Monday, December 4, 2023

ಅಮೋಘ ಲೋಗಾಂವಿ ವಿಜಯಪುರ ನಗರ ಅಧ್ಯಕ್ಷರಾಗಿ ಆಯ್ಕೆ

 


ಈ ದಿವಸ ವಾರ್ತೆ

ವಿಜಯಪುರ : ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ‌ ವಿಜಯಪುರ ನಗರಾಧ್ಯಕ್ಷರನ್ನಾಗಿ ಯುವ ಮುಖಂಡ ಅಮೋಘ ಲೋಗಾಂವಿ ಅವರನ್ನ ನೇಮಕ‌ ಮಾಡಲಾಗಿದೆ‌.

ಸಮಾಜದಲ್ಲಿ ಶೋಷಿತ ,ನೊಂದ ಹಾಗೂ ಧ್ವನಿ‌ಇಲ್ಲದವರ ಪರವಾಗಿ ಅಮೋಘ ಅವರು ಸಾಕಷ್ಟು ಹೋರಾಟ ಹಾಗೂ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ರಾದ ಅಮಿತ್ ಎ.ಕೆ. ಹಾಗೂ ಪ್ರಧಾನ‌ ಕಾರ್ಯದರ್ಶಿ ಗಳಾದ ಶಂಕರ್ ಬಿ.ಜೆ. ಅವರು ವಿಜಯಪುರ ನಗರ ಘಟಕದ ಹಿತರಕ್ಷಣಾ ಸಮಿತಿಯ‌ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸಮಾಜದ ಹಿತದೃಷ್ಟಿಯಿಂದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯ ಪ್ರಗತಿಗಾಗಿ ಮತ್ತು ಸಮಾಜದ ಜಾಗೃತಿಗಾಗಿ ಅಮೋಘ ಅವರು ತೋರಿಸುವ ಕಾಳಜಿ‌ಯಿಂದ ಅವರನ್ನ‌ ನೇಮಕ‌ ಮಾಡಲಾಗಿದ್ದು ಮುಂಬರುವ ದಿನಗಳಲ್ಲಿ ಸಮಾಜವನ್ನು‌ ಇನ್ನಷ್ಟು ಒಗ್ಗೂಡಿಸಲು‌ ಹಾಗೂ ನ್ಯಾಯ ಕೊಡಿಸಲು‌ ಪ್ರಾಮಾಣಿಕ ಪ್ರಯತ್ನ ಮಾಡಬೇಕು  ಸಮಿತಿ‌ಯ ಪದಾಧಿಕಾರಿಗಳು ಆಶಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು : ಸಚಿವ ಪಾಟೀಲ

ಈ ದಿವಸ ವಾರ್ತೆ

ವಿಜಯಪುರ; ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಇಂಡಸ್ಟ್ರೀಸ್ ನ ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವರು ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು.  ಅಲ್ಲದೇ, ಘಟನಾ ಸ್ಥಳಕ್ಕೆ ತೆರಳಿ ಮಧ್ಯರಾತ್ರಿ ಬಹಳ ಹೊತ್ತಿನವರೆಗೂ ರಕ್ಷಣಾ ಕಾರ್ಯಾಚರಣೆ ಪರಿಶೀಲನೆ ನಡೆಸಿದರು.  ಘಟನೆಯ ಕುರಿತು ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ, ಜಿ. ಪಂ. ಸಿಇಓ ರಾಹುಲ ಶಿಂಧೆ ಅವರಿಂದ ಘಟನೆ ಮತ್ತು ನಂತರ ಕೈಗೊಳ್ಳಲಾದ ರಕ್ಷಣಾ ಕಾರ್ಯಾಚರಣೆಯ ಕುರಿತು ಸಂಪೂರ್ಣ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸೇರಿದ್ದ ಉಳಿದ ಕಾರ್ಮಿಕರೊಂದಿಗೆ ಮಾತನಾಡಿದ ಸಚಿವರು, ಈ ಅವಘಡದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುವುದು.  ಮೆಕ್ಕೆಜೋಳದ ರಾಶಿಯಡಿ ಸಿಲುಕಿರುವ ಎಲ್ಲ ಕಾರ್ಮಿಕರ ಶವಗಳನ್ನು ಹೊರತೆಗೆದು ಶವ ಪರೀಕ್ಷೆಯ ಬಳಿಕ ಅವರ ಮೂಲ ರಾಜ್ಯವಾದ ಬಿಹಾರಕ್ಕೆ ಗೌರವಪೂರಕವಾಗಿ ಕಳುಹಿಸಿ ಕೊಡಲಾಗುವುದು.  ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಾಂತ್ವನ ಹೇಳಿದರು.  ಅಲ್ಲದೇ, ಅವರಿಗೆ ನೈತಿಕವಾಗಿ ಧೈರ್ಯ ತುಂಬಿದರು.  

ಈ ದುರ್ಘಟನೆಯಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು.  ಇದರ ಜೊತೆಗೆ ರಾಜಗುರು ಇಂಡಸ್ಟ್ರಿಸ್  ಮಾಲಿಕರಿಂದಲೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.  ಜಿಲ್ಲಾ ಉಸ್ತುವಾರಿ ಸಚಿವನಾಗಿ ಸರಕಾರದಿಂದ ಎಲ್ಲ ರೀತಿಯ ನೆರವು ಒದಗಿಸುವುದಾಗಿ ಕಾರ್ಮಿಕರಿಗೆ ಭರವಸೆ ನೀಡಿದರು.

ಇದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಘಟನೆ ಮನಸಿಗೆ ನೋವುಂಟು ಮಾಡಿದೆ.  ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ, ಬೆಳಗಾವಿ ಅಧಿವೇಶನದಿಂದ ಇಲ್ಲಿಗೆ ನೇರವಾಗಿ ಬಂದಿದ್ದೇನೆ.  ಘಟನೆ ನಡೆದ ತಕ್ಷಣದಿಂದ ಡಿಸಿ, ಎಸ್ಪಿ ಜೊತೆ ಸತತ ಸಂಪರ್ಕದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯ ಕುರಿತು ಸತತವಾಗಿ ಮಾಹಿತಿ ಪಡೆದಿದ್ದೇನೆ.  ಈಗ ಮೆಕ್ಕೆಜೋಳದ ರಾಶಿಯಡಿ ಸಿಲುಕಿರುವ ಕಾರ್ಮಿಕರನ್ನು ಹೊರ ತೆಗೆಯಲು ಮೊದಲ ಆದ್ಯತೆ ನೀಡಲಾಗುತ್ತಿದೆ.  ಈ ಘಟನೆಯಲ್ಲಿ ಸಾವಿಗೀಡಾದವರ ಮೃತದೇಹಗಳನ್ನು ಹೊರತೆಗೆದು ಶವಪರೀಕ್ಷೆಯ ಬಳಿಕ ಅವರ ಊರುಗಳಿಗೆ ಕಳುಹಿಸಲಾಗುವುದು.  ಬಿಹಾರದ ಆಯಾ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಆಯಾ ಕಾರ್ಮಿಕರ ಊರುಗಳಿಗೆ ಪಾರ್ಥಿವ ಶರೀರ ಕಳುಹಿಸಲು ಸಕಲ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.  

ಈ ಘಟನೆಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.  ಈ ಕುರಿತು ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.  ಈ ಘಟನೆಯಲ್ಲಿ ಯಾರದೇ ತಪ್ಪಿದ್ದರೂ ಆ ಕುರಿತೂ ವಿಚಾರಣೆ ನಡೆಸಲಾಗುವುದು.  ಒಟ್ಟಾರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.  ಅಲ್ಲದೇ, ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಮಾನವೀಯತೆ ದೃಷ್ಠಿಯಿಂದ ರಾಜ್ಯ ಸರಕಾರದಿಂದ ಪರಿಹಾರ ನೀಡಲು ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.  ಅಷ್ಟೇ ಅಲ್ಲ, ರಾಜಗುರು ಇಂಡಸ್ಟ್ರಿಸ್ ಮಾಲಿಕರಿಂದಲೂ ಪರಿಹಾರ ನೀಡುವಂತೆ ಸೂಚಿಸಲಾಗುವುದು.  ಗಾಯಾಳುಗಳಿಗೂ ಪರಿಹಾರ ನೀಡಲಾಗುವುದು ಎಂದು ಎಂ. ಬಿ. ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ

ವಿಜಯಪುರ:

 ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿಯಾಗಿದ್ದು, ಈ ಗೆಲುವಿನ ನಗೆ ಇದೇ ರೀತಿ ಮುನ್ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷಗಳು ಎಷ್ಟೇ ಬಿಜೆಪಿ ಬಗ್ಗೆ ವಿರೋಧ ನಿಲುವು ಬಿತ್ತಲು ಪ್ರಯತ್ನಿಸಿದರೂ ಸಹ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿ ಮತ್ತೊಮ್ಮೆ ಮೋದಿ ಎನ್ನುವ ಸಂದೇಶವನ್ನು ಈ ಚುನಾವಣೆ‌ ಮೂಲಕ ಇಂದೇ ರವಾನಿಸಿದ್ದಾರೆ. ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಘಢ  ಹೀಗೆ ಮೂರು ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಪ್ರಧಾನಮಂತ್ರಿ ‌ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಶುದ್ದ ಆಡಳಿತ,‌ ಬಿಜೆಪಿ ಜನಪರ ಚಿಂತನೆ,ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇದು ಖಂಡಿತವಾಗಿಯೂ ಲೋಕಸಭಾ ಚುನಾವಣೆ ದಿಕ್ಸೂಚಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅರಳುವುದು ಖಚಿತವಾಗಿದೆ, ಈ ಗೆಲುವು ಸಮಸ್ತ ಕಾರ್ಯಕರ್ತರ ಗೆಲುವಾಗಿದೆ ಎಂದು ಅವರು ಹೇಳಿದ್ದಾರೆ.
ಕಿಸಾನ್ ಸಮ್ಮಾನ್, ಉಜ್ವಲ ಯೋಜನೆ, ಜನಧನ್ ಹೀಗೆ ಜನರನ್ನು ನೇರವಾಗಿ ತಲುಪುವ ಅನೇಕ ಯೋಜನೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿದೆ, ಹೀಗಾಗಿ ಅಭಿವೃದ್ಧಿಗೆ ಜನತೆ ಬಿಜೆಪಿಗೆ‌ ಬೆಂಬಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು