Sunday, November 19, 2023

ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ : ಹಿರಿಯ ಪತ್ರಕರ್ತ ಕೆ.ಎನ್. ರಮೇಶ

ಈ ದಿವಸ ವಾರ್ತೆ

ವಿಜಯಪುರ : ಪ್ರಶಸ್ತಿ ಕೇಳಿ ಪಡೆಯುವುದಾಗಬಾರದು. ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ ನೀಡುತ್ತದೆ ಎಂದು ಹಿರಿಯ ಪತ್ರಕರ್ತ ಕೆ.ಎನ್. ರಮೇಶ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಪತ್ರಿಕಾ ಭವನದಲ್ಲಿ ಭಾನುವಾರ ರಾಜ್ಯ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಆದರೆ ಪ್ರಶಸ್ತಿಗಳು ಅಷ್ಟು ಸುಲಭವಾಗಿ ದೊರಕುವುದಿಲ್ಲ. ಪ್ರಶಸ್ತಿ ಲಭಿಸಿದರೂ ಅದರ ಹಿಂದೆ ಅವರ ಸಾಧನೆ ಇದ್ದೇ ಇರುತ್ತದೆ ಎಂದರು.

ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಫೀ ಭಂಡಾರಿ ಸನ್ಮಾನ ಸ್ವೀಕರಿಸಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಾಧನೆಯನ್ನು ಪರಿಗಣ ಸಿ ರಾಜ್ಯ ಸರಕಾರ ನನಗೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು, ಸಂತಸವನ್ನುಂಟು ಮಾಡಿದೆ ಎಂದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಸೀತಾರಾಮ ಕುಲಕರ್ಣಿ, ಷಡಕ್ಷರಿ ಕಂಪೂನವರ ಸನ್ಮಾನ ಸ್ವೀಕರಿಸಿ, ತಮಗೆ ಗೌರವ ಸನ್ಮಾನ ನೀಡಿದ ಕಾನಿಪ ಸಂಘಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಕಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸಿ, ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವಾಗ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಎರಡನ್ನೂ ಪರಿಗಣ ಸುತ್ತಿದೆ. ಆದರೆ ವಯೋಮಿತಿಯಲ್ಲಿಯೂ ಸಡಿಲಿಕೆಯಾಗಬೇಕು ಎಂದರು.

ಹಿರಿಯ ಪತ್ರಕರ್ತ ಸುಶಿಲೇಂದ್ರ ನಾಯಕ, ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಫಿರೋಜ್ ರೋಜಿನದಾರ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿಗಳಾದ ರಾಹುಲ ಆಪ್ಟೆ, ದೀಪಕ ಶಿಂತ್ರೆ, ಸಂಘದ ರಾಜ್ಯ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ಐಎಫ್ ಡಬ್ಲೂಜೆ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಜಿಲ್ಲಾ ಕಾರ್ಯಕಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಗುರುರಾಜ ಗದ್ದನಕೇರಿ, ಸದಸ್ಯರಾದ ಗೋಪಾಲ ಕಣ ಮನಿ, ಇಸ್ಮಾಯಿಲ್ ಮುಲ್ಲಾ, ಮಾಧವರಾವ್ ಕುಲಕರ್ಣಿ ಮತ್ತಿತರರಿದ್ದರು.

ಸಂಘದ ಸಲಹಾ ಸಮಿತಿ ಸದಸ್ಯ ಅಶೋಕ ಯಡಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವೇಂದ್ರ ಹೆಳವರ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಉಳ್ಳಾಗಡ್ಡಿ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


20-11-2023 EE DIVASA KANNADA DAILY NEWS PAPER