Tuesday, November 28, 2023

29-11-2023 EE DIVASA KANNADA DAILY NEWS PAPER

ಮೂಲ ಜಾನಪದ ಕಲೆಗಳನ್ನು ಪ್ರೊತ್ಸಾಹಿಸಬೇಕು : ಸಿ.ಬಿ.ನಾಟೀಕಾರ

ವಿಜಯಪುರ : ನಮ್ಮ ದೇಶವು ಭವ್ಯ ಪರಂಪರೆ ಇತಿಹಾಸ ಹೊಂದಿದ ದೇಶವಾಗಿದೆ. ಜಗತ್ಪಸಿದ್ಧಿಯಾದ ನಮ್ಮ ಸಂಸ್ಕೃತಿ, ಕಲೆ, ಸಾಹಿತ್ಯ, ಜಾನಪದ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಸಿ.ಬಿ ನಾಟೀಕಾರ ಹೇಳಿದರು.

ಇಂದು ನಗರದ ಬಾಲಕೀಯರ ಸರ್ಕಾರಿ ಪದವ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸಂಭ್ರಮ-50 ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದ ಅವರು, ಜನಪದರು ತಮ್ಮ ದೈನಂದಿನ ಬದುಕಿನಲ್ಲಿ ಜಾನಪದ ಸೊಗಡನ್ನು ಮೈಗೂಡಿಸಿಕೊಂಡಿದ್ದು, ಅವುಗಳಲ್ಲಿ ಪ್ರಮುಖವಾಗಿ ಲಾವಣಿ, ಹಂತಿ ಪದ, ಸಂಪ್ರದಾಯ ಪದ ಸೇರಿದಂತೆ ಅನೇಕ ಜಾನಪದ ಕಲೆಗಳೊಂದಿಗೆ ಸ್ವಚ್ಛಂದದ ಬದುಕನ್ನು ರೂಪಿಸಿಕೊಂಡಿದ್ದಾರೆ. ನಮ್ಮ ಜನಪದರ ಇಂತಹ ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಇಂದಿನ ಯುವ ಜನತೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಗುರುತರ ಹಿರಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಾಂಸ್ಕೃತಿಕÀ ನೆಲಗಟ್ಟಿನ ಬೆಸುಗೆ ಬೆಸೆಯುವ ಅತ್ಯಮೂಲ್ಯವಾದ ಕಲೆಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಉಳಿಸಿಕೊಳ್ಳಬೇಕು ನಶಿಸಿ ಹೋಗುತ್ತಿರುವ ಕಲೆಗಳನ್ನು ಮುಂದಿನ ಯುವ ಪೀಳಿಗೆಗೆ ಕೊಂಡೊಯ್ಯಬೇಕು ಯುವ ಜನತೆಯಲ್ಲಿನ ಸೃಜನಾತ್ಮಕ ಕಲೆಗಳ ಪ್ರಸ್ತುತಪಡಿಸಲು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಇಂತಹ ವೇದಿಕೆ ಕಲ್ಪಿಸಿಕೊಡಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಾಟಕಕಾರರಾದ ಡಿ.ಎಚ್ ಕೊಲ್ಹಾರ ಮಾತನಾಡಿ, ಇಂದಿನ ಯುವಕರು ತಾಂತ್ರಿಕತೆಯೊAದಿಗೆ ಯುವಕರು ನಮ್ಮ ಕಲೆ, ಸಂಸ್ಕೃತಿ ಹಾಗೂ ಪಂರಪರೆ ಉಳಿಯುವಿಕೆಗೆ ಇಂತಹ ಕಾರ್ಯಕ್ರಮ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸಬೇಕು. ನಮ್ಮ ಪೂರ್ವಜರು ಕಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು ಈಗಲೂ ಅದು ಮುಂದುವರೆಯಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಂಚೆ ಗಾಂಧೀ ವೃತ್ತದಿಂದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್‌ವರೆಗೆ ಗೊಂಬೆ ಹಾಗೂ ಡೊಳ್ಳು ಕುಣಿತದೊಂದಿಗೆ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕುಮಾರಿ ರಕ್ಷಂದ ತಿಳಗೊಳ ಅವರಿಂದ ಸುಗಮ ಸಂಗೀತ, ಕುಮಾರಿ ದಿವ್ಯಾ ಭಿಸೆ ಮತ್ತು ದೀಕ್ಷಾ ಭಿಸೆ ಸಮೂಹ ನೃತ್ಯ, ವಿನೋದ ಕಟಗೇರಿ ಜಾನಪದ ಗೀತೆ, ಕುಮಾರಿ ಶುಭನಂ ದಂದರಗಿ ಮತ್ತು ಸಂಗಡಿಗರಿAದ ಕರುಳಿನ ಕೂಗು ನಾಟಕ, ಬಬಲೇಶ್ವರದ ರಾಕೇಶ ಮಾಳಪ್ಪಗೋಳ ಹಾಗೂ ಸಂಗಡಿಗರಿAದ ಗೊಂಬೆ ಕುಣಿತ ಹಾಗೂ ಬಬಲೇಶ್ವರದ ಕಾಶಿಲಿಂಗ ಲೋಕೂರಿ ಅವರಿಂದ ಡೊಳ್ಳು ಕುಣಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ವೇದಿಕೆ ಮೇಲೆ ಉಪನ್ಯಾಸಕಾದ ಎಸ್. ಲೇಸನ್ನವರ, ಮೇತ್ರಿ ಕಲಾವಿದರಾದ ವೀರೇಶ ವಾಲಿ, ಕಾಲಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರದ ಬಿ. ನಾಗರಾಜ ಸ್ವಾಗತಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರ : ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ

ವಿಜಯಪುರ : ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಕಾನೂನು ಬದ್ಧವಾಗಿ ಅಗತ್ಯ ದಾಖಲಾತಿಗಳೊಂದಿಗೆ ದತ್ತು ಸ್ವೀಕಾರ ಕೇಂದ್ರ ಸಂಪರ್ಕಿಸಿ ದತ್ತು ಪಡೆದುಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಆಯೋಜಿಸಲಾದ ಅಂತರರಾಷ್ಟಿçÃಯ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಂಡಿತ ಜವಾಹರಲಾಲ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

 ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಜವಾಬ್ದಾರಿ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಸೃಜನಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು. ಮಕ್ಕಳ ಸುಂದರ ಬಾಲ್ಯವನ್ನು ರೂಪಿಸುವ ಹೊಣೆ ಪ್ರತಿ ಪೋಷಕ-ಪಾಲಕರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರಿಗೆ ದೇಶದ ಆಸ್ತಿಯನ್ನಾಗಿಸಬೇಕು. ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು. ದೇಶದ ಸಂಪದ್ಭರಿತ ಸಂಸ್ಕೃತಿ ಹಿರಿಮೆ ಗರಿಮೆ ಕುರಿತು ಬಾಲ್ಯದಿಂದಲೇ ಮಕ್ಕಳಲ್ಲಿ ಬೆಳೆಸಬೇಕು ಎಂದು ಹೇಳಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟಲು ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಅರಿವು ಮತ್ತು ಜಾಗೃತಿ ಅಭಿಯಾನ ಹಲವು ಇಲಾಖೆಗಳ ಮೂಲಕ ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರತಿಯೊಬ್ಬರು ಆದ್ಯತೆ ನೀಡಬೇಕು. ಹೆಣ್ಣು-ಗಂಡು ಎಂಬ ಭೇಧ ಮಾಡದೇ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರವು ಸಹ ಹಲವು ಯೋಜನೆಗಳನ್ನು ಜಾರಿಗೊಳಿಸಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಮಕ್ಕಳ ಕಲ್ಯಾಣಕ್ಕಾಗಿ, ಹಕ್ಕಳ ಹಕ್ಕುಗಳ ರಕ್ಷಣೆಗಾಗಿ ವಿವಿಧ ಸಂಘ-ಸAಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಕಾನೂನಾತ್ಮಕ ದತ್ತು ಪ್ರಕ್ರಿಯೆ ಸಾರ್ವಜನಿಕರು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ಬಾಲ ನ್ಯಾಯ ಕಾಯ್ದೆ 2015 ಸೆಕ್ಷನ್ 81ರನ್ವಯ 5 ವರ್ಷಗಳವರೆಗೆ ಸೆರೆಮನೆ ವಾಸದೊಂದಿಗೆ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾಗಿದ್ದಲ್ಲಿ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ ಮಾಡಬಹುದಾಗಿದ್ದು, ಕಾನೂನು ಬಾಹಿರವಾಗಿ ಮಕ್ಕಳನ್ನು ಸಾಕಿಕೊಳ್ಳುವುದು ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಅವರು ಮನವಿ ಮಾಡಿಕೊಂಡರು. 

ಈ ಸಂದರ್ಭದಲ್ಲಿ ಇಂಡಿಯಾ ವರ್ಲ್ಡ ರೆಕಾರ್ಡ್ ಪ್ರಶಸ್ತಿ ಪಡೆದ ಯಂಗ್ ಸೂಪರ್ ಟ್ಯಾಲೆಂಟೆಡ್ ಧಿತಿ ಹಣಮಂತ ಶಿರಶ್ಯಾಡ ಅವರಿಗೆ ಸನ್ಮಾನಿಸಲಾಯಿತು. 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಾಲಮಂದಿರದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ವಿಕಲಚೇತನರ ಅಧಿಕಾರಿ ರಾಜಶೇಖರ ಧೈವಾಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಬಸವರಾಜ ಜಗಳೂರ, ವಿಜಯಪುರ ಗ್ರಾಮೀಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮ್ಯಾಗೇರಿ, ನಗರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ದೀಪಾಕ್ಷಿ ಜಾನಕಿ, ಚಡಚಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಅನೀಲ, ಮುದ್ದೇಬಿಹಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಡಾ.ಬಾಬುರಾಜೇಂದ್ರ ನಾಯಿಕ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

 

ವಿಜಯಪುರ: ನಗರದ ವೈದ್ಯ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

 ಬೆಂಗಳೂರಿನಲ್ಲಿ ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ ಆಶ್ರಯದಲ್ಲಿ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಹಮ್ಮಿಕೊಂಡ 68 ನೇ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವೈದ್ಯಕೀಯ ಕ್ಷೇತ್ರದ ಸಾಧನೆಗೆ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ಜಸ್ಟೀಸ್ ಸಂತೋಷಕುಮಾರ ಹೆಗಡೆ, ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಡಾ.ಸಿ ಎನ್ ಮಂಜುನಾಥ್, ನಿವೃತ್ತ ಪೊಲೀಸ್ ಅಧಿಕಾರಿ ಟೈಗರ್ ಅಶೋಕ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದ ಸಂಘಟಕರು ಶ್ರವಣ ಲಕ್ಷ್ಮಣ ಹಾಗೂ ಇನ್ನಿತರ ಪ್ರಮುಖರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು