Tuesday, January 2, 2024

ಭಾಷಣ ಕಲೆ ಎಂಬುದು ಒಂದು ಕಲಿಕೆಯ ಕ್ರಮ : ಡಾ.ವಿಷ್ಣು ಶಿಂದೆ

ಸಿಂದಗಿ: ಭಾಷಣ ಕಲೆ ಎಂಬುದು ಒಂದು ಕಲಿಕೆಯ ಕ್ರಮ ಹಾಗಾಗಿ ಅದನ್ನು ಈಗಿನ ರಾಷ್ಟಿçÃಯ ಹೊಸ ಶಿಕ್ಷಣ ನೀತಿಯಲ್ಲಿ ಅಳವಡಿಸಲಾಗಿದೆ ಎಂದು ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾದ ಡಾ.ವಿಷ್ಣು ಶಿಂದೆ ಹೇಳಿದರು.

 ಪಟ್ಟಣದ ಶ್ರೀ ಪದ್ಮಾರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವ ವೇದಿಕೆಯೇ ಈ ಪಠ್ಯಪೂರ ಚಟುವಟಿಕೆಯಾಗಿದೆ. ಪದವಿ ಶಿಕ್ಷಣ ಸರಿಯಾದರೆ ಬದುಕು ನಿರ್ಮಾಣ ಒಂದು ವೇಳೆ ಸರಿಯಾಗದಿದ್ದರೆ ಬದುಕೇ ನಿರ್ಣಾಮ ಹಾಗಾಗಿ ನಿಮ್ಮ ಬದುಕನ್ನು ಬದಲಾವಣೆ ಮಾಡುವುದೇ ಪದವಿ ಶಿಕ್ಷಣ ಎಂದರು.

 ಈ ವೇಳೆ ಅತಿಥಿ ಸ್ಥಾನವನ್ನು ಅಲಂಕರಿಸಿದ ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ. ಮಠ ಮಾತನಾಡಿ, ಈ ಸಂಸ್ಥೆಯ ನೀಡುವ ಎಲ್ಲ ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಸ್ವ-ಉದ್ಯೋಗಗಳನ್ನು ಮುಂದುವರೆಸಿಕೊAಡು ಹೋಗಬೇಕು. ಕೀಳರಿಮೆಯನ್ನು ಹೋಗಲಾಡಿಸಿಕೊಂಡು ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

 ಈ ವೇಳೆ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಚೇರಮನ್ನರಾದ ಗುರುಕುಲ ಭಾಸ್ಕರ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರಾಚಾರ್ಯ ಎಸ್.ಎಂ. ಪೂಜಾರಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

 ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಪಿ.ಎಮ್ ಮಾಲಿಪಾಟೀಲ್, ಅನೀಲಕುಮಾರ ರಜಪೂತ, ಎಸ್.ಎಮ್. ಹೂಗಾರ, ಎಮ್.ಕೆ. ಬಿರಾದಾರ, ಎಸ್.ಸಿ ದುದ್ದಗಿ, ಜಿ.ವಿ ಪಾಟೀಲ್, ಮಂಗಳಾ ಈಳಗೇರ, ಡಿ.ಎಂ. ಪಾಟೀಲ, ಶಂಕರ ಕುಂಬಾರ, ಮಮತಾ ಹರನಾಳ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

 ಈ ವೇಳೆ ವಿದ್ಯಾರ್ಥಿ ಸಂಘಡ ಕಾರ್ಯಾಧ್ಯಕ್ಷ ಯು.ಸಿ ಪೂಜೇರಿ ಸ್ವಾಗತಿಸಿ ಪರಿಚಯಿಸಿದರು.. ವಿದ್ಯಾರ್ಥಿ ಈರಮ್ಮ ಹಿರೇಮಠ ಪ್ರಾರ್ಥಿಸಿದರು. ನೀಲಗಂಗಾ ದೇವರಮನಿ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕಾವೇರಿ ರೇವೂರ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

03-01-2024 EE DIVASA KANNADA DAILY NEWS PAPER

02-01-2024 EE DIVASA KANNADA DAILY NEWS PAPER

ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ನಮನ: ಮುಖ್ಯಮಂತ್ರಿ ಸಿದ್ದರಾಮಯ್ಯ




ಈ ದಿವಸ ವಾರ್ತೆ

ವಿಜಯಪುರ ಜ 2 : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು. 

ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 



ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. 

ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು. 

ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಎಂದು ವಿವರಿಸಿದರು.  

ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು. 

ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಸಲ್ಲಿಸುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಪ್ರೀತಿ. 

ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ   ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು,  ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು ಮತ್ತು ಹಲವು ಸಿದ್ದ ಸಂತರ ಸಾನ್ನಿಧ್ಯದಲ್ಲಿ ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಗುರುನಮನ ಕಾರ್ಯಕ್ರಮ ಉದ್ಘಾಟನೆಯಾಯಿತು. 

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಶಾಸಕ ವಿನಯ್ ಕುಲಕರ್ಣಿ ಮತ್ತು ಶಾಸಕರಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೋಳಿ ಸೇರಿ ಹಲವು ಪ್ರಮುಖರು ಗುರುನಮನಕ್ಕೆ ಸಾಕ್ಷಿಯಾದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.