Thursday, February 1, 2024

ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಮ್ಮ ಬನ್ನಿಗಿಡ ಆಯ್ಕೆ

ವಿಜಯಪುರ : ವಿಜಯಪುರ ಜಿಲ್ಲೆಯ ಕೊಳೂರಗಿ ಗ್ರಾಮದ ಗ್ರಾಮ ಪಂಚಾಯತ ಸದಸ್ಯೆ ಸಾಮಾಜಿಕ ಹೋರಾಟಗಾರರು ಖ್ಯಾತ ಡೊಳ್ಳಿನ ಹಾಡಿನ ಗಾಯಕರಾದ ಶ್ರೀಮತಿ ಸಿದ್ದಮ್ಮ ಬನ್ನಿಗಿಡ ಇವರನ್ನು ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ಇದರ ರಾಷ್ಟಿçÃಯ ಅಧ್ಯಕ್ಷರು ಹಾಗೂ  ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಡಾ. ಮೋಹನರಾವ ನಲವಡೆ ಅವರು ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.

ಶ್ರೀಮತಿ ಸಿದ್ದಮ್ಮ ಬನ್ನಿಗಿಡ ಅವರು ಈಗಾಗಲೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತಾ ಶೋಷಿತರ ನೊಂದವರ ಪರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಅಲ್ಲದೆ, ಕರ್ನಾಟಕ ಹಾಗೂ ಮಹಾರಾಷ್ಟç ರಾಜ್ಯಗಳಲ್ಲಿ ಡೊಳ್ಳಿನ ಹಾಡಿನ ಮುಖಾಂತರ ಜನರಲ್ಲಿ ಮೂಢನಂಬಿಕೆಗಳ ಬಗ್ಗೆ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ ಈ ಎಲ್ಲಾ ಕಾರ್ಯಗಳನ್ನು ಪರಿಗಣಿಸಿ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ರಾಷ್ಟಿçÃಯ ಅಧ್ಯಕ್ಷರು ಶ್ರೀಮತಿ ಸಿದ್ದಮ್ಮ ಬನ್ನಿಗಿಡ ಅವರಿಗೆ ಜಿಲ್ಲಾ ಅಧ್ಯಕ್ಷ ಉನ್ನತ ಹುದ್ದೆಯ ಜವಾಬ್ದಾರಿ ನೀಡಿದ್ದಾರೆ. ಸಿದ್ದಮ್ಮ ಅವರಿಗೆ ಈ ಹುದ್ದೆ ದೊರತಿದ್ದಕ್ಕೆ ಅವರ ಸ್ನೇಹಿತರು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಶಶಿಕಾಂತ ಮೆಂಡೇಗಾರ ಆಯ್ಕೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ:

ವಿಜಯಪುರ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ವಿಜಯಪುರದ ಪತ್ರಕರ್ತ ಶಶಿಕಾಂತ ಮೆಂಡೇಗಾರ ಆಯ್ಕೆ ಆಗಿದ್ದಾರೆ.

ಅತ್ಯುತ್ತಮ ತನಿಖಾ ವರದಿಗೆ ಕೊಡಮಾಡುವ ಟಿ.ಕೆ.ಮಲಗೊಂಡ ಪ್ರಶಸ್ತಿಯನ್ನು ಇದೇ ಫೆ.3 ಹಾಗೂ ಫೆ.4 ರಂದು ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ ಎಂದು ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ತಿಳಿಸಿದ್ದಾರೆ.