Tuesday, December 5, 2023

ರಾಜಗುರು ಫುಡ್ಸ್ ಗೋದಾಮಿನ ದುರಂತ ರಾಜ್ಯ ಸರ್ಕಾರದಿಂದ ಮೃತ ಕುಟುಂಬಗಳಿಗೆ 2ಲಕ್ಷ ರೂ.ಗಾಯಾಳುಗಳಿಗೆ 50 ಸಾವಿರ ರೂ : -ಸಚಿವ ಡಾ.ಎಂ.ಬಿ.ಪಾಟೀಲ

ವಿಜಯಪುರ : ತಾಲೂಕಿನ ಅಲಿಯಾಬಾದ್ ಗ್ರಾಮದ ಕೈಗಾರಿಕಾ ಪ್ರದೇಶದ ಬ್ಲಾಕ್-2ರಲ್ಲಿರುವ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದ ದುರಂತದಲ್ಲಿ ಸಾವಿಗೀಡಾದ 7 ಜನ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕಿಶೋರ ಜೈನ್ ಎಂಬುವರ ಒಡೆತನದ ರಾಜಗುರು ಫುಡ್ಸ್ ವ್ಯಾಪಾರ ಕೇಂದ್ರದಲ್ಲಿ 500 ರಿಂದ 600 ಟನ್ ಸಾಮಥ್ರ್ಯದ 3 ಸರಣಿ ಟ್ಯಾಂಕ್‍ಗಳಿದ್ದು, ಈ ಟ್ಯಾಂಕ್‍ಗಳ ಪೈಕಿ ಒಂದು ಟ್ಯಾಂಕ್ ಸರಣಿ ಕಂಬ ಮುರಿದು ಕುಸಿದು ಬಿದ್ದಿರುವುದರಿಂದ ಟ್ಯಾಂಕ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಇದರಲ್ಲಿ 8 ಜನ ಕಾರ್ಮಿಕರ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಿಸಿ ಗಾಯಾಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ ಹಾಗೂ ಈ ಘಟನೆಯಲ್ಲಿ  ದುರಾದೃಷ್ಟವಶಾತ್ 7 ಜನ ಕಾರ್ಮಿಕರು ಮೃತಪಟ್ಟಿದ್ದು, ಮೃತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಿಸಿದ್ದು, ವ್ಯಾಪಾರ ಕೇಂದ್ರದ ಮಾಲೀಕರಿಂದ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ರಾಜ್ಯದ ಯಾವುದೇ ಕೈಗಾರಿಕೆಗಳಲ್ಲಿ ಅನಾಹುತಕ್ಕೆ ಆಸ್ಪದ ನೀಡದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಹಾಗೂ ಸುರಕ್ಷಾ ಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ಹಾಗೂ ಕೈಗಾರಿಕಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮ ಅಳವಡಿಸಿಕೊಳ್ಳುವಂತೆ ಕ್ರಮ ವಹಿಸಲಾಗುವುದು. ವ್ಯಾಪಾರ ಕೇಂದ್ರದಲ್ಲಿ ಆಗಿರುವ ಘಟನೆಗೆ ತಾಂತ್ರಿಕ ದೋಷ ಮತ್ತು ನ್ಯೂನ್ಯತೆಗಳ ಕುರಿತು ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು. 

ದಿನಾಂಕ : 04-12-2023 ರಂದು ಸಂಜೆ 5 ಗಂಟೆಗೆ ಈ ಘಟನೆ ಸಂಭವಿಸಿದ್ದು, ಘಟನೆ ಮಾಹಿತಿ ದೊರೆತ ನಂತರ ಸಚಿವರು ಬೆಳಗಾವಿಯಿಂದ ಮಧ್ಯರಾತ್ರಿ ಘಟನಾ ಸ್ಥಳಕ್ಕೆ ಆಗಮಿಸಿ, ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಿಂದ ರಕ್ಷಣಾ ಕಾರ್ಯಾಚರಣೆ ಹಾಗೂ ಗಾಯಾಳುಗಳ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡರು. ರಕ್ಷಣಾ ಕಾರ್ಯಾಚರಣೆಗೆ ಸೂಕ್ತ ನಿರ್ದೇಶನ ನೀಡಿದರು. ದುರಂತದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸೂಕ್ತ ವೈದ್ಯೋಪಚಾರ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೃತಪಟ್ಟ ಕಾರ್ಮಿಕರು : ಗೋದಾಮಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 36 ವರ್ಷದ ರಂಭಿತ, 20 ವರ್ಷದ ರಾಜೇಶ ಮುಖಿಯಾ, 40 ವರ್ಷದ ಶಂಭು ಮುಖಿಯಾ, 40 ವರ್ಷದ ರಾಮಬಾಲಕ, 55 ವರ್ಷದ ಲುಕೋ ಯಾಧವ, 18 ವರ್ಷದ ಕೃಷ್ಣಕುಮಾರ ಮುಖಿಯಾ ಹಾಗೂ 33 ವರ್ಷದ ಧುಲಾಚಂದ ಮುಖಿಯಾ ಎಂಬ ಕಾರ್ಮಿಕರು ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಘಟನೆಯ ವಿವರ : ತಾಲೂಕಿನ ಅಲಿಯಾಬಾದ ಕೈಗಾರಿಕಾ ಪ್ರದೇಶದಲ್ಲಿ ರಾಜಗುರು ಫುಡ್ಸ್ ಎಂಬ ವ್ಯಾಪಾರ ಕೇಂದ್ರದಲ್ಲಿ 40 ರಿಂದ 50 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರದಲ್ಲಿ ಅವಶ್ಯಕತೆಯನುಸಾರ 100 ರಿಂದ 150 ಕಾರ್ಮಿಕರನ್ನು ಗುತ್ತಿಗೆ  ಪಡೆಯಲಾಗುತ್ತದೆ. ಡಿ.4ರಂದು ಸಂಜೆ 5 ಗಂಟೆಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ  ಮೆಕ್ಕೆಜೋಳ ತುಂಬಿರುವ ಒಂದು ಟ್ಯಾಂಕ್ ಸರಣಿ ಕಂಬ ಮುರಿದು ಬಿದ್ದಿದ್ದು, ಕಾರ್ಮಿಕರು ಭಯಭೀತರಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಅಂದಾಜು 50 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ   8 ಜನ ಕಾರ್ಮಿಕರಿಗೆ ಅಲ್ಲಿಂದ ಪಾರಾಗಲು ಸಾಧ್ಯವಾಗದ ಕಾರಣ, ಮೆಕ್ಕೆಜೋಳದ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಘಟನೆ ಕುರಿತು ಸಂಜೆ 6 ಗಂಟೆಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಅಗ್ನಿಶಾಮಕ, ಮಹಾನಗರಪಾಲಿಕೆ ಪೋಲಿಸ್ ಸಿಬ್ಬಂದಿಯೊಂದಿಗೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವ್ಯಕ್ತಿಯನ್ನು ರಕ್ಷಿಸಿ ಅವರನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಿದ್ದಾರೆ. ನಂತರ ಎಸ್‍ಡಿಆರ್‍ಎಫ್ ಮತ್ತು ಎನ್‍ಡಿಆರ್‍ಎಫ್ ತಂಡಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಅಂದಾಜು 12 ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಸಿಲುಕಿಕೊಂಡಿರುವ 7 ಮೃತ ದೇಹಗಳನ್ನು  ಹೊರತೆಗೆಯಲಾಗಿದೆ.

ಮೃತ ದೇಹಗಳನ್ನು ಹತ್ತಿರದ ವಿಮಾನ ನಿಲ್ಧಾಣದಿಂದ ಏರ್ ಲಿಪ್ಟ್ ಮಾಡಿ ಪಾಟ್ನಾ ವಿಮಾನ ನಿಲ್ಧಾಣದಕ್ಕೆ ತಲುಪಿದ ನಂತರ ಮೃತ ದೇಹಗಳನ್ನು ಮೃತರ ಮನೆಯವರೆಗೆ ತಲುಪಿಸವ ವ್ಯವಸ್ಥೆಯನ್ನು ಮಾಡಲಾಗಿದೆ. ಸದರಿ ಕಾರ್ಯಾಚರಣೆಯಲ್ಲಿ  ಜೆಸಿಬಿ ಮತ್ತು ಹಿಟಾಚಿಗಳನ್ನು ಬಳಸಲಾಗಿದ್ದು, 24 ಜನ ಬೆಳಗಾವಿಯಿಂದ ಹಾಗೂ 26 ಜನ ಕಲಬುರಗಿಯಿಂದÀ ಎಸ್‍ಡಿಆರ್‍ಎಫ್ ತಂಡಗಳು, 30ಜನರನ್ನೊಳಗೊಂಡ ಮಹಾರಾಷ್ಟ್ರದ ಪುಣೆಯಿಂದ ಎನ್‍ಡಿಆರ್‍ಎಫ್ ತಂಡ ಭಾಗವಹಿಸಿತ್ತು. 

ಸಚಿವರಿಂದ ಶ್ರದ್ಧಾಂಜಲಿ : ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆ  ಆವರಣಕ್ಕೆ ತೆರಳಿ ವಿಜಯಪುರ ಗೋದಾಮಿನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. 

ಸಚಿವರಿಂದ ಪ್ರಶಂಸೆ ಪತ್ರ : ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದ ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಡೆಪ್ಯೂಟಿ ಕಮಾಂಡೆಂಟರ್ ಆರ್.ಅರವಿಂದ ನೇತೃತ್ವದ ಬೆಳಗಾವಿ ಹಾಗೂ ಡೆಪ್ಯೂಟಿ ಕಮಾಂಡೆಂಟ್ ಸಲಾವುದ್ದೀನ್ ನೇತೃತ್ವದ ಕಲ್ಬುರ್ಗಿ  ಎಸ್‍ಡಿಆರ್‍ಎಫ್ ತಂಡ ಹಾಗೂ ಅನೀಲ ತಾಲಕೋಟ್ರಾ ನೇತೃತ್ವದ ಎನ್‍ಡಿಆರ್‍ಎಫ್ ತಂಡ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವನೆ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ್ ಸೌದಾಗರ, ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹಳ್ಳಿ, ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ ಹುಬ್ಬಳ್ಳಿ, ಕಂದಾಯ ಇಲಾಖೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರಿಗೆ, ಬಿಎಲ್‍ಡಿಇ ಫಾರೆನ್ಸಿಕ್ ಎಚ್‍ಓಡಿ ಸೇರಿದಂತೆ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ ಎಲ್ಲ ಇಲಾಖೆ ಸಿಬ್ಬಂದಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಕೃತಜ್ಞತೆ ಸಲ್ಲಿಸಿ ಪ್ರಶಂಸೆ ಪತ್ರ ನೀಡಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.


06-12-2023 EE DIVASA KANNADA DAILY NEWS PAPER

ಡಿ.7 ರಂದು ರೈತರ ವಿವಿಧ ಜ್ವಲಂತ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸುವರ್ಣ ಸೌಧಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆಯಿಂದ ಮುತ್ತಿಗೆ

ವಿಜಯಪುರ : ರಾಜ್ಯ ಹಾಗೂ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಹಿಂಪಡೆಯುವ ಹಾಗೂ ಬಗೆಹರಿಸುವಂತೆ ಆಗ್ರಹಿಸಿ ಡಿಸೆಂಬರ್ 7ರಂದು ಸುವರ್ಣ ಸೌಧ ಮುತ್ತಿಗೆ ಹಾಕಿ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಧರಣಿ ಮಾಡಲಾಗುವುದು, ಜಿಲ್ಲೆಯಿಂದ 3000ಕ್ಕಿಂತಲೂ ಹೆಚ್ಚು ರೈತರು ರಾಜ್ಯಾಧ್ಯಕ್ಷರಾದ ಚುನಪ್ಪಾ ಪೂಜೇರಿ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು  20000 ಕ್ಕೂ ಹೆಚ್ಚು ರೈತರು ಹೋರಾಟದಲ್ಲಿ ಪಾಲ್ಗೊಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಕುಬಕಡ್ಡಿ ಹೇಳಿದರು.

ನಗರದಲ್ಲಿ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಬರಗಾಲ ಪರಿಹಾರ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆರಿಸಬೇಕು, ಈ ನಿಟ್ಟಿನಲ್ಲಿ ಬೆಳಗಾವಿ ಚಲೋ ಕರೆ ಕೊಡಲಾಗಿದೆ, ಕೂಡಲೇ ಸರಕಾರ ನೆಪ ಮಾತ್ರಕ್ಕೆ ಉತ್ತರ ಕರ್ನಾಟಕದಲ್ಲಿ 10 ದಿನಗಳ ಕಾಲ ಪ್ರವಾಸಕ್ಕೆ ಬಂದ ಹಾಗೆ ಬಂದು ಹೋಗುವ ನೆಪ ಮಾತ್ರದ ಅಧಿವೇಶನ ನಮಗೆ ಬೇಕಾಗಿಲ್ಲ, ಕೂಡಲೇ ರೈತರಿಗೆ ಅನುಕೂಲ ಆಗುವ ಯೋಜನೆಗಳನ್ನು ತರಬೇಕು ಎಮದು ಹೇಳಿದರು.

ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಸಂಗಮೆಶ ಸಗರ ಮಾತನಾಡುತ್ತಾ ಬರಗಾಲದ ನಿಮಿತ್ಯ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಪ್ರತಿ ಎಕರೆಗೆ 50000 ಪರಿಹಾರ ನೀಡಬೇಕು, ರೈತರಿಗೆ ಕಂಟಕವಾಗಿರುವ ಕೃಷಿ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ, ಜಾನುವಾರು ಹತ್ಯ ಕಾಯ್ದೆಗಳನ್ನು ಹಿಂಪಡೆಯಬೇಕು, ವಿದ್ಯುತ್ ಇಲಾಖೆಯನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದುನ್ನು ಬಿಟ್ಟು ಸರಕಾರದಿಂದಲೇ ಮುಂದುವರೆಸಬೇಕು, ಮೊದಲಿನಂತೆ ರೈತರ ಕೃಷಿ ಪಂಪಸೆಟ್‍ಗಳಿಗೆ ಹಗಲು 12 ಘಂಟೆ 3 ಫೆಸ್ ಹಾಗೂ ರಾತ್ರಿ ಸಿಂಗಲ್ ಫೆಸ್ ಉಚಿತ ವಿದ್ಯುತ್ ನೀಡಬೇಕು, ರೈತರಿಗೆ ಇಲ್ಲಿಯವರೆಗೆ 3-4 ವರ್ಷಗಳಿಂದ ಬಾಕಿ ಉಳಿದ ಬೆಳೆ ವಿಮೆಯನ್ನು ಕೂಡಲೇ ಕೊಡಬೇಕು, ಕೃಷ್ಣಾ ನದಿಯ ಆಲಿಮಟ್ಟಿ ಆಣೆಕಟ್ಟನ್ನು ಎತ್ತರಿಸಿ ಆದಕ್ಕೆ ನಷ್ಟಗೊಂಡ ರೈತರಿಗೆ ಪರಿಹಾರ ನೀಡಬೇಕು, ಕಬ್ಬಿಗೆ ಪ್ರತಿ ಟನ್ನಗೆ 5000 ರೂಪಾಯಿ ಘೋಷóಣೆ ಮಾಡಿ, ಕಬ್ಬಿಗೂ ವಿಮೆ ವ್ಯವಸ್ಥೆ ಮಾಡಬೇಕು, ಜಿಲ್ಲೆಯಲ್ಲಿ ಅತೀ ಹೆಚ್ಚು ಬೆಳೆಯುತ್ತಿರುವ ದ್ರಾಕ್ಷಿಗೆ, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಅದರ ಉಪ ಉತ್ಪನ್ನಗಳನ್ನು ಮಾಡುವಂತೆ ಉತ್ತೆಜಿಸುವ ಯೋಜನೆ ಮಾಡಬೇಕು, ಜಿಲ್ಲೆಯಲ್ಲಿ ಮಾಡಲಾಗಿರುವ ಎಲ್ಲಾ ನೀರಾವರಿ ಯೋಜನೆಯ ಕಾಲುವೆ ಹಾಗೂ ಉಪ ಕಾಲುವೆಗಳಲ್ಲಿ ಮಣ್ಣು ಬಿದ್ದು, ಜಾಲಿಕಂಠಿಗಳು ಬೆಳೆದು ನೀರು ಸಾಗಲು ಆಗುತ್ತಿಲ್ಲ,  ಸ್ವಚ್ಛತೆ ಮಾಡಬೇಕು, ರೈತರಿಗೆ ಸಂಭಂದಿಸಿದ ಕೃಷಿ, ಅರಣ್ಯ, ತೋಟಗಾರಿಕೆ, ಪಶು ಸಂಗೋಪನೆ  ಇಲಾಖೆಯಲ್ಲಿ ಖಾಲಿ ಆಗಿರುವ ಹುದ್ದೆಗಳನ್ನು ತುಂಬಬೇಕು, ಹೊಸದಾಗಿ ತಾಲೂಕುಗಳನ್ನು ಘೋಷಣೆ ಮಾಡಿ ಸುಮಾರು 6-7 ವರ್ಷಗಳೇ ಕಳೆದರೂ ಇನ್ನೂ ಯಾವುದೇ ಇಲಾಖೆಯ ಕಚೇರಿ  ಆಗಿಲಿ ಅಭಿವೃದ್ದಿಯಾಗಲಿ ಆಗಿಲ್ಲ, ಕೂಡಲೇ ಮಾಡಬೇಕು. ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ಸರಕಾರ ನಡೆಯುತ್ತಿರುವ ಚಳಿಗಾಲದ ಅಧಿವೆಶನದಲ್ಲಿ ಬೇಷರತ್ತಾಗಿ ಮಾಡಬೆಕು ಎಂದು ಆಗ್ರಹಿಸಿದರು.

ಕೋಲಾರ ತಾಲೂಕಾ ಅಧ್ಯಕ್ಷರಾದ ಸೋಮು ಬಿರಾದಾರ ಮಾತನಾಡುತ್ತಾ ರೈತರ ತುಟಿಗೆ ಜೇನು ಸವರಿ, ತುತ್ತು ಅನ್ನಕ್ಕೆ ವಿಷ ಬೆರೆಸಿ ರೈತರ ಬಾಳಿಗೆ ಕೊಳ್ಳಿ ಇಟ್ಟು ದ್ರೋಹ ಬಗೆಯುತ್ತಿರುವ ಸರಕಾರ ರೈತರ ಮರಣ ಶಾಸನ ಬರೆಯಲು ಹೊರಟಿದೆ, 224 ಶಾಸಕರು ರೈತರ ಸಮಸ್ಯೆ ಬಗ್ಗೆ ತುಟ್ಟಿ ಬಿಚ್ಚುತ್ತಿಲ್ಲ, ಅಂತವರು ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವುದಾದರು ಮರೆಯದೇ ರೈತರ ಧ್ವನಿಯಾಗಿ ಅಧಿವೇಶನದಲ್ಲಿ ಮಾತನಾಡಬೇಕು ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ರೈತರೆಲ್ಲರೂ ಒಗ್ಗಟ್ಟಾಗಿ ಗಟ್ಟಿ ನಿರ್ಣಯ ಮಾಡುತ್ತೇವೆ ಎಂದರು.

ಪತ್ರಿಕಾ ಘೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷರಾದ ಕಲ್ಲಪ್ಪ ಪಾರಶೆಟ್ಟಿ, ಜಿಲ್ಲಾ ಸಂಚಾಲಕರಾದ  ರಾಮನಗೌಡ ಪಾಟೀಲ, ಸಂಚಾಲಕರಾದ ಪ್ರತಾಪ ನಾಗರಗೋಜಿ, ಜಿಲ್ಲಾ ಸಂಚಾಲಕರಾದ ನಜೀರ ನಂದರಗಿ,  ತಿಕೋಟಾ ಸಂಚಾಲಕರು  ಶಾನುರ ನಂದರಗಿ,  ಅಭಿಷೇಕ ಹೂಗಾರ, ಶಶಿಕಾಂತ ಬಿರಾದಾರ, ಖಾದರಸಾಬ ವಾಲಿಕಾರ, ಗುರುಲಿಂಗ ಕಾಳಿ, ಇಲಾಯೀ ವಾಲಿಕಾರ, ಆಕಾಶ ಜಾನವರ, ರಾಮು ಗೌರಗುಂಡ, ರಾಜಕುಮಾರ ಹಿರೇಕುರಬರ, ಸುಧಾಕರ ನಲವಡೆ, ರಿಯಾಜ್ ವಾಲಿಕಾರ,  ಸೇರಿದಂತೆ ಅನೇಕರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ (ಹೈ-ಕ) 371ಜೆ ಕಲಂ ವ್ಯಾಪ್ತಿಗೆ ಸೇರಿಸಿ


 
ವಿಜಯಪುರ: ಶೈಕ್ಷಣಿಕ, ರಾಜಕೀಯ, ಆರ್ಥಿಕ, ಓದ್ಯೋಗಿಕವಾಗಿ ತೀರಾ ಹಿಂದುಳಿದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ. ದೇವರ ಹಿಪ್ಪರಗಿ ತಾಳಿಕೋಟೆ ಸಿಂದಗಿ ಆಲಮೇಲ ಮುದ್ದೇಬಿಹಾಳ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳು ಅತಿ ಹಿಂದುಳಿದಿದ್ದು ಕೂಡಲೇ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ(371 ಜೆ) ವ್ಯಾಪ್ತಿಗೆ ಸೇರಿಸಿ ಅಭಿವೃದ್ಧಿಪಡಿಸಬೇಕೆಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ಸರ್ಕಾರವನ್ನು ಆಗ್ರಹಿಸಿದ್ದಾರೆ ಈ ಹಿಂದೆ ಕೂಡ ಹೈದರಾಬಾದ್ ಕರ್ನಾಟಕ 371ಜೆ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕು ಎಂದು ಸಾಕಷ್ಟು ಹೋರಾಟವನ್ನು ಮಾಡಿದ್ದೆವು ಆದರೆ ಕೆಲವು ಪಟ್ಟಭದ್ರ ರಾಜಕೀಯ ವ್ಯಕ್ತಿಗಳಿಂದ ವಿಜಯಪುರ ಜಿಲ್ಲೆಗೆ ಅನ್ಯಾಯವಾಯಿತು, ಇದೀಗ ಕಾಲ ಮಿಂಚಿಲ್ಲ ಸತತ ಬರಗಾಲ, ಬೆಳೆ ಹಾನಿ ನಿರುದ್ಯೋಗ, ಸರ್ಕಾರದ ಯಾವುದೇ ರೀತಿಯ ಮೀಸಲಾತಿ ಇಲ್ಲದೆ ನಮ್ಮ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ ನಮ್ಮ ಜಿಲ್ಲೆಯ ರೈತರು ಸದಾ ಒಂದಲ್ಲ ಒಂದು ರೀತಿಯಲ್ಲಿ ಬರಗಾಲಕ್ಕೆ ತುತ್ತಾಗಿ ಈ ಭಾಗದ ಬಹುತೇಕ ರೈತರು ಕೃಷಿ ಕಾರ್ಮಿಕರು ಗೋವಾ ಮಹಾರಾಷ್ಟ್ರ ಸೇರಿದಂತೆ ಇತೆರೆ ರಾಜ್ಯಗಳಿಗೆ ದುಡಿಯಲು ಗುಳೇ ಹೋಗಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ ಅದರಲ್ಲೂ ವಿಶೇಷವಾಗಿ ಅಖಂಡ ಬಸವನಬಾಗೇವಾಡಿ ತಾಲೂಕಿಗೆ ಎಲ್ಲ ಸರ್ಕಾರಗಳು ಬಹಳಷ್ಟು ಮೋಸ ಮಾಡುತ್ತಾ ಬಂದಿವೆ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಅಣೆಕಟ್ಟೆ ಕಟ್ಟಲು ಈ ಭಾಗದ ರೈತರು ಬಹಳಷ್ಟು ಭೂಮಿಯನ್ನು ಕಳೆದುಕೊಂಡಿದ್ದಾರೆ ಆದರೆ ಇಲ್ಲಿವರೆಗೂ ಕೂಡ ರೈತರ ಹೊಲಗಳಿಗೆ ಪೂರ್ಣ ಪ್ರಮಾಣದ ನೀರಾವರಿ ಯೋಜನೆಗಳು ತಲುಪದೇ ಇರುವುದು ನಮ್ಮ ಭಾಗದ ಜನರ ದುರಾದೃಷ್ಟಕರ ವಿಶ್ವಗುರು ಬಸವಣ್ಣನವರು ಜನಿಸಿದ ಬಸವನ ಬಾಗೇವಾಡಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬಸವ ಜನ್ಮಸ್ಥಳ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಬೇಕೆಂದು ದಶಕಗಳಿಂದ ಹೋರಾಟ ನಡೆದರೂ ಕೂಡ ಯಾವುದೇ ಸರಕಾರ ಮುತುವರ್ಜಿ ವಹಿಸುತ್ತಿಲ್ಲ ಹೈದರಾಬಾದ್ ನಿಜಾಮನ ಆಳ್ವಿಕೆಯಿಂದ ಮುಕ್ತಿಗೊಂಡು ಮುಂಬೈ ಕರ್ನಾಟಕಕ್ಕೆ ಒಳಗೊಂಡು ವಿಜಯಪುರ ಜಿಲ್ಲೆ ಇಂದಿನವರೆಗೆ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ ಜಿಲ್ಲೆಯ ಗಡಿ ಭಾಗದಲ್ಲಿರುವ ಅನೇಕ ತಾಲೂಕುಗಳು ಕೂಡಾ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿವೆ ಇಂಡಿ ಪಟ್ಟಣಕ್ಕೆ ಹೋಗುವ ಒಂದು ರಸ್ತೆ ಕೂಡ ಗುಣಮಟ್ಟದ ಇಲ್ಲದೆ ಇರುವುದು ಇದಕ್ಕೆ ಸಾಕ್ಷಿ ಆಗಿದೆ ನಮ್ಮ ಜಿಲ್ಲೆಯಲ್ಲಿ ರೈಲ್ವೆ ಯೋಜನೆಗಳಿಂದ ಕೂಡ ನಾವು ಬಹಳಷ್ಟು ಹಿಂದುಳಿದಿದ್ದೇವೆ ನಮ್ಮ ಜಿಲ್ಲೆ ಈಗಾಗಲೇ ತಾಂತ್ರಿಕವಾಗಿ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿದೆ ಉದಾಹರಣೆಗೆ ನಮ್ಮ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಹಾಗೂ ಉಚ್ಚ ನ್ಯಾಯಾಲಯ ಕಲ್ಬುರ್ಗಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತೇವೆ ಕೂಡಲೇ ನಮ್ಮ ಜಿಲ್ಲೆಯ, ಸಚಿವರು, ಎಲ್ಲ ಶಾಸಕರು ಸಂಸದರು ಸೇರಿ ವಿಜಯಪುರ ಜಿಲ್ಲೆಯನ್ನು ಹೈದರಾಬಾದ್ ಕರ್ನಾಟಕ(371ಜೆ)ವ್ಯಾಪ್ತಿಗೆ ಸೇರ್ಪಡೆ ಮಾಡಿ ಇಲ್ಲವೇ ವಿಜಯಪುರ ಜಿಲ್ಲೆಗೆ ಶೈಕ್ಷಣಿಕ ಔದ್ಯೋಗಿಕ ಸಾಮಾಜಿಕ ರಾಜಕೀಯ ವಿಶೇಷ ಮೀಸಲಾತಿಯನ್ನು ಕಲ್ಪಿಸಲು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ಕಾರ್ಮಿಕರ ದಾರುಣ ಸಾವಿಗೆ ಕಾರಣರಾದ ಮಾಲೀಕರ ಮೇಲೆ ಹಾಗೂ ಕಾರ್ಮಿಕ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪಾಟೀಲ ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು ಕಾರ್ಮಿಕರ ಮೂಲಭೂತ ಸೌಲಭ್ಯ ಒದಗಿಸದೆ ಕಾನೂನು ಬಾಹೀರವಾಗಿ ಅವರಿಗೆ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವುದು ಮಾಲಿಕರ ಮೇಲೆ ಹಾಗೂ ಕಾರ್ಮಿಕ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಪ್ರಭುಗೌಡ ಪಾಟೀಲ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಟ್ಟಡ ಕಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಸಂಘಟಿತ ವಲಯದಲ್ಲಿ ಹೊರ ರಾಜ್ಯದವರು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಅಂತವರ ಜಾಡನ್ನು ಸರ್ಕಾರ ಗುರುತಿಸಬೇಕಾಗಿದೆ. ಹೊರ ರಾಜ್ಯದ ಕಾರ್ಮಿಕರ ನುಸುಳುವಿಕೆಯನ್ನು ತಡೆಗಟ್ಟುವಲ್ಲಿ ಕಾರ್ಮಿಕ ಇಲಾಖೆಯು ಸಂಪೂರ್ಣ ವಿಫಲವಾಗಿದೆ. ಇಂತಹ ವಿಷಯಗಳನ್ನು ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಬಾರಿ ತಂದರು ಮೌನವಹಿಸಿದ್ದಾರೆ. ಅವರು ಮೌನ ವಹಿಸಿದ್ದರ ಫಲವಾಗಿ ಇಂದು ಇಂತಹ ದುಷ್ಕತ್ಯಗಳು ನಡೆದಿದೆ.

ಈಗಾಗಲೇ ಹೊರ ರಾಜ್ಯದ ಕಾರ್ಮಿಕರನ್ನು ಮೆಕ್ಕೆಜೋಳ ಸಂಗ್ರಹಿಸಿಟ್ಟದ್ದ ಕಭ್ಭಿಣದ ಮೇಲ್ಪಟ್ಟ ಕುಸಿದು ಬಿದ್ದು ಕಲೆದ ರಾತ್ರಿಯಿಂದ ಜೀವನ್ಮರಣದಲ್ಲಿ ನರಳುತ್ತಿದ್ದ ಬಿಹಾರದ 8 ಕಾರ್ಮಿಕರ ಪೈಕಿ 7 ಜನ ಕಾರ್ಮಿಕರು ದಾರುಣ ಸಾವಿಗೀಡಾದ ಹೃದಯವಿದ್ರಾವಕ ಘಟನೆ ನಗರದ ಹೊರ ಭಾಗದಲ್ಲಿ ಕೈಗಾರಿಕಾ ಪ್ರದೇಶದ ರಾಜಗುರು ಫುಡ್ಸ್ ನ ಬೃಹತ್ ಗೋದಾಮಿನಲ್ಲಿ ನಡೆದಿದೆ. ಅದರಂತೆ ಇನ್ನು ಅನೇಕ ಘಟನೆಗಳು ಕೈಗಾರಿಕೆಗಳಲ್ಲಿ ಘಟನೆಗಳು ಸಂಭವಿಸಿರಬಹುದು ಅವುಗಳ ಬೆಳಕಿಗೆ ಬರದಂತೆ ಮಾಲಿಕರು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಇಂತಹ ಘಟನೆಗಳ ಮರುಕಳಿಸಬಾರದಂತಾಗಬಾರದೆಂದರೆ ಕಾರ್ಮಿಕರ ಸುರಕ್ಷತಾ ಕ್ರಮದ ಜಾಗೃತಿ, ಕಾರ್ಮಿಕರ ಹಕ್ಕುಗಳ, ಕರ್ತವ್ಯ, ಸೌಲಭ್ಯಗಳ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು. ಪ್ರತಿ ತಿಂಗಳಿಗೊಮ್ಮೆ ಕಾರ್ಮಿಕ ಕುಂದು ಕೊರತೆ ಸಭೆ ನಡೆಸಬೇಕು. ಅದರಂತೆ ಕಾರ್ಮಿಕ ಅಧಿಕಾರಿಗಳ ಮೇಲೆ ಹಾಗೂ ಮಾಲಿಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕು. ಕಾರ್ಮಿಕರ ಕುಟುಂಬಕ್ಕೆ ಹೆಚ್ಚು ಪರಿಹಾರ ಧನ ನೀಡಬೇಕೆಂದು ಪಾಟೀಲ ಆಗ್ರಹಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.