ಈ ದಿವಸ ವಾರ್ತೆ
ವಿಜಯಪುರ: ಬಿಜೆಪಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರನ್ನು ವಿಧಾನ ಪರಿಷತ್‍ಗೆ ನಾಮನಿರ್ದೇಶನ ಮಾಡಬೇಕು ಎಂದು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದು, ಜಿಲ್ಲೆಯಾದ್ಯಂತ ಹರಿದಾಡುತ್ತಿದೆ.
ಈ ಹಿಂದೆ ಎರಡು ಬಾರಿ ವಿಜಯಪುರ ವಿಧಾನಸಭಾ ನಗರ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿ, ಒಮ್ಮೆ ಜವಳಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿರುವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂಬ ಕೂಗಿ ಕೇಳಿ ಬರುತ್ತಿದೆ.
No comments:
Post a Comment