Friday, December 1, 2023

02-12-2023 EE DIVASA KANNADA DAILY NEWS PAPER

ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡಲು ವಿಫಲರಾದಲ್ಲಿ ಕಠಿಣ ಕ್ರಮ : ಸಿಇಓ ರಾಹುಲ್ ಶಿಂಧೆ ಎಚ್ಚರಿಕೆ

ವಿಜಯಪುರ : ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಇರುವುದರಿಂದ  ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಕೆಲಸ ಬಯಸಿ ಬರುವ ಕೂಲಿಕಾರರಿಗೆ  ಕೆಲಸ  ನೀಡಬೇಕು. ಕೆಲಸ ನೀಡಲು ವಿಫಲರಾದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ  ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು, 

ಬರ ಪರಿಸ್ಥಿತಿ ಇರುವುದರಿಂದ ಕೂಲಿ ಬಯಸಿ ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ಕೆಲಸ ನೀಡಬೇಕು. ಒಂದು ವೇಳೆ ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ಕೆಲಸ ನೀಡದಿದ್ದಲ್ಲಿ ಅಂತಹ ಫಲಾನುಭವಿಗಳಿಗೆ ಕಡ್ಡಾಯವಾಗಿ ನಿರುಧ್ಯೋಗ ಭತ್ಯೆ ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಸಚಿವರ ಸೂಚನೆಯಂತೆ ತಾಲೂಕು ಪಂಚಾಯತಿ ಹಂತದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ದಿನದಂದು ಸಭೆಯನ್ನು ಆಯೋಜನೆ ಮಾಡಿ, ಸಭೆಯ ನಡುವಳಿಗಳನ್ನು ಈ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಯಾವದೇ ಕಾರಣಕ್ಕೂ ಸಭೆ ರದ್ದುಗೊಳಿಸುವದನ್ನು, ಮುಂದೊಡುವದನ್ನು ಮಾಡದಂತೆ ಅವರು ಸೂಚಿಸಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುμÁ್ಟನ ಇಲಾಖೆಗಳು ಸಹ ನಮ್ಮ ಆರ್.ಡಿ.ಪಿ.ಆರ್ ಇಲಾಖೆಯ ಭಾಗವಾಗಿದ್ದು, ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅತ್ಯಂತ ಸಮನ್ವಯತೆಯಿಂದ ಕಾರ್ಯನಿರ್ವಹಿಸುವÀ ಮೂಲಕ ಬರ ನಿರ್ವಹಣೆಗೆ ಸನ್ನದ್ಧರಾಗುವಂತೆ ಅವರು ತಿಳಿಸಿದರು.

ಪ್ರಗತಿ ಕುಂಠಿತ ಇರುವ ಗ್ರಾಮ ಪಂಚಾಯತಿಗಳಿಗೆ ಖುದ್ದಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರುಗಳು ಭೇಟಿ ನೀಡಿ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ, ಅಧಿಕಾರಿಗಳ ಸಭೆ, ಗ್ರಾಮದಲ್ಲಿ ಸ್ವ-ಸಹಾಯ ಸಂಘದ ಸಭೆ, ಕಾಯಕ ಬಂಧುಗಳ ಸಭೆ ಆಯೋಜನೆ ಮಾಡುವ ಮೂಲಕ ಮಹಿಳೇಯರು ಹೆಚ್ಚಾಗಿ ಯೋಜನೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಎಲ್ಲ ಕೂಸಿನ ಮನೆಗಳು ಕಡ್ಡಾಯವಾಗಿ ಪ್ರಾರಂಭ ಮಾಡುವ ಮೂಲಕ ಮಹಿಳೆಯರು ಮತ್ತು ವಿಕಲಚೇತನರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ಅವರು ಸೂಚಿಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಮನೆ-ಮನೆಗೆ ಅಧಿಕಾರಿಗಳು ಭೇಟಿ ನೀಡಿ ಕರ ಪತ್ರ ಹಂಚುವದರ ಜೊತೆಗೆ ನಮೂನೆ-06ನ್ನು ಹಂಚಿಕೆ ಮಾಡಬೇಕು.. ಹಂಚಿಕೆ ಮಾಡಿದ ನಮೂನೆ-06ನ್ನು ಭರ್ತಿ ಮಾಡಿ ಕೂಲಿಕಾರರು ಗ್ರಾಮ ಪಂಚಾಯತಿಗೆ ಸಲ್ಲಿಸುವ ಮೂಲಕ ಕೆಲಸ ಪಡೆಯಬೇಕು. ಮುಖ್ಯವಾಗಿ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ, ಅಲ್ಪ ಸಂಖ್ಯಾತ ಸಮುದಾಯ, ಹಿಂದುಳಿದ ವರ್ಗದ ಜನರಿರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಐಇಸಿ ಚಟುವಟಿಕೆಗಳನ್ನು ಆಯೋಜಿಸಿ, ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು. 

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಗುಣಮಟ್ಟ ಮತ್ತು ಇತರೆ ವಿಷಯಗಳ ಪ್ರಗತಿ ಪರಿಶೀಲನೆಯನ್ನು ತಾಲೂಕು ಹಂತದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಜಂಟಿಯಾಗಿ ನಡೆಸಬೇಕು.ು. ಗ್ರಾಮ ಪಂಚಾಯತಿಯಲ್ಲಿ ತೆರಿಗೆ ವಸೂಲಾತಿಯನ್ನು ಕಡ್ಡಾಯವಾಗಿ ಪಿ.ಓ.ಎಸ್ ಮಷೀನ ಮೂಲಕ ಮಾಡಬೇಕು ಮತ್ತು ಪಿ.ಓ.ಎಸ್ ಮಷಿನ ಮೂಲಕವೇ ಸಾರ್ವಜನಿಕರಿಗೆ ರಶೀದಿ ನೀಡಬೇಕು.. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಕಡ್ಡಾಯವಾಗಿ ಇ-ಹಾಜರಾತಿಯಲ್ಲಿ ನಮೂದಿಸಬೇಕು. ಸಕಾಲ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಸ್ವೀಕೃತ್ತವಾಗುವ ದೂರುಗಳನ್ನು ಕಾಲಮಿತಿಯೊಳಗೆ ಕಡ್ಡಾಯವಾಗಿ ಪರಿಹರಿಸಬೇಕು ಎಂದು ಅವರು ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಾದ್ದಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಎಲ್ಲ ಸಿದ್ಧತಾ ಕ್ರಮಗಳನ್ನು ಮುಂಚಿತವಾಗಿ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಸ್ವೀಪ್ ಅಭಿಯಾನದ ಪೆÇೀಸ್ಟರ್ ಬಿಡುಗಡೆ: ಇದೇ ಸಂದರ್ಭದಲ್ಲಿ ಸ್ವೀಪ್ ಅಭಿಯಾನದ ಪೆÇೀಸ್ಟರ್ ಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಬಿಡುಗಡೆಗೊಳಿಸಿ ಮಾತನಾಡಿದ ಅವರು,  ದಿನಾಂಕ: 02 & 03 ಡಿಸೆಂಬರ್ ರಂದು ಕಡ್ಡಾಯವಾಗಿ ಎಲ್ಲ ಬೂತಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಪ್ರಯುಕ್ತ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಭಾಗವಾಗಿ ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತಿ & ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಅಭಿಯಾನವನ್ನು ಯಶಸ್ವಿಗೊಳಿಸಲು ಸೂಚಿಸಿದರು. ಈ ಅಭಿಯಾನದ ಕುರಿತು ಎಲ್ಲ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಹಾಗೂ ಸ್ವಚ್ಛ ವಾಹಿನಿಯಲ್ಲಿ ಜಿಂಗಲ್ಸ್ ಅಳವಡಿಸುವ ಮೂಲಕ ಪ್ರಚಾರ ಮಾಡಬೇಕು ಎಂದರು. ಒಟ್ಟಾರೆಯಾಗಿ ಎಲ್ಲ ಅಧಿಕಾರಿಗಳು ಅತೀ ಉತ್ಸಾಹದಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ, ಅನುμÁ್ಠನ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು