Saturday, December 2, 2023

ವಿ ಪಿ ಸಿಂಗ್ ಪ್ರಶಸ್ತಿ: ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿಗೆ ಪ್ರಧಾನ

ಬೆಂಗಳೂರು:  ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್‌ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ 

ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಅವರಿಗೆ ವಿ ಪಿ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಎಚ್‌.ಎಂ.ರೇವಣ್ಣ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌, ಮಾಜಿ ಸಚಿವ ಎಚ್‌.ಆಂಜನೇಯ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಆದಿಜಾಂಬವ ಬೃಹನ್ಮಠದ ಷಡಕ್ಷರ ಮುನಿ ದೇಶೀಕೇಂದ್ರ ಸ್ವಾಮೀಜಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ, ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಡಾ. ಮನೋಹರ್ ಯಾದವ್, ಪ್ರಜಾಪ್ರಗತಿ ಕನ್ನಡ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ,

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್‌.ನೀಲಕಂಠ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಹೆಣ್ಣು ಭ್ರೂಣ ಹತ್ಯೆ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಒತ್ತಾಯ

ವಿಜಯಪುರ: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಹೆಣ್ಣುಭ್ರೂಣ ಹತ್ಯೆಯನ್ನು ತಡೆದು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಗರದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಮೈಸೂರಿ, ಮಂಡ್ಯ ಜಿಲ್ಲೆಯಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ- ಹತ್ಯೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಪೆÇಲೀಸ್‍ರ ಕಾರ್ಯ ಪ್ರಶಂಸನಿಯ. ಆದರೆ ಕೇವಲ ಈ ಜಾಲ ದಕ್ಷಿಣ ಕರ್ನಾಟಕವಲ್ಲದೇ ಉತ್ತರ ಕರ್ನಾಟಕದಲ್ಲಿಯೂ ಸಕ್ರಿಯವಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ರಾಜಕಾರಣಿಗಳು ಉದ್ಯಮಿಗಳು ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಆಸ್ಪತ್ರೆಗಳಲ್ಲಿ ಈ ರೀತಿಯ ಪ್ರಕರಣಗಳು ಯಥೇಚ್ಛವಾಗಿ ನಡೆಯುತ್ತಿದೆ ಇದನ್ನು ತಡೆಯುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಪಾಪ ಕೃತ್ಯಗಳು ಬೆಳಕಿಗೆ ಬಂದಿಲ್ಲ. ಸರ್ಕಾರ ಈ ಕೂಡಲೇ ಒಂದು ತನಿಖಾ ತಂಡ ರಚಿಸಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಜಿಲ್ಲೆಯಲ್ಲಿ ನಡೆದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮೈಸೂರು- ಮಂಡ್ಯ ಜಿಲ್ಲೆಯಲ್ಲಿ ಬಂಧನಕ್ಕೆ ಒಳಗಾದ ಈ ಜಾಲದ ಆರೋಪಿಗಳು ಹೇಳುವಂತೆ ಪ್ರತಿ ತಿಂಗಳು 22 ರಿಂದ 25 ಗರ್ಭಪಾತಗಳನ್ನು ಮಾಡಿಸಿದ್ದು, ಕಳೆದ ಎರಡು ವರ್ಷಗಳಲ್ಲಿ ಸುಮಾರು 900 ಭ್ರೂಣ ಹತ್ಯೆಯನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಇದೊಂದು ದೊಡ್ಡ ಅಪರಾಧ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವುದು ಸರ್ಕಾರದ ಕರ್ತವ್ಯ ವ್ಯವಸ್ಥಿತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ರಾಕೇಶ ಇಂಗಳಗಿ, ಹಮೀದ್ ಇನಾಮ್ದಾರ್, ಮಾಳಪ್ಪ ಮಯೂರ, ಶ್ರೀಶೈಲ ಮಠ, ಮೈಬೂಬ ತಾಂಬೋಳಿ, ರಾಘವೇಂದ್ರ ಚಲವಾದಿ, ಸುರೇಂದ್ರ ಕುನಸಲೆ, ಕಾಂತು ಕಗ್ಗೋಡ, ಪ್ರಕಾಶ ದಂಡಿನ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಡಿ.6 ರಿಂದ ಮೂರು ದಿನ ಮಹಾಪುರುಷರ ಛಾಯಾ ಚಿತ್ರ ಪ್ರದರ್ಶನ


ವಿಜಯಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಿ.6, 7, ಹಾಗೂ 8 ರಂದು ಬಾಬಾಸಾಹೇಬರ ಹಾಗೂ ಮಹಾಪುರುಷರುಗಳ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಹಾಗೂ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನವನ್ನು ಅತ್ಯಂತ ವಿಶೇಷವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಆ ನಿಟ್ಟಿನಲ್ಲಿ ರಾಷ್ಟ್ರ ಸಂತರು, ಮಹಾಪುರುಷರುಗಳ 1000 ಕ್ಕೂ ಅಧಿಕ ಛಾಯಾಚಿತ್ರಗಳನ್ನು ಇಲ್ಲಿನ ಜಲನಗರದಲ್ಲಿರುವ ಸಾರಿಪುತ್ರ ಬೋಧಿದಮ್ಮ ಬುದ್ಧವಿಹಾರದಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಸಾರ್ವಜನಿಕರು ಮುಕ್ತವಾಗಿ ಅವುಗಳನ್ನು ವೀಕ್ಷಣೆ ಮಾಡಬಹುದಾಗಿದೆ ಎಂದರು.

ಡಿ.6 ರಿಂದ 8 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಡಾ. ಬಾಬಾಸಾಹೇಬರ ಅಪರೂಪದ ಛಾಯಾಚಿತ್ರಗಳನ್ನು ನಿಪ್ಪಾಣಿಯ ದೀಪಕ ಆಕಾರಾಮ ಮಧಾಳೆ ಹಾಗೂ ನಂದಕುಮಾರ ಮಧಾಳೆ ಸಂಗ್ರಹಣೆ ಮಾಡಿರುವ ಛಾಯಾಚಿತ್ರಗಲಾಗಿವೆ ಎಂದರು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಅನುಯಾಯಿಗಳು, ಪ್ರಗತಿಪರ ಚಿಂತಕರು, ಬುದ್ಧಾನುಯಾಯಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಬೇಕು ಎಂದರು.

ನಾನು ಸರ್ಕಾರಿ ನೌಕರಿಯಿಂದ ನಿವೃತ್ತಿಯಾಗಿ, ಕಾಂಗ್ರೆಸ್ ಪಕ್ಷ ಸೇರಿಕೊಂಡು ಪಕ್ಷದ ಕಾರ್ಯಾಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ ವಿಜಯಪುರ ಎಸ್ಸಿ ಮೀಸಲು ಲೋಕಸಭೆ ಮತಕ್ಷೇತ್ರವಾಗಿದ್ದು, ಕಳೆದ 3 ಬಾರಿ ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು ಆದರೆ ಗೆಲ್ಲಲು ಸಾಧ್ಯವಾಗಿಲ್ಲ. ಸುಮಾರು 2 ಲಕ್ಷ ಛಲವಾದಿ ಸಮುದಾಯ ಹೊಂದಿರುವ ನಾನು ಈ ಬಾರಿ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಪಕ್ಷ ಟಿಕೆಟ್ ನೀಡಿದಲ್ಲಿ ಗೆದ್ದು ಬಂದು ಜನರ ಸೇವೆ ಮಾಡುತ್ತೇನೆ ಎಂದು ಆಶಯ ವ್ಯಕ್ತಪಡಿಸಿದರು.

ಮಾಜಿ ಶಾಸಕ ರಾಜು ಆಲಗೂರ ಅವರು ಆಕಾಂಕ್ಷಿಯಾಗಿದ್ದು, ನಿಮಗೆ ಟಿಕೆಟ್ ಹೇಗೆ ಸಿಗುತ್ತೆ ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪೆÇ್ರ. ರಾಜು ಆಲಗೂರ ನಮ್ಮ ನಾಯಕರು. ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆ ಅವರು ಕಣದಲ್ಲಿ ಉಳಿಯುತ್ತೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಸಹಿತ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದರು.

ಮುಖಂಡರಾದ ಶಶಿಕಾಂತ ಹೊನವಾಡಕರ, ನಾಗರಾಜ ಲಂಬು, ರಮೇಶ ಯಡಹಳ್ಳಿ, ಅನಿಲ ಹೊಸಮನಿ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

03-12-2023 EE DIVASA KANNADA DAILY NEWS PAPER