Wednesday, November 8, 2023

ದೇಶಕ್ಕಾಗಿ ನಾವು ಎಂಬ ಮನೋಭಾವನೆ ಬೆಳೆಸಿಕೊಳ್ಳಬೇಕು: ಗೋವಿಂದ ಕಾರಜೋಳ ಕರೆ

ವಿಜಯಪುರ: ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ಪ್ರತಿಯೊಬ್ಬ ಭಾರತೀಯನು ಯಾವುದೇ ಜಾತಿ-ಮತ ಪಂಥಗಳನ್ನು ಮೀರಿ ರಾಷ್ಟ್ರಪ್ರೇಮ ಬೆಳೆಸಿಕೊಂಡು, ಒಗ್ಗಟ್ಟಾಗಿ ಸುಭದ್ರ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆ ನೀಡಿದರು.

ಮಂಗಳವಾರ ಜಿಲ್ಲೆಯ ಉಕ್ಕಲಿ ಗ್ರಾಮದ ಬಿಎಲ್‍ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕøತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ ಸರ್ವಧರ್ಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದ ಅವರು, ಜಿಲ್ಲೆಯ ವೀರಯೋಧ ಕಾಶೀರಾಯನ ತ್ಯಾಗಕ್ಕೆ ಬೆಲೆ ಕಟ್ಟಲಾಗಲ್ಲ. ಇಂತಹ ವೀರನಿಗೆ ಜನ್ಮ ನೀಡಿದ ತಂದೆ-ತಾಯಿಗೆ ಎಷ್ಟು ಕೊಂಡಾಡಿದರೂ ಕಡಿಮೆ. ಪುಲ್ವಾಮಾ ದಾಳಿ ಸಂದರ್ಭದಲ್ಲಿ ಶತ್ರುವನ್ನು ಸದೆಬಡೆದು, ವೀರ ಮರಣ ಹೊಂದಿದ ಕಾಶೀರಾಯ ಸೂರ್ಯಚಂದ್ರ ಇರುವರೆಗೂ ಅಜರಾಮರಾಗಿ ಉಳಿಯಲಿದ್ದಾರೆ. ಅವರ ತ್ಯಾಗದ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸುವ-ನೆನಪಿಸುವ ನಿಟ್ಟಿನಲ್ಲಿ ಪುತ್ಥಳಿ ಅನಾವರಣ ಅತಿ ಸ್ತ್ಯುತ್ಯವಾಗಿದೆ. ಕಾಶೀರಾಯನಂತೆ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ದೇಶಕ್ಕಾಗಿ ನಾವು ಏನನ್ನಾದರೂ  ಕೊಡುಗೆ ನೀಡಬೇಕೆಂಬ ಬಾವನೆ ಬೆಳೆಸಿಕೊಳ್ಳಬೇಕು  ಎಂದು ಹೇಳಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮಾತನಾಡಿ, ದೇಶ ಕಾಯುವ ಸೈನಿಕ ಯಾವುದೇ ಒಂದು ಜಾತಿ, ಮತ, ಪಂಥ, ಸಮಾಜದ ರಕ್ಷಣೆಗಾಗಿ ಗಡಿಯಲ್ಲಿ ನಿಲ್ಲುವುದಿಲ್ಲ. ತನ್ನ ಮನೆ, ಸಂಬಂಧಿಕರನ್ನು ದೂರವಾಗಿ ಇಡೀ ದೇಶದ ಜನರು ನೆಮ್ಮದಿಯಿಂದ ಸುರಕ್ಷಿತವಾಗಿರಲಿ ಎಂಬ ಭಾವನೆಯಿಂದ ಗಡಿಯಲ್ಲಿ ಬಿಸಿಲು, ಮಳೆ ಲೆಕ್ಕಿಸದೇ ತನ್ನ ಪ್ರಾಣವನ್ನು ಮುಡುಪಾಗಿಟ್ಟು ದೇಶ ರಕ್ಷಣೆಗೆ ನಿಲ್ಲುತ್ತಾನೆ. ಇಂತಹ ಸೈನಿಕರ ಪ್ರತಿ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡೆಬೇಕು ಎಂದರು.

ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ  ಕೊಲ್ಹಾಪುರದ ಶ್ರೀ ಸಿದ್ದಗಿರಿ ಮಹಾಸಂಸ್ಥಾನ ಕನ್ನೇರಿ ಮಠದ ಕೃಷಿ ಋಷಿ ರಾಷ್ಟ್ರಸಂತ ಜಗದ್ಗುರು ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಗಳು ಉಕ್ಕಲಿ ಯರನಾಳ ಸಂಸ್ಥಾನ ವಿರಕ್ತಮಠದ ಪರಮಪೂಜ್ಯ ಶ್ರೀ ಡಾ.ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮಿಗಳು, ಜಾಲವದಿ-ನಂದವಾಡಗಿ ಆಳಂದ ಶ್ರೀ ಡಾ. ಷ.ಬ್ರ.ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಮನಗೂಳಿ ಹಿರೇಮಠದ ಶ್ರೀ ಷ.ಬ್ರ. ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು,  ಹಜರತ್ ಸೈಯ್ಯದ್ ಷಾ ಹುಸೇನ್ ಪೀರ ಖಾದ್ರಿ ಚಿಸ್ತಿ ಮನಗೂಳಿ ಶರೀಫ್‍ದ ಶ್ರೀ ಡಾ.ಫೈರೋಜ ಇನಾಂದಾರ, ಧರ್ಮಗುರುಗಳಾದ ಮೌಲಾನಾ ಶಕೀಲ್ ಅಹಮದ್ ಖಾಸ್ಮಿ ಅವರು ಆರ್ಶೀವಚನ ನೀಡಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಿ.ಎಂ. ಗಣಕುಮಾರ ಅವರು ಮಾತನಾಡಿದರು.  

ಕಾರ್ಯಕ್ರಮದಲ್ಲಿ  ಉಮೇಶ ಕಾರಜೊಳ, ಊರಿನ ಗಣ್ಯರಾದ ಎನ್.ಜಿ.ಸಿಂದಗಿ, ಬಾಳು ಮಸಳಿ, ಧರೆಪ್ಪ ಮಸಳಿ, ಶ್ರೀಮತಿ ದೊಡಮನಿ, ಪ್ರಕಾಶ ಪಟ್ಟಣದ, ಬಿ.ಜಿ.ಬಿರಾದಾರ, ಪ್ರಕಾಶ ಜುಮನಾಳ ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು. ಪ್ರವೀಣ ಕಾಮಗೊಂಡ ಸ್ವಾಗತಿಸಿದರು. ಶಿಕ್ಷಕ ಹಿರೇಮಠ, ಟೆಂಕಲಿ ಹಾಗೂ ಮುಲ್ಲಾ  ಅವರು ನಿರೂಪಿಸಿದರು. ಮಹೇಶ ಹಾವಿನಾಳ ವಂದಿಸಿದರು.

ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿ ಡಿಪಿಆರ್ ತಯಾರಿಸಿ ಟೆಂಡರ್ ಪ್ರಕ್ರಿಯೆ ಮುಗಿಸಿ: ಜಿ.ಪಂ.ಸಿಇಓ ರಾಹುಲ್ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ  ಅವರು ಬುಧವಾರ  ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ 10,000 ಮೇಟ್ರಿಕ್ ಟನ್ ಸಾಮಥ್ರ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.  

ಸರಕಾರದಿಂದ ಮಂಜೂರಾದ 10,000 ಮೇಟ್ರಿಕ್ ಟನ್ ಸಾಮಥ್ರ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ 8 ರಂದು ಓಂಃಅಔಓS ಸಂಸ್ಥೆಯಿಂದ ಎಮ್.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, Sಔಓಓಇ Iಟಿಜಿಡಿಚಿsಣಡಿuಛಿಣuಡಿe ಹಾಗೂ ವಿ.ಭರತ,ಯೋಜನಾ ಸಲಹೆಗಾರರು, ಓಂಃಅಔಓS ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್, ಬೆಂಗಳೂರು ಮತ್ತು ವಿಜಯಪುರದ ತೋಟಗಾರಿಕೆ ಉಪ ನಿರ್ದೇಶಕರು  ಅವರನ್ನೊಳಗೊಂಡ  ತಂಡ ಸ್ಥಳ ಪರಿಶೀಲನೆ ನಡೆಸಿತು. 

ರಾಹುಲ್ ಶಿಂಧೆ ಅವರು ಯೋಜನೆ ರೂಪುರೇಷಗಳನ್ನು ತಯಾರಿಸುವ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಆರ್ಥಿಕ ಕಾರ್ಯ ಸಾಧ್ಯತೆ ಹಾಗೂ ನಿರ್ವಹಣಾ ವೆಚ್ಚದ  ಸಾಧ್ಯತೆಯ ಬಗ್ಗೆ ಅಧ್ಯಯನ ಮಾಡಿ ರೈತರಿಗೆ ಕಡಿಮೆ ವೆಚ್ಚದಲ್ಲಿ  ಅಧಿಕ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ ಮತ್ತು ಭವಿಷ್ಯದಲ್ಲಿ ಶೀಥಲೀಕರಣದ ಕಟ್ಟಡ ವಿಸ್ತರಣೆಗೆ ಅವಕಾಶವಿರುವಂತೆ ಯೋಜನೆಯನ್ನು ರೂಪಿಸಲು ತಿಳಿಸಿದರು. 

ಯೋಜನಾ ಸ್ಥಳದಲ್ಲಿ 800 ಕೆವಿ ಸಾಮಥ್ರ್ಯದ ವಿದ್ಯುತ್ ಸೌಲಭ್ಯವನ್ನು ಒದಗಿಸಲು ಇರುವ ಅವಕಾಶಗಳು ಹಾಗೂ ತಗಲುವ ವೆಚ್ಚಗಳ ಕುರಿತು ಯೋಜನಾ ಅಂದಾಜು  ತಯಾರಿಸಲು ಹೆಸ್ಕಾಂನ ಸಹಾಯಕ ಅಭಿಯಂತರು ಅವರಿಗೆ ಸೂಚಿಸಿದರು. 

ನಿಯೋಜಿತ ಸ್ಥಳಕ್ಕೆ ಅಥಣಿ ರಸ್ತೆಯಿಂದ ಮಹಿಳಾ ವಿಶ್ವ ವಿದ್ಯಾಲಯದ ಹಿಂಭಾಗದ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕೂಡುವ ರಸ್ತೆಯ ಮೂಲಕ ಪ್ರವೇಶ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಪಂಚಾಯತ್ ರಾಜ್ ಇಂಜಿನಿಯರಿಂಗ ಇಲಾಖೆಯ ಸಹಾಯಕ ಅಭಿಯಂತರರಿಗೆ ಕ್ರಮ ವಹಿಸಲು ಸೂಚಿಸಿದರು. 

ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಸಮಾಲೋಚಕರಾದ ಶರತ್ ವ್ಹಿ, ನಬಾರ್ಡ್ ಸಂಸ್ಥೆಯ ಮುಖ್ಯ ಇಂಜಿನಿಯರ್ ಪ್ರಭಾಕರ ಎಲ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವೈನ್ ಹಾಗೂ ಗ್ರೇಪ್ಸ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಸೋಮು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಿ. ಎಸ್ ಚವ್ಹಾಣ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳಾದ ಗುರುನಾಥ ಪಾಟೀಲ, ನಾಗೇಂದ್ರ ಗುರುನಾಳ, ಸಚಿನ ಉಟಗಿ, ತೊರವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ರಾಜಶ್ರೀ ತುಂಗಳ, ಗ್ರಾಮ ಪಂಚಾಯತಿ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


ದೇಶ ಅಭಿವೃದ್ದಿಯತ್ತ ಮುನ್ನಡೆಯುತ್ತಿದೆ : ಸಂಸದ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೇಳಿದರು.

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ  ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-2047, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ  ಮಹಿಳಾ ಮತ್ತು ಮಕ್ಕಳ ಅಭಿವ್ಥದ್ಧಿ ಇಲಾಖೆ ಉಪ ನಿರ್ದೇಶಕರಾದ ಕೆ ಕೆ ಚವ್ಹಾಣ ಮಾತನಾಡಿ ಕೇಂದ್ರ ಸರಕಾರದ ಯೋಜನೆಯಲ್ಲೊಂದಾದ ಬೇಟಿ  ಬಚಾವೂ ಬೇಟಿ ಪಡಾವೂ ಅಡಿಯಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ, ಯಶಸ್ಸು ಕಂಡಿದ್ದು ಲಿಂಗಾನುಪಾತದಲ್ಲಿ ವಿಜಯಪುರ ಜಿಲ್ಲೆ ಸಾಕಷ್ಟು ಸುಧಾರಣೆ ಕಂಡಿದೆ. ಉಳಿದಂತೆ ಗರ್ಭೀಣಿ ಮತ್ತು ತಾಯಂದಿರ ಆರೋಗ್ಯ ರಕ್ಷಣೆಗೆ ಇಲಾಖೆ ಶ್ರಮಿಸಿದ್ದು ಜನರು ಅಂಗನವಾಡಿಗೆ ಭೇಟಿ ನೀಡಿ ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತರಾದ ವಾಸುದೇವ್ ಹೆರಕಲ್ ಅವರು ಯುವಕರು ಅಗ್ನಿಪಥ ಯೋಜನೆಯಡಿ ಸೇನೆಗೆ ಸೇರಬೇಕು. ಕೇಂದ್ರ ಸರಕಾರದ ಖೇಲೋ ಇಂಡಿಯಾ ಯೋಜನೆಯಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದ್ದು ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಮೇಲ್ವಿಚಾರಕಿ ಭಾರತಿ ಪಾಟೀಲ್ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.ಪಿ. ಡಿ. ಜೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಡಿ. ಕೆ ಕುಲಕರ್ಣಿ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ರಾಹುಲ್ ಡೋಂಗ್ರೆ, ಗಾಂಧಿ ಉಪಾಸಕರಾದ ನೇತಾಜಿ ಗಾಂಧಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ ಎಮ್ ಕೋಲೂರು, ಕೇಂದ್ರ ಸಂವಹನ ಇಲಾಖೆಯ, ನಾಗಪ್ಪ ಅಂಬಾಗೋಳ ಉಪಸ್ಥಿತರಿದ್ದರು.ಕೇಂದ್ರ ಸಂವಹನ ಇಲಾಖೆಯ ಸಿ ಕೆ ಸುರೇಶ್ ಸ್ವಾಗತಿಸಿದರು, ಉಪನ್ಯಾಸಕಾರದ ಸಂತೋಷ್ ಹೆಗ್ಡೆ ಮತ್ತು ಎಚ್ ಜೆ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಜಿ ಆರ್ ಪುರಾಣಿಕ್ ವಂದಿಸಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


09-11-2023 EE DIVASA KANNADA DAILY NEWS PAPER