Tuesday, November 28, 2023

ಮೂಲ ಜಾನಪದ ಕಲೆಗಳನ್ನು ಪ್ರೊತ್ಸಾಹಿಸಬೇಕು : ಸಿ.ಬಿ.ನಾಟೀಕಾರ

ವಿಜಯಪುರ : ನಮ್ಮ ದೇಶವು ಭವ್ಯ ಪರಂಪರೆ ಇತಿಹಾಸ ಹೊಂದಿದ ದೇಶವಾಗಿದೆ. ಜಗತ್ಪಸಿದ್ಧಿಯಾದ ನಮ್ಮ ಸಂಸ್ಕೃತಿ, ಕಲೆ, ಸಾಹಿತ್ಯ, ಜಾನಪದ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಸಿ.ಬಿ ನಾಟೀಕಾರ ಹೇಳಿದರು.

ಇಂದು ನಗರದ ಬಾಲಕೀಯರ ಸರ್ಕಾರಿ ಪದವ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸಂಭ್ರಮ-50 ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದ ಅವರು, ಜನಪದರು ತಮ್ಮ ದೈನಂದಿನ ಬದುಕಿನಲ್ಲಿ ಜಾನಪದ ಸೊಗಡನ್ನು ಮೈಗೂಡಿಸಿಕೊಂಡಿದ್ದು, ಅವುಗಳಲ್ಲಿ ಪ್ರಮುಖವಾಗಿ ಲಾವಣಿ, ಹಂತಿ ಪದ, ಸಂಪ್ರದಾಯ ಪದ ಸೇರಿದಂತೆ ಅನೇಕ ಜಾನಪದ ಕಲೆಗಳೊಂದಿಗೆ ಸ್ವಚ್ಛಂದದ ಬದುಕನ್ನು ರೂಪಿಸಿಕೊಂಡಿದ್ದಾರೆ. ನಮ್ಮ ಜನಪದರ ಇಂತಹ ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಇಂದಿನ ಯುವ ಜನತೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಗುರುತರ ಹಿರಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಾಂಸ್ಕೃತಿಕÀ ನೆಲಗಟ್ಟಿನ ಬೆಸುಗೆ ಬೆಸೆಯುವ ಅತ್ಯಮೂಲ್ಯವಾದ ಕಲೆಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಉಳಿಸಿಕೊಳ್ಳಬೇಕು ನಶಿಸಿ ಹೋಗುತ್ತಿರುವ ಕಲೆಗಳನ್ನು ಮುಂದಿನ ಯುವ ಪೀಳಿಗೆಗೆ ಕೊಂಡೊಯ್ಯಬೇಕು ಯುವ ಜನತೆಯಲ್ಲಿನ ಸೃಜನಾತ್ಮಕ ಕಲೆಗಳ ಪ್ರಸ್ತುತಪಡಿಸಲು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಇಂತಹ ವೇದಿಕೆ ಕಲ್ಪಿಸಿಕೊಡಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಾಟಕಕಾರರಾದ ಡಿ.ಎಚ್ ಕೊಲ್ಹಾರ ಮಾತನಾಡಿ, ಇಂದಿನ ಯುವಕರು ತಾಂತ್ರಿಕತೆಯೊAದಿಗೆ ಯುವಕರು ನಮ್ಮ ಕಲೆ, ಸಂಸ್ಕೃತಿ ಹಾಗೂ ಪಂರಪರೆ ಉಳಿಯುವಿಕೆಗೆ ಇಂತಹ ಕಾರ್ಯಕ್ರಮ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸಬೇಕು. ನಮ್ಮ ಪೂರ್ವಜರು ಕಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು ಈಗಲೂ ಅದು ಮುಂದುವರೆಯಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಂಚೆ ಗಾಂಧೀ ವೃತ್ತದಿಂದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್‌ವರೆಗೆ ಗೊಂಬೆ ಹಾಗೂ ಡೊಳ್ಳು ಕುಣಿತದೊಂದಿಗೆ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕುಮಾರಿ ರಕ್ಷಂದ ತಿಳಗೊಳ ಅವರಿಂದ ಸುಗಮ ಸಂಗೀತ, ಕುಮಾರಿ ದಿವ್ಯಾ ಭಿಸೆ ಮತ್ತು ದೀಕ್ಷಾ ಭಿಸೆ ಸಮೂಹ ನೃತ್ಯ, ವಿನೋದ ಕಟಗೇರಿ ಜಾನಪದ ಗೀತೆ, ಕುಮಾರಿ ಶುಭನಂ ದಂದರಗಿ ಮತ್ತು ಸಂಗಡಿಗರಿAದ ಕರುಳಿನ ಕೂಗು ನಾಟಕ, ಬಬಲೇಶ್ವರದ ರಾಕೇಶ ಮಾಳಪ್ಪಗೋಳ ಹಾಗೂ ಸಂಗಡಿಗರಿAದ ಗೊಂಬೆ ಕುಣಿತ ಹಾಗೂ ಬಬಲೇಶ್ವರದ ಕಾಶಿಲಿಂಗ ಲೋಕೂರಿ ಅವರಿಂದ ಡೊಳ್ಳು ಕುಣಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ವೇದಿಕೆ ಮೇಲೆ ಉಪನ್ಯಾಸಕಾದ ಎಸ್. ಲೇಸನ್ನವರ, ಮೇತ್ರಿ ಕಲಾವಿದರಾದ ವೀರೇಶ ವಾಲಿ, ಕಾಲಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರದ ಬಿ. ನಾಗರಾಜ ಸ್ವಾಗತಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

No comments:

Post a Comment