Saturday, December 9, 2023

ಖೊಟ್ಟಿ ದಾಖಲೆ ಸೃಷ್ಠಿಸಿ ನೋಂದಣಿ ಮಾಡುವವರ ಮೇಲೆ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ಸಚಿವ ಡಾ.ಎಂ.ಬಿ.ಪಾಟೀಲ ಖಡಕ್ ಸೂಚನೆ

ವಿಜಯಪುರ : ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಠಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಖಡಕ್ಕ್ಕಾಗಿ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಮಾತನಾಡಿದ ಅವರು, ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ ಭೂ ಮಾಲೀಕರ ಹೆಸರಿನಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡುತ್ತಿರುವ 13 ಪ್ರಕರಣಗಳನ್ನು ಈಗಾಗಲೇ ದಾಖಲಿಸಲಾಗಿದೆ. ಖೊಟ್ಟಿ ದಾಖಲೆ ಸೃಷ್ಟಿ ಮಾಡಿ, ಆಸ್ತಿಗಳನ್ನು ನೋಂದಣಿ ಮಾಡುವ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರು ಬಾಂಡ್ ರೈಟರ್ಸ್ ಗುರತಿಸಿ, ಅವರ ಬಾಂಡ್ ರೈಟರ್ಸ್ ಲೈಸನ್ಸ್ ರದ್ದುಗೊಳಿಸವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅದರಂತೆ ಸಬ್ ರಜಿಸ್ಟರ್ ಆಫೀಸನಲ್ಲಿ ಉಪ ನೋಂದಣಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೆಲೆ ಮೇಲೆ ಹಲವು ದಿನಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವರನ್ನು ಜಿಲ್ಲಾ ವ್ಯಾಪ್ತಿಯಿಂದ ತಾಲೂಕು ಮಟ್ಟದಲ್ಲಿ ವರ್ಗಾವಣೆ ಮಾಡಿ, ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಕೆಲಸ ಮಾಡಲು ವರ್ಗಾವರ್ಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಅಕ್ರಮ ನೋಂದಣಿ ಪ್ರಕರಣಗಳು ಕಂಡು ಬಂದಲ್ಲಿ ಉಪ ನೋಂದಣಾಧಿಕಾರಿಗಳು ಜಿಲ್ಲಾ ನೋಂದಾಣಾಧಿಕಾರಿಗಳ ಅನುಮತಿ ಪಡೆದು ಸ್ಟೇಟ್ ಎಫ್‌ಐಆರ್ ಮಾಡಬೇಕು. ನೋಂದಣಿ ಮಾಡುವ ಸಂದರ್ಭದಲ್ಲಿ ಜಿಲ್ಲಾ ನೋಂದಣಾಧಿಕಾರಿಗಳಿಗೆ ಸಬ್ ರಜಿಸ್ಟರ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ವೋಟರ್ ಐಡಿ ಹಾಗೂ ರೇಶನ್ ಕಾರ್ಡ್ ಕೂಲಂಕೂಷವಾಗಿ ಪರಿಶೀಲಿಸಲು ಲಾಗಿನ್ ಐಡಿ ನೀಡಲಾಗುವುದು. ಮೂಲ ದಾಖಲೆಗಳನ್ನು ಪರಿಶೀಲಿಸಿ ನೋಂದಣಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಿದರು.

ನೋಂದಣಿ ಮಾಡುವ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ತಮ್ಮ ಹೆಸರು ಹಾಗೂ ಹುದ್ದೆಯನ್ನು ಕಡ್ಡಾಯವಾಗಿ ನಮೂದಿಸಬೇಕು. 

ಜಿಲ್ಲೆಯಾದ್ಯಂತ ಅಕ್ರಮವಾಗಿ ಖೊಟ್ಟಿ ದಾಖಲೆಯನ್ನು ಸೃಷ್ಟಿಸಿ ಮಾರಾಟ ಮಾಡುವುದನ್ನು ತಡೆಗಟ್ಟಲು ತಹಶೀಲ್ದಾರರನ್ನು ನೋಡಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಓರ್ವ ಅಧಿಕಾರಿಯನ್ನು ನೇಮಕ ಮಾಡಿಕೊಳ್ಳಲು ತಿಳಿಸಿದರು. ಇಂತಹ ಪ್ರಕರಣಗಳಲ್ಲಿ ಮೋಸ ಹೋಗಿರುವ ಸಾರ್ವಜನಿಕರು ನೋಡಲ್ ಅಧಿಕಾರಿಗಳಿಗೆ ದೂರು ಸಲ್ಲಿಸಲು ಅನುಕೂಲವಾಗುವಂತೆ ನಿರ್ಣಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಬಸಣೆಪ್ಪ ಕಲಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ್ ಸೌದಾಗರ್, ವಿಜಯಪುರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಜಿಲ್ಲಾ ನೋಂದಣಾಧಿಕಾರಿಗಳಾದ ಜಿ.ಆರ್ ನಾಡಗೌಡ, ಉಪ ನೋಂದಣಾಧಿಕಾರಿ ಗಳಾದ ಬಿ.ಎಸ್.ಬಿರಾದಾರ್, ಮಲ್ಲಿಕಾರ್ಜುನ ಪಾಟೀಲ,ರವಿ ಹಂಚಿನಾಳ, ಐ.ಎಸ್.ಬಾಗಾಯತ್, ದೇವಪ್ಪ ಡಂಬಳ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

10-12-2023 EE DIVASA KANNADA DAILY NEWS PAPER