Wednesday, March 27, 2024

ಉಡಾಳ ಚಿತ್ರದ ಮೊದಲ ಹಂತದ ಚಿತ್ರೀಕರಣ ವಿಜಯಪುರದಲ್ಲಿ ಪೂರ್ಣ

ವಿಜಯಪುರ:  ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸುತ್ತಿರುವ, ಅಮೋಲ್ ಪಾಟೀಲ್ ನಿರ್ದೇಶನದಲ್ಲಿ ಪೃಥ್ವಿ ಶಾಮನೂರು ನಾಯಕನಾಗಿ ನಟಿಸುತ್ತಿರುವ "ಉಡಾಳ" ಚಿತ್ರಕ್ಕೆ ಬಿಜಾಪುರದಲ್ಲಿ ಮೊದಲ ಹಂತದ ಚಿತ್ರೀಕರಣ ನಡೆದಿದೆ. 

ಚಿತ್ರದ ನಾಯಕ ಪೃಥ್ವಿ ಈ ಚಿತ್ರದಲ್ಲಿ ಗೈಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 25 ದಿನಗಳ ಮೊದಲ ಹಂತದ ಚಿತ್ರೀಕರಣದಲ್ಲಿ ಹಾಡು, ನೃತ್ಯ ಹಾಗೂ ಮಾತಿನ ಭಾಗದ ಸನ್ನಿವೇಶಗಳನ್ನು ಚಿತ್ರಿಸಿಕೊಳ್ಳಲಾಗಿದೆ. ಈ ಭಾಗದ ಚಿತ್ರೀಕರಣ ಸಂಪೂರ್ಣ ಬಿಜಾಪುರದಲ್ಲೇ ನಡೆದಿದೆ. ಈಗಾಗಲೇ ಚಿತ್ರದ ಮುಕ್ಕಾಲು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಅಮೋಲ್ ಪಾಟೀಲ್ ತಿಳಿಸಿದ್ದಾರೆ.


"ಉಡಾಳ" ಪಕ್ಕಾ ಕಮರ್ಷಿಯಲ್ ಜಾನರ್ ಚಿತ್ರವಾಗಿದೆ. ಲವ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಬಿಜಾಪುರ ಹಾಗು ಉತ್ತರ ಕರ್ನಾಟಕದಲ್ಲಿ ನಡೆಯುವಂತಹ ಅಪ್ಪಟ ಜವಾರಿ ಕಥೆಯಾಗಿದೆ.

ಯೋಗರಾಜ್ ಭಟ್ ಅವರ ಜೊತೆಗೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮೋಲ್ ಪಾಟೀಲ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ, ಅಮೋಲ್ ಪಾಟೀಲ್ ಬಿಜಾಪುರ ಮೂಲದವರು ಎನ್ನುವುದು ಮತ್ತೊಂದು ವಿಶೇಷ.


ತಮ್ಮ ಮೊದಲ ಚಿತ್ರ "ಪದವಿಪೂರ್ವ" ದಲ್ಲೇ ಬಯಲು ಸೀಮೆ ದಾವಣಗೆರೆಯ ಪೃಥ್ವಿ ಶಾಮನೂರು ಪ್ರೇಕ್ಷಕರ ಮನ ಗೆದ್ದಿದ್ದರು. ಪ್ರಸ್ತುತ ಅವರು ನಾಯಕರಾಗಿ ನಟಿಸುತ್ತಿರುವ "ಉಡಾಳ" ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆಯಿದೆ. ಪೃಥ್ವಿ ಶಾಮನೂರು ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ಬಲ ರಾಜವಾಡಿ, ಸುಮಿತ್, ಹರೀಶ್ ಹಿರಿಯೂರು, ಮಾಳು ನಿತ್ನಾಳ್, ಪ್ರವೀಣ್ ಗೋಕಾಕ್, ವಾದಿರಾಜ್, ದಯಾನಂದ್ ಮುಂತಾದವರು ತಾರಾಬಳಗದಲ್ಲಿದ್ದಾರೆ.


ಯೋಗರಾಜ್ ಭಟ್ ಅವರು ಚಿತ್ರದ ಹಾಡುಗಳನ್ನು ರಚಿಸಿದ್ದು, ಚೇತನ್ ಡ್ಯಾವಿ ಸಂಗೀತ ನೀಡಿದ್ದಾರೆ. ಶಿವಶಂಕರ್ ನೂರಂಬಡ ಛಾಯಾಗ್ರಹಣ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಮೋಹನ್, ರಘು ಅವರ ನೃತ್ಯ ನಿರ್ದೇಶನ "ಉಡಾಳ" ಚಿತ್ರಕ್ಕಿದೆ.

ಈ ಹಿಂದೆ ಪದವಿ ಪೂರ್ವ ಸಿನೆಮ ನಿರ್ಮಾಣ ಮಾಡಿದ್ದ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಮತ್ತೆ ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇದೆ ವರ್ಷದ ಕೊನೆಯಲ್ಲಿ ಸಿನೆಮ ರಿಲಿಜ್ ಮಾಡುವ ಸಾಧ್ಯತೆ ಇದೆ.



ಬಿಜಾಪುರದ ಜನತೆಗೆ, ಪೊಲೀಸ್ ಇಲಾಖೆಗೆ, ವಿದ್ಯಾರ್ಥಿಗಳಿಗೆ, ಎಸ್ ಎಸ್ ಕಾಲೇಜಿನ ಸಂಸ್ಥೆಗೆ, ಪುರಾತತ್ವ ಇಲಾಖೆಗೆ, ಜೆ ಸ್ ಸ್ ಸಂಸ್ಥೆಗೆ, ಟಂಟA ಚಾಲಕರಿಗೆ ಮಾಧ್ಯಮ ಮಿತ್ರರಿಗೆ ಹಾಗು ಚಿತ್ರೀಕರಣಕ್ಕೆ ಸಹಕರಿಸಿದ ಎಲ್ಲರಿಗೂ ಇಡೀ ಉಡಾಳ ತಂಡ ಧನ್ಯವಾದ ಸಲ್ಲಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಪದವಿ ಮತ್ತು ಬಿ.ಎಡ್ . ಕಾಲೇಜುಗಳ ಕ್ಯಾಂಪಸ್ ರಾಯಬಾರಿಗಳಿಗೆ ಸ್ವೀಪ್ ತರಬೇತಿ ಮತದಾನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ : ರಿಶಿ ಆನಂದ


ವಿಜಯಪುರ : ಜನರಿಗೆ ಮತದಾನದ ಪ್ರಾಮುಖ್ಯತೆಯ ಅರಿವು ಮೂಡಿಸಿದಾಗ ಸದೃಡ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೇರಿದಂತೆ ಎಲ್ಲ ಯುವ ಸಮೂಹ ಸಮನ್ವದಿಂದ ಯುದ್ದೋಪಾಧಿಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಿಶಿ ಆನಂದ ಹೇಳಿದರು

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ವಿಜಯಪುರ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ರ ಹಿನ್ನೆಲೆಯಲ್ಲಿ ಭವಿಷ್ಯದ ಮತ್ತು ಯುವ ಮತದಾರರಿಗೆ ಮತದಾನದ ಶಿಕ್ಷಣ ಪ್ರಮುಖ್ಯತೆ ಜಾಗೃತಿ ಮತ್ತು ಅರಿವು ಮೂಡಿಸುವ ಕುರಿತು ಪದವಿ ಮತ್ತು ಬಿ.ಎಡ್. ಕಾಲೇಜು ರಾಯಬಾರಿಗಳಿಗೆ ಸ್ವೀಪ್ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಗ್ರಾಮೀಣ ಭಾಗದ ಜನರಿಗೆ ಚುನಾವಣೆ ಕುರಿತಾಗಿ ಹಲವಾರು ತಪ್ಪು ಕಲ್ಪನೆಗಳು ಇರುತ್ತವೆ, ಅದೆ ರೀತಿ ಅಲ್ಲಿಯ ಜನರಿಗೆ ಸರಿಯಾದ ಮಾಹಿತಿಯ ಕೊರತೆಯಿಂದ ಮತದಾನ ಮಾಡುವಲ್ಲಿ ಹಿಂದೇಟು ಹಾಕುತ್ತಿರುತ್ತಾರೆ. ತರಬೇತಿಗೆ ಬಂದಿರುವ ರಾಯಭಾರಿಗಳು ಜನರಿಗೆ ಮತದಾನದ ಜವಾಬ್ದಾರಿಯಿಂದ ಆಗುವ ಪ್ರಯೋಜನಗಳು, ಮಹತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಘಬೇಕು. ಗಾಮೀಣ, ಪಟ್ಟಣದ ಜನರು ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗದAತೆ ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಂತೆ ಕ್ರಿಯಾತ್ಮಕ ಚಟುವಟಿಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

 ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್  ಅಧಿಕಾರಿ ಹಾಗೂ ಯೋಜನಾ ನಿರ್ದೇಶಕರಾದ  ಸಿ.ಆರ್.ಮುಂಡರಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯು ನಮ್ಮ ದೇಶದಲ್ಲಿ ಅತಿ ಪ್ರಾಮುಖ್ಯತೆಯನ್ನು ಪಡೆದಿದ್ದು, ಈ ವ್ಯವಸ್ಥೆಯಲ್ಲಿ ಪ್ರಜೆಗಳ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಲು ನಾವೆಲ್ಲರೂ ಹಕ್ಕುಳ್ಳವರಾಗಿದ್ದೆವೆ. ಆದ್ದರಿಂದ ನಮ್ಮ ಹಕ್ಕುಗಳನ್ನು ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಇದನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದರು.

ಜಿಲ್ಲಾ ಚುನಾವಣಾ ತರಬೇತುದಾರರಾದ ಶ್ರೀರಾಮ ಭಟ್ಟ, ಸಂದೀಪ ದೆಶಪಾಂಡೆ, ಮಹಾಂತೇಶ ಅಂಗಡಿ, ಡಾ. ಚಿದಾನಂದ ಅನೂರು ಕಾಲೇಜಿನ ರಾಯಭಾರಿಗಳಿಗೆ ತರಬೇತಿ ನೀಡಿದರು.

ಯೋಜನಾ ವಿಭಾಗದ ಉಪ ನಿರ್ದೇಶಕ ಎ.ಬಿ. ಅಲ್ಲಾಪೂರ ಮತ್ತು ಸಿಬ್ಬಂದಿ ವರ್ಗದವರು, ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತರಬೇತಿಯಲ್ಲಿ ಭಾಗವಹಿಸಿದರು. ಶಿವಾನಂದ ಜಮಾದಾರ ಕಾರ್ಯಕ್ರಮವನ್ನು ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.