Thursday, December 28, 2023

ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಲು ಕರವೇ ಕಾರ್ಯಕರ್ತರ ಆಗ್ರಹ


ವಿಜಯಪುರ : ಕನ್ನಡ ನಾಮ ಫಲಕ ಹೋರಾಟದಲ್ಲಿ ಪಾಲ್ಗೊಂಡ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.


ವಿಜಯಪುರ ನಗರ ಗಾಂಧಿವೃತ್ತದಲ್ಲಿ ಜಮಾಯಿಸಿದ ಕರವೇ ಪದಾಧಿಕಾರಿಗಳು ನಿನ್ನೆ ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯವಾಗಿ ಅಳವಡಿಸುವಂತೆ ಶಾಂತಿಯುತ ಹೋರಾಟ ಕೈಕೊಂಡ ರಾಜ್ಯಾಧ್ಯಕ್ಷರಾದ ಟಿ.,ಎ. ನಾರಾಯಣಗೌಡರನ್ನು ಸೇರಿದಂತೆ ಹಲವು ಕಾರ್ಯಕರ್ತರನ್ನು ಹಾಗೂ ವಿಜಯಪುರ ಜಿಲ್ಲಾಧ್ಯಕ್ಷರಾದ ಎಂ.ಸಿ. ಮುಲ್ಲಾ ಅವರನ್ನು ಬಂಧಿಸಿರುವ ಸರ್ಕಾರದ ಧೋರಣೆಯನ್ನು ನಾವು ಖಂಡಿಸುತ್ತೇವೆ. 

ಈ ಪ್ರತಿಭಟನೆಯನ್ನುದ್ದೇಶಿಸಿ ನಗರ ಅಧ್ಯಕ್ಷರಾದ ಫಯಾಜ ಕಲಾದಗಿಯವರು ಮಾತನಾಡಿ, ಸರ್ಕಾರದ ಕನ್ನಡ ವಿರೋಧಿ ನೀತಿ ನಾವು ಸಹಿಸಲು ಸಾಧ್ಯವಿಲ್ಲ ಕನ್ನಡಿಗರನ್ನು ಕೆಣಕಿದ ರಾಜ್ಯ ಸರ್ಕಾರದ ಹುನ್ನಾರದ ಸಲ್ಲದು ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು. ಮಾನ್ಯ ಮುಖ್ಯಮಂತ್ರಿಗಳು ಇದನ್ನು ಅರ್ಥೈಸಿಕೊಂಡು ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಉಗ್ರಹೋರಾಟ ಕೈಗೊಳ್ಳಲಾಗುವುದೆಂದು ಎಂದು ಎಚ್ಚರಿಸಿದರು.

ಜಿಲ್ಲಾ ಪ್ರಧಾನ ಕಾರ್ಯದಾರ್ಶಿ ಸುರೇಶ ಬಿಜಾಪೂರರವರು ಮಾತನಾಡಿ, ಉಗ್ರವಾಗಿ ಖಂಡಿಸಿದರು.

ಕರವೇ ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ದಸ್ತಗೀರ ಸಾಲೋಟಗಿ ಮಾತನಾಡಿ, ಸರ್ಕಾರದ ಕರವೇ ವಿರುದ್ಧ ನಡೆದುಕೊಳ್ಳುತ್ತಿರುವ, ರೀತಿ ನೀತಿ, ಸರಿ ಕಂಡು ಬರುತ್ತಿಲ್ಲ ಕರವೇಯಲ್ಲಿ ಪಕ್ಷಾತೀತ ಎಲ್ಲ ಧರ್ಮಿಯರು ಇರುವುದನ್ನು ಸರ್ಕಾರ ಗಮನಿಸಬೇಕು ಎಂದರು. ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸಿ ಕನ್ನಡ ಪ್ರೇಮವನ್ನು ಮೆರೆಯಬೇಕು ಎಂದರು.

ಪ್ರತಿಭಟನೆಯಲ್ಲಿ ಅಶೋಕ ನಾವಿ, ಬಸವರಾಜ ಚಪ್ರೆ, ದಯಾನಂದ ಸಾವಳಗಿ, ರವಿ ಮುರಗೋಡ, ಮನೋಹರ ತಾಜವ, ಬಸವರಾಜ ಬಿ.ಕೆ, ರಜಾಕ ಕಾಖಂಡಕಿ, ಆಸೀಫ ಪೀರವಾಲೆ, ತಾಜುದ್ದೀನ ಖಲಿಪಾ, ಸಂತೋಷ ಮುದೋಳ, ಡಿ.ಎಸ್.ಪೀರಜಾಧೆ, ಕೆ.ಕೆ.ಬನಹಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು ಪ್ರತಿಭಟನೆ ಕೈಕೊಂಡು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಸಮಗ್ರ ನೀರಾವರಿಗಾಗಿ ಪ್ರತ್ಯೇಕ ವಿಶೇಷ ಅಧಿವೇಶನವನ್ನು ವಿಜಯಪುರದಲ್ಲಿ ನಡೆಸಲು ಅಖಂಡ ಕರ್ನಾಟಕ ರೈತ ಸಂಘ ಆಗ್ರಹ


ವಿಜಯಪುರ : ಸಮಗ್ರ ನೀರಾವರಿಗಾಗಿ ಪ್ರತ್ಯೇಕ ವಿಶೇಷ ಅಧಿವೇಶನವನ್ನು ವಿಜಯಪುರ ನಗರದಲ್ಲಿ ನಡೆಸಲು ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟ ಎತ್ತಿರಿಸುವುದು ಸೇರಿದಂತೆ ವಿವಿಧ  ಬೇಡಿಕೆ ಈಡೇರಿಸುವ ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 524.256ಕ್ಕೆ ನೀರು ನಿಲ್ಲಿಸಲು ನ್ಯಾಯಮೂರ್ತಿ ಬ್ರಿಜೇಶ್ ಕುಮಾರ ನೇತೃತ್ವದ 2ನೇ ನ್ಯಾಯಾಧೀಕರಣವು 2010 ರಲ್ಲಿ ತೀರ್ಪು ನೀಡಿತ್ತು. 2013ರಲ್ಲಿ ಅಂತಿಮ ತೀರ್ಪು ನೀಡಿದ್ದು ಇಲ್ಲಿವರೆಗೂ ಜಲಾಶಯದ ನೀರಿನಮಟ್ಟವನ್ನು ಎತ್ತರಿಸಲು ಇನ್ನೂವರೆಗೂ ಗೇಟ್ ಅಳವಡಿಸಿಲ್ಲ. ಹೀಗಾಗಿ ವಿಜಯಪುರ ಜಿಲ್ಲೆ ಇನ್ನೂ ಸಂಪೂರ್ಣ ನೀರಾವರಿಗೆ ಒಳಪಟ್ಟಿಲ್ಲ. ಬೇಸಿಗೆ ಸಂದರ್ಭದಲ್ಲಿ ಒಂದೊಂದು ಬಾರಿ ಕುಡಿಯಲು ಕೂಡ ನೀರಿನ ತತ್ವಾರ ಎದುರಾಗುತ್ತದೆ. 5 ನದಿಗಳು ಹರಿದು ಪಂಚ ನದಿಗಳ ಬೀಡು ಎಂದು ಹೇಳಿಕೊಳ್ಳಲು ಮಾತ್ರ ಸೀಮಿತವಾಗಿದೆ. ಆದರೆ ಸಮಗ್ರ ನೀರಾವರಿಗೆ ಸರ್ಕಾರ ಮನಸ್ಸು ಮಾಡುತ್ತಿಲ್ಲ. 524.256 ಕ್ಕೆ ನೀರು ನಿಲ್ಲಿಸಿದರೆ ಇನ್ನೂ ಅಂದಾಜು 20 ರಿಂದ 22 ಹಳ್ಳಿಗಳು ಬಾಧಿತಗೊಳ್ಳುತ್ತವೆ. ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಹೆಕ್ಟೆರ್ ಜಮೀನು ಮುಳುಗಡೆ ಹೊಂದುತ್ತವೆ. ಇವೆಲ್ಲವುಗಳಿಗೆ ಪುನರ್ವಸತಿ ಮತ್ತು ಪುನರ್‍ನಿರ್ಮಾಣ ಹಾಗೂ ಜಮೀನುಗಳ ಪರಿಹಾರಕ್ಕೆ ಅಂದಾಜು 75 ಸಾವಿರ ಕೋಟಿಯಿಂದ 1 ಲಕ್ಷ ಕೋಟಿ ವರೆಗೆ ಹಣ ಬೇಕು. ಈ ಕುರಿತು ಹಿಂದಿನ ಅಧಿವೇಶನದಲ್ಲಿಯೂ ಕೂಡ ಸರ್ಕಾರ ಆಲಮಟ್ಟಿ ಜಲಾಶಯದ ಕುರಿತು ಯಾವೊಬ್ಬರು ಶಾಸಕರಾಗಲಿ ಸಚಿವರಾಗಲಿ ಮಾತನಾಡಲಿಲ್ಲ. ಹೀಗಾಗಿ ಜಿಲ್ಲೆಯ ರೈತರು ಹತಾಶಗೊಂಡಿದ್ದಾರೆ. ಇನ್ನು ಮುಂದಾದರೂ ಸರ್ಕಾರ ಇದಕ್ಕಾಗಿಯೇ ಪ್ರತ್ಯೇಕವಾಗಿ ವಿಶೇಷ ಅಧಿವೇಶವನ್ನು ವಿಜಯಪುರ ನಗರದಲ್ಲಿಯೇ ಹಮ್ಮಿಕೊಂಡು ನೀರಾವರಿ ಕುರಿತು ಸಮಗ್ರ ಚರ್ಚಿಸಿ ನ್ಯಾಯಾಧೀಕರಣ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ವಿಜಯಪುರದಲ್ಲಿಯೇ ವಿಶೇಷ ಅಧಿವೇಶನ ನಡೆಸಿದರೆ ಅನಿವಾರ್ಯವಾಗಿ ಜಿಲ್ಲೆಯ ಶಾಸಕರು ಸಚಿವರು ಅನಿವಾರ್ಯವಾಗಿ ವಿಷಯವನ್ನು ಪ್ರಸ್ತಾಪ ಮಾಡಲೇಬೇಕಾಗುತ್ತದೆ ಎಂದರು.

ರಾಜ್ಯದ ರೈತರಿಗೆ ಸಬ್ಸಿಡಿ ರೀತಿಯಲ್ಲಿ ಸಮರ್ಪಕವಾಗಿ ಸ್ಪ್ರಿಂಕ್ಲರ್ ಸೆಟ್ಟುಗಳನ್ನು ರೈತರಿಗೆ ಕೊರತೆಯಾಗದಂತೆ ಪೂರೈಸಬೇಕು. ಹಿಂದಿನ ಸರ್ಕಾರದ ಅವಧಿಯಲ್ಲಿ ರೈತರಿಗೆ ಸ್ಪ್ರಿಂಕ್ಲರ್ ಉಪಕರಣಗಳನ್ನು ಸರಿಯಾಗಿ ಸರಬರಾಜು ಮಾಡದೆ ಇರುವುದರಿಂದ ಬಹುತೇಕ ರೈತರಿಗೆ ಉಪಕರಣಗಳು ಲಭ್ಯವಾಗಿಲ್ಲ. ಒಂದೊಂದು ಜಿಲ್ಲೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ರೈತರು ಎಲ್ಲ ಸೇರಿದರೂ ಕೇವಲ 10 ಸಾವಿರ ಸ್ಪ್ರಿಂಕ್ಲರ್ ಸೆಟ್ಟುಗಳನ್ನು ಪ್ರತಿಯೊಂದು ಜಿಲ್ಲೆಗೆ ಪೂರೈಸಿದ್ದಾರೆ. ಇದೇ ರೀತಿ ನಮ್ಮ ಜಿಲ್ಲೆಗೂ 10 ಸಾವಿರ ಸೆಟ್ಟುಗಳನ್ನು ಪೂರೈಸಿದ್ದಾರೆ. ಅತೀ ಕಡಿಮೆ ಸ್ಪ್ರಿಂಕರ್ ಸೆಟ್ಟುಗಳನ್ನು ಪೂರೈಸಿದ್ದರಿಂದ ಒಬ್ಬರಿಗೆ ಸಿಕ್ಕಿತ್ತು ಇನ್ನೊಬ್ಬ ರೈತರಿಗೆ ಸಿಕ್ಕಿಲ್ಲ ಎಂಬಂತಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ರೈತರ ಸಂಖ್ಯೆಯನ್ನು ಗಣನೆಗೆ ತೆಗೆದುಕೊಂಡು ಅಗತ್ಯವಿರುವಷ್ಟು ಸ್ಪ್ರಿಂಕ್ಲರ್ ಸೆಟ್ಟುಗಳನ್ನು ಪೂರೈಸಬೇಕೆಂದು ಒತ್ತಾಯಿಸಿದರು.

ಈ ಹಿಂದೆ ರೈತರು ಪೋಡಿಮಾಡಲು ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಎಷ್ಟೇ ಎಕರೆ ಜಮೀನು ಹೊಂದಿದ್ದರೂ ಈ ಮೊದಲು 1200 ರೂ. ಮಾತ್ರ ಭರಣಾಮಾಡಿಕೊಂಡು ಪೋಡಿ ಮಾಡಿಕೊಡುತ್ತಿದ್ದರು. ಈ ಸದ್ಯ ಪೋಡಿ ಮಾಡಲು 2 ಎಕರೆಗೆ 1500 ರೂ. ನಂತೆ ಭರಣಾ ಮಾಡಿಕೊಂಡು ಮುಂದೆ ಪ್ರತಿ ಎಕರೆಗೆ 400 ರೂಪಾಯಿಯಂತೆ ಭರಣಾ ಮಾಡಬೇಕಾಗುತ್ತದೆ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮೊದಲಿನಂತೆ ಎಷ್ಟೇ ಎಕರೆ ಜಮೀನು ಹೊಂದಿದ್ದರೂ 1200 ರೂಪಾಯಿಯಲ್ಲಿ ಪೋಡಿ ಮಾಡಿ ಕೊಡಬೇಕೆಂದು ಆಗ್ರಹಿಸಿದರು.

ಬಸವನ ಬಾಗೇವಾಡಿ ತಾಲೂಕಿನ ಕವಲಗಿ, ಅಂಗಡಗೇರಿ, ತೆಲಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕೃಷಿ ಪಂಪ್ ಸೆಟ್ಟುಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಗುಣ ಮಟ್ಟದ ಪೂರೈಕೆ ಇಲ್ಲದ ಕಾರಣ ಮನೆಗಳ ವಿದ್ಯುತ್ ದೀಪಗಳು ಸಂಪೂರ್ಣ ಕಳಪೆ ಮಟ್ಟದಲ್ಲಿ ಇರುವುದರಿಂದ ಮೊಬೈಲ್ ಚಾರ್ಜ್‍ಕೂಡ ಆಗುವುದಿಲ್ಲ. ಕೃಷಿ ಪಂಪ್ ಸೆಟ್ಟುಗಳು ಪ್ರಾರಂಭವಾಗುವುದಿಲ್ಲ. ಆದ್ದರಿಂದ ಗುಣಮಟ್ಟದಿಂದ ವಿದ್ಯುತ್‍ನ್ನು ಪೂರೈಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ತಾ. ಉಪಾಧ್ಯಕ್ಷರು ಬ.ಬಾಗೇವಾಡಿ ಹೊನಕೇರೆಪ್ಪ ತೆಲಗಿ, ತಾಲೂಕ ಕಾರ್ಯಾಧ್ಯಕ್ಷರು ಸೋಮನಗೌಡ ಪಾಟೀಲ, ಸಿದ್ದಪ್ಪ ಕಲಬೀಳಗಿ, ಸಂಗಪ್ಪ ಮುಂಡಗನೂರ, ನಂದುಗೌಡ ಬಿರಾದಾರ, ಗುರಲಿಂಗಪ್ಪ ಪಡಸಲಗಿ, ದಾವಲಸಾಬ ನಧಾಫ, ಬಸಯ್ಯಮಠ, ರಾಮನಗೌಡ ಹಾದಿಮನಿ, ಶಿವರಾಜ ಬಿರಾದಾರ, ಬಸನಗೌಡ ಪಾಟೀಲ,ಅಪ್ಪಾಸಾಹೇಬಗೌಡ ಕೋಳೂರ, ಮಲ್ಲಿಕಾರ್ಜುನ ನಾವಿ ಸೇರಿದಂತೆ ಮುಂತಾದವರುಉಪಸ್ಥಿತರಿದ್ದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಉದ್ದೇಶಿತ ಫುಡ್ ಪಾರ್ಕ ಸ್ಥಳಕ್ಕೆ ಸಿಇಓ ರಾಹುಲ್ ಶಿಂಧೆ ಭೇಟಿ-ಪರಿಶೀಲನೆ


ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಡಿ.27ರ ಬುಧವಾರದಂದು ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. 

ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಸುಮಾರು 75 ಎಕರೆ ಭೂಮಿಯನ್ನು ಕರ್ನಾಟಕ ಆಹಾರ ನಿಯಮಿತ (ಫುಡ್ ಕರ್ನಾಟಕ ಲಿ.) ಸಂಸ್ಥೆಗೆ ಮೀಸಲಿಡಲಾಗಿದೆ. ಇಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗುತ್ತದೆ. ಮೊದಲನೇ ಹಂತದಲ್ಲಿ 25 ಎಕರೆ ಭೂಮಿಯನ್ನು ಅಭಿವೃದ್ಧಿಪಡಿಸಿ ಇಂಡಸ್ಟ್ರಿಯಲ್ ಫ್ಲಾಟ್‌ಗಳನ್ನು ತಯಾರಿಸಲಾಗುತ್ತದೆ. ಹಾಗೂ ಕೃಷಿ ಕೈಗಾರಿಕೆ ಮಾಡುವವರಿಗೂ ಸಹ ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ಮತ್ತು ಮೂರನೇ ಹಂತದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ ಬಳಸಿದ ನೀರನ್ನು ಮರು ಬಳಕೆ ಮಾಡುವ ಉದ್ದೇಶದಿಂದ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತದೆ. ಹೀಗೆ ಮೂರು ಹಂತಗಳಲ್ಲಿ ಈ ಫುಡ್ ಪಾರ್ಕ್ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತದಲ್ಲಿ ರಸ್ತೆ ಸಂಪರ್ಕ, ಚರಂಡಿ ವ್ಯವಸ್ಥೆ, ನೀರು ಸರಬರಾಜು ಹಾಗೂ ವಿದ್ಯುತ್ ಸರಬರಾಜು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇದನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖಾಂತರ ಅಭಿವೃದ್ಧಿ ಪಡಿಸಲು ಯೋಜನೆಯು ನಗರ ಯೋಜನಾ ಅನುಮೋದನೆ ಹಂತದಲ್ಲಿರುತ್ತದೆ. 

 ಈ ಸಂದರ್ಭದಲ್ಲಿ ಅಲ್ಲಿನ ಸ್ಥಿತಿಗತಿ ಹಾಗೂ ಸದರಿ ಕಾಮಗಾರಿಯನ್ನು ಕಡಿಮೆ ಸಮಯದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸುವ ವಿಧಾನದ ಕುರಿತು ಚರ್ಚೆ ನಡೆಸಿದರು. ಈ ಕಾಮಗಾರಿಗೆ ಸಂಪರ್ಕ ಹೊಂದುವ ಎರಡು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಹಾಗೂ ಹತ್ತಿರದ ಭೂತನಾಳ ಕೆರೆಯ ಮುಖಾಂತರ ನೀರು ಸರಬರಾಜು ಮಾಡುವುದು, ವಿದ್ಯುತ್ ಸರಬರಾಜು ಮಾಡುವ ಕುರಿತು ಆಯಾ ಇಲಾಖಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಸ್ಥಳದ ಸುತ್ತ ಮುತ್ತಲಿನ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಕೃಷಿ ಉತ್ಪನ್ನಗಳ ರಫ್ತಿನ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

 ಕೃಷಿ ಆಧಾರಿತ ಕೈಗಾರಿಕೆ ಅಭಿವೃದ್ಧಿಪಡಿಸುವ ಯೋಜನೆಯನ್ನು ರೂಪುಗೊಳಿಸುವ ಕುರಿತು ಪಾವರ್ ಪಾಯಿಂಟ್ ಪ್ರೆಸೆಂಟೇಶನ್ ಸಿದ್ಧಪಡಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ. ಪಾಟೀಲ ರವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಸಭೆಯಲ್ಲಿ ಪ್ರಸ್ತುತ ಪಡಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಶಾಂತ ಬಾರಿಗಿಡದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜಶೇಖರ ಆ.W, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವಲಯ ಅರಣ್ಯಾಧಿಕಾರಿಗಳಾದ ಗಿರೀಶ ಹಲಕುಡೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ S. ಃ. ಪಾಟೀಲ, ಹೆಸ್ಕಾಂ ಇಲಾಖೆಯ ವಿಭಾಗಾಧಿಕಾರಿಗಳಾದ ಬಿ.ಓ. ರಾಠೋಡ, ಲೋಹಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪದ್ಮಿನಿ ಬಿರಾದಾರ, ಲೋಹಗಾಂವ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕೋವಿಡ್ ಜೆಎನ್.1 : ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ



ವಿಜಯಪುರ : ಕೋವಿಡ್-19 ಉಪತಳಿಯಾದ ಜೆಎನ್.1 ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. 

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸೋಂಕು ಪತ್ತೆ, ಸೋಂಕಿತರ ಚಿಕಿತ್ಸೆ ವಿಶೇಷ ಘಟಕ, ಆಕ್ಸಿಜನ್ ಘಟಕ, ಔಷಧ ಸೇರಿದಂತೆ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದ ಅವರುಕ, ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ, ತುರ್ತು ನಿಗಾ ಘಟಕ, ಉಪಕರಣಗಳ ಪರಿಶೀಲನೆ, ಆಕ್ಸಿಜನ್ ಸಿಲಿಂಡರ್ ಮಾಹಿತಿ, ಐಸಿಯುದಲ್ಲಿ ಇರುವ ಯಂತ್ರೋಪಕರಣಗಳು ಮತ್ತು ಔಷಧಗಳ ಲಭ್ಯತೆ ಕುರಿತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅವರು ಸೂಚನೆ ನೀಡಿದ್ದಾರೆ.

ಪ್ರಸ್ತುತ ಹವಾಮಾನ, ಚಳಿ, ವಾತಾವರಣ ಇರುವುದರಿಂದ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗುವುದರಿಂದ ಆರೋಗ್ಯ ಇಲಾಖೆ ಸೂಚನೆಗಳನ್ನು ಪಾಲಿಸಬೇಕು. ಹಿರಿಯ ನಾಗರಿಕರು, ದೀರ್ಘಕಾಲಿನ ಸಮಸ್ಯೆ ಹೊಂದಿರುವವರು, ಗರ್ಭೀಣಿಯರು, ಬಾಣಂತಿಯರು ಮನೆಯಿಂದ ಹೊರಗೆ ಹೋಗುವಾಗ, ಜನಸಂದಣಿ ಪ್ರದೇಶದಲ್ಲಿ ಮಾಸ್ಕ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಇರುವವರು ತಕ್ಷಣ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಈ ಕುರಿತು ಮನೆ ಮನೆಗೆ ಹೋಗಿ ಆರೋಗ್ಯ ಶಿಕ್ಷಣ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಸೂಚಿಸಿದ್ದಾರೆ. 

 ಸರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಾ ಕೇಂದ್ರಗಳ ಆಸ್ಪತ್ರೆಯಲ್ಲಿ ಆಕ್ಸಿಜನ್, ಐ.ಸಿ.ಯು ಬೇಡ್, ಕೋವಿಡ್ ಪರೀಕ್ಷೆ, ಔಷಧಿ ಹಾಗೂ ಅಂಬ್ಯೂಲೆನ್ಸ್ ಲಭ್ಯತೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಡಬ್ಲೂಎಚ್‌ಓ ಸರ್ವೇಲೆನ್ಸ್ ಅಧಿಕಾರಿ ಡಾ. ಮುಕುಂದ ಗಲಗಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ, ಜಿಲ್ಲಾ ಆಸ್ಪತ್ರೆಯ ಆರ್‌ಎಂಓ ಅಧಿಕಾರಿಗಳು, ಬಿಎಲ್‌ಡಿಇ ಸಂಸ್ಥೆಯ ವೈದ್ಯರು, ಖಾಸಗಿ ಆಸ್ಪತ್ರೆ ವೈದ್ಯರು, ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಬಸವರಾಜ ಹುಬ್ಬಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.