Saturday, December 2, 2023

ಡಿ.6 ರಿಂದ ಮೂರು ದಿನ ಮಹಾಪುರುಷರ ಛಾಯಾ ಚಿತ್ರ ಪ್ರದರ್ಶನ


ವಿಜಯಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಿ.6, 7, ಹಾಗೂ 8 ರಂದು ಬಾಬಾಸಾಹೇಬರ ಹಾಗೂ ಮಹಾಪುರುಷರುಗಳ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಹಾಗೂ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನವನ್ನು ಅತ್ಯಂತ ವಿಶೇಷವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಆ ನಿಟ್ಟಿನಲ್ಲಿ ರಾಷ್ಟ್ರ ಸಂತರು, ಮಹಾಪುರುಷರುಗಳ 1000 ಕ್ಕೂ ಅಧಿಕ ಛಾಯಾಚಿತ್ರಗಳನ್ನು ಇಲ್ಲಿನ ಜಲನಗರದಲ್ಲಿರುವ ಸಾರಿಪುತ್ರ ಬೋಧಿದಮ್ಮ ಬುದ್ಧವಿಹಾರದಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಸಾರ್ವಜನಿಕರು ಮುಕ್ತವಾಗಿ ಅವುಗಳನ್ನು ವೀಕ್ಷಣೆ ಮಾಡಬಹುದಾಗಿದೆ ಎಂದರು.

ಡಿ.6 ರಿಂದ 8 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಡಾ. ಬಾಬಾಸಾಹೇಬರ ಅಪರೂಪದ ಛಾಯಾಚಿತ್ರಗಳನ್ನು ನಿಪ್ಪಾಣಿಯ ದೀಪಕ ಆಕಾರಾಮ ಮಧಾಳೆ ಹಾಗೂ ನಂದಕುಮಾರ ಮಧಾಳೆ ಸಂಗ್ರಹಣೆ ಮಾಡಿರುವ ಛಾಯಾಚಿತ್ರಗಲಾಗಿವೆ ಎಂದರು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಅನುಯಾಯಿಗಳು, ಪ್ರಗತಿಪರ ಚಿಂತಕರು, ಬುದ್ಧಾನುಯಾಯಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಬೇಕು ಎಂದರು.

ನಾನು ಸರ್ಕಾರಿ ನೌಕರಿಯಿಂದ ನಿವೃತ್ತಿಯಾಗಿ, ಕಾಂಗ್ರೆಸ್ ಪಕ್ಷ ಸೇರಿಕೊಂಡು ಪಕ್ಷದ ಕಾರ್ಯಾಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ ವಿಜಯಪುರ ಎಸ್ಸಿ ಮೀಸಲು ಲೋಕಸಭೆ ಮತಕ್ಷೇತ್ರವಾಗಿದ್ದು, ಕಳೆದ 3 ಬಾರಿ ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು ಆದರೆ ಗೆಲ್ಲಲು ಸಾಧ್ಯವಾಗಿಲ್ಲ. ಸುಮಾರು 2 ಲಕ್ಷ ಛಲವಾದಿ ಸಮುದಾಯ ಹೊಂದಿರುವ ನಾನು ಈ ಬಾರಿ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಪಕ್ಷ ಟಿಕೆಟ್ ನೀಡಿದಲ್ಲಿ ಗೆದ್ದು ಬಂದು ಜನರ ಸೇವೆ ಮಾಡುತ್ತೇನೆ ಎಂದು ಆಶಯ ವ್ಯಕ್ತಪಡಿಸಿದರು.

ಮಾಜಿ ಶಾಸಕ ರಾಜು ಆಲಗೂರ ಅವರು ಆಕಾಂಕ್ಷಿಯಾಗಿದ್ದು, ನಿಮಗೆ ಟಿಕೆಟ್ ಹೇಗೆ ಸಿಗುತ್ತೆ ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪೆÇ್ರ. ರಾಜು ಆಲಗೂರ ನಮ್ಮ ನಾಯಕರು. ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆ ಅವರು ಕಣದಲ್ಲಿ ಉಳಿಯುತ್ತೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಸಹಿತ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದರು.

ಮುಖಂಡರಾದ ಶಶಿಕಾಂತ ಹೊನವಾಡಕರ, ನಾಗರಾಜ ಲಂಬು, ರಮೇಶ ಯಡಹಳ್ಳಿ, ಅನಿಲ ಹೊಸಮನಿ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

No comments:

Post a Comment