Friday, November 17, 2023

18-11-2023 EE DIVASA KANNADA DAILY NEWS PAPER

ನ.20ರಂದು ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ಉದ್ಘಾಟನೆ

ವಿಜಯಪುರ : ಅಖಿಲ ಭಾರತ ಸಹಕಾರ ಸಪ್ತಾಹದ 70ನೇ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಶತಮಾನೋತ್ಸವ ಭವನ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಮತ್ತು ಸಹಕಾರ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಸಮಾರಂಭದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.

ನಗರದ ಕೇಂದ್ರ ಸಹಕಾರಿ ಬ್ಯಾಂಕ್‍ನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೆಂಬರ್ 20 ರಂದು ನಡೆಯು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲೆಯ ಡಿಸಿಸಿ ಸಂಘಗಳ ಸದಸ್ಯರು, ವಿವಿಧ ಸಹಕಾರಿ ಸಂಘಗಳ ಸಹಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ವೈಯಕ್ತಿಕವಾಗಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಬ್ಯಾಂಕಿನ ಎಲ್ಲಾ ನಿರ್ದೇಶಕರು, ಸದಸ್ಯರು ಸೇರಿ ಸಮಾರೋಪ ಸಮಾರಂಭದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಮಾರಂಭದಲ್ಲಿ ಸಹಕಾರಿ ಇಲಾಖೆ ಎಲ್ಲಾ ಹಿರಿಯ, ಮಾಜಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ ಎಲ್ಲರಿಗಿಂತಲು ಮೊದಲು ರಾಜ್ಯದಲ್ಲಿ ಸಹಕಾರಿ ಚಳುವಳಿ ಪ್ರಾರಂಭವಾದರೂ ಮಹಾರಾಷ್ಟ್ರ, ಗುಜರಾತ್ ಸಹಕಾರಿ ರಂಗದಲ್ಲಿ ಮುಂದಿದೆ. ಮಹಾರಾಷ್ಟ್ರ, ಗುಜರಾತ್ ಮಾದರಿಯಲ್ಲಿ ರಾಜ್ಯಕ್ಕೆ ಪೆÇ್ರೀತ್ಸಾಹ ಸಿಗಬೇಕು ಎನ್ನುವುದು  ಎಲ್ಲಾ ಸಹಕಾರಿಗಳ ಮಹದಾಸೆಯಾಗಿದೆ.  ನಮ್ಮಲ್ಲೂ ಸಹಕಾರ ಪೆÇ್ರೀತ್ಸಾಹ ನೀಡಿದರೆ ಜನರಿಗೆ ಇನಷ್ಟು ಆಸಕ್ತಿ ಮೂಡಿ ಸಹಕಾರಿ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಇದಕ್ಕೆ ಪೂರಕವಾಗಿ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ಸಚಿವರುಗಳಿಗೆ ಎಲ್ಲಾ ಸಹಕಾರಿಗಳು ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ನಿರ್ದೇಶಕರು ಸೇರಿ ಮನವಿ ಮಾಡಿಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು.

ಇದು ಪಕ್ಷಾತೀತ ಸಮಾರಂಭ. ಕೇವಲ ಸಹಕಾರಿ ರತ್ನಗಳಿಗೆ ಪ್ರಶಸ್ತಿ, ಪೆÇ್ರೀತ್ಸಾಹ ನೀಡುವ  ಕಾರ್ಯಕ್ರಮ ಅμÉ್ಟೀ ಅಲ್ಲ. ಜೊತೆಗೆ ಸಹಕಾರಿ ತತ್ವಕ್ಕೆ  ಶಕ್ತಿ ತುಂಬಬೇಕು ಎನ್ನುವ ಪ್ರಯತ್ನವಾಗಿದೆ. ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕಟ್ಟಡಗಳು ಉದ್ಘಾಟನೆ ನೆರವೇರಲಿವೆ. ಸಮಾರಂಭಕ್ಕೆ  ಅಂದಾಜು ಮೂವತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಸಿದ್ಧತೆಗಳ ಪರಿಶೀಲನೆ : ನವೆಂಬರ್ 20 ರಂದು ನಡೆಯುವ ಸಮಾರಂಭಕ್ಕೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಹಕಾರ ಸಚಿವರು ಸೇರಿದಂತೆ ವಿವಿಧ ಗಣ್ಯರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆ ವಿನ್ಯಾಸ, ಆಸನಗಳ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳ ಕುರಿತು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಪರಿಶೀಲನೆ ನಡೆಸಿದರು.