮಲ್ಯ, ಕಲುಷಿತ ನೀರು, ಸ್ವಚ್ಛತೆಯ ಕೊರತೆ, ಅನಕ್ಷರತೆ ಕಾರಣಗಳಾಗಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಿ ಅರಿವು ಮೂಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.  

ಈ ಕಾರ್ಯಕ್ರಮದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಡಾ. ಇಕಲು ರಾಠೋಡ,  ಜಿಲ್ಲಾ ಆಯುಷ್ ಅಧಿಕಾರಿ ಡಾ.ಆರ್.ಎಸ್. ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪರುಶುರಾಮ ಹಿಟ್ನಳಿ,  ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಬಾಗವಾನ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಮತ್ತು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಮಹಾದೇವ ನಿಲಂಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.  

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


ಪಂಢರಾಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

ವಿಜಯಪುರ : ಮಹಾರಾಷ್ಟ್ರದ ಪಂಢರಪುರದಲ್ಲಿ ದಿನಾಂಕ: 19-11-2023 ರಿಂದ 25-11-2023ರವರೆಗೆ ನಡೆಯುವ ಕಾರ್ತಿಕ ಏಕಾದಶಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ವ್ಯವ್ಯಸ್ಥೆ ಕಲ್ಪಿಸಲಾಗಿದೆ. ಜಾತ್ರೆಯ ಅಂಗವಾಗಿ ವಿಜಯಪುರ ವಿಭಾಗದ ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು.

ಒಂದೇ ಗುಂಪಿನಿಂದ ಪ್ರಾಯಾಣಿಸುವ ಕನಿಷ್ಠ 55 ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವಸ್ಥಳದಿಂದಲೇ ನೇರವಾಗಿ ಪಂಢರಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಬಸ್ ನಿಲ್ದಾಣ ವಿಜಯಪುರ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: 7760992258, ಘಟಕ ವ್ಯವಸ್ಥಾಪಕರು ವಿಜಯಪುರ-1: ಮೊ: 7760992263, ವಿಜಯಪುರ-2 ಮೊ: 7760992264, ವಿಜಯಪುರ-3 ಮೊ: 7760914008, ಇಂಡಿ ಮೊ: 7760992265, ಸಿಂದಗಿ ಮೊ: 7760992266, ಮುದ್ದೇಬಿಹಾಳ ಮೊ: 7760992267, ತಾಳಿಕೋಟ ಮೊ: 7760992268, ಬಸವನಬಾಗೇವಾಡಿ ಮೊ: 7760992269, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖ್ಯೆ 08352-251344 ಗೆ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಪದವಿ ಪ್ರಶಸ್ತಿಗಳಿಗಿಂತ ಸಾಧನೆಯೇ ಸರ್ವಶ್ರೇಷ್ಠ: ನ್ಯಾಯವಾದಿ ಶ್ರೀಧರ ಕುಲಕರ್ಣಿ

ವಿಜಯಪುರ: ಜೀವನದಲ್ಲಿ ಹಣ ಅಧಿಕಾರ ಅಂತಸ್ತು ಪದವಿ ಪ್ರಶಸ್ತಿಗಳಿಗಿಂತ ಫಲಾಪೇಕ್ಷೆ ಇಲ್ಲದ ಸತತ ಸಾಧನೆಯೇ ಸರ್ವಶ್ರೇಷ್ಠ ಎಂದು ಖ್ಯಾತ ಹಿರಿಯ ನ್ಯಾಯವಾದಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ ನುಡಿದರು.

ನಗರದ ಮನಗೂಳಿ ರಸ್ತೆಯ ಬಾಲಕಿಯರ ಬಾಲಮಂದಿರದಲ್ಲಿ ಏರ್ಪಡಿಸಿದ್ದ ದೀಪಾವಳಿ ಸಂಭ್ರಮ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ನ್ಯಾಯವಾದಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಧರ ಕುಲಕರ್ಣಿಯವರಿಗೆ ಏರ್ಪಡಿಸಿದ ಸನ್ಮಾನ್ಯ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಫಲಾಪೇಕ್ಷೆ ಇಲ್ಲದ ಸೇವೆ ಮಾಡಿದರೆ ಪದವಿ ಪ್ರಶಸ್ತಿ ತಾನಾಗಿಯೇ ಲಭಿಸುತ್ತವೆ. ಅವುಗಳ ಹಿಂದೆ ನಾವು ಹೋಗದೆ ಸದ್ದಿಲ್ಲದೆ ಸಮರ್ಪಣಾಭಾವದಿಂದ ಸೇವೆ ಮಾಡಬೇಕು. ಅದು ಭಗವಂತನಿಗೂ ಇಷ್ಟವಾಗುವದಲ್ಲದೇ ಆತ್ಮತೃಪ್ತಿಯನ್ನು ನೀಡುತ್ತದೆ. ಮಕ್ಕಳು ತಮ್ಮ ಪ್ರತಿಭೆ ಸ್ವ ಸಾಮಥ್ರ್ಯವನ್ನು ಗುರುತಿಸಿಕೊಂಡು ಆಯಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಬೇಕು ಹಾಗೂ ಕೀರ್ತಿವಂತರಾಗಬೇಕೆಂದು ಹಾರೈಸಿ.  ತಮಗೆ ದೊರೆತ ಪ್ರಶಸ್ತಿ ಮಕ್ಕಳಿಗೆ ಸಮರ್ಪಿತ ಎಂದರು.

ಉದ್ಘಾಟಕರಾಗಿ ಆಗಮಿಸಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹಾಗೂ ನ್ಯಾಯವಾದಿ ದಾನೇಶ ಅವಟಿ  ಸಸಿಗೆ ನಿರೇರೆದು ಕಾರ್ಯಕ್ರಮ ಉದ್ಘಾಟಿಸಿ ಮಾನವನ ಅಂತರಂಗದಲ್ಲಿ ಹುದುಗಿದ ಪ್ರತಿಭೆಯನ್ನು ಹೊರಗೆಡಹುದೇ ಶಿಕ್ಷಣ. ಅಂತಹ ಒಳ್ಳೆಯ ಶಿಕ್ಷಣ ಸಂಸ್ಕಾರ ಹೊಂದಿ ಜೀವನದಲ್ಲಿ ಮಕ್ಕಳು ಮುಂದೆ ಬರಬೇಕೆಂದು ಕರೆ ನೀಡಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮತ್ತು ನ್ಯಾಯವಾದಿಗಳಾದ ಸೂರ್ಯಕಾಂತ ಬಿರಾದಾರ, ಹಾಗೂ ಯಲ್ಲಪ್ಪ ಈರಕಲ್ ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಹಾಗೂ ದೀಪಾವಳಿ ಸಂಭ್ರಮ ಪ್ರತಿಯೊಬ್ಬರಿಗೂ ಸುಖ ಶಾಂತಿ ನೆಮ್ಮದಿ ತರಲಿ ಎಂದು ಹಾರೈಸಿದರು.

ರೋಹಿಣಿ ದೇಸಾಯಿ, ಜಯಶ್ರಿ ಗುಗ್ಗರಿ, ರೇಣುಕಾ ಕಾಂಬಳೆ, ಲತಾ ಹಿರೇಮಠ, ಈರಮ್ಮ ಶ್ರೀಕಂಡೆ, ವಿದ್ಯಾ ನಾಗೋಡ, ಗೀತಾ ಮಾದರ, ರಾಧಾ ಜಗದಾಳೆ, ಭುವನೇಶ್ವರಿ ಗುಗ್ಗರಿ, ಶೋಭಾ ಸದಲಗಿ, ರೇಣುಕಾ ಪಾಟೀಲ ಉಪಸ್ಥಿತರಿದ್ದರು. ಮಕ್ಕಳಿಂದ ವಿವಿಧ ಹಾಡು ನೃತ್ಯ, ಮನರಂಜನಾ ಕಾರ್ಯಕ್ರಮ ಜರುಗಿದವು.

ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಶ್ರೀಮತಿ ಸುಮಂಗಲಾ ಕರಿಗಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾದ್ಯಾಯಿನಿ ಸರ್ವ ಮಂಗಳ ಹಿರೇಮಠ ನಿರೂಪಿಸಿದರು. ಗೃಹಮಾತೆ ರಂಜಿತಾ ಬೋಳಬಂಡಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


Thursday, November 9, 2023

10-11-2023 EE DIVASA KANNADA DAILY NEWS PAPER

ವಿಜಯಪುರ ಜಿಲ್ಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಿ ; ಇಲ್ಲವಾದಲ್ಲಿ ರಾಜೀನಾಮೆ ನೀಡಿ : ಶಿವಸೇನಾ ಮುಖಂಡ ಸತೀಶ ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಗೆ ಮರುನಾಮಕರಣದ ವಿಚಾರ ಜನರ ಮನಸ್ಸು ಬೇರೆಡೆಗೆ ಸೆಳೆಯುವ ಸರ್ಕಾರದ ಹುನ್ನಾರವಾಗಿದೆ ಎಂದು ಶಿವಸೇನಾ ಮುಖಂಡ ಸತೀಶ ಪಾಟೀಲ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ವಿಜಯಪುರ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿದೆ ಹಾಗೂ ವಿದ್ಯುತ್ ಲೋಡ್ ಶೆಡ್ಡಿಂಗ್ ಜೊತೆಗೆ ಹದಗೆಟ್ಟ ರಸ್ತೆಗಳು, ಕುಡಿಯುವ ನೀರಿನ ಸಮಸ್ಯೆ ಇನ್ನು ಅನೇಕ ಜ್ವಲಂತ ಸಮಸ್ಯೆಗಳು ಜಿಲ್ಲೆಯಲ್ಲಿ ಇರುವ ಸಂದರ್ಭದಲ್ಲಿ ಜನಪರ ಕಾರ್ಯಮಾಡುವುದನ್ನು ಬಿಟ್ಟು ಜಿಲ್ಲೆಯ ನಾಮಕರಣಗಳ ಹಿಂದೆ ಬೆನ್ನು ಹತ್ತಿರುವ ಸರ್ಕಾರದ ಈ ಮನೋಧೋರಣೆಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.

ವಿಜಯಪುರದಲ್ಲಿ ಮೂಲಭೂತ ಸೌಕರ್ಯಗಳನ್ನು ಜನರಿಗೆ ಕಲ್ಪಿಸಿ ಸುಂದರ ನಗರವನ್ನಾಗಿ ಮಾಡುವಲ್ಲಿ ಶ್ರಮಿಸದಿರುವುದು ವಿಷಾದದ ಸಂಗತಿ. ಇದಕ್ಕೆ ರಾಜಕಾರಣಿಗಳ ಇಚ್ಚಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಇಂತಹ ತಂತ್ರಜ್ಞಾನದ ಯುಗದಲ್ಲಿ ಅಭಿವೃದ್ಧಿ ಎನ್ನುವುದು ವಿಜಯಪುರ ಜಿಲ್ಲೆಗೆ ಮರಿಚೀಕೆಯಾಗಿದೆ. ಸರ್ಕಾರವು ಎಲ್ಲಾ ರಂಗಗಳಲ್ಲಿ ಅಂದರೆ ಶಿಕ್ಷಣ, ಆರೋಗ್ಯ, ಮೂಲಭೂತ ಸೌಲಭ್ಯ , ನಿರುದ್ಯೋಗ ಸಮಸ್ಯೆಗಳು ಎಂದಿನಂತೆ ಮುಂದೆ ಸಾಗಿವೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯವನ್ನಾಳುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಹೆಸರಿಗೆ ಸ್ಥಾನವನ್ನು ಅಲಂಕರಿಸಿ ಬೆದರುಗೊಂಬೆಯಂತೆ ಕಾರ್ಯಮಾಡುತ್ತಿರುವುದು ರಾಜ್ಯದ ಮುಗ್ದ ಜನತೆ ಎಲ್ಲವನ್ನು  ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಜನ ಆಕ್ರೋಶಗೊಂಡು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಎರಡು ಮಾತಿಲ್ಲ. ಕೂಡಲೇ ಮಾಡಬೇಕಾದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಮಾಡಿ ತಮ್ಮ, ಮಾನ ಮರ್ಯಾದೆ ಹಾಗೂ ಅಧಿಕಾರದ ಗೌರವವನ್ನು ಕಾಯ್ದುಕೊಳ್ಳಬೇಕು. ಇಲ್ಲವಾದಲ್ಲಿ ಕೂಡಲೇ ರಾಜಿನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


Wednesday, November 8, 2023

ದೇಶಕ್ಕಾಗಿ ನಾವು ಎಂಬ ಮನೋಭಾವನೆ ಬೆಳೆಸಿಕೊಳ್ಳಬೇಕು: ಗೋವಿಂದ ಕಾರಜೋಳ ಕರೆ

ವಿಜಯಪುರ: ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ಪ್ರತಿಯೊಬ್ಬ ಭಾರತೀಯನು ಯಾವುದೇ ಜಾತಿ-ಮತ ಪಂಥಗಳನ್ನು ಮೀರಿ ರಾಷ್ಟ್ರಪ್ರೇಮ ಬೆಳೆಸಿಕೊಂಡು, ಒಗ್ಗಟ್ಟಾಗಿ ಸುಭದ್ರ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆ ನೀಡಿದರು.

ಮಂಗಳವಾರ ಜಿಲ್ಲೆಯ ಉಕ್ಕಲಿ ಗ್ರಾಮದ ಬಿಎಲ್‍ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕøತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ ಸರ್ವಧರ್ಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದ ಅವರು, ಜಿಲ್ಲೆಯ ವೀರಯೋಧ ಕಾಶೀರಾಯನ ತ್ಯಾಗಕ್ಕೆ ಬೆಲೆ ಕಟ್ಟಲಾಗಲ್ಲ. ಇಂತಹ ವೀರನಿಗೆ ಜನ್ಮ ನೀಡಿದ ತಂದೆ-ತಾಯಿಗೆ ಎಷ್ಟು ಕೊಂಡಾಡಿದರೂ ಕಡಿಮೆ. ಪುಲ್ವಾಮಾ ದಾಳಿ ಸಂದರ್ಭದಲ್ಲಿ ಶತ್ರುವನ್ನು ಸದೆಬಡೆದು, ವೀರ ಮರಣ ಹೊಂದಿದ ಕಾಶೀರಾಯ ಸೂರ್ಯಚಂದ್ರ ಇರುವರೆಗೂ ಅಜರಾಮರಾಗಿ ಉಳಿಯಲಿದ್ದಾರೆ. ಅವರ ತ್ಯಾಗದ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸುವ-ನೆನಪಿಸುವ ನಿಟ್ಟಿನಲ್ಲಿ ಪುತ್ಥಳಿ ಅನಾವರಣ ಅತಿ ಸ್ತ್ಯುತ್ಯವಾಗಿದೆ. ಕಾಶೀರಾಯನಂತೆ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ದೇಶಕ್ಕಾಗಿ ನಾವು ಏನನ್ನಾದರೂ  ಕೊಡುಗೆ ನೀಡಬೇಕೆಂಬ ಬಾವನೆ ಬೆಳೆಸಿಕೊಳ್ಳಬೇಕು  ಎಂದು ಹೇಳಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮಾತನಾಡಿ, ದೇಶ ಕಾಯುವ ಸೈನಿಕ ಯಾವುದೇ ಒಂದು ಜಾತಿ, ಮತ, ಪಂಥ, ಸಮಾಜದ ರಕ್ಷಣೆಗಾಗಿ ಗಡಿಯಲ್ಲಿ ನಿಲ್ಲುವುದಿಲ್ಲ. ತನ್ನ ಮನೆ, ಸಂಬಂಧಿಕರನ್ನು ದೂರವಾಗಿ ಇಡೀ ದೇಶದ ಜನರು ನೆಮ್ಮದಿಯಿಂದ ಸುರಕ್ಷಿತವಾಗಿರಲಿ ಎಂಬ ಭಾವನೆಯಿಂದ ಗಡಿಯಲ್ಲಿ ಬಿಸಿಲು, ಮಳೆ ಲೆಕ್ಕಿಸದೇ ತನ್ನ ಪ್ರಾಣವನ್ನು ಮುಡುಪಾಗಿಟ್ಟು ದೇಶ ರಕ್ಷಣೆಗೆ ನಿಲ್ಲುತ್ತಾನೆ. ಇಂತಹ ಸೈನಿಕರ ಪ್ರತಿ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡೆಬೇಕು ಎಂದರು.

ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ  ಕೊಲ್ಹಾಪುರದ ಶ್ರೀ ಸಿದ್ದಗಿರಿ ಮಹಾಸಂಸ್ಥಾನ ಕನ್ನೇರಿ ಮಠದ ಕೃಷಿ ಋಷಿ ರಾಷ್ಟ್ರಸಂತ ಜಗದ್ಗುರು ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಗಳು ಉಕ್ಕಲಿ ಯರನಾಳ ಸಂಸ್ಥಾನ ವಿರಕ್ತಮಠದ ಪರಮಪೂಜ್ಯ ಶ್ರೀ ಡಾ.ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮಿಗಳು, ಜಾಲವದಿ-ನಂದವಾಡಗಿ ಆಳಂದ ಶ್ರೀ ಡಾ. ಷ.ಬ್ರ.ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಮನಗೂಳಿ ಹಿರೇಮಠದ ಶ್ರೀ ಷ.ಬ್ರ. ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು,  ಹಜರತ್ ಸೈಯ್ಯದ್ ಷಾ ಹುಸೇನ್ ಪೀರ ಖಾದ್ರಿ ಚಿಸ್ತಿ ಮನಗೂಳಿ ಶರೀಫ್‍ದ ಶ್ರೀ ಡಾ.ಫೈರೋಜ ಇನಾಂದಾರ, ಧರ್ಮಗುರುಗಳಾದ ಮೌಲಾನಾ ಶಕೀಲ್ ಅಹಮದ್ ಖಾಸ್ಮಿ ಅವರು ಆರ್ಶೀವಚನ ನೀಡಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಿ.ಎಂ. ಗಣಕುಮಾರ ಅವರು ಮಾತನಾಡಿದರು.  

ಕಾರ್ಯಕ್ರಮದಲ್ಲಿ  ಉಮೇಶ ಕಾರಜೊಳ, ಊರಿನ ಗಣ್ಯರಾದ ಎನ್.ಜಿ.ಸಿಂದಗಿ, ಬಾಳು ಮಸಳಿ, ಧರೆಪ್ಪ ಮಸಳಿ, ಶ್ರೀಮತಿ ದೊಡಮನಿ, ಪ್ರಕಾಶ ಪಟ್ಟಣದ, ಬಿ.ಜಿ.ಬಿರಾದಾರ, ಪ್ರಕಾಶ ಜುಮನಾಳ ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು. ಪ್ರವೀಣ ಕಾಮಗೊಂಡ ಸ್ವಾಗತಿಸಿದರು. ಶಿಕ್ಷಕ ಹಿರೇಮಠ, ಟೆಂಕಲಿ ಹಾಗೂ ಮುಲ್ಲಾ  ಅವರು ನಿರೂಪಿಸಿದರು. ಮಹೇಶ ಹಾವಿನಾಳ ವಂದಿಸಿದರು.

ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿ ಡಿಪಿಆರ್ ತಯಾರಿಸಿ ಟೆಂಡರ್ ಪ್ರಕ್ರಿಯೆ ಮುಗಿಸಿ: ಜಿ.ಪಂ.ಸಿಇಓ ರಾಹುಲ್ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ  ಅವರು ಬುಧವಾರ  ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ 10,000 ಮೇಟ್ರಿಕ್ ಟನ್ ಸಾಮಥ್ರ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.  

ಸರಕಾರದಿಂದ ಮಂಜೂರಾದ 10,000 ಮೇಟ್ರಿಕ್ ಟನ್ ಸಾಮಥ್ರ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ 8 ರಂದು ಓಂಃಅಔಓS ಸಂಸ್ಥೆಯಿಂದ ಎಮ್.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, Sಔಓಓಇ Iಟಿಜಿಡಿಚಿsಣಡಿuಛಿಣuಡಿe ಹಾಗೂ ವಿ.ಭರತ,ಯೋಜನಾ ಸಲಹೆಗಾರರು, ಓಂಃಅಔಓS ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್, ಬೆಂಗಳೂರು ಮತ್ತು ವಿಜಯಪುರದ ತೋಟಗಾರಿಕೆ ಉಪ ನಿರ್ದೇಶಕರು  ಅವರನ್ನೊಳಗೊಂಡ  ತಂಡ ಸ್ಥಳ ಪರಿಶೀಲನೆ ನಡೆಸಿತು. 

ರಾಹುಲ್ ಶಿಂಧೆ ಅವರು ಯೋಜನೆ ರೂಪುರೇಷಗಳನ್ನು ತಯಾರಿಸುವ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಆರ್ಥಿಕ ಕಾರ್ಯ ಸಾಧ್ಯತೆ ಹಾಗೂ ನಿರ್ವಹಣಾ ವೆಚ್ಚದ  ಸಾಧ್ಯತೆಯ ಬಗ್ಗೆ ಅಧ್ಯಯನ ಮಾಡಿ ರೈತರಿಗೆ ಕಡಿಮೆ ವೆಚ್ಚದಲ್ಲಿ  ಅಧಿಕ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ ಮತ್ತು ಭವಿಷ್ಯದಲ್ಲಿ ಶೀಥಲೀಕರಣದ ಕಟ್ಟಡ ವಿಸ್ತರಣೆಗೆ ಅವಕಾಶವಿರುವಂತೆ ಯೋಜನೆಯನ್ನು ರೂಪಿಸಲು ತಿಳಿಸಿದರು. 

ಯೋಜನಾ ಸ್ಥಳದಲ್ಲಿ 800 ಕೆವಿ ಸಾಮಥ್ರ್ಯದ ವಿದ್ಯುತ್ ಸೌಲಭ್ಯವನ್ನು ಒದಗಿಸಲು ಇರುವ ಅವಕಾಶಗಳು ಹಾಗೂ ತಗಲುವ ವೆಚ್ಚಗಳ ಕುರಿತು ಯೋಜನಾ ಅಂದಾಜು  ತಯಾರಿಸಲು ಹೆಸ್ಕಾಂನ ಸಹಾಯಕ ಅಭಿಯಂತರು ಅವರಿಗೆ ಸೂಚಿಸಿದರು. 

ನಿಯೋಜಿತ ಸ್ಥಳಕ್ಕೆ ಅಥಣಿ ರಸ್ತೆಯಿಂದ ಮಹಿಳಾ ವಿಶ್ವ ವಿದ್ಯಾಲಯದ ಹಿಂಭಾಗದ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕೂಡುವ ರಸ್ತೆಯ ಮೂಲಕ ಪ್ರವೇಶ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಪಂಚಾಯತ್ ರಾಜ್ ಇಂಜಿನಿಯರಿಂಗ ಇಲಾಖೆಯ ಸಹಾಯಕ ಅಭಿಯಂತರರಿಗೆ ಕ್ರಮ ವಹಿಸಲು ಸೂಚಿಸಿದರು. 

ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಸಮಾಲೋಚಕರಾದ ಶರತ್ ವ್ಹಿ, ನಬಾರ್ಡ್ ಸಂಸ್ಥೆಯ ಮುಖ್ಯ ಇಂಜಿನಿಯರ್ ಪ್ರಭಾಕರ ಎಲ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವೈನ್ ಹಾಗೂ ಗ್ರೇಪ್ಸ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಸೋಮು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಿ. ಎಸ್ ಚವ್ಹಾಣ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳಾದ ಗುರುನಾಥ ಪಾಟೀಲ, ನಾಗೇಂದ್ರ ಗುರುನಾಳ, ಸಚಿನ ಉಟಗಿ, ತೊರವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ರಾಜಶ್ರೀ ತುಂಗಳ, ಗ್ರಾಮ ಪಂಚಾಯತಿ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


ದೇಶ ಅಭಿವೃದ್ದಿಯತ್ತ ಮುನ್ನಡೆಯುತ್ತಿದೆ : ಸಂಸದ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೇಳಿದರು.

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ  ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-2047, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ  ಮಹಿಳಾ ಮತ್ತು ಮಕ್ಕಳ ಅಭಿವ್ಥದ್ಧಿ ಇಲಾಖೆ ಉಪ ನಿರ್ದೇಶಕರಾದ ಕೆ ಕೆ ಚವ್ಹಾಣ ಮಾತನಾಡಿ ಕೇಂದ್ರ ಸರಕಾರದ ಯೋಜನೆಯಲ್ಲೊಂದಾದ ಬೇಟಿ  ಬಚಾವೂ ಬೇಟಿ ಪಡಾವೂ ಅಡಿಯಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ, ಯಶಸ್ಸು ಕಂಡಿದ್ದು ಲಿಂಗಾನುಪಾತದಲ್ಲಿ ವಿಜಯಪುರ ಜಿಲ್ಲೆ ಸಾಕಷ್ಟು ಸುಧಾರಣೆ ಕಂಡಿದೆ. ಉಳಿದಂತೆ ಗರ್ಭೀಣಿ ಮತ್ತು ತಾಯಂದಿರ ಆರೋಗ್ಯ ರಕ್ಷಣೆಗೆ ಇಲಾಖೆ ಶ್ರಮಿಸಿದ್ದು ಜನರು ಅಂಗನವಾಡಿಗೆ ಭೇಟಿ ನೀಡಿ ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತರಾದ ವಾಸುದೇವ್ ಹೆರಕಲ್ ಅವರು ಯುವಕರು ಅಗ್ನಿಪಥ ಯೋಜನೆಯಡಿ ಸೇನೆಗೆ ಸೇರಬೇಕು. ಕೇಂದ್ರ ಸರಕಾರದ ಖೇಲೋ ಇಂಡಿಯಾ ಯೋಜನೆಯಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದ್ದು ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಮೇಲ್ವಿಚಾರಕಿ ಭಾರತಿ ಪಾಟೀಲ್ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.ಪಿ. ಡಿ. ಜೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಡಿ. ಕೆ ಕುಲಕರ್ಣಿ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ರಾಹುಲ್ ಡೋಂಗ್ರೆ, ಗಾಂಧಿ ಉಪಾಸಕರಾದ ನೇತಾಜಿ ಗಾಂಧಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ ಎಮ್ ಕೋಲೂರು, ಕೇಂದ್ರ ಸಂವಹನ ಇಲಾಖೆಯ, ನಾಗಪ್ಪ ಅಂಬಾಗೋಳ ಉಪಸ್ಥಿತರಿದ್ದರು.ಕೇಂದ್ರ ಸಂವಹನ ಇಲಾಖೆಯ ಸಿ ಕೆ ಸುರೇಶ್ ಸ್ವಾಗತಿಸಿದರು, ಉಪನ್ಯಾಸಕಾರದ ಸಂತೋಷ್ ಹೆಗ್ಡೆ ಮತ್ತು ಎಚ್ ಜೆ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಜಿ ಆರ್ ಪುರಾಣಿಕ್ ವಂದಿಸಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


09-11-2023 EE DIVASA KANNADA DAILY NEWS PAPER

Friday, November 3, 2023

04-11-2023 EE DIVASA KANNADA DAILY NEWS PAPER

ವಿಜಯಪುರ ಜಿಲ್ಲೆಯನ್ನು ವಿಶ್ವಗುರು ಬಸವೇಶ್ವರ ಜಿಲ್ಲೆ ಅಂತ ಹೆಸರಿಡಲು ರಾಷ್ಟ್ರೀಯ ಬಸವ ಸೈನ್ಯ ಆಗ್ರಹ

 

ಈ ದಿವಸ ವಾರ್ತೆ

ವಿಜಯಪುರ:12ನೇ ಶತಮಾನದಲ್ಲಿ ವಚನದ ಮೂಲಕ ಸಮಾನತೆಯ ಸಾರುವುದರ ಜೊತೆಗೆ ಸಾಮಾಜಿಕ ಕ್ರಾಂತಿಯನ್ನು ಮಾಡಿದ ವಿಶ್ವಗುರು  ಬಸವಣ್ಣನವರ ಜನಿಸಿದ ವಿಜಯಪುರ ಜಿಲ್ಲೆಯ ಹೆಸರನ್ನು ಬದಲಾಯಿಸಿ ಬಸವೇಶ್ವರ ಜಿಲ್ಲೆಯನ್ನಾಗಿ ಮಾಡಬೇಕೆಂಬುದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ಆಗ್ರಹಿಸಿದರು ಇಂದು ವಿಜಯಪುರ ಜಿಲ್ಲಾಧಿಕಾರಿಗಳಿಗೆ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಗೆ ಬಸವೇಶ್ವರ ಚೆಲ್ಲಿ ಅಂತ ಮರುನಾಮಕರಣ ಮಾಡಲು ಮನವಿ ಸಲ್ಲಿಸಿ ಮಾತನಾಡಿದ ಅವರು 

ನಾಡಿನ ಜನತೆಯ ಬಹುದಿನದ ಬೇಡಿಕೆ ಆಗಿದ್ದು ಈಗ ಕರ್ನಾಟಕ ಘನ ಸರ್ಕಾರ ವಿಜಯಪುರ ಜಿಲ್ಲೆಯನ್ನು ಬಸವೇಶ್ವರ ಜಿಲ್ಲೆ ಅಂತ ಹೆಸರಿಡಲು ತೀರ್ಮಾನಿಸಿದ್ದು ಸ್ವಾಗತ ಮಾಡುತ್ತೇವೆ ಹೆಸರು ಬದಲಾವಣೆ ಮಾಡುವುದರಿಂದ ವಿಶ್ವಗುರು ಬಸವಣ್ಣನವರು ಯಾರು ಅವರು ಮಾಡಿದ ಸಮಾನತೆಯ ಕ್ರಾಂತಿ. ವಚನ ಸಾಹಿತ್ಯ. ಕಾಯಕ ದಾಸೋಹದ ಪರಿಚಯವನ್ನು ಇಡೀ ಜಗತ್ತಿಗೆ ತಿಳಿಸಿದಂತೆ ಆಗುತ್ತದೆ ಈಗಾಗಲೇ ದೇಶದ ಅನೇಕ ನಗರಗಳ ಹೆಸರುಗಳನ್ನು ಬದಲಾವಣೆ ಮಾಡಿದ್ದಾರೆ ಉದಾಹರಣೆಗೆ ಮಹಾರಾಷ್ಟ್ರದ ಔರಂಗಾಬಾದ್ ಮರುನಾಮಕರಣಗೊಂಡು ಛತ್ರಪತಿ ಸಾಮಾಜಿನಗರವಾಗಿದೆ  ಬಿಹಾರದ ಒಂದು ಜಿಲ್ಲೆಗೆ ಗೌತಮ ಬುದ್ಧರ ಹೆಸರನ್ನು ನಾಮಕರಣ ಮಾಡಲಾಗಿದೆ ಈ ನಿಟ್ಟಿನಲ್ಲಿ ಸರಕಾರ ತೆಗೆದುಕೊಂಡ ನಿರ್ಧಾರವನ್ನು ಬಸವ ನಾಡಿನ ಜನರು ಸ್ವಾಗತಿಸುತ್ತೇವೆ 

ಅದೇ ರೀತಿ ಬಸವ ಜನ್ಮ ಸ್ಥಳ ಬಸವನಬಾಗೇವಾಡಿ ಪ್ರತೇಕ ಅಭಿರುದ್ಧಿ ಪ್ರಾದಿಕಾರ ರಚನೆ ಮಾಡಿ ಸಮಸ್ತ ಬಸವನಬಾಗೇವಾಡಿ ಅಭಿರುದ್ದಿ ಪಡಿಸಬೇಕು.ಬಸವ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ನವದೆಹಲಿಯ ಅಕ್ಷರಧಾಮ ಮಾದರಿಯಲ್ಲಿ ಬಸವಣ್ಣನವರ ಜೀವನ ಸಂದೇಶಗಳನ್ನು ಸಾರುವ ಬೃಹತ್ ಮ್ಯೂಸಿಯಂ ನಿರ್ಮಾಣ ಮಾಡಬೇಕು,ರಾಮಜನ್ಮಭೂಮಿ ಅಯೋಧ್ಯಾ ಮಾದರಿಯಲ್ಲಿ ವಿಶೇಷ ಅನುಧಾನ ಬಿಡುಗಡೆ ಮಾಡಿ ದೇಶ ವಿದೇಶದಿಂದ ಪ್ರವಾಶಿಗರು ಬಸವ ಜನ್ಮಸ್ಥಳಕ್ಕೆ ಬರುವುಹಾಗೆ ಮಾಡಲು ಸರ್ಕಾರ ವಿಶೇಷ ಕಾಳಜಿ ವಹಿಸಬೇಕು ಬಸವನಬಾಗೇವಾಡಿ ಪಟ್ಟಣದಲ್ಲಿ ಪ್ರವಾಸೋದ್ದಮ ಇಲಾಖೆಯಿಂದ ತ್ರೀ ಸ್ಟಾರ್ ಹೋಟೆಲ ನಿರ್ಮಾಣ ಮಾಡಬೇಕು. ಬಸವ ಜಯಂತಿಯಂದು ರಾಷ್ಟ್ರೀಯ ಬಸವೋತ್ಸವವನ್ನು ಪ್ರತಿ ವರ್ಷ ಸರ್ಕಾರ ಕಡ್ಡಾಯವಾಗಿ ಬಸವನಬಾಗೇವಾಡಿಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋಗೆ ಬಸವೇಶ್ವರ ಮೆಟ್ರೋ ಅಂತ ಹೆಸರಿಡಬೇಕು ಸರ್ಕಾರವನ್ನು ಎಂದು ಸರಕಾರಕ್ಕೆ ಅಗ್ರಹಿಸುತ್ತೇವೆ ಎಂದು ಹೇಳಿದರು

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಸಂಚಾಲಕರಾದ ಶ್ರೀಕಾಂತ್ ಕೊಟ್ರಶೆಟ್ಟಿ ಮನ್ನನ್ ಶಾಬಾದಿ ದಯಾನಂದ್ ಜಾಲಗೇರಿ ಪ್ರಶಾಂತ್ ಮುಂಜಾನೆ ನಿಂಗನಗೌಡ ಸೋಲಾಪುರ್ ಸಂತೋಷ್ ಬಿರಾದಾರ್  ವಿಶ್ವನಾಥ್ ಹಾರಿವಾಳ ಶಿವಪ್ರಸಾದ್ ಮಿಂಚಿನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

Thursday, November 2, 2023

ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ: ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

ಹೊಸಪೇಟೆ, ನವೆಂಬರ್ 2 :  ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌

ಅವರು ಇಂದು ಹೊಸಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಗಣಿಗಾರಿಕೆಗೆ ಸಂಬಂಧಿಸಿದ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತದೆ. ಯಾವುದೇ ವರ್ಗದ ಗಣಿಗಾರಿಕೆ ಕಾನೂನುಬದ್ಧವಾಗಿ ಪರವನಾಗಿ ತೆಗೆದುಕೊಂಡಲ್ಲಿ, ಎಲ್ಲ ಸಂಬಂಧಪಟ್ಟ ಇಲಾಖೆಗಳಿಂದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದರು. 

ಅರಣ್ಯ ಇಲಾಖೆಯೊಂದಿಗೆ ಈ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದ್ದು, ಎ,ಬಿ, ಸಿ  ಅಥವಾ ಯಾವುದೇ ವರ್ಗದ ಗಣಿಗಾರಿಕೆಗೆ ತೊಂದರೆ ನೀಡದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ.  ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಪರ್ಯಾಯ ಕ್ರಮಗಳ ಬಗ್ಗೆಯೂ ತಿಳಿಸಲಾಗಿದೆ. ನಾವು ಹಿಂದೆ ಅಕ್ರಮ ಗಣಿಗಾರಿಕೆ ಬಗ್ಗೆ ಹೋರಾಟ ನಡೆಸಿದ್ದೆವು. ಅಕ್ರಮ ಗಣಿಗಾರಿಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಮಹಿಳಾ ಪದವಿ ಕಾಲೇಜು ಮತ್ತು ಮಹಿಳಾ ಪೊಲೀಸ್ ಠಾಣೆ-ಪರಿಶೀಲಿಸಿ ಕ್ರಮ:

ಹೊಸಪೇಟೆಯ ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಗ್ರಂಥಾಲಯ ಕಟ್ಟಡಗಳು ಸೇರಿದಂತೆ ಒಟ್ಟು 36 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ. ಸುಸಜ್ಜಿತ ವ್ಯವಸ್ಥೆಗಳುಳ್ಳ ಈ ಕಟ್ಟಡಗಳಿಂದ ಸುಮಾರು 3 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈ ಕಾಮಗಾರಿಯನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗಿದೆ ಎಂದರು. ವಿಜಯನಗರ ಜಿಲ್ಲೆಗೆ ಮಹಿಳಾ ಪದವಿ ಕಾಲೇಜು ಹಾಗೂ ಮಹಿಳಾ ಪೊಲೀಸ್ ಠಾಣೆಯ ಅವಶ್ಯಕತೆಯಿರುವ ಬಗ್ಗೆ ಮಾಧ್ಯಮದವರು ತಿಳಿಸಿದ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡುತ್ತಾ, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ಪತನಗೊಳಿಸುವ ಬಿಜೆಪಿಯವರ ವ್ಯರ್ಥ ಪ್ರಯತ್ನ:

ಶಾಸಕ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ 136  ಸ್ಥಾನ ಗೆಲ್ಲಿಸಿ ಬಹುಮತ ನೀಡಿದ್ದಾರೆ. ಐದು ವರ್ಷ ಕಾಂಗ್ರೆಸ್ ಸರ್ಕಾರವೇ ಆಡಳಿತ ಇರುತ್ತದೆ. ನಾನೇ ಐದುವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಒಮ್ಮೆ ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಯಶಸ್ವಿಯಾಗಿದ್ದರಿಂದ, ಈಗ ಮತ್ತೆ ಆ ಪ್ರಯತ್ನಕ್ಕೆ ಕೈಹಾಕಬಹುದು ಎಂದುಕೊಂಡಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಲಿದೆ ಎಂದರು.

ಹೈಕಮಾಂಡ್ ನಿರ್ಧಾರ :

ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರಾದೇಶಿಕ ಪಕ್ಷ ಅಲ್ಲ. ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಹಂಪಿ ಉತ್ಸವ:

ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಕಳೆದ ಸಾಲಿನಲ್ಲಿ ಜನವರಿ ಮಾಹೆಯಲ್ಲಿ ಹಂಪಿ ಉತ್ಸವ ಆಚರಿಸಲಾಗಿದ್ದಂತೆ , ಈ ಸಾಲಿನಲ್ಲಿಯೂ ಜನವರಿ ಮಾಹೆಯಲ್ಲಿ ಆಚರಿಸಲಾಗುವುದು ಎಂದರು.

ಸಕ್ಕರೆ ಕಾರ್ಖಾನೆ :

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಬಗ್ಗೆ ತಮ್ಮ ಅಭಿಪ್ರಾಯ ನೀಡುತ್ತಾ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನ:

ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನದ ಕೊರತೆಯಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿ, ಹಂಪಿ ವಿಶ್ವವಿದ್ಯಾಲಯವು ಅನುದಾನ ಕೋರಿದ ಮೇರೆಗೆ ಅನುದಾನವನ್ನು ಕೂಡಲೇ ಒದಗಿಸಲಾಗುವುದು ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

03-11-2023 EE DIVASA KANNADA DAILY NEWS PAPER