Wednesday, November 8, 2023

ದೇಶ ಅಭಿವೃದ್ದಿಯತ್ತ ಮುನ್ನಡೆಯುತ್ತಿದೆ : ಸಂಸದ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೇಳಿದರು.

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ  ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-2047, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ  ಮಹಿಳಾ ಮತ್ತು ಮಕ್ಕಳ ಅಭಿವ್ಥದ್ಧಿ ಇಲಾಖೆ ಉಪ ನಿರ್ದೇಶಕರಾದ ಕೆ ಕೆ ಚವ್ಹಾಣ ಮಾತನಾಡಿ ಕೇಂದ್ರ ಸರಕಾರದ ಯೋಜನೆಯಲ್ಲೊಂದಾದ ಬೇಟಿ  ಬಚಾವೂ ಬೇಟಿ ಪಡಾವೂ ಅಡಿಯಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ, ಯಶಸ್ಸು ಕಂಡಿದ್ದು ಲಿಂಗಾನುಪಾತದಲ್ಲಿ ವಿಜಯಪುರ ಜಿಲ್ಲೆ ಸಾಕಷ್ಟು ಸುಧಾರಣೆ ಕಂಡಿದೆ. ಉಳಿದಂತೆ ಗರ್ಭೀಣಿ ಮತ್ತು ತಾಯಂದಿರ ಆರೋಗ್ಯ ರಕ್ಷಣೆಗೆ ಇಲಾಖೆ ಶ್ರಮಿಸಿದ್ದು ಜನರು ಅಂಗನವಾಡಿಗೆ ಭೇಟಿ ನೀಡಿ ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತರಾದ ವಾಸುದೇವ್ ಹೆರಕಲ್ ಅವರು ಯುವಕರು ಅಗ್ನಿಪಥ ಯೋಜನೆಯಡಿ ಸೇನೆಗೆ ಸೇರಬೇಕು. ಕೇಂದ್ರ ಸರಕಾರದ ಖೇಲೋ ಇಂಡಿಯಾ ಯೋಜನೆಯಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದ್ದು ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಮೇಲ್ವಿಚಾರಕಿ ಭಾರತಿ ಪಾಟೀಲ್ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.ಪಿ. ಡಿ. ಜೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಡಿ. ಕೆ ಕುಲಕರ್ಣಿ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ರಾಹುಲ್ ಡೋಂಗ್ರೆ, ಗಾಂಧಿ ಉಪಾಸಕರಾದ ನೇತಾಜಿ ಗಾಂಧಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ ಎಮ್ ಕೋಲೂರು, ಕೇಂದ್ರ ಸಂವಹನ ಇಲಾಖೆಯ, ನಾಗಪ್ಪ ಅಂಬಾಗೋಳ ಉಪಸ್ಥಿತರಿದ್ದರು.ಕೇಂದ್ರ ಸಂವಹನ ಇಲಾಖೆಯ ಸಿ ಕೆ ಸುರೇಶ್ ಸ್ವಾಗತಿಸಿದರು, ಉಪನ್ಯಾಸಕಾರದ ಸಂತೋಷ್ ಹೆಗ್ಡೆ ಮತ್ತು ಎಚ್ ಜೆ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಜಿ ಆರ್ ಪುರಾಣಿಕ್ ವಂದಿಸಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


No comments:

Post a Comment