Sunday, February 4, 2024

38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ದಾವಣಗೆರೆ ಫೆ 3: ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.  

KUWJ ಆಯೋಜಿಸಿದ್ದ 38 ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 'ಸರ್ಕಾರ ಮತ್ತು ಮಾಧ್ಯಮ' ಕುರಿತ ಸಂವಾದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. 

ಈಗ ಅಧಿಕಾರಸ್ಥರ ಮತ್ತು ಪತ್ರಕರ್ತರ ನಡುವೆ ಸಂಪರ್ಕ ಅನಿವಾರ್ಯ ಅನ್ನುವ ಸ್ಥಿತಿ ಬಂದಿದೆ. ಮೊದಲೆಲ್ಲಾ ಪತ್ರಕರ್ತರು ಅಧಿಕಾರಸ್ಥರ ಜತೆ ನಿಕಟ ಸಂಪರ್ಕ ಹೊಂದುವುದಕ್ಕೆ ಬಹಳ ಮುಜುಗರ ಅನುಭವಿಸುತ್ತಿದ್ದರು ಎಂದು ವಿವರಿಸಿದರು. 

ಈಗ ಜಾಹಿರಾತು ತರುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಆಗಿಬಿಟ್ಟಿದೆ. ತನಿಖಾ ಪತ್ರಿಕೋದ್ಯಮ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದ ಹೊಣೆ ಹಿಂದಕ್ಕೆ ಸರಿದಿದೆ. ಸ್ವಾತಂತ್ರ್ಯ ನಂತರದ ಭಾರತೀಯ ಪತ್ರಿಕೋದ್ಯಮ ಅಭಿವೃದ್ಧಿ ಮತ್ತು ಜನಮುಖಿ ಪತ್ರಿಕೋದ್ಯಮವನ್ನು ಪ್ರಥಮ ಆಧ್ಯತೆಯನ್ನಾಗಿಸಿಕೊಂಡಿತ್ತು. ಈಗ ಬದಲಾದ ಸನ್ನಿವೇಶದಲ್ಲಿ, ಜವಾಬ್ದಾರಿ ಮತ್ತು ಹೊಣೆಗಾರಿಕೆಗಳೂ ಬದಲಾಗುತ್ತಿವೆ ಎಂದರು. 

ಪತ್ರಕರ್ತರು ಮೊದಲು ತಮ್ಮ ಮತ್ತು ತಮ್ಮ ಕುಟುಂಬದ ಆರೋಗ್ಯ, ಯೋಗಕ್ಷೇಮದ ಕಡೆಗೂ ಗಮನ ಹರಿಸಬೇಕು. ಕೆಲಸದ ಒತ್ತಡದ ನಡುವೆಯೂ ಈ ದಿಕ್ಕಿನಲ್ಲೂ ಗಮನ ಹರಿಸಿ ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಮತ್ತು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಪತ್ರಕರ್ತ ಸಮುದಾಯದ ವೃತ್ತಿಪರತೆ ಮತ್ತು ಪ್ರಗತಿಗೆ ನೀಡಿದ ನೆರವುಗಳನ್ನು ಪಟ್ಟಿ ಮಾಡಿದ ಕೆ.ವಿ.ಪ್ರಭಾಕರ್ ಅವರು, ಈ ಬಾರಿಯ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವ ಕುರಿತು ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಪತ್ರಿಕಾ ವಿತರಕರನ್ನು ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು. 

KUWJ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಸೇರಿ ಸಂಘದ ಹಲವು ಪದಾಧಿಕಾರಿಗಳು ವೇದಿಲೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸತತ ಪರಿಶ್ರಮ, ಶ್ರದ್ಧೆ ಮತ್ತು ಶಿಸ್ತಿನಿಂದ ಸಾಧನೆ ಮಾಡಬಹುದು: ರಾಜೇಶ್ವರಿ ಗಾಯಕವಾಡ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ, ಫೆ. 04: ಸತತ ಪರಿಶ್ರಮ, ಶ್ರದ್ಧೆ ಮತ್ತು ಶಿಸ್ತಿನಿಂದ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡಬಹುದು.  ಇಲ್ಲಿ ಯಾವುದೇ ಶಾರ್ಟ್ ಕಟ್ ಇರುವುದಿಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ಹೇಳಿದರು.

ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಅಥ್ಲೀಟ್ ಮತ್ತು ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿಯವರ ಪುಣ್ಯಸ್ಮರಣೆ ಅಂಗವಾಗಿ ಇಂದು ರವಿವಾರ ಆಯೋಜಿಸಲಾಗಿದ್ದ ಬಿ. ಎಲ್. ಡಿ. ಇ ಸಂಸ್ಥೆಯ 9ನೇ ಅಂತರ ಶಾಲಾ ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.  

ಕ್ರೀಡಾಪಟುಗಳು ತಾವು ಇಷ್ಟಪಡುವ ಕ್ರೀಡೆಯಲ್ಲಿ ಯಶಸ್ವಿಯಾಗಬೇಕಾದರೆ ಕಠಿಣ ಪರಿಶ್ರಮ, ಸಮರ್ಪಣೆ ಮನೋಭಾವ, ಕ್ರೀಡಾಸ್ಪೂರ್ತಿ ಮುಖ್ಯವಾಗಿದೆ.  ಇಲ್ಲಿ ಯಾವುದೇ ಅಡ್ಡಮಾರ್ಗಗಳ ಮೂಲಕ ಸಾಧನೆ ಮಾಡಲು ಸಾಧ್ಯವಿಲ್ಲ.  ಶ್ರಮಪಟ್ಟರೆ ಅದಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.  ಫೆಬ್ರವರಿ 23ರಿಂದ ಬೆಂಗಳೂರಿನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್) ಪ್ರಾರಂಭವಾಗುತ್ತಿದೆ.  ವಿಜಯಪುರ ಜಿಲ್ಲೆಯ ಜನ ನನಗೆ ಬೆಂಬಲ ನೀಡಬೇಕು ಎಂದು ರಾಜೇಶ್ವರ ಗಾಯಕವಾಡ ಮನವಿ ಮಾಡಿದರು.  

ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಮಾತನಾಡಿ, ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಸ್ನೇಹ ಬೆಳೆಸಿಕೊಳ್ಳಲು, ನಾಯಕತ್ವ ಗುಣ ಅಳವಡಿಸಿಕೊಳ್ಳಲು ಹಾಗೂ ಸಾಧನೆ ಮಾಡಲು ಅವಕಾಶ ಕಲ್ಪಿಸುತ್ತವೆ.  ಬಿ.ಎಲ್.ಡಿ.ಇ ಸಂಸ್ಥೆ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಮಾನವೀಯತೆ ನಿಲುವಿನ ಶಿಕ್ಷಣ ನೀಡುತ್ತಿದೆ.  ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ಎಲ್ಲ ಕ್ಷೇತ್ರಗಳಲ್ಲಿ ಕ್ರೀಡಾಸ್ಪೂರ್ತಿ ಮತ್ತು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಉತ್ತಮ ಸಾಧನೆ ಮಾಡಬೇಕು.  ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ ಅವರು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯಕ್ಕೆ ಪೂರಕವಾದ ಎಲ್ಲ ಚಟುವಟಿಕೆಗಳಿವೆ ಉತ್ತೇಜನ ನೀಡುತ್ತಿದ್ದಾರೆ ಎಂದು ಹೇಳಿದರು.

ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡಾ ಸಂಸ್ಕೃತಿಗೆ ಉತ್ತೇಜನ ನೀಡಲು ಡಾ. ಸಿ. ಆರ್. ಬಿದರಿ ಸ್ಮರಣೆಯಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.  ಈ ವರ್ಷ ಬಿ.ಎಲ್.ಡಿ.ಇ ಸಂಸ್ಥೆಯ 17 ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ್ದಾರೆ.  ರಾಜೇಶ್ವರಿ ಗಾಯಕವಾಡ ಕೂಡ ಬಿ.ಎಲ್.ಡಿ.ಇ ಸಂಸ್ಥೆಯ ಹಳೆಯ ವಿದ್ಯಾರ್ಥಿನಿಯಾಗಿರುವುದು ಎಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು.

ಬಿ.ಎಲ್.ಡಿ.ಇ ಸಂಸ್ಷೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ಕ್ರೀಡಾ ಧ್ವಜಾರೋಹಣ ಮಾಡಿದರು.  ರಾಜೇಶ್ವರಿ ಗಾಯಕವಾಡ ಬಲೂನು ಗಾಳಿಯಲ್ಲಿ ಹಾರಿ ಬಿಡುವ ಮೂಲಕ ಕ್ರೀಡಾಪಟುಗಳಿಗೆ ಶುಭ ಕೋರಿದರು.  ಕ್ರೀಡಾಪಟುಗಳಾದ ಗೌರಿ ಹಿರೇಮಠ ಮತ್ತೀತರು ಕ್ರೀಡಾ ಜ್ಯೋತಿಯನ್ನು ರಾಜೇಶ್ವರಿ ಗಾಯಕವಾಡ ಅವರಿಗೆ ನೀಡಿದರು.

ಈ ಸಂದರ್ಭದಲ್ಲಿ ಡಾ. ಸಿ. ಆರ್. ಬಿದರಿ ಕುಟುಂಬದ ಪರವಾಗಿ ಅವರ ಸೊಸೆ ಮತ್ತು ಖ್ಯಾತ ವೈದ್ಯೆ ಡಾ. ಶೈಲಜಾ ಆರ್. ಬಿದರಿ, ಉಪಕುಲಪತಿ ಡಾ. ಆರ್. ಎಸ್. ಮುಧೋಳ ಹಾಗೂ ಮುಖ್ಯ ಆಡಳಿತಾಧಿಕಾರಿ ಆರ್. ಬಿ. ಕೊಟ್ನಾಳ ಅವರು ರಾಜೇಶ್ವರಿ ಗಾಯಕವಾಡ ಅವರನ್ನು ಸನ್ಮಾನಿಸಿದರು.  

ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಸಂಸ್ಥೆಯ ಆಡಳಿತಾಧಿಕಾರಿ ಬಿ. ಆರ್. ಪಾಟೀಲ, ಎಸ್. ಎಚ್. ಲಗಳಿ, ದೈಹಿಕ ಉಪನಿರ್ದೇಶ ಕೈಲಾಸ ಹಿರೇಮಠ, ಭಾರತಿ ಪಾಟೀಲ, ರಾಜೇಶ್ವರಿ ಗಾಯಕವಾಡ ಕುಟುಂಬ ಸದಸ್ಯರು, ಎಂಜಿನಿಯರಿಂಗ್ ಕಾಲೇಜಿನ ಪಿ. ವಿ. ಮಾಗಿ, ಉಮೇಶ ದೀಕ್ಷಿತ, ರಮೇಶ ಜೀರಗಾಳ, ಡಾ. ನವೀನ ದೇಸಾಯಿ, ಪ್ರೊ. ಗಿರೀಶ ಕುಲಕರ್ಣಿ, ಐ. ಎಸ್. ಇಕ್ಕಳಕಿ, ಡಾ. ಎ. ಎಸ್. ಜಾಧವ, ವೈ. ಎ. ಕುಲಕರ್ಣಿ, ಪ್ತೊ. ಎಸ್. ಎಸ್. ಚಪ್ಪಾರ, ಪ್ರೊ. ಶಿಲ್ಪಾ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.  

ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ಪ್ರಾರ್ಥಿಸಿದರು.  ಕಾಲೇಜಿನ ಉಪಪ್ರಾಚಾರ್ಯೆ ಗೀತಾಂಜಲಿ ಪಾಟೀಲ ಸ್ವಾಗತಿಸಿದರು.  ಕ್ರೀಡಾಪಟು ನೀಲಮ್ಮಾ ರಾಠೋಡ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.  ಕಾಲೇಜಿನ ಕ್ರೀಡಾ ನಿರ್ದೇಶಕ ಐ. ಎಸ್. ಇಕ್ಕಳಕಿ ವಂದಿಸಿದರು.  ಆಶಾ ಎಂ. ಪಾಟೀಲ ನಿರೂಪಿಸಿದರು.  

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.