Wednesday, May 1, 2024

02-05-2024 EE DIVASA KANNADA DAILY NEWS PAPER

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚನೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು. 

ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣಾ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇನ್ನಷ್ಟು ಪರಿಣಾಮಕಾರಿಯಾಗಿ ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಜಾಗೃತಿ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು.

ಮತದಾರ ಜಾಗೃತಿ ಕಾರ್ಯವನ್ನು ಚಾಲೇಂಜ್ ಆಗಿ ಸ್ವೀಕರಿಸಿ, ಮತ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡಿರುವ ಕಾರ್ಯಗಳ ಫಲಿತಾಂಶ ಮತದಾನ ದಿನದಂದು ತಿಳಿಯಲಿದೆ. ನೀವು ಮಾಡಿದ ಪ್ರಯತ್ನಕ್ಕೆ ಮತದಾನ ದಿನದಂದು ಫಲ ಸಿಗಲಿದೆ. ಚುನಾವಣಾ ಆಯೋಗದಿಂದ ಮುದ್ರಿಸಲಾದ ವೋಟರ್ ಗೈಡ್‍ನಲ್ಲಿ ಸಂಪೂರ್ಣವಾದ ಮಾಹಿತಿ ನೀಡಲಾಗಿದೆ. ಈ ಮಾಹಿತಿಯನ್ನು ಬಿಎಲ್‍ಓಗಳು, ಸೂಪರ್‍ವೈಸರ್‍ಗಳು ಸೇರಿದಂತೆ ನಿಯೋಜಿತ ಎಲ್ಲ ಅಧಿಕಾರಿಗಳು ತಿಳಿದುಕೊಂಡು ಪ್ರತಿ ಮನೆ-ಮನೆಗೆ ಭೇಟಿ ಮತದಾರರಲ್ಲಿ ತಿಳುವಳಿಕೆ ಮೂಡಿಸಬೇಕು. ಮತಗಟ್ಟೆಗಳಲ್ಲಿ ಮತದಾರರರಿಗೆ ಕಲ್ಪಿಸಲಾಗಿರುವ ವ್ಯವಸ್ಥೆಗಳ ಕುರಿತು ಮನವರಿಕೆ ಮಾಡಬೇಕು. ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ತಂಪು ಕುಡಿಯುವ ನೀರಿನ ವ್ಯವಸ್ಥೆ, ರ್ಯಾಂಪ್ ವ್ಯವಸ್ಥೆ, ನಿರೀಕ್ಷಣಾ ಕೊಠಡಿ ವ್ಯವಸ್ಥೆ, ನೆರಳು ವ್ಯವಸ್ಥೆ, ತುರ್ತು ಸಂದರ್ಭಕ್ಕೆ ಅಂಬ್ಯೂಲೆನ್ಸ್ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ, ಓ.ಆರ್.ಎಸ್. ಪೊಟ್ಟಣಗಳು, ಶೌಚಾಲಯ ಸೇರಿದಂತೆ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪ್ರತಿ ಮತದಾರರಿಗೆ ಮಾಹಿತಿ ಒದಗಿಸುವ ಮೂಲಕ ಅವರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಪ್ರೇರೆಪಿಸಬೇಕು. ಬಿಎಲ್‍ಓ, ಸೂಪರ್‍ವೈಸರ್, ಆಶಾ ಕಾರ್ಯಕರ್ತೆರು ಮನೆಗಳಿಗೆ ಭೇಟಿ ನೀಡಿ ಪ್ರತಿ ಮನೆಯಲ್ಲಿ  ಕನಿಷ್ಠ 5 ನಿಮಿಷ ತಿಳಿ ಹೇಳುವ ಮೂಲಕ ಜಾಗೃತಿ ಮೂಡಿಸಬೇಕು  ಎಂದು ಅವರು ಹೇಳಿದರು. 

ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹ ವಿವಿಧ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಇದರಿಂದ ಬಿಎಲ್‍ಗಳಿಗೆ ಪ್ರೊತ್ಸಾಹ ದೊರೆಯಲಿದೆ. ಯುವ ಜನಾಂಗ, ಅಂಗವಿಕಲ ಮತದಾರ, ಹಿರಿಯ ನಾಗರೀಕ ಮತದಾರರಲ್ಲಿ ಹೆಚ್ಚಾಗಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯತಿಯ ಎ.ಬಿ.ಅಲ್ಲಾಪುರ ಅವರು ಮಾಹಿತಿ ನೀಡಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧೆಡೆ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು  ಜಾಗೃತಿ ಮೂಡಿಸಲಾಗಿದೆ. ಮಾನವ ಸರಪಳಿ, ಕ್ಯಾಂಡಲ್ ಮಾರ್ಚ್, ಪ್ರಯಾಣಿಕರ ಜಾಗೃತಿಗಾಗಿ ವಿವಿಧ ಬಸ್ ನಿಲ್ದಾಣಗಳಲ್ಲಿ ಅನೌನ್ಸ್ಮೆಂಟ್ ಮೂಲಕ ಜಾಗೃತಿ, ವಿವಿಧ ನಿಲ್ದಾಣಗಳಲ್ಲಿ ಸೆಲ್ಫಿ ಸ್ಟ್ಯಾಂಡ್ ಅಳವಡಿಕೆ, ಬಸ್‍ಗಳಿಗೆ ಪೋಸ್ಟರ್ ಅಂಟಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಂದ ಪಾಲಕರಿಗೆ ಪತ್ರ ಅಭಿಯಾನ ಹಮ್ಮಿಕೊಂಡ ಜಾಗೃತಿ ಮೂಡಿಸುವುದು, ಜಿಲ್ಲೆಯ ಕಾರ್ಮಿಕರಿರುವ ಸ್ಥಳಗಳಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಜಾಗೃತಿ, ವಿವಿಧ ಮಾಲ್, ಶೋರೂಂಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ 1528 ಸ್ಥಳಗಳಲ್ಲಿ ಚುನಾವಣಾ ಧ್ವಜಾರೋಹಣ, ಮಹಾನಗರ ಪಾಲಿಕೆ ವತಿಯಿಂದ 10 ಅಡಿ ಬಲೂನ್ ಅಳವಡಿಸಿ ಮತದಾನ ಜಾಗೃತಿ, ಸೇರಿದಂತೆ ಹತ್ತು ಹಲವಾರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಯ ಟಿ-ಶರ್ಟ್ ಹಾಗೂ ಕ್ಯಾಪ್‍ಗಳನ್ನು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಬಿಡುಗಡೆಗೊಳಿಸಿದರು. 

ಸಭೆಯಲ್ಲಿ    ಜಿಲ್ಲಾ ಸ್ವೀಪ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ,  ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ, ಮಹಾನಗರ ಪಾಲಿಕೆ ಆಯುಕ್ತ ಆರ್ಶದ ರೆಹಮಾನ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, April 28, 2024

ಅವಳಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ನಮೋ ಮೆರುಗು : ಏ.29 ರಂದು ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಏ. 29 ರಂದು ಬಾಗಲಕೋಟೆಗೆ ಆಗಮಿಸಲಿದ್ದು, ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಪ್ರಚಾರಕ್ಕೆ ಮೆರುಗು ನೀಡಲಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಮಾಹಿತಿ ನೀಡಿದರು.

ಏ.29 ರಂದು ಬೆಳಿಗ್ಗೆ 11 ಗಂಟೆಗೆ ಬಾಗಲಕೋಟೆ ನವನಗರದ ತೋಟಗಾರಿಕಾ ವಿವಿ ಆವರಣದಲ್ಲಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ‌ ಮೋದಿಯವರು ಅವಳಿ ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಬಲ ತುಂಬಲಿದ್ದಾರೆ. ಅವಳಿ ಜಿಲ್ಲೆಯ ಬಿಜೆಪಿ‌ ಅಭ್ಯರ್ಥಿಗಳಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ.ಗದ್ದಿಗೌಡರ ಸೇರಿದಂತೆ ಅನೇಕ ಭಾಜಪ ಹಾಗೂ ಜೆಡಿಎಸ್ ಪ್ರಮುಖರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. 

ಇನ್ನೂ ಎಲ್ಲೆಡೆ ಚುನಾವಣಾ ಕಾವು ಜೋರಾಗಿದ್ದು, ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಜನರಿಂದ ಬಿಜೆಪಿ ಪರ ಅತ್ಯುತ್ತಮ ಸ್ಪಂದನೆ ದೊರೆಯುತ್ತಿದೆ. ವಿಕಸಿತ ಭಾರತ ಸಂಕಲ್ಪ ಸಾಕಾರಗೊಳಿಸಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಗಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ. ಈ ಸಭೆಗೆ ವಿಜಯಪುರ ಜಿಲ್ಲೆಯಿಂದ ಸುಮಾರು 25-30 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ. ಜಿಲ್ಲೆ ಎಲ್ಲಾ ಕಾರ್ಯಕರ್ತರು, ಬಿಜೆಪಿ ಬೆಂಬಲಿಗರು, ಮೋದಿಯವರ ಹಿತೈಸಿಗಳು ಅಭಿಮಾನಿಗಳು ಅತಿ‌ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆರ್.ಎಸ್.ಪಾಟೀಲ್ ಕುಚಬಾಳ ಮನವಿ ಮಾಡಿಕೊಂಡರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಸಂಜಯ ಪಾಟೀಲ ಕನಮಡಿ, ಜಿಲ್ಲಾ ಕೋಶಾಧ್ಯಕ್ಷ ಭೀಮಾಶಂಕರ ಹದನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಸಾಬೂ ಮಾಶ್ಯಾಳ, ಮಹಿಳಾ ಮುಖಂಡರಾದ ಮಲ್ಲಮ್ಮ ಜೋಗೂರ, ಮಾಧ್ಯಮ ಪ್ರಮುಖ ವಿಜಯ್ ಜೋಶಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಲೋಕಸಭಾ ಚುನಾವಣೆ - 2024 : ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮಕ್ಕೆ ಚಾಲನೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸುಭದ್ರ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಭವಿಷ್ಯದ ಆಲೋಚನೆಯೊಂದಿಗೆ  ಪ್ರತಿಯೊಬ್ಬರು ಮೇ.7 ರಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು. 

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಸಂಯುಕ್ತಾಶ್ರಯದಲ್ಲಿ  ಭಾನುವಾರ ನಗರದ ದರಬಾರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ “ನಮ್ಮ ನಡೆ ಮತಗಟ್ಟೆ ಕಡೆ” ಕಾರ್ಯಕ್ರಮದಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ, ಮತದಾನದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ಪ್ರಜಾಪ್ರಭುತ್ವದಲ್ಲಿ ಇಂತಹ ಅವಕಾಶ ಸಂವಿಧಾನ ಕಲ್ಪಿಸಿದೆ. ಸಂವಿಧಾನ ನೀಡಿದ ಅಧಿಕಾರವನ್ನು ಕಳೆದುಕೊಳ್ಳಬಾರದು. ಮತದಾನ ಮಾಡುವ ಮುಲಕ ಪ್ರಜಾಪ್ರಭುತ್ವ ಹಬ್ಬ ಆಚರಿಸಬೇಕು. 18 ವರ್ಷ ತುಂಬಿದ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಹೇಳಿದರು.

ನಮ್ಮ ದೇಶವನ್ನು 5 ವರ್ಷಗಳ ಕಾಲ ಆಡಳಿತ ನಡೆಸುವ ಸರ್ಕಾರದ ಆಯ್ಕೆ ನಮ್ಮ ಕೈಯಲ್ಲಿದೆ. ಸಂವಿಧಾನ ನೀಡಿದ ಮತದಾನದ ಹಕ್ಕಿನಿಂದ ಯಾರೂ ಕೂಡ ವಂಚಿತರಾಗದೇ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ದಿನ ಮತಗಟ್ಟೆಗಳಿಗೆ ತೆರಳಿ ಮುಂದಿನ ಭವಿಷ್ಯದ ಆಲೋಚನೆಯೊಂದಿಗೆ ಯೋಗ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕಾಗಿ  ಎಲ್ಲ ಮತಗಟ್ಟೆಗಳಲ್ಲಿ ಬಿಸಿಲಿನ ರಕ್ಷಣೆಗಾಗಿ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗಾಗಿ ರ್ಯಾಂಪ್, ಅಶಕ್ತರಿಗೆ ವ್ಹೀಲ್ ಚೇರ್ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಮತದಾನ ಪ್ರಮಾಣ ಹೆಚ್ಚಿಸುವ ಗುರಿ ಹೊಂದಲಾಗಿದೆ. ಗ್ರಾಮಿಣ ಹಾಗೂ ನಗರ ಪ್ರದೇಶದಲ್ಲಿ ಕಳೆದ ಚುನಾವಣೆಳಲ್ಲಿ ಅತಿ  ಕಡಿಮೆ ಮತದಾನವಾದ  ಪ್ರದೇಶಗಳನ್ನು ಗುರುತಿಸಿ, ಈ ಸ್ಥಳಗಳಲ್ಲಿ ಸ್ವೀಪ್ ಕಾರ್ಯಚಟುವಟಿಕೆಗಳನ್ನು  ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಿ ಹೆಚ್ಚಿನ ಮತದಾನಕ್ಕೆ ಕ್ರಮ ವಹಿಸಲಾಗುತ್ತಿದೆ. ನೋಟಾ ಮತಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮೇ 07ರಂದು ಮತದಾನ  ನಡೆಯಲಿದೆ. ಎಲ್ಲ ಕುಟುಂಬದವರು ಅರ್ಹ ಮತದಾರರೊಂದಿಗೆ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿಕೊಂಡ ಅವರು, ಮತದಾನದ ಹಕ್ಕು ಅತ್ಯಂತ ಪವಿತ್ರ ಹಾಗೂ ಅಮೂಲ್ಯವಾದದ್ದು ಹಾಗೂ ಪವಿತ್ರವಾದದ್ದು, ಉತ್ತಮ ಸಮಾಜ, ಸುಭದ್ರ ದೇಶ ನಿರ್ಮಾಣದಲ್ಲಿ ಪ್ರತಿಯೊಬ್ಬರ ಮತ ಅತ್ಯಅಮೂಲ್ಯ ಹಾಗಾಗಿ ಯಾರೂ ಕೂಡ ನಿರ್ಲಕ್ಷ್ಯ ಭಾವನೆ ತೋರದೆ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಮತದಾನದ ಮೌಲ್ಯವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು. 

ಚುನಾವಣಾ ಆಯೊಗದ ನಿರ್ದೇಶನದಂತೆ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗ್ರಾಮ ಪಂಚಾಯತ್ ಸೇರಿದಂತೆ ನಗರ ಮಟ್ಟದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ನಮ್ಮದು. ಇಂತಹ ದೇಶದದಲ್ಲಿ ಜನಿಸಿದ ಪ್ರತಿಯೊಬ್ಬ ನಾಗರಿಕನೂ ಪುಣ್ಯವಂತ. ಉತ್ತಮ ಪ್ರಜಾಪ್ರಭುತ್ವ ಹೊಂದಿರುವ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು ನಿಭಾಯಿಸಲು  ಮತದಾನ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬರು ಮತದಾನ ಹಬ್ಬದಲ್ಲಿ ಸಕ್ರೀಯವಾಗಿ ಭಾಗವಹಿಸಿ, ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದ ಅವರು, ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ  ಯೋಗ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಕಡ್ಡಾಯವಾಗಿ ಮತ ಚಲಾಯಿಸುವಂತೆ  ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ರಚಿಸಿದ ಮತದಾರರ ಜಾಗೃತಿ ಗೀತೆಯನ್ನು ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಸಾಕ್ಷಿ ಹಿರೇಮಠ ಹಾಡಿದರು. ಎಲ್ಲರೂ ಮತದಾನ ಜಾಗೃತಿ ಕುರಿತು ಘೋಷಣೆಗಳನ್ನು ಕೂಗಿದರು. ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಹಮ್ಮಿಕೊಂಡ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಇದಕ್ಕೂ ಮೊದಲು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಿಂದ ಆರಂಭಗೊಂಡ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ಆಶಾದ ಉರ್ ರೆಹಮಾನ ಶರೀಫ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.  

ಜಾಗೃತಿ ಜಾಥಾ ಅಭಿಯಾನವು ದರಬಾರ ಶಿಕ್ಷಣ ಸಂಸ್ಥೆ ಆವರಣದರೆಗೆ ಸಾಗಿತು.

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಡಾ. ರತನ್ ಕನ್ವರ್ ಹೆಚ್. ಗಧವಿಚರಣ, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ ಆರ್ ಮುಂಡರಗಿ, ಉಪಕಾರ್ಯದರ್ಶಿ ಬಿ ಎಸ್ ಮೂಗನೂರಮಠ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಪ್ರೀತಮ್ ನಸಲಾಪುರ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಗಳಾದ ರಾಜೇಶ್ ಪವಾರ, ಸಹನಾ ಕುಡಿಗನೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜ್ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಇತರರು. ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, April 25, 2024

ಭಕ್ತಿ ಮತ್ತು ಶಕ್ತಿಗೆ ಹುನುಮಂತನೆ ಮೂಲ : ಜಂಬುನಾಥ ಕಂಚ್ಯಾಣಿ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಸತ್ಸಂಗದಿಂದ ಮಾತ್ರ ಮನಸ್ಸು ಶುದ್ಧೀಕರಣಗೊಳ್ಳಲು ಸಾಧ್ಯ ಎಂದು ಹಿರಿಯ ಸಾಹಿತಿ ಜಂಬುನಾಥ ಕಂಚ್ಯಾಣಿ ಹೇಳಿದರು, 

  ನಗರದ ಸಾಯಿ ರೆಸಿಡೆನ್ಸಿ ಬಡವಾಣೆಯ ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಮಿತಿಯು  ಹಮ್ಮಿಕೊಂಡ ಹನುಮಾನ ಜಯಂತಿ ಉತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ   ಜಾತ್ರೆ ಮತ್ತು ಮಹಾತ್ಮರ ಜಯಂತ್ಯೋತ್ಸವಗಳ ನೆಪದಲ್ಲಿ ಮನಸ್ಸು ವಿಕಸನಗೊಳ್ಳುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ  ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ರಾಮನ ಬಂಟನಾದ ಹನುಮಂತ ಬಹು ಜನ ಪ್ರಿಯನಾದ ನಾಡ ದೇವತೆ, ಊರ ಹೊರಗಿದ್ದ ಹುನುಮಾನ ದೇವಾಲಗಳು ಇಂದು ಊರಿನ ಮಧ್ಯ ಹಾಗೂ ಜನರ ಹೃದಯದಲ್ಲಿ ಸ್ಥಾಪಿತವಾಗಿವೆ, ನಾವು ಮಾಡುವ ಭಕ್ತಿ ಮನಸ್ಸುಗಳನ್ನು ಬೆಸೆಯುವ ಹಾಗಿರಬೇಕು, ರಾಮ ಮತ್ತು ಸೀತೆಯರನ್ನು ಒಂದುಗೂಡಿಸಿದ ಹುನುಮಂತ ಭಕ್ತಿಗೆ, ಶಕ್ತಿಗೆ, ಯುಕ್ತಿಗೆ, ಜ್ಞಾನಕ್ಕೆ ಮೂಲನಾಗಿರುವನು ಎಂದರು .

ಸಾನಿಧ್ಯ ವಹಿಸಿ ಮಾತನಾಡಿದ ಶಿವ ಬಸವ ಯೋಗಾಶ್ರಮದ ಮಾತೋಶ್ರೀ ದಾನಮ್ಮ ತಾಯಿಯವರು ಮಾತನಾಡಿ ಮಹಾತ್ಮರನ್ನು ನೆನೆಯುವುದೇ ಘನ ಮುಕ್ತಿ ಪದಂ ಎನ್ನುವಂತೆ ಈ ನಾಡಿನಲ್ಲಿ ಜನಿಸಿ ಜನರ ಬದುಕನ್ನು ಹಸನುಗೊಳಿಸಲು ಶ್ರಮಿಸಿದ ಶರಣರನ್ನು ಸತ್ಪುರುಷರನ್ನು ನಾವು ನಿತ್ಯವೂ ನೆನೆಯಬೇಕು, ಹನುಮಾನ ಜಯಂತಿಯ ಮೂಲಕ ನಿಷ್ಠೆಯಿಂದ ಭಕ್ತಿ ಮಾಡುವ ಮನೋಭಾವ ಹೆಚ್ಚಿಸಿಕೊಂಡು ಯಾವತ್ತೂ ಸತ್ಸಂಗದಲ್ಲಿ ಭಾಗಿಯಾಗಿ ನಿಜ ಸುಖವನ್ನು ಅನುಭವಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಸ್ ಡಿ ಕೃಷ್ಣಮೂರ್ತಿ  ವಹಿಸಿಕೊಂಡಿದ್ದರು,  ವೇದಿಕೆಯಲ್ಲಿ  ಮಲ್ಲಿಕಾರ್ಜುನ ಗಡಗಿ, ಮಹಾಲಕ್ಷ್ಮಿ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷರಾದ  ಸುಧಾ ರಾ ಇಂಡಿ, ರಾಣಿ ಕಿತ್ತೂರು ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷರಾದ ಗೌರಮ್ಮ ಕುಬಕಡ್ಡಿ  ಅತಿಥಿಗಳಾಗಿ ಭಾಗವಹಿಸಿದ್ದರು, ಇದೇ ಸಂದರ್ಭದಲ್ಲಿ ಡಾ. ಸಿ ಕೆ ಹೊಸಮನಿ, ಎಸ್ ಬಿ ಪೂಜಾರ, ಅಮೋಘಸಿದ್ದ ಹಂಜಗಿ ದಂಪತಿಗಳನ್ನು ಸನ್ಮಾನಿಸಲಾಯಿತು, ಕಾರ್ಯಕ್ರಮದಲ್ಲಿ ಮುಖಂಡರಾದ ಮಹಾದೇವ ಕಾಮಗೊಂಡ, ಈರಣ್ಣ ನಾಗರಾಳ, ಎಸ್ ಬಿ ಹಳಗುಣಕಿ, ಬೇವೂರು, ಎಸ್ ಟಿ ಕನಕ, ಶಿವಾನಂದ ಯಾಳವಾರ, ಹೆಚ್ ಹೆಚ್ ಭರಡ್ಡಿ, ಶ್ರೀಕಾಂತ್ ಜಮಖಂಡಿ, ಬಿ ಆರ್ ನರಗುಂದ, ಹೆಚ್ ಎಲ್ ಸಂಕ, ರಾಜಶೆಖರ ಇಂಡಿ, ಎಸ್ ಎಸ್ ದುರಗದ, ಚಿದಾನಂದ ಗಡಗಿ, ಸಿದ್ದು ಇಜೇರಿ, ಬಸವರಾಜ ಪವಾರ, ಸುನೀಲ್ ಟಂಕಸಾಲೆ ಸೇರಿದಂತೆ ಹಲವರು ಭಾಗವಹಿಸಿದ್ದರು  ಎಂ ಬಿ ಮಮದಾಪೂರ ಹಾಗೂ ಸಾವಿತ್ರಿಬಾಯಿ ಮುಂಡಾಸ್ ಕಾರ್ಯಕ್ರಮ ನಿರೂಪಿಸಿದರು ಪಂಡಿತರಾವ ಪಾಟೀಲ್  ವಂದಿಸಿದರು 

ಬೆಳಿಗ್ಗೆ ದೇವಸ್ಥಾನದ ಆವರಣದ ವೀರಾಂಜನೇಯ ಸ್ವಾಮಿಯ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ ನಡೆದವು ನಂತರ ಅತ್ಯಂತ ಸಂಭ್ರಮ ಹಾಗೂ ಭಕ್ತಿ ಭಾವದಿಂದ ಮಹಿಳಾ ಭಕ್ತರು ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ಜೋಗುಳ ಪದಗಳನ್ನು ಹಾಡಿ ನಾಮಕರಣ ಕಾರ್ಯಕ್ರಮವನ್ನು  ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮಾಡುವ ಮೂಲಕ ಸಂಭ್ರಮಿಸಿದರು, ಮಧ್ಯಾಹ್ನ ಅನ್ನ ಪ್ರಸಾದ ನಡೆಯಿತು ಈ ಕಾರ್ಯಕ್ರಮದಲ್ಲಿ ಸಾಯಿ ರೆಸಿಡೆನ್ಸಿ, ಸದಾಶಿವ ನಗರದ ಹಾಗೂ ಎಕ್ಸಾಟಿಕ್ ಕಾಲೋನಿಗಳ ನೂರಾರು ಜನ ಭಕ್ತರು ಭಾಗವಹಿಸಿ ಹನುಮ ಜಯಂತಿಯನ್ನು ಭಕ್ತಿ ಸಡಗರದಿಂದ ಆಚರಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

26-04-2024 EE DIVASA KANNADA DAILY NEWS PAPER

Wednesday, April 24, 2024

25-04-2024 EE DIVASA KANNADA DAILY NEWS PAPER

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಶ್ರೀಶೈಲ ಮುಳಜಿ ನೇಮಕ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ವಿಜಯಪರ ನಗರದ ಯುವ ನ್ಯಾಯವಾದಿ ಹಾಗೂ ಹೋರಾಟಗಾರ ಶ್ರೀಶೈಲ ಮುಳಜಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಆದೇಶ ಹೊರಡಿಸಿದ್ದಾರೆ.

ಶ್ರೀಶೈಲ ಮುಳಜಿ ಅವರು ಕನ್ನಡಪರ, ಜನಪರ ಚಳುವಳಿಯಲ್ಲಿ ಹಲವಾರು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಶ್ರೀಶೈಲಮುಳಜಿಯವರು ಕರ್ನಾಟಕ ರಕ್ಷಣಾ ವೇದಿಕೆಯ ತತ್ವ-ಸಿದ್ಧಾಂತ ಮತ್ತು ನೀತಿ-ನಿಯಮಗಳನ್ನು ಒಪ್ಪಿ ಬಸವಾದಿ ಶರಣರ ನೆಲವಾದ ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯನ್ನು ಬಲಪಡಿಸಲು ಮುಂದೆ ಬಂದಿದ್ದಾರೆ. ಮುಳಜಿಯವರ ಕನ್ನಡಪರವಾದ ಕೆಲಸವನ್ನು ಮೆಚ್ಚಿ ವಿಜಯಪುರ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಈ ನೇಮಕಾತಿ ಪತ್ರವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶ್ರೀಯುತರಿಗೆ ನೀಡಿರುವ ಈ ಗುರುತರ ಜವಾಬ್ದಾರಿಯನ್ನು ಅತ್ಯಂತ ಶ್ರದ್ದೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ 'ಸಮಗ್ರ ಕರ್ನಾಟಕದ ಅಭಿವೃದ್ಧಿಯೇ ನಮ್ಮ ಗುರಿ' ಎಂಬ ಕರ್ನಾಟಕ ರಕ್ಷಣಾ ವೇದಿಕೆಯ ಉದ್ದೇಶವನ್ನು ಈಡೇರಿಸಲಿದ್ದಾರೆಂದು ನೇಮಕ ಪತ್ರದಲ್ಲಿ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, April 22, 2024

23-04-2024 EE DIVASA KANNADA DAILY NEWS PAPER

ಲೋಕಸಭಾ ಚುನಾವಣೆ 2024 ಅಂತಿಮ ಕಣದಲ್ಲಿ 8 ಅಭ್ಯರ್ಥಿಗಳು

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಗಿದ್ದು, ಒಟ್ಟಾರೆ 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಳ್ಳುವ ಮೂಲಕ ಅಂತಿಮ ಕಣದಲ್ಲಿ  8 ಅಭ್ಯರ್ಥಿಗಳು ಇದ್ದಾರೆ. 

ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಹಾಗೂ ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್‌ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಏ.22 ರಂದು ಹಿಂಪಡೆದಿದ್ದಾರೆ. 

ಅಂತಿಮ ಕಣದಲ್ಲಿ ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ, ಕಾಂಗ್ರೇಸ್‌ನ ರಾಜು ಆಲಗೂರ, ಕಾರ್ನಾಟಕ ರಾಷ್ಟç ಸಮಿತಿ ಪಕ್ಷದ ಗಣಪತಿ ಲಾಲಸಿಂಗ ರಾಠೋಡ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಪಕ್ಷದ ಜಿತೇಂದ್ರ ಅಶೋಕ ಕಾಂಬ್ಲೆ, ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ನಾಗಜ್ಯೋತಿ. ಬಿ. ಎನ್,  ರಾಷ್ಟಿçಯ ಸಮಾಜ ಪಕ್ಷದ ರಾಜಕುಮಾರ್ ಅಪ್ಪಣಾ ಹೋನ್ನಕಟ್ಟಿ, ನಕಿ ಭಾರತೀಯ ಏಕತಾ ಪಕ್ಷದ ರಾಮಜಿ ಹರಿಜನ್, ಪಕೇತರ ಅಭ್ಯರ್ಥಿ ತಾರಾಬಾಯಿ ಬೋವಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಾಗಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, April 20, 2024

ಬಲಿಷ್ಠ ಹಾಗೂ ಸುಸ್ಥಿರ ದೇಶ ಕಟ್ಟಲು ಮತ ಚಲಾಯಿಸಿ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಿಶಿ ಆನಂದ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ನಾವು ಚಲಾವಣೆ ಮಾಡುವ ಮತ ಬಲಿಷ್ಠ ಹಾಗೂ ಸುಸ್ಥಿರ ದೇಶ ಕಟ್ಟಲು ಸಹಾಯ ಮಾಡುತ್ತದೆ. ಯಾವುದೇ ಆಸೆ ಆಮಿಷಕ್ಕೆ ಬಲಿಯಾಗದೆ ಮತ ಚಲಾಯಿಸಿ ಎಂದು ಜಿಲ್ಲಾ ಸ್ವೀಪ್ ಸಮಿತಿ ಅದ್ಯಕ್ಷರು ಹಾಗೂ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಿಶಿ ಆನಂದ ಹೇಳಿದರು.

ವಿಜಯಪುರ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವಿಜಯಪುರ ಇವರ ಸಹಯೋಗದಲ್ಲಿ ನವ ಸ್ಪೂರ್ತಿ ಸಂಘ, ಮಾಜಿ ದೇವದಾಸಿ ಪುನರ್ವಸತಿ ಯೋಜನೆ, ಏಡ್ಸ್ ಜಾಗೃತಿ ಮಹಿಳಾ ಸಂಘ ವಿಜಯಪುರ ಸಹಯೋಗದಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 “ಮತದಾನ ಜಾಗೃತಿ ಅಭಿಯಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾವು ಚುನಾಯಿಸುವ ಜನಪ್ರತಿದಿಗಳು ಆಯ್ಕೆಯಾದ ಮೇಲೆ ಆರೋಗ್ಯ, ಶಿಕ್ಷಣ, ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಯೋಜನೆಗಳನ್ನು ಹಾಕಿಕೊಂಡು ಸಮಾಜದ ಸಮಸ್ಯೆಗಳನ್ನು ನಿವಾರಿಸುತ್ತಾರೆ. ಈ ನಿಟ್ಟಿನಲ್ಲಿ ಸದೃಢ ರಾಷ್ಟç ನಿರ್ಮಾಣಕ್ಕೆ ತೊಡಗಿಸಿ ಕೊಳ್ಳುತ್ತಾರೆ. ಹಾಗಾಗಿ ಎಚ್ಚರಿಕೆ ಹಾಗೂ ಸೂಕ್ತ ರೀತಿಯಲ್ಲಿ ಉತ್ತಮ ಆಡಳಿತ ನಿರ್ಮಾಣ ಮಾಡಲು ಮತ ಚಲಾಯಿಸಿ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿಗಳಾದ ಸಿ. ಆರ್. ಮುಂಡರಗಿ ಮಾತನಾಡಿ, ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತದಾನ ಮಾಡುವುದೂ ಸಹ ನಿಮ್ಮೆಲ್ಲರ ಹಕ್ಕು. ಮತದಾನದಲ್ಲಿ ಸಣ್ಣ ವ್ಯಕ್ತಿ ಹಾಗೂ ದೊಡ್ಡ ವ್ಯಕ್ತಿ ಎಂದು ವ್ಯತ್ಯಾಸ ಇಲ್ಲ. ಎಲ್ಲರ ಮತದಾನವು ಸಮಾನವಾಗಿರುತ್ತದೆ. ಮತಗಟ್ಟೆಗಳಲ್ಲಿ ಸಾರ್ವಜನಿಕರಿಗೆ ಎಲ್ಲ ಮೂಲಭೂತ ಸೌಲಭ್ಯಗಳಾದ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಸರತಿ ಸಾಲಿನ ವ್ಯವಸ್ಥೆ, ಹಿರಿಯ ನಾಗರಿಕರಿಗೆ ಆದ್ತೆ ನೀಡುವುದು, ವಿಶೇಷ ಚೇತನರಿಗೆ ವ್ಹೀಲ್ ಛೇರ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾರೂ ಭಯಭೀತರಾಗದೆ ಆಸೆ-ಆಮಿಷಗಳಿಗೆ ಒಳಗಾಗದಂತೆ ಪ್ರತಿಯೊಬ್ಬರೂ ಸಹ ಮತದಾನ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಜಿಲ್ಲೆಯ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸಹಕರಿಸಬೇಕು. ಈ ನಿಟ್ಟಿನಲ್ಲಿ ಯಾರು ಮತದಾನದಿಂದ ಹೊರಗುಳಿಯಬಾರದು. ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಿ ಮತದಾನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು. ವಿಶೇಷವಾಗಿ ಜಿಲ್ಲೆಯ ಪ್ರತಿ ಮತಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಮಹಿಳೆಯರಿಗೋಸ್ಕರ ಮಹಿಳಾ ಸ್ನೇಹಿ ಮತಗಟ್ಟೆ(ಪಿಂಕ್/ಸಖಿ ಬೂತ್)ಗಳನ್ನು ಅಲಂಕರಿಸಲಾಗಿದೆ. ಆದ್ದರಿಂದ ಎಲ್ಲ ಮಹಿಳೆಯರು ನಿರ್ಭೀತಿಯಿಂದ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿ ಎಂದರು.

ನAತರ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ ರವರು ಮಾತನಾಡಿದರು. , ರಾಯಭಾರಿ ಸಹನಾ ಕುಡಿಗನೂರ ರವರು ಎಲ್ಲರಿಗೂ ಮತದಾನ ಜಾಗೃತಿಯ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಇನ್ನೋರ್ವ ರಾಯಭಾರಿ ಸಾಕ್ಷಿ ಹಿರೇಮಠರವರು ಮತದಾನ ಜಾಗೃತಿ ಗೀತೆಗಳನ್ನು ಹಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳಾದ ಬಿ. ಎಸ್ ಮೂಗನೂರಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ. ಕೆ. ಚವ್ಹಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ರಾಜಶೇಖರ್ ಹೆಚ್ ದೈವಾಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಬಸವರಾಜ ಜಿಗಳೂರ, ಇನ್ನೋರ್ವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಸ್. ಸಿ ಮ್ಯಾಗೇರಿ, ಜಿಲ್ಲಾ ಪಂಚಾಯತಿಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯ

ನೇಹಾ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಜಂಗಮ ಸಮಾಜ ಮುಖಂಡರಿAದ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನೇಹಾ ಹಿರೇಮಠ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಿ, ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಜಂಗಮ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಂಗಮ ಸಮಾಜ ಮುಖಂಡ ಸಂಜೀವ ಹಿರೇಮಠ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಸಾವಳಗಿಮಠ ಮಾತನಾಡಿ, ನೇಹಾ ಹತ್ಯೆ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ಭಯ ಹುಟ್ಟಿಸಿದೆ. ಹಾಡು ಹಗಲೇ ಕಾಲೇಜಿನ ಆವರಣದಲ್ಲಿ 9 ಸಲ ಚಾಕುವಿನಿಂದ ಇರಿದು ಕ್ರೂರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್‌ಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಫಯಾಜ್ ಮಾಡಿರುವ ಹೀನ ಕೃತ್ಯದಲ್ಲಿ ಆತನ ಇನ್ನೂ ನಾಲ್ಕು ಸಹಪಾಠಿಗಳ ಕೈವಾಡವೂ ಇರುವುದು ತಿಳಿದು ಬಂದಿದೆ. ಹಾಗಾಗಿ ಎಲ್ಲರನ್ನೂ ಬಂಧಿಸಿ ಸರಿಯಾಗಿ ವಿಚಾರಣೆ ನಡೆಸಬೇಕು. ಅಲ್ಲದೇ ಆರೋಪಿಗಳಿಗೆ ಜಾಮಿನು ಸಿಗದಂತೆ ಪೊಲೀಸ್ ಅಧಿಕಾರಿಗಳು ಎಚ್ಚರಿಕೆಯಿಂದ ವಿಚಾರಣೆ ನಡೆಸಿ 1 ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ ಗರಿಷ್ಠ ಮಟ್ಟದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ವಿರಳ ಪ್ರಕರಣಗಳಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸುಗ್ರಿವಾಜ್ಞೆ ಮೂಲಕ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಸಾದ ವಸ್ತçದ, ಹಿಂದೂ ಮಹಾಸಭಾದಿಂದ ಪೂರ್ಣಿಮಾ ಬದ್ನೂರ, ಭುವನೇಶ್ವರಿ ಕೋರವಾರ, ಮಾಯಾ ಚೌಧರಿ ಮಾತನಾಡಿ, ಈ ಕೊಲೆಯಲ್ಲಿ ರಾಜಕಾರಣ ಮಾಡದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ಅದರಂತೆ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಸಯ್ಯ ಚಿನ್ನಕಾಳಿಮಠ, ಡಾ.ಬಸವರಾಜ ನಂದಿಕೋಲಮಠ, ವಿಶ್ವನಾಥ ಹಿರೇಮಠ ಕಾಖಂಡಕಿ, ರಾಚಯ್ಯ ಮಠಪತಿ, ಗುರಸಿದ್ದಯ್ಯ ಹಿರೇಮಠ, ಗುರಯ್ಯ ಯಾದವಾಡಮಠ, ಜೆಡಿಎಸ್ ಮುಖಂಡ ರಾಜು ಹಿಪ್ಪರಗಿ, ವಿಶ್ವನಾಥ ಹಿರೇಮಠ, ಮಲ್ಲಯ್ಯ ಹಿರೇಮಠ, ಪುಷ್ಪಾ ಗಚ್ಚಿನಮಠ, ಸುರೇಖಾ ಹಿರೇಮಠ, ಶೈಲಜಾ ನಂದಿಕೋಲಮಠ, ಸುನೀತಾ ಹಿರೇಮಠ, ವೀಣಾ ಹಿರೇಮಠ, ಚೈತ್ರಾ ಮಹಾಂತಮಠ, ಪೂಜಾ ಹಿರೇಮಠ, ಮೀನಾಕ್ಷಿ ಮಠ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

21-04-2024 EE DIVASA KANNADA DAILY NEWS PAPER

Friday, April 12, 2024

ಮಹಾನ ನಾಯಕ

ತಾಯಿಯ ಗರ್ಭದಲ್ಲಿ ಇರುವಾಗಲೆ ಚಿಕ್ಕಪ್ಪನಾದ ಸನ್ಯಾಸಿಯ ವಾಣಿಯಂತೆ ಇತಿಹಾಸ ಪುರುಷನೊಬ್ಬ ಮಗನಾಗುತ್ತಾನೆ ಅವನಿಂದ ನಿಮ್ಮ ಕೀರ್ತಿ ಬೆಳೆಯುವುದು

ಎಪ್ರಿಲ್ ಹದಿನಾಲ್ಕು ಭರತ ಭೂಮಿಗೆ ಹರ್ಷವೆ ಹರ್ಷಾ ನೀನು ಉದಯಿಸಿದ ದಿನ ನಿನ್ನ ತಾಯಿ ತಂದೆಯರಿಗೆ ಅಷ್ಟೆ ಅಲ್ಲಾ ದಿನ ದಲಿತರಿಗೂ ಅರುಣೋದಯ ಅಂದು

ಬರೋಡಾದ ಗಾಯಕವಾಡ ದೊರೆ ಸಯಾಜಿ ರಾವ್ ಇಪ್ಪತ್ತೈದು ರೂಪಾಯಿಗಳ ವಿದ್ಯಾರ್ಥಿ ವೇತನ ಪಡೆದು ಹತ್ತಾರು ಶಾಸ್ತ್ರ ವಿಷಯಗಳ ಜ್ಞಾನ ಪಡೆದವನು

ಮನುಷ್ಯ ಜಾತಿ ತಾನೊಂದೆ ವಲಂ ಎಂದು ಮನುಷ್ಯ ವರ್ಗದ ಸಮಾನತೆ ಸೌಹಾರ್ದತೆ ಸ್ನೇಹ ಬಾಂಧವ್ಯದ ಗುಣವ ಬೆಳೆಸಿದೆ ಬುದ್ದ ಬಸವರಾದಿಯಂತೆ ನೆಡೆದವನು

ಭಾರತ ಸಂವಿಧಾನ ಶಿಲ್ಪಿಯಾಗಿ ಗುರುಗಳಿಂದ ಅಂಬೇಡ್ಕರ ಕರೆಸಿಕೊಂಡವನು ಭಾರತ ಜನರ ಪಾಲಿಗೆ ಬಾಬಾನಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾನಾಯಕ

ಮಾಹೋ ಯಿಂದ ದೇಶ ವಿದೇಶಗಳಲ್ಲಿ ಸನ್ಮಾರ್ಗವನ್ನು ಉಪದೇಶವನ್ನು ಸಾರಿರುವನು ತೋರು ಬೆರಳಿನಲ್ಲಿ ಅನೇಕ ಸಂದೇಶಗಳನ್ನು ಅಡಗಿಸಿದವನು ಭಾರತಾಂಬೆಯ ಸೇವೆಗೈದ ಮಹಾನ ಪುರುಷ

ಇವತ್ತು ನೀನು ವೀರನಾಯಕ ಅವತ್ತು ನಿನ್ನನು ಕೀಳಾಗಿ ಕಂಡ ಮನಸ್ಸು ಇಂದು ಹೃದಯಪೂರ್ವಕವಾಗಿ ಕೈ ಎತ್ತಿ ನಮಸ್ಕರಿಸುವಂತ್ತೆ ಮಾಡಿದ ಚಮತ್ಕಾರಿ ನೀನು

                      ರಾಜೇಶ್ವರಿ ಪಿ ಸಾಲಿಮಠ

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

14-04-2024 EE DIVASA KANNADA DAILY NEWS PAPER

ವಿಜಯಪುರ ಮ.ನ.ಪಾ ವತಿಯಿಂದ ಸ್ವೀಪ್ ಅಡಿ ನಗರದ ವಿವಿಧ ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯದ ಮಹಿಳೆಯರಿಂದ ಮತದಾನದ ಜಾಗೃತಿ ಮೂಡಿಸಲು ಸಭೆ

ಈ ದಿವಸ ಕನ್ನಡ ದಿ‌ನ ಪತ್ರಿಕೆ ವಾರ್ತೆ

ವಿಜಯಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಮತದಾನದ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯ ಸಂಘದ ಗುಂಪುಗಳ ಪ್ರತಿನಿಧಿಗಳಿಗೆ ಸಭೆ ನಡೆಸಿ ತಮ್ಮ ಗುಂಪಿನ ಸದಸ್ಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಮತದಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಕುರಿತು ಅರಿವು ಮೂಡಿಸಲು ಆಯೋಜಿಸಿರುವ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೇರವೆರಿಸಲು ಮಹಾನಗರ ಪಾಲಿಕೆ ಸಭಾ ಭವನದಲ್ಲಿ ಸಭೆ ಜರುಗಿತು.

ಸಹಾಯಕ ಚುನಾವಣಾ ಅಧಿಕಾರಿಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ವಿಜಯಪುರ ನಗರ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಅಶಾದ್ ಉರ್ ರೆಹಮಾನ್ ಷರೀಫ್ ಇವರು ಮಾತನಾಡುತ್ತ ನಮ್ಮ ಭಾರತಿಯರಿಗೆ ರಾಷ್ಟ್ರ ಪ್ರೇಮ ಮತ್ತು ಪ್ರಜಾಪ್ರಭುತ್ವದ ಮೇಲೆ ತುಂಬಾ ಹೆಮ್ಮೆ, ನ್ಯಾಯ ಸಮ್ಮತ ಚುನಾವಣೆ ಪ್ರಜಾಪ್ರಭುತ್ವದ ಆಧಾರ ಸ್ತಂಭ, ಏಕೆಂದರೆ ಜನರ ಸರ್ಕಾರವು, ಜನರಿಂದ ಮತ್ತು ಜನರಗೊಸ್ಕರ ಎಂದು ಚುನಾವಣೆಗಳು ಖಚಿತ ಪಡಿಸುತ್ತವೆ, ಚುನಾವಣೆ ಎಂದರೆ ಜನರು ತಮ್ಮ ರಾಜಕೀಯ ನಾಯಕನನ್ನು ಆಯ್ಕೆ ಮಾಡುವ ಅಭಿಪ್ರಾಯವನ್ನು ವ್ಯಕ್ತಪಡಿಸುವ ಪ್ರಕ್ರಿಯೆ, ಸಮರ್ಥ ರಾಜಕೀಯ ನಾಯಕನನ್ನು ಆಯ್ಕೆ ಮಾಡಲು ಸಾರ್ವಜನಿಕ ಮತದಾನದ ಮೂಲಕ ಈ ಅಭಿಪ್ರಾಯವನ್ನು ವ್ಯಕ್ತಪಡಿಲಾಗುತ್ತದೆ. ಆಯ್ಕೆಯಾದ ಜನಪ್ರತಿನಿಧಿಯು ಶಾಸನಗಳನ್ನು ರೂಪಿಸಿ ದೇಶದ ಸವಾರ್ಂಗಿಣ ಅಭಿವೃದ್ಧಿಯ ಜೊತೆಗೆ ಸಾರ್ವಜನಿಕರ ಅಭಿವೃದ್ಧಿಯ ಚಿಂತನೆ ಸಹ ಮಾಡಬೇಕಾಗುತ್ತದೆ. ಹೀಗಾಗಿ ರಾಜಕೀಯ ನಾಯಕರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ನ್ಯಾಯ ಸಮೃತ, ಶಾಂತಿಯುತ ಮತ್ತು ಪರಿಣಾಮಕಾರಿಯಾಗಿ ಮಾಡಬೇಕಾದ ನೈತಿಕ ಹೊಣೆಗಾರಿಕೆ ಎಲ್ಲಾ ಮತದಾರರ ಮೇಲಿದೆ ಹಾಗೂ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯ ಸಂಘದ ಗುಂಪುಗಳು ಈ ಅರಿವನ್ನು ಸಮಾಜದ ಸರ್ವರಿಗೂ ಮುಟ್ಟುವಂತೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಬೇಕಾಗಿದೆ ಎಂದು ತಿಳಿಸುತ್ತ ತಮ್ಮ ಗುಂಪಿನ ಸದಸ್ಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೇರವೆರಿಸಬೇಕು ಹಾಗೂ ಎಲ್ಲರೂ ನೈತಿಕ ಹಾಗೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಕುರಿತು ಅರಿವು ಮೂಡಿಸಲು ಕೋರಿದರು.

ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಶ್ರೀ ಮಹಾವೀರ ಬೊರಣ್ಣವರ ಇವರು ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯ ಗುಂಪುಗಳು ನೆರೆವೇರಿಸುವ ಸ್ವೀಪ್ ಕಾರ್ಯಕ್ರಮದ ವೇಳಾಪಟ್ಟಿಯಂತೆ ಕ್ಯಾಂಡಲ್ ಮಾರ್ಚ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಚೌಕ ವರಗೆ, ಮತಗಟ್ಟೆಗಳಲ್ಲಿ ಕುಂಭ ಮೇಳ ಕಾರ್ಯಕ್ರಮ, ದಿನಾಂಕ: ಅರಿಶನ ಕುಂಕುಮ ನೀಡಿ ಕಡಿಮೆ ಮತದಾನಯಾಗಿರುವ ಮತಗಟ್ಟೆಗಳಲ್ಲಿ ಅರಿವು ಮೂಡಿಸುವುದು, ಮತಗಟ್ಟೆಗಳಲ್ಲಿ ದ್ವಜಾರೋಹಣ, ಮತಗಟ್ಟೆಗಳಲ್ಲಿ ರಂಗೋಲಿ ಕಾರ್ಯಕ್ರಮಗಳನ್ನು ಹಮ್ಮಿಕೊಲು ವಿನಂತಿಸಿದರು ಹಾಗೂ ಮತದಾರರ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನಾಧಿಕಾರಿಗಳು ಶ್ರೀ ಬಸವರಾಜ ಜಗಳೂರ ಮಾತನಾಡುತ್ತ ಎಲ್ಲ ಸ್ತ್ರೀ ಶಕ್ತಿ ಸಂಘ ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರು ಸಮನ್ವಯತೆಯನ್ನು ಸಾಧಿಸಿ ಸ್ವೀಪ್ ಕಾರ್ಯಕ್ರಮವನ್ನು ಯಶಸ್ವೀ ಗೋಳಿಸಲು ವಿನಂತಿದರು. ಇದೇ ಕಾಲಕ್ಕೆ ಮಹಾನಗರ ಪಾಲಿಕೆಯ ಶ್ರೀಮತಿ ಸಾವಿತ್ರಿ ತಿಪ್ಪನ್ನವರ ಶ್ರೀಮತಿ ಕೌಲಗೆ ಸಿಆರ್‌ಪಿಗಳಾದ ಪ್ರಗತಿ, ಮಮತಾ, ಪ್ರೀಯಾ ಮುಂತಾದವರು ಮಹಾನಗರ ಪಾಲಿಕೆಯ, ವೈದ್ಯಕಿಯ ಇಲಾಖೆಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಭೆಯಲ್ಲಿ 150ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

13-04-2024 EE DIVASA KANNADA DAILY NEWS PAPER

ಪಿಯು ಪರೀಕ್ಷೆಯಲ್ಲಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ ಡಿಸ್ಟಿಂಕ್ಷನ್

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನಗರದ ನಾಗೂರ ಕ್ಯಾಂಪಸ್‌ನಲ್ಲಿನ ದ್ರೋಣ ಅಕಾಡೆಮಿ ಪಿಯು ವಿಜ್ಞಾನ ಕಾಲೇಜನ ವಿದ್ಯಾರ್ಥಿನಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾಳೆ.

ವಿದ್ಯಾರ್ಥಿನಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ 600 ಅಂಕಗಳ ಪೈಕಿ 538 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿನಿ ಸಾಧನೆಗೆ ಪಾಲಕರು, ಶಿಕ್ಷರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಆಲಗೂರರಿಂದ ನಾಮತ್ರ ಸಲ್ಲಿಕೆ

 ಈ‌ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು.

ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಇಡೀ ಜಿಲ್ಲೆ ಪರಿಚಿತನಿದ್ದೇನೆ. ಎರಡು ಸಲ ಶಾಸಕನಾಗಿದ್ದೇನೆ. ನನಗೆ ರಾಜಕೀಯದ ಇತಿಹಾಸವಿದೆ, ದುಡಿದಿದ್ದೇನೆ. ಆದರೆ, ಚಿರಪರಿಚಿತರಾಗಿರುವ ಜಿಗಜಿಣಗಿಯವರ ಮುಖವನ್ನೇ ಜನರು ಮರೆತಿದ್ದಾರಲ್ಲ, ಯಾಕೆಂದರೆ ಇವರು ಯಾರಿಗೆ ಮುಖ ತೋರಿಸಿದ್ದಾರೆ ಹೇಳಿ ಎಂದು ವ್ಯಂಗ್ಯವಾಡಿದರು.

ಯಾರು ಏನೇ ಮಾತಾಡಿದರೂ ಮತದಾರರಿಗೆ ಕಾಂಗ್ರೆಸ್ ಪಕ್ಷ ಜನಾನುರಾಗಿ ಅಂತ ಗೊತ್ತಾಗಿದೆ. ಅಭಿವೃದ್ಧಿ ಮಂತ್ರವಾಗಿಸಿಕೊಂಡು ಅವರ ಮುಂದೆ ನಾನೀಗ ನಿತಿದ್ದೇನೆ. ಗೆಲುವು ಆಗೇ ಆಗುತ್ತದೆ, ಜನರ ಪ್ರತಿಕ್ರಿಯೆ-ಉತ್ಸಾಹದಿಂದ ಈ ಮಾತು ಹೇಳುತ್ತಿರುವೆ. ಗೆದ್ದರೆ ಅವರ ಋಣ ತೀರಿಸುತ್ತೇನೆ ಎಂದು ಹೇಳಿದರು.

15ಕ್ಕೆ ಮತ್ತೆ ನಾಮಪತ್ರ

ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಆಲಗೂರ್ ತಿಳಿಸಿದರು.

ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ‌.ಬಿ.ಪಾಟೀಲರು ಸೇರಿದಂತೆ ಅನೇಕರು ಜತೆಗೆ ಇರಲಿದ್ದಾರೆ. ಜಿಲ್ಲೆಯ ಎಲ್ಲ ಕಡೆಯಿಂದ ಜನರು ಬರಲಿದ್ದಾರೆ ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಶಕ್ತ ರಾಷ್ಟ್ರ ನಿರ್ಮಾಣಕ್ಕಾಗಿ ಮತ ಚಲಾಯಿಸಿ : ಜಿಲ್ಲಾಧಿಕಾರಿ ಟಿ.ಭೂಬಾಲನ್

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸಧೃಡ  ರಾಷ್ಟ್ರ ನಿರ್ಮಾಣಕ್ಕಾಗಿ,  ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-2024ರ ನಿಮಿತ್ತ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಾಗಿರುವುದಿಲ್ಲ ಅದು ದೇಶದ ಭವಿಶ್ಯವನ್ನು ನಿರ್ಮಾಣ ಮಾಡುವ, ಅಭಿವೃದ್ಧಿಗೆ ಪೂರಕವಾಗಿರುವ ಮೆಟ್ಟಿಲು ಆಗಿರುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ, ಮತದಾನದಿಂದ ದೇಶದ ಆಭಿವೃದ್ಧಿ ಸಾಧ್ಯ. ನನ್ನ ಒಂದು ಒಂದು ಮತವೂ ದೇಶದ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂಬುದನ್ನು ಅರಿತುಕೊಂಡು ಮತ ಚಲಾಯಿಸಬೇಕು. ಬಹುದೊಡ್ಡ ಪ್ರಜಾಪ್ರಭುತ್ವದ ಭಾರತಕ್ಕೆ ಮತದಾನ ಎಂಬುದು ಅತ್ಯಂತ ಪ್ರಾಮುಖ್ಯತೆ ಹೊದಿಂರುವ ಕರ್ತವ್ಯವಾಗಿದೆ ಎಂದರು.

ಈಗಾಗಲೇ ಸ್ವೀಪ್ ವತಿಯಿಂದ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೆ ಮತ ಚಲಾಯಿಸಿ ಸುಭದ್ರ ದೇಶ ನಿರ್ಮಾಣ ಮಾಡಲು ಸಹಕರಿಸಬೇಕು ಎಂದರು.

ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಅರ್ಷದ,  ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ,   ಸೇರಿದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಪಿಯು ಪರೀಕ್ಷೆ: ರಕ್ಷಿತಾ ಸಿದ್ದರೆಡ್ಡಿ ಡಿಸ್ಟಿಂಕ್ಸನ್

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನಗರದ ಎಕ್ಸಲೆಂಟ್ ಪಿಯು ವಿಜ್ಞಾನ ಕಾಲೇಜನ ವಿದ್ಯಾರ್ಥಿನಿ ರಕ್ಷಿತಾ ಸಿದ್ದರೆಡ್ಡಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಡಿಸ್ಟಿಂಕ್ಸನ್ ಪಡೆದಿದ್ದಾಳೆ.

ವಿದ್ಯಾರ್ಥಿನಿ ರಕ್ಷಿತಾ ಸಿದ್ದರೆಡ್ಡಿ 600 ಅಂಕಗಳ ಪೈಕಿ 556 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿನಿ ಸಾಧನೆಗೆ ಪಾಲಕರು, ಶಿಕ್ಷರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, April 10, 2024

ಲೋಕಸಭೆ ಚುನಾವಣೆ - 2024 ಏ.12ರಿಂದ ನಾಮಪತ್ರ ಸ್ವೀಕಾರ : ಡಿಸಿ ಟಿ.ಭೂಬಾಲನ್

 ಈ‌  ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ :  ಲೋಕಸಭಾ ಸಾವರ್ಬತ್ರಿಕ ಚುನಾವಣೆ 2024 ರ ನಾಮಪತ್ರಗಳನ್ನು ಸ್ವೀಕರಿಸಲು   ಏ.12 ರಿಂದ 19 ರವರೆಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುತ್ತದೆ  ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯೂ ಆದ ಟಿ.ಭೂಬಾಲನ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ  ಲೋಕಸಭಾ ಚುನಾವಣೆ ಅಧಿಸೂಚನೆ ಕುರಿತು  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಮಪತ್ರಗಳನ್ನು ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11ಗಂಟೆ ಯಿಂದ ಮಧ್ಯಾಹ್ನ 3ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು.

ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನವಾಗಿರುತ್ತದೆ. 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏ.22ರವರೆಗೆ ಕಾಲಾವಕಾಶವಿರುತ್ತದೆ.  ಮೇ 7 ರಂದು ಮತದಾನ ನಡೆಯಲಿದ್ದು, ಜು 4 ರಂದು ಮತ ಎಣಿಕೆ ನಡೆಯಲಿದೆ. ಜು.6ರಂದು ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಏ.10 ರ ಅಂತ್ಯಕ್ಕೆ 19,43,566 ಮತದಾರರಿದ್ದು 9,86,778 ಪುರುಷ ಹಾಗೂ 9,56,578 ಮಹಿಳಾ ಮತ್ತು 210 ಇತರೆ ಮತದಾರರಿದ್ದಾರೆ. ಈ ಪೈಕಿ 43,468 ಯುವ ಮತದಾರರು, 21,764 ವೀಕಲಚೇತನ,  1,874 ಸೇವಾ ಮತದಾರರು ಇದ್ದಾರೆ ಎಂದರು. .

ಸುಗಮ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣಾ ಜರಗಿಸುವ ದೃಷ್ಟಿಯಿಂದ ವಿಧಾನಸಭಾ ಮತಕ್ಷೇತ್ರವಾರು ಒಟ್ಟು 167 ಸೆಕ್ಟರ್ ಅಧಿಕಾರಿಗಳು, 72 ಪ್ಲಾಯಿಂಡ್ ಸ್ವಾ÷್ಕಡ್, 87 ಸ್ಟೆಟಿಕ್ ಸರ್ವಲೈನಸ್ ಟೀಮ್, 24 ವಿಡೀಯೋ ಸರ್ವಲೈನಸ್ ಟೀಮ್, 8 ವಿಡೀಯೋ ವಿವ್ಹಿಂಗ್ ಟೀಮ್, 8 ಅಕೌಂಟಿAಗ್ ಟೀಮ್ ರಚನೆ ಮಾಡಲಾಗಿದೆ ಎಂದು ಹೇಳಿದರು.

ದೂರು ನಿರ್ವಹಣೆಯಲ್ಲಿ ಪ್ರಥಮ ಸ್ಥಾನ: 

ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ದಿನದಿಂದ  ಇಲ್ಲಿಯವರೆಗೆ ಸಿವಿಜಿಲ್ ತಂತ್ರಾAಶದಲ್ಲಿ 3,929 ದೂರುಗಳು ದಾಖಲಾಗಿದ್ದು, ಬಂದAತಹ ದೂರುಗಳನ್ನು ಸಮರ್ಪಕವಾಗಿ ಬಗೆಹರಿಸಲಾಗಿರುತ್ತದೆ,  ರಾಜ್ಯದಲ್ಲಿ ವಿಜಯಪುರ ಜಿಲ್ಲೆ ದೂರುಗಳ ನಿವಾರಣೆ ಮಾಡುವಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಮುಂಜಾಗೃತವಾಗಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದ್ದು, ಇಲ್ಲಿಯವರೆಗೆ 3 ಕೋಟಿ 24 ಲಕ್ಷ ದಾಖಲೆ ಇಲ್ಲದ ಹಣವನ್ನು ವಶಕ್ಕೆ ಪಡೆಯಲಾಗಿದೆ. 3,707 ಲೀಟರ್ ಮದ್ಯ,  624 ಗ್ರಾಂ ಡ್ರಗ್ಸ್ನ್ನು ವಶಕ್ಕೆ ಪಡೆಯಲಾಗಿದೆ. ಹಣ ಸೇರಿದಂತೆ ವಶಪಡಿಸಿಕೊಳ್ಳಲಾದ ಮಧ್ಯ, ಡ್ರಗ್ಸ್ನ ನ ಒಟ್ಟು ಮೌಲ್ಯ 3 ಕೋಟಿ 39 ಲಕ್ಷವಾಗುತ್ತದೆ ಎಂದು ಮಾಹಿತಿ ನೀಡಿದರು.

ಮುಕ್ತ, ಶಾಂತಿಯುತ ಹಾಗೂ ಸಮರ್ಪಕವಾಗಿ ಚುನಾವಣೆ ನಡೆಸಲು ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಈಗಾಗಲೇ ಮೊದಲನೇ ಹಂತದ ತರಬೇತಿಯನ್ನು ನೀಡಲಾಗಿದೆ. ಬರುವ ದಿನಗಳಲ್ಲಿ ಎರಡನೇ ಹಂತದ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುವುದು. ಈಗಾಗಲೇ ಚುನಾವಣೆ ವೀಕ್ಷಕರು ನೀಯೋಜನೆಗೊಂಡಿರುತ್ತಾರೆ. ಜಿಲ್ಲೆಯಲ್ಲಿ ಪರವಾನಿಗೆ ಪಡೆದ ಶಸ್ತಾçಸ್ತçಗಳನ್ನು ಠೇವಣಿ ಇರಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ 2,900 ಶಸ್ತಾçಸ್ತçಗಳಿದ್ದು,  ಈ ಪೈಕಿ ಕೇವಲ 45 ಶಸ್ತಾçಸ್ತçಗಳಿಗೆ ಜೀವಬೆದರಿಕೆ ಇರುವ ವ್ಯಕ್ತಿ ಹಾಗೂ ಬ್ಯಾಂಕ್‌ನ ಭದ್ರತಾ ದೃಷ್ಟಿಯಿಂದ  ವಿನಾಯತಿ ನೀಡಲಾಗಿದೆ, ಇನ್ನೂ 7 ಅರ್ಜಿಗಳು  ಪರಿಶೀಲನೆ ಹಂತದಲ್ಲಿವೆ ಎಂದು ತಿಳಿಸಿದರು.

 ಅವಹೇಳನಕಾರಿ ಪ್ರಚೋದನೆ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಚುನಾವಣೆ ಪ್ರಚಾರ ಮಾಡಿದ ಹಿನ್ನಲೆಯಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.

Wednesday, March 27, 2024

ಉಡಾಳ ಚಿತ್ರದ ಮೊದಲ ಹಂತದ ಚಿತ್ರೀಕರಣ ವಿಜಯಪುರದಲ್ಲಿ ಪೂರ್ಣ

ವಿಜಯಪುರ:  ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸುತ್ತಿರುವ, ಅಮೋಲ್ ಪಾಟೀಲ್ ನಿರ್ದೇಶನದಲ್ಲಿ ಪೃಥ್ವಿ ಶಾಮನೂರು ನಾಯಕನಾಗಿ ನಟಿಸುತ್ತಿರುವ "ಉಡಾಳ" ಚಿತ್ರಕ್ಕೆ ಬಿಜಾಪುರದಲ್ಲಿ ಮೊದಲ ಹಂತದ ಚಿತ್ರೀಕರಣ ನಡೆದಿದೆ. 

ಚಿತ್ರದ ನಾಯಕ ಪೃಥ್ವಿ ಈ ಚಿತ್ರದಲ್ಲಿ ಗೈಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 25 ದಿನಗಳ ಮೊದಲ ಹಂತದ ಚಿತ್ರೀಕರಣದಲ್ಲಿ ಹಾಡು, ನೃತ್ಯ ಹಾಗೂ ಮಾತಿನ ಭಾಗದ ಸನ್ನಿವೇಶಗಳನ್ನು ಚಿತ್ರಿಸಿಕೊಳ್ಳಲಾಗಿದೆ. ಈ ಭಾಗದ ಚಿತ್ರೀಕರಣ ಸಂಪೂರ್ಣ ಬಿಜಾಪುರದಲ್ಲೇ ನಡೆದಿದೆ. ಈಗಾಗಲೇ ಚಿತ್ರದ ಮುಕ್ಕಾಲು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಅಮೋಲ್ ಪಾಟೀಲ್ ತಿಳಿಸಿದ್ದಾರೆ.

"ಉಡಾಳ" ಪಕ್ಕಾ ಕಮರ್ಷಿಯಲ್ ಜಾನರ್ ಚಿತ್ರವಾಗಿದೆ. ಲವ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಬಿಜಾಪುರ ಹಾಗು ಉತ್ತರ ಕರ್ನಾಟಕದಲ್ಲಿ ನಡೆಯುವಂತಹ ಅಪ್ಪಟ ಜವಾರಿ ಕಥೆಯಾಗಿದೆ.

ಯೋಗರಾಜ್ ಭಟ್ ಅವರ ಜೊತೆಗೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮೋಲ್ ಪಾಟೀಲ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ, ಅಮೋಲ್ ಪಾಟೀಲ್ ಬಿಜಾಪುರ ಮೂಲದವರು ಎನ್ನುವುದು ಮತ್ತೊಂದು ವಿಶೇಷ.

ತಮ್ಮ ಮೊದಲ ಚಿತ್ರ "ಪದವಿಪೂರ್ವ" ದಲ್ಲೇ ಬಯಲು ಸೀಮೆ ದಾವಣಗೆರೆಯ ಪೃಥ್ವಿ ಶಾಮನೂರು ಪ್ರೇಕ್ಷಕರ ಮನ ಗೆದ್ದಿದ್ದರು. ಪ್ರಸ್ತುತ ಅವರು ನಾಯಕರಾಗಿ ನಟಿಸುತ್ತಿರುವ "ಉಡಾಳ" ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆಯಿದೆ. ಪೃಥ್ವಿ ಶಾಮನೂರು ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ಬಲ ರಾಜವಾಡಿ, ಸುಮಿತ್, ಹರೀಶ್ ಹಿರಿಯೂರು, ಮಾಳು ನಿತ್ನಾಳ್, ಪ್ರವೀಣ್ ಗೋಕಾಕ್, ವಾದಿರಾಜ್, ದಯಾನಂದ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಯೋಗರಾಜ್ ಭಟ್ ಅವರು ಚಿತ್ರದ ಹಾಡುಗಳನ್ನು ರಚಿಸಿದ್ದು, ಚೇತನ್ ಡ್ಯಾವಿ ಸಂಗೀತ ನೀಡಿದ್ದಾರೆ. ಶಿವಶಂಕರ್ ನೂರಂಬಡ ಛಾಯಾಗ್ರಹಣ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಮೋಹನ್, ರಘು ಅವರ ನೃತ್ಯ ನಿರ್ದೇಶನ "ಉಡಾಳ" ಚಿತ್ರಕ್ಕಿದೆ.

ಈ ಹಿಂದೆ ಪದವಿ ಪೂರ್ವ ಸಿನೆಮ ನಿರ್ಮಾಣ ಮಾಡಿದ್ದ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಮತ್ತೆ ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇದೆ ವರ್ಷದ ಕೊನೆಯಲ್ಲಿ ಸಿನೆಮ ರಿಲಿಜ್ ಮಾಡುವ ಸಾಧ್ಯತೆ ಇದೆ.

ಬಿಜಾಪುರದ ಜನತೆಗೆ, ಪೊಲೀಸ್ ಇಲಾಖೆಗೆ, ವಿದ್ಯಾರ್ಥಿಗಳಿಗೆ, ಎಸ್ ಎಸ್ ಕಾಲೇಜಿನ ಸಂಸ್ಥೆಗೆ, ಪುರಾತತ್ವ ಇಲಾಖೆಗೆ, ಜೆ ಸ್ ಸ್ ಸಂಸ್ಥೆಗೆ, ಟಂಟA ಚಾಲಕರಿಗೆ ಮಾಧ್ಯಮ ಮಿತ್ರರಿಗೆ ಹಾಗು ಚಿತ್ರೀಕರಣಕ್ಕೆ ಸಹಕರಿಸಿದ ಎಲ್ಲರಿಗೂ ಇಡೀ ಉಡಾಳ ತಂಡ ಧನ್ಯವಾದ ಸಲ್ಲಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಪದವಿ ಮತ್ತು ಬಿ.ಎಡ್ . ಕಾಲೇಜುಗಳ ಕ್ಯಾಂಪಸ್ ರಾಯಬಾರಿಗಳಿಗೆ ಸ್ವೀಪ್ ತರಬೇತಿ ಮತದಾನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ : ರಿಶಿ ಆನಂದ

ವಿಜಯಪುರ : ಜನರಿಗೆ ಮತದಾನದ ಪ್ರಾಮುಖ್ಯತೆಯ ಅರಿವು ಮೂಡಿಸಿದಾಗ ಸದೃಡ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೇರಿದಂತೆ ಎಲ್ಲ ಯುವ ಸಮೂಹ ಸಮನ್ವದಿಂದ ಯುದ್ದೋಪಾಧಿಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಿಶಿ ಆನಂದ ಹೇಳಿದರು

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ವಿಜಯಪುರ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ರ ಹಿನ್ನೆಲೆಯಲ್ಲಿ ಭವಿಷ್ಯದ ಮತ್ತು ಯುವ ಮತದಾರರಿಗೆ ಮತದಾನದ ಶಿಕ್ಷಣ ಪ್ರಮುಖ್ಯತೆ ಜಾಗೃತಿ ಮತ್ತು ಅರಿವು ಮೂಡಿಸುವ ಕುರಿತು ಪದವಿ ಮತ್ತು ಬಿ.ಎಡ್. ಕಾಲೇಜು ರಾಯಬಾರಿಗಳಿಗೆ ಸ್ವೀಪ್ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಗ್ರಾಮೀಣ ಭಾಗದ ಜನರಿಗೆ ಚುನಾವಣೆ ಕುರಿತಾಗಿ ಹಲವಾರು ತಪ್ಪು ಕಲ್ಪನೆಗಳು ಇರುತ್ತವೆ, ಅದೆ ರೀತಿ ಅಲ್ಲಿಯ ಜನರಿಗೆ ಸರಿಯಾದ ಮಾಹಿತಿಯ ಕೊರತೆಯಿಂದ ಮತದಾನ ಮಾಡುವಲ್ಲಿ ಹಿಂದೇಟು ಹಾಕುತ್ತಿರುತ್ತಾರೆ. ತರಬೇತಿಗೆ ಬಂದಿರುವ ರಾಯಭಾರಿಗಳು ಜನರಿಗೆ ಮತದಾನದ ಜವಾಬ್ದಾರಿಯಿಂದ ಆಗುವ ಪ್ರಯೋಜನಗಳು, ಮಹತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಘಬೇಕು. ಗಾಮೀಣ, ಪಟ್ಟಣದ ಜನರು ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗದAತೆ ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಂತೆ ಕ್ರಿಯಾತ್ಮಕ ಚಟುವಟಿಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

 ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್  ಅಧಿಕಾರಿ ಹಾಗೂ ಯೋಜನಾ ನಿರ್ದೇಶಕರಾದ  ಸಿ.ಆರ್.ಮುಂಡರಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯು ನಮ್ಮ ದೇಶದಲ್ಲಿ ಅತಿ ಪ್ರಾಮುಖ್ಯತೆಯನ್ನು ಪಡೆದಿದ್ದು, ಈ ವ್ಯವಸ್ಥೆಯಲ್ಲಿ ಪ್ರಜೆಗಳ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಲು ನಾವೆಲ್ಲರೂ ಹಕ್ಕುಳ್ಳವರಾಗಿದ್ದೆವೆ. ಆದ್ದರಿಂದ ನಮ್ಮ ಹಕ್ಕುಗಳನ್ನು ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಇದನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದರು.

ಜಿಲ್ಲಾ ಚುನಾವಣಾ ತರಬೇತುದಾರರಾದ ಶ್ರೀರಾಮ ಭಟ್ಟ, ಸಂದೀಪ ದೆಶಪಾಂಡೆ, ಮಹಾಂತೇಶ ಅಂಗಡಿ, ಡಾ. ಚಿದಾನಂದ ಅನೂರು ಕಾಲೇಜಿನ ರಾಯಭಾರಿಗಳಿಗೆ ತರಬೇತಿ ನೀಡಿದರು.

ಯೋಜನಾ ವಿಭಾಗದ ಉಪ ನಿರ್ದೇಶಕ ಎ.ಬಿ. ಅಲ್ಲಾಪೂರ ಮತ್ತು ಸಿಬ್ಬಂದಿ ವರ್ಗದವರು, ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತರಬೇತಿಯಲ್ಲಿ ಭಾಗವಹಿಸಿದರು. ಶಿವಾನಂದ ಜಮಾದಾರ ಕಾರ್ಯಕ್ರಮವನ್ನು ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, March 25, 2024

ಉಚಿತ ಮೊಬೈಲ್ ರಿಪೇರಿ & ಸೇವೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

 ಈ ದಿವಸ ವಾರ್ತೆ

ವಿಜಯಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 8 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, March 13, 2024

ಪರಿಸರ ಸ್ನೇಹಿ ಜನ್ಮ ದಿನಾಚರಣೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

 ವಿಜಯಪುರ : ವಿಜಯ ಪುರ ನಗರದ ಮುದ್ರಣ ಕಾರ್ಮಿಕ ಸಂಘದ ಕಛೇರಿಯಲ್ಲಿ ಸಂಘದ ಸದಸ್ಯರ ಬಸವರಾಜ ಬಿಜ್ಜ ರಗಿಯವರ ಜನ್ಮ ದಿನ ಸಸಿ ನೀಡುವುದರ ಮೂಲಕ ಆಚರಿಸಲಾಯಿತು. ಇತ್ತೀಚಿನ ದಿನದಲ್ಲಿ ಯುವಕರು ವ್ಯರ್ಥ ರೀತಿಯಲ್ಲಿ ಜನ್ಮ ದಿನ ಆಚರಿಸುತ್ತಿದ್ದಾರೆ. ಹಾಲು ಎರೆಯುವುದು, ಚಾಕುವಿನಿಂದ ಕೇಕ್ ಕಟ್ ಮಾಡುವುದು ಇದನ್ನು ಯುವಕರು ತೊರೆದು, ಸಾಮಾಜಿಕ ಪರಿಸರ ಕಾಳಜಿ ಜನ್ಮ ದಿನಾಚರಣೆ ಆಚರಿಸಿದರೆ. ಜನ್ಮ ದಿನಕ್ಕೆ ಒಂದು ಮರೆಗು ಬರುತ್ತದೆ ಎಂದು ಮುದ್ರಣ ಕಾರ್ಮಿಕ ಸಂಘದ ನಿರ್ದೇಶಕ ನಾಗರಾಜ ಬಿಸನಾಳ ಹೇಳಿದರು. 

ಈ ಸಂಧರ್ಭದಲ್ಲಿ ಅಧ್ಯಕ್ಷ ಚಿದಾನಂದ ವಾಲಿ, ಹನೀಫ ಮುಲ್ಲಾ, ಉಮೇಶ ಶಿವಶರಣ, ಮಂಜುನಾಥ ರೂಗಿ, ಜಗ್ಗು ಶಹಾಪೂರ,  ದೀಪಕ ಜಾಧವ,  ಶ್ರೀಮಂತ ಬೂದಿಹಾಳ, ಈರಣ್ಣ ರೇಶ್ಮಿ, ಶಂಕರ ಕುಮಟಗಿ, ಕಿರಣ ಅಲಿಯಾಬಾದ ಮುಂತಾದವರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

14-03-2024 EE DIVASA KANNADA DAILY NEWS PAPER

12-03-2024 EE DIVASA KANNADA DAILY NEWS PAPER

13-03-2024 EE DIVASA KANNADA DAILY NEWS PAPER

Monday, March 11, 2024

11-03-2024 EE DIVASA KANNADA DAILY NEWS PAPER

12-03-2024 EE DIVASA KANNADA DAILY NEWS PAPER

10-03-2024 EE DIVASA KANNADA DAILY NEWS PAPER

09-03-2024 EE DIVASA KANNADA DAILY NEWS PAPER

08-03-2024 EE DIVASA KANNADA DAILY NEWS PAPER

07-03-2024 EE DIVASA KANNADA DAILY NEWS PAPER

06-03-2024 EE DIVASA KANNADA DAILY NEWS PAPER

ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನಮ್ಮ ಬದ್ಧತೆ ಅಚಲವಾಗಿದೆ : ಪ್ತೊ. ಬಿ.ಕೆ.ತುಳಸಿಮಾಲ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನಮ್ಮ ಬದ್ಧತೆ ಅಚಲವಾಗಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಕಾಲೇಜುಗಳನ್ನು ಸ್ಥಾಪಿಸುವುದಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಆ ಮೂಲಕ ದೂರದ ಪ್ರದೇಶಗಳ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಒದಗಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಹೇಳಿದರು.

ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 15ನೆಯ ಘಟಿಕೋತ್ಸವದಲ್ಲಿ ವಿವಿಯ ಸಾಧನೆಗಳನ್ನು ವಿವರಿಸಿದ ಅವರು, ರಾಜ್ಯ ಸರಕಾರ ಬೆಂಗಳೂರಿನ ಅದ್ದಿಗಾನಹಳ್ಳಿಯಲ್ಲಿ ನಾಲ್ಕು ಎಕರೆ ಜಮೀನು ಮಂಜೂರು ಮಾಡಿದ್ದು ಈ ಜಾಗದಲ್ಲಿ ನಮ್ಮ ವಿವಿಯಿಂದ ಪದವಿ ಗಳಿಸಿರುವ ವಿದ್ಯಾರ್ಥಿನಿಯರಿಗೆ ಕೆಎಎಸ್ ಮತ್ತು ಐಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಮಹಿಳೆಯರಿಗಾಗಿ ಕೋಚಿಂಗ್ ಸೆಂಟರ್‌ನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದರು. 

ಇತ್ತೀಚೆಗೆ, ವಿಶ್ವವಿದ್ಯಾನಿಲಯವು ಬಿ ದರ್ಜೆಯೊಂದಿಗೆ ಮರುಮಾನ್ಯತೆ ಪಡೆದಿದೆ. ಕಳೆದ ವರ್ಷದ ಡಿಸೆಂಬರ್ 21 ರಿಂದ 23 ರವರೆಗೆ ಭಗತ್ ಫೂಲ್ ಸಿಂಗ್ ಮಹಿಳಾ ವಿಶ್ವವಿದ್ಯಾನಿಲಯದ ಖಾನಪುರ್ ಕಲಾನ್ (ಸೋನಿಪತ್)ನ ಕುಲಪತಿ ಪ್ರೊ.ಸುದೇಶ್ ಚಿಕಾರಾ ನೇತೃತ್ವದ ನ್ಯಾಕ್ ತಜ್ಞರ ತಂಡÀವು ನಮ್ಮ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿತ್ತು ಮತ್ತು ಉನ್ನತ ಶಿಕ್ಷಣದಲ್ಲಿ ಶ್ರೇಷ್ಠತೆ ನಮ್ಮ ಕಾರ್ಯಕ್ಷಮತೆಯನ್ನು ಮತ್ತಷ್ಟು ದೃಢೀಕರಿಸುವ ಪ್ರಕ್ರಿಯೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿತು ಎಂದು ಅವರು ವಿವರಿಸಿದರು.

ನಮ್ಮ ವಿಶ್ವವಿದ್ಯಾಲಯವು 13 ಸ್ನಾತಕೋತ್ತರ ಕಾಲೇಜುಗಳು ಸೇರಿದಂತೆ 32 ಸ್ನಾತಕೋತ್ತರ ವಿಭಾಗಗಳು ಮತ್ತು 158 ಸಂಯೋಜಿತ ಕಾಲೇಜುಗಳೊಂದಿಗೆ, ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಕಲಿಕೆಯ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತದೆ. ಶಿಕ್ಷಣದಲ್ಲಿ ಪ್ರವೇಶ ಮತ್ತು ಒಳಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಲು ನಾವು ಪಿಜಿ ಸೆಂಟರ್ ಸೇರಿದಂತೆ ವಿವಿಧ ಕೇಂದ್ರಗಳು ಮತ್ತು ವಿಸ್ತರಣೆಗಳನ್ನು ಸ್ಥಾಪಿಸಿದ್ದೇವೆ. ಸಿಂಧನೂರು, ಮಂಡ್ಯದಲ್ಲಿ ವಿಸ್ತರಣಾ ಕೇಂದ್ರ, ಉಡುತಡಿಯಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ವಿಸ್ತರಣಾ ಸಂಶೋಧನಾ ಕೇಂದ್ರ ಮತ್ತು ಬೀದರನಲ್ಲಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸಿದ್ದೇವೆ ಎಂದೂ ಕುಲಪತಿ ವಿವರಣೆ ನೀಡಿದರು.

ನಮ್ಮ ವಿದ್ಯಾರ್ಥಿಗಳಿಗೆ ಕಲಿಕೆಯ ವಾತಾವರಣವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು ಶೈಕ್ಷಣ ಕ ಉತ್ಕೃಷ್ಟತೆಯನ್ನು ಬೆಂಬಲಿಸಲು ಸಾಧ್ಯವಾದಷ್ಟು ಉತ್ತಮ ಸೌಲಭ್ಯಗಳು ಮತ್ತು ಸಂಪನ್ಮೂಲಗಳನ್ನು ಒದಗಿಸಲು ಮಹಿಳಾ ವಿಶ್ವವಿದ್ಯಾಲಯವು ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಮಹಿಳೆಯರು ಉನ್ನತ ಶಿಕ್ಷಣವನ್ನು ಮುಂದುವರಿಸುವಲ್ಲಿ ಮೂಲಸೌಕರ್ಯಗಳ ಪ್ರಮುಖ ಪಾತ್ರವನ್ನು ಗುರುತಿಸಿ, ನಮ್ಮ ವಿಶ್ವವಿದ್ಯಾಲಯವು ನಮ್ಮ ಕ್ಯಾಂಪಸ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ಶ್ರದ್ಧೆಯಿಂದ ಹೂಡಿಕೆ ಮಾಡಿದೆ. ಇದು ನಮ್ಮ ಗ್ರಂಥಾಲಯದ ಸೌಲಭ್ಯಗಳ ವರ್ಧನೆ, ಹೊಸ ಕಟ್ಟಡಗಳ ನಿರ್ಮಾಣವನ್ನು ಒಳಗೊಂಡಿದೆ. ಕಟ್ಟಡಗಳು, ಮತ್ತು ಅತ್ಯಾಧುನಿಕ ಸೌಲಭ್ಯಗಳ ಸ್ಥಾಪನೆ. ರಾಜ್ಯ ಸರ್ಕಾರದ ಬೆಂಬಲದೊAದಿಗೆ, ವೇತನಗಳು, ಪಿಂಚಣ ಗಳು ಮತ್ತು ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಈ ಪ್ರಯತ್ನಗಳಿಗೆ ಪ್ರಮುಖ ಹಣವನ್ನು ಪರಿಶಿಷ್ಟ ಜಾತಿ ಯೋಜನೆ ಮತ್ತು ಪರಿಶಿಷ್ಟ ಪಂಗಡ ಯೋಜನೆ ಯೋಜನೆಗಳ ಅಡಿಯಲ್ಲಿ ಪಡೆಯಲಾಗಿದೆ. ಬೋಧನೆ ಮತ್ತು ಕಲಿಕೆಯ ವಿಕಸನ ಅಗತ್ಯಗಳನ್ನು ಪೂರೈಸುವ ಅತ್ಯುತ್ತಮ ಸೌಲಭ್ಯಗಳು, ನಿರೀಕ್ಷಿತ ಭವಿಷ್ಯಕ್ಕಾಗಿ ಶಿಕ್ಷಣಕ್ಕೆ ಅನುಕೂಲಕರ ವಾತಾವರಣವನ್ನು ಖಾತ್ರಿಪಡಿಸುತ್ತದೆ. ಸುಸಜ್ಜಿತ ಪ್ರಯೋಗಾಲಯಗಳು ಮತ್ತು ಗ್ರಂಥಾಲಯಗಳು ಅಮೂಲ್ಯವಾದ ಪ್ರಾಯೋಗಿಕ ಅನುಭವಗಳನ್ನು ಮತ್ತು ಸಂಪನ್ಮೂಲಗಳ ಸಂಪತ್ತಿಗೆ ಪ್ರವೇಶವನ್ನು ಒದಗಿಸುತ್ತವೆ. ಶ್ರವಣ-ದೃಶ್ಯ ಸಾಧನಗಳನ್ನು ಹೊಂದಿರುವ ಆಧುನಿಕ ತರಗತಿ ಕೊಠಡಿಗಳು ನವೀನ ಶಿಕ್ಷಣ ವಿಧಾನಗಳನ್ನು ಸುಗಮಗೊಳಿಸುತ್ತವೆ, ಕ್ರೀಡಾ ಸೌಲಭ್ಯಗಳು ವಿದ್ಯಾರ್ಥಿಗಳ ದೈಹಿಕ ಯೋಗಕ್ಷೇಮ ಮತ್ತು ತಂಡದ ಕೆಲಸ ಕೌಶಲ್ಯಗಳಿಗೆ ಕೊಡುಗೆ ನೀಡುತ್ತವೆ ಎಂದೂ ಅವರು ವಿವರಿಸಿದರು. 

ಒಟ್ಟು 65 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ದೈಹಿಕ ಶಿಕ್ಷಣ ನಿರ್ದೇಶನಾಲಯವು ಕ್ರೀಡಾ ಪಟುಗಳಿಗೆ ಅಗತ್ಯವಾಗಿರುವ ಕ್ರೀಡಾ ಸಾಮಗ್ರಿಗಳನ್ನು ಖರೀದಿಸಿದ್ದು ಇವು ವಿದ್ಯಾರ್ಥಿನಿಯರಲ್ಲಿ ಕ್ರೀಡಾ ಪ್ರಾವಿಣ್ಯತೆಯನ್ನು ಹೆಚ್ಚಿಸಲು ನೆರವಾಗುತ್ತಿವೆ. ನಮ್ಮ ವಿಶ್ವವಿದ್ಯಾನಿಲಯದ ಗ್ರಂಥಾಲಯವು 1141 ಪುಸ್ತಕಗಳು ಮತ್ತು ನಿಯತಕಾಲಿಕಗಳನ್ನು ಹೊಂದುವ ಮೂಲಕ ತನ್ನ ಸಂಗ್ರಹವನ್ನು ಶ್ರೀಮಂತಗೊಳಿಸಿದೆ, ನಮ್ಮ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ಸದಸ್ಯರಿಗೆ ಅಮೂಲ್ಯವಾದ ಸಂಪನ್ಮೂಲಗಳನ್ನು ಒದಗಿಸುತ್ತದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ನುಡಿದರು.

ವಿಶ್ವವಿದ್ಯಾನಿಲಯವು ಸ್ವಚ್ಛ ಮತ್ತು ಹಸಿರು ಆವರಣವನ್ನು ನಿರ್ವಹಿಸಲು ವಿವಿಧ ಪರಿಸರ ಸ್ನೇಹಿ ಉಪಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ನವೀಕರಿಸಬಹುದಾದ ಶಕ್ತಿಯ ಬಳಕೆ, ಮಳೆನೀರು ಕೊಯ್ಲು, ಕಾಗದದ ಮರುಬಳಕೆ ಮತ್ತು ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ ಅಭ್ಯಾಸಗಳು ಸೇರಿವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಹಸಿರು ಕ್ಯಾಂಪಸ್ ಉಪಕ್ರಮಗಳು ಎಲ್.ಇ.ಡಿ ಸಂವೇದಕ ದೀಪಗಳು ಮತ್ತು ನಲ್ಲಿಗಳ ಸ್ಥಾಪನೆ ಮತ್ತು ಮಳೆನೀರು ಕೊಯ್ಲು ಪ್ರಚಾರವನ್ನು ಒಳಗೊಳ್ಳುತ್ತವೆ. ತ್ಯಾಜ್ಯ ನಿರ್ವಹಣೆಯ ವ್ಯವಸ್ಧೆ, ಆವರಣದಲ್ಲಿ ಎಲೆಕ್ಟ್ರಿಕ್ ವಾಹನಗಳು ಮತ್ತು ಸೈಕಲ್‌ಗಳ ಬಳಕೆಯನ್ನು ಒಳಗೊಂಡಿರುತ್ತದೆ, ಜೊತೆಗೆ ವಾಹನಗಳ ಚಲನೆಯ ಮೇಲಿನ ನಿರ್ಬಂಧಗಳು ಮತ್ತು ಪ್ಲಾಸ್ಟಿಕ್ ಬಳಕೆಯ ನಿಷೇಧವನ್ನು ಒಳಗೊಂಡಿರುತ್ತದೆ. ಈ ಪ್ರಯತ್ನಗಳನ್ನು ವಾರ್ಷಿಕ ಪರಿಸರ ಲೆಕ್ಕಪರಿಶೋಧನೆ ಮತ್ತು ಶಕ್ತಿ ಲೆಕ್ಕಪರಿಶೋಧನಾ ವರದಿಗಳಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳು ಮತ್ತು ಸಮುದಾಯದಲ್ಲಿ ವೈಜ್ಞಾನಿಕ ಅರಿವನ್ನು ಬೆಳೆಸುವ ಉದ್ದೇಶದಿಂದ ವಿಶ್ವವಿದ್ಯಾನಿಲಯವು ಹಲವಾರು ಪೀಠಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಿದೆ. ಈ ಘಟಕಗಳು ಭಾಸ್ಕರಾಚಾರ್ಯ, ಮೌಲಾನಾ ಆಜಾದ್, ಕವಿ ಕನಕದಾಸರು ಮತ್ತು ಶರಣರು. ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರ ಜೀವನ ಮತ್ತು ಕಾರ್ಯಗಳಿಗೆ ಸಂಬAಧಿಸಿದ ಸಾಮಾಜಿಕ ಪ್ರಸ್ತುತತೆಯ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ ಎಂದು ವಿವಿಧ ಪೀಠಗಳ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ತುಂಬಾ ಸಕ್ರಿಯವಾಗಿದೆ, ಕ್ಯಾಂಪಸ್ನಲ್ಲಿ ಐದು ಘಟಕಗಳನ್ನು ಹೊಂದಿದೆ. ಎನ್.ಎಸ್.ಎಸ್. ಘಟಕಗಳ ಸ್ವಯಂಸೇವಕರಿAದ ಹಲವಾರು ಪ್ರಮುಖ ಜಾಗೃತಿ ಕಾರ್ಯಕ್ರಮಗಳು ಮತ್ತು ಅವರಣ ಸ್ವಚತಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, March 9, 2024

ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ

ವಿಜಯಪುರ: ಉದ್ಯಮಿ ಅಣ್ಣಾರಾಯ ಎಸ್. ಬಿರಾದಾರ ಆರಂಭಿಸಿದ ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ   ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ ಇಂದು ನೀಡಿದರು.  

ಅವರು ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕದ ಯಂತ್ರದಲ್ಲಿ ಒಣದ್ರಾಕ್ಷಿಯನ್ನು ಹಾಕುವ ಮೂಲಕ ಸಚಿವ ಎಂ. ಬಿ. ಪಾಟೀಲ ವಿಂಗಡಣೆ ಯಂತ್ರಕ್ಕೆ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಅಣ್ಣಾರಾಯ ಎಸ್. ಬಿರಾದಾರ, ನಿತೀನ ಎ. ಬಿರಾದಾರ, ವಿಠ್ಠಲ ಕಟಕದೊಂಡ, ಎಸ್.ಎಂ.ಪಾಟೀಲ ಗಣಿಹಾರ, ಪ್ರಕಾಶಗೌಡ ಪಾಟೀಲ, ಮುಂತಾದವರು ಉಪಸ್ಥಿತರಿದ್ದರು.
 ನಗರದ ಸೋಲಾಪುರ ರಸ್ತೆಯ ಯಶೋಧಾ ಆಸ್ಪತ್ರೆ ಹಿಂದೆ ಇರುವ ಒಣದ್ರಾಕ್ಷಿ ಸಂಸ್ಕರಣಾ ಘಟಕದಲ್ಲಿ ಇಂದು ಶನಿವಾರ ಈ ಕಾರ್ಯಕ್ರಮ ನಡೆಯಿತು.
ಘಟಕದ ಕಾರ್ಯವನ್ನು ವೀಕ್ಷಿಸಿ, ಒಣದ್ರಾಕ್ಷಿ ಸಂಗ್ರಹ, ಸಂಸ್ಕರಣೆ, ಮಾರಾಟ ಹಾಗೂ ರಫ್ತು ಮಾಡುವ ಕುರಿತು ಮಾಹಿತಿ ಪಡೆದರು. ಅಲ್ಲದೇ, ಈ ಘಟಕ ಉತ್ತರೋತ್ತರವಾಗಿ ಅಭಿವೃದ್ಧಿಯಾಗಲಿ ಎಂದು ಅಣ್ಣಾರಾಯ ಎಸ್. ಬಿರಾದಾರ ಮತ್ತು ಅವರ ಪುತ್ರ ನಿತೀನ ಎ.ಬಿರಾದಾರ ಅವರಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ವಿಜಯಪುರ ಜ್ಞಾಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಪಶ್ಚಿಮ ಬಂಗಾಳ ನಿವೃತ್ತ ಡಿಜಿಪಿ ಜಿ.ಎಂ.ಪಿ ರೆಡ್ಡಿ, ಉದ್ಯಮಿಗಳಾದ ಪ್ರಕಾಶಗೌಡ ಪಾಟೀಲ, ಮುಖಂಡರಾದ ಎಸ್.ಎಂ.ಪಾಟೀಲ ಗಣಿಹಾರ, ಬಸವರಾಜ ದೇಸಾಯಿ, ಡಾ.ಮಹಾಂತೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗೌರವಾನ್ವಿತ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರ ಜಿಲ್ಲಾ ಪ್ರವಾಸ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮಾ.11 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋಟತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಾರ್ಚ್ 11 ರಂದು ಬೆಳಿಗ್ಗೆ 8-45ಕ್ಕೆ ಬೆಳಗಾವಿಯಿಂದ ಹೊರಟು ಮಧ್ಯಾಹ್ನ 11-45ಕ್ಕೆ ವಿಜಯಪುರದ ತೊರವಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಕ್ಯಾಂಪಸ್‌ಗೆ ಆಗಮಿಸಿ ಮಧ್ಯಾಹ್ನ 12-15ಕ್ಕೆ ವಿವಿಯ 15ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, March 8, 2024

ಇಡೀ ಸಮಾಜವನ್ನೇ ಬದಲಿಸುವ ಶಕ್ತಿ ಸಾಹಿತ್ಯಕ್ಕಿದೆ : ಹೇಮಲತಾ ವಸ್ತ್ರದ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಮಹಿಳಾ ಸಾಂಸ್ಕøತಿಕ ಹಬ್ಬದ’ ಕವಿಗೋಷ್ಠಿಯನ್ನು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಹೇಮಲತಾ ವಸ್ತ್ರದ ಹಾಗೂ ಗಣ್ಯಮಾನ್ಯರು ಉದ್ಘಾಟಿಸಿದರು. 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

 ವಿಜಯಪುರ: ಪ್ರಸ್ತುತ ದಿನಮಾನದಲ್ಲಿ ಸಾಹಿತ್ಯ ಎನ್ನುವುದು ವೈಯಕ್ತಿಕ ಲಾಭ ಹಾಗೂ ಪ್ರಶಸ್ತಿಗಳ ಬೆನ್ನತ್ತಿ ಹೋಗುವ ಹೀನಾಯ ಸ್ಥಿತಿ ಬಂದಿದ್ದು, ಇದನ್ನು ನಾವು ಬರಹಗಳ ಮೂಲಕವೇ ಖಂಡಿಸಬೇಕು ಎಂದು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಹೇಮಲತಾ ವಸ್ತ್ರದ ಹೇಳಿದರು. 

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಮಹಿಳಾ ಸಾಂಸ್ಕøತಿಕ ಹಬ್ಬದ’ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯ ಎನ್ನುವುದು ಅಪಾರ ಶಕ್ತಿ ಹೊಂದಿದಂತಹ ಕ್ಷೇತ್ರ ಅದನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಬಾರದು. ಇಡೀ ಸಮಾಜವನ್ನೇ ಬದಲಿಸುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದ ತಲ್ಲಣಗಳು ಲೇಖಕರನ್ನು ನಿದ್ದೆ ಮಾಡಲು ಬಿಡಬಾರದು ಎಂದರು.

ಇನ್ನು ಕವಿತೆ ಎಂಬುವುದು ನಮ್ಮ ವ್ಯಕ್ತಿಗತ ಭಾವನೆಗೆ ಸ್ಪಂದನೆ ನೀಡುವಂತಿರಬೇಕು. ಕವಿತ್ರಿಯರು ಸಮಾಜದ ಭಾವನೆಗೆ ಸ್ಪಂದಿಸಬೇಕು. ಹೆಣ್ಣಿನ ಬಗ್ಗೆ ಅಪಾರವಾದ ಪ್ರೀತಿ ಕಾಳಜಿ ಎಲ್ಲವು ಇರಬೇಕು. ಯಾರಿಗೆ ಸಮಾಜದ ತಲ್ಲಣಗಳು ಸಮಸ್ಯೆಗಳು ನಿದ್ದೆ ಮಾಡಿಸದೇ ಅದರ ಬಗ್ಗೆ ವಿಚಾರಿಸಲು ದಾರಿ ಮಾಡಿಕೊಡುತ್ತವೆಯೋ ಅವರು ಮಾತ್ರ ನಿಜವಾದ ಕವಿ. ಓದು ಇದ್ದರೆ ಮಾತ್ರ ಒಬ್ಬ ಕವಿ ಎಲ್ಲ ವಿಷಯಗಳಿಗೂ ನ್ಯಾಯ ಕೊಡಲು ಸಾಧ್ಯ. ಕವಿಗೆ ಓದು ಎಷ್ಟು ಮುಖ್ಯವೂ ಅಷ್ಟೇ ಗ್ರಹಿಕೆ ಕೂಡಾ ಮುಖ್ಯವಾಗುತ್ತದೆ. ಜೊತೆಗೆ ಓದುವ ಕಲೆ ಕೂಡಾ ಸಿದ್ಧಿಸಬೇಕು ಎಂದರು. 

ಅತ್ಯುತ್ತಮ ಕವಿತೆಗಳು ಯಾವಾಗಲೂ ಏಕಾಂತದಲ್ಲಿ ಇದ್ದಾಗಲೇ ಬರುತ್ತವೆ. ಏಕಾಂತದಲ್ಲಿ ಸೃಷ್ಟಿಯಾದ ಕವಿತೆ ಲೋಕಾಂತಕ್ಕೆ ಅರ್ಪಣೆಯಾಗುತ್ತದೆ. ಕಾವ್ಯದ ರಚನೆಗೆ ಏಕಾಗ್ರತೆ ಅವಶ್ಯಕತೆ ಇದೆ ಮತ್ತು ಏಕಾಗ್ರತೆಯಿಂದ ಮಾತ್ರ ನಾವು ಕವಿತೆ ರಚನೆ ಮಾಡಲು ಸಾಧ್ಯ ಎಂದು ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಮಹಿಳಾ ಸಾಂಸ್ಕøತಿಕ ಹಬ್ಬದ’ ಕವಿಗೋಷ್ಠಿಯನ್ನು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಹೇಮಲತಾ ವಸ್ತ್ರದ ಉದ್ಘಾಟಿಸಿ ಮಾತನಾಡಿದರು. 

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಹಿಂದಿ ವಿಭಾಗದ ಮುಖ್ಯಸ್ಥ ಪ್ರೊ. ನಾಮದೇವಗೌಡ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕವಿತೆಗಳಿಂದ ತಮ್ಮ ಮನಸ್ಸಿನ ಭಾವನೆಗಳನ್ನು ಅತ್ಯಂತ ಸುಂದರವಾಗಿ ವ್ಯಕ್ತಪಡಿಸಿದ್ದು ಖುಷಿಯ ವಿಚಾರ. ಈ ಕವಿಗೋಷ್ಠಿಯಲ್ಲಿ ಅತೀ ಹೆಚ್ಚಿನ ಕವಿತೆಗಳು ತಾಯಿ ಮತ್ತು ಹೆಣ್ಣಿನ ಮೇಲೆ ಮೂಡಿ ಬಂದಿದ್ದು, ಹೆಣ್ಣಿನ ಪ್ರಾಮುಖ್ಯತೆ ಬಗ್ಗೆ ತಿಳಿಸುತ್ತದೆ. ನೀವು ಬರೆದ ಕವಿತೆಗಳು ಬರೀ ಇಲ್ಲಿಗೆ ಮಾತ್ರ ಸೀಮಿತವಾಗಬಾರದು ಈ ಬರಹ ನಿಮ್ಮ ಜೀವನದೂದ್ದಕ್ಕೂ ಸಾಗಲಿ. ಮುಂಬರುವ ದಿನಗಳಲ್ಲಿ ನೀವು ಮಹಿಳಾ ವಿವಿಯ ರತ್ನಗಳಾಗಲು ಸಂಶಯವಿಲ್ಲ ಎಂದು ಆಶಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ 30 ಕ್ಕೂ ಹೆಚ್ಚು ವಿವಿಧ ವಿಭಾಗದ ವಿದ್ಯಾರ್ಥಿನಿಯರು ಸ್ವರಚಿತ ಕವನ ವಾಚನ ಮಾಡಿದರು. 

ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷ್ಮೀದೇವಿ ವೈ, ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಮಹೇಶ ಚಿಂತಾಮಣಿ, ವಿವಿಧ ವಿಭಾಗದ ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ನಾರಾಯಣ ಬಿ. ಪವಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಗೀತ ವಿಭಾಗದ ವಿದ್ಯಾರ್ಥಿನಿಯರಾದ ಮಹಾಲಕ್ಷ್ಮೀ ಹಾಗೂ ರಾಗಿಣಿ ಪ್ರಾರ್ಥನಾ ಗೀತೆ ಹಾಡಿದರು. ಡಾ.ಸುಧಾರಾಣಿ ಮಣೂರ ಅತಿಥಿಗಳನ್ನು ಪರಿಚಯಿಸಿದರು. ಪದ್ಮಾವತಿ ಯತಗಲ್ ವಂದಿಸಿದರು. ಡಾ. ಚೇತನಾ ಸಂಕೊಂಡ ಹಾಗೂ ನಿಕಿತಾ ಚೆನ್ನಾಳ ಕಾರ್ಯಕ್ರಮವನ್ನು ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, March 2, 2024

ಐಎಎಸ್ ಅಧಿಕಾರಿ ಕೆ. ಶಿವರಾಮು ರವರಿಗೆ ಭಾವಪೂರ್ಣ ಶ್ರದ್ದಾಂಜಲಿ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಛಲವಾದಿ ಮಹಾಸಭಾದ ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರು, ಹಿರಿಯ ಐಎಎಸ್ ಅಧಿಕಾರಿಗಳು ಮತ್ತು ಚಲನಚಿತ್ರ ನಟರಾದ ಕೆ.ಶಿವರಾಮು ರವರ ಅಗಲಿಕೆಯಿಂದಾಗಿ ಭಾವಪೂರ್ಣ ಶ್ರದ್ದಾಂಜಲಿ ಸಭೆಯನ್ನು ವಿಜಯಪುರ ನಗರದ ಸರಕಾರಿ ನೌಕರರ ಭವನದಲ್ಲಿ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುನೀಲ ಹೊಸಳ್ಳಿ ಅಧ್ಯಕ್ಷರು ಮಾತನಾಡಿ, ಕೆ.ಶಿವರಾಮು ಸಾಹೇಬರು, ಒಬ್ಬ ಧೀಮಂತ ಹಿರಿಯ ಐಎಎಸ್ ಅಧಿಕಾರಿಗಳಾಗಿ ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲ ಜಾತಿ, ಮತ, ಪಂಥ ಜನಾಂಗದವರೊಂದಿಗೆ ಒಳ್ಳೆಯ ನಿಕಟ ಸಂಪರ್ಕವನ್ನು ಹೊಂದಿದ್ದರು. ಇವರು ಎಲ್ಲ ಜನರಿಗೆ ಸಹಾಯ ಸಹಕಾರ ನೀಡುತ್ತಾ ತಮ್ಮ ಕಾರ್ಯನಿಷ್ಠೆಯನ್ನು ಅತ್ಯಂತ ಶ್ರದ್ದೆಯಿಂದ ಸಲ್ಲಿಸಿದ ಮಹಾನ ನಾಯಕರಾದ ಇವರು ಸರಕಾರಿ ನೌಕರಿಯಿಂದಿಗೆ ತಮ್ಮನ್ನು ಗುರ್ತಿಸಿದ ಛಲವಾದಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಇದರೊಂದಿಗೆ ಇವರು ಚಲನಚಿತ್ರದಲ್ಲಿಯೂ ಸಹ ಅಚ್ಚಳಿಯದಂತಹ ಚಿತ್ರಗಳನ್ನು ನೀಡಿದ ಇವರು ನಟಿಸಿದ ಚಿತ್ರಗಳು ಹಾಡುಗಳು ಜನಮಾನಸದಲ್ಲಿ ಜನಾನುರಾಗಿ ಆಗಿವೆ ಎಂದು ನೆನಪು ಮಾಡಿಕೊಂಡರು.

ಈ ಸಂದರ್ಭದಲ್ಲಿ ಆಯಾಜ ಎಚ್. ರೋಜೆವಾಲೆ, ಯುನುಸ್ ವಿಜಯಪುರ, ಜಿ.ಡಿ.ಹೊಸಮನಿ, ಬಿ.ಆ‌ರ್. ಲಿಂಬೂಡಕರ, ಫಯಾಜ ಜಮಾದಾರ, ಎಮ್.ಆರ್. ಮೆಟಗಾರ, ಸುರೇಶ ಕೋಟ್ಯಾಳಕರ, ರಾಜಕುಮಾರ ಆರ್. ಕಟ್ಟಿ, ಇಬ್ರಾಹಿಂ ಒಂಟಿ, ಸಿದ್ದಾರ್ಥ ಅಹಿರಸಂಗ, ಶಶಿಕಾಂತ ಕಟ್ಟಿ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾ. 6 ರಂದು ಕರ್ನಾಟಕ ಸರಕಾರ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪತ್ರಕರ್ತ, ಸಾಹಿತಿ ಕಲ್ಲಪ್ಪ ಶಿವಶರಣ ವಿರಚಿತ ಕಲ್ಲು ಮನಸ್ಸು ಕೃತಿ ಲೋಕಾರ್ಪಣೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಮಾ. 6  ರಂದು ಬುಧವಾರ ಸಂಜೆ 5.30 ಗಂಟೆಗೆ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಕರ್ನಾಟಕ ಸರಕಾರ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಆಯ್ಕೆಯಾದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಪತ್ರಕರ್ತ, ಸಾಹಿತಿ ಕಲ್ಲಪ್ಪ ಶಿವಶರಣ ವಿರಚಿತ ‘ಕಲ್ಲು ಮನಸ್ಸು’ ಕಲ್ಲರಳಿ ಹೂಮಸು ಕೃತಿ ಲೋಕಾರ್ಪಣೆ ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ನೆರವೇರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಹೆಸರಾಂತ ಸಾಹಿತಿ ಶ್ರೀ ಜೋಗಿ (ಗಿರೀಶ್ ರಾವ್ ತ್ವಾರ್) ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿದೇವಿ  ಭಾಗವಹಿಸಲಿದ್ದಾರೆ. ಅದರಂತೆ ಇದೇ ಸಂದರ್ಭದಲ್ಲಿ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಿಸಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, February 14, 2024

16-02-2024 EE DIVASA KANNADA DAILY NEWS PAPER

15-02-2024 EE DIVASA KANNADA DAILY NEWS PAPER

ರಮಜಾನಬಿ ತಹಶೀಲ್ದಾರ ಗೆ ಪಿಎಚ್‍ಡಿ ಪದವಿ

 ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ರಮಜಾನಬಿ ತಹಶೀಲ್ದಾರ ಅವರು ಸಲ್ಲಿಸಿದ್ದ  “ಮಕ್ಕಳ ಸಾಹಿತ್ಯಕ್ಕೆ ಜಿ.ಪಿ.ರಾಜರತ್ನಂ ಅವರ ಕೊಡುಗೆ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‍ಡಿ ಪದವಿ ನೀಡಿದೆ.

ರಮಜಾನಬಿ ತಹಶೀಲ್ದಾರ ಅವರು ಕನ್ನಡ ವಿಭಾಗದ ಪ್ರೊ. ಮಹೇಶ್ ಚಿಂತಾಮಣಿ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ರಮಜಾನಬಿ ತಹಶೀಲ್ದಾರ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ. 