ಈ ದಿವಸ ವಾರ್ತೆ
ವಿಜಯಪುರ : ಕರ್ನಾಟಕ ರಾಜ್ಯ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಜಯಪುರದಲ್ಲಿ ಶಿಕ್ಷಣ ಅಧ್ಯಯನ ವಿಭಾಗದ ಡೀನ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಬಸವರಾಜ ಎಲ್. ಲಕ್ಕಣ್ಣನವರ ಅವರು ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಸಚಿವರಾದ ಪ್ರೊ.ಡಾ. ಸುರೇಶ ವಿ. ನಾಡಗೌಡರ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.
ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ವಿಷ್ಣುಕಾಂತ ಎಸ್.ಚಟಪಲ್ಲಿ ಅವರು ನೂತನ ಕುಲಸಚಿವರನ್ನು ಬರಮಾಡಿಕೊಂಡರು.
No comments:
Post a Comment