ಈ ದಿವಸ ವಾರ್ತೆ
ವಿಜಯಪುರ : ಜಿಲ್ಲೆಯಲ್ಲಿ ಈವರೆಗೆ ಒಟ್ಟು ೨೩೨ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯಲ್ಲಿ ೬೨ ರೋಗಿಗಳು ಕೋವಿಡ್-೧೯ ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ. ಇಂದು ಮತ್ತೆ ೩ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಜಿಲ್ಲೆಯ ಸೋಂಕಿತರಲ್ಲಿ ರೋಗಿ ಸಂಖ್ಯೆ ೭೦೬೬ (೨೪ ವರ್ಷದ ಹೆಣ್ಣು) ರೋಗಿ ಸಂಖ್ಯೆ ೭೦೬೭ (೪೨ ವರ್ಷದ ಗಂಡು) ಇವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಹಾಗೂ ರೋಗಿ ಸಂಖ್ಯೆ ೭೦೬೮ (೮ ವರ್ಷದ ಹೆಣ್ಣು) ಇವರಿಗೆ ಐಎಲ್‌ಐ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.
ಅದರಂತೆ ರೋಗಿ ಸಂಖ್ಯೆ ೫೯೭೪ (೫ ವರ್ಷದ ಹೆಣ್ಣು) ರೋಗಿ ಸಂಖ್ಯೆ ೫೯೭೫ (೩ ವರ್ಷದ ಹೆಣ್ಣು) ಸೋಂಕಿನಿಂದ ಗುಣಮುಖರಾಗಿ ಜಿಲ್ಲಾಸ್ಪತೆಯಿಂದ ಬಿಡುಗಡೆ ಆಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ ೨೯೮೩೧ ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಇಲ್ಲಿಯವರೆಗೆ ಒಟ್ಟು ೨೩೨ ಕೋವಿಡ್ -೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. ೮೯೮೪ ಜನರು ೨೮ ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. ೨೦೬೭೭ ಜನರು (೧ ರಿಂದ ೨೮ ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ೬ ಜನ ಕೋವಿಡ್-೧೯ ರೋಗಿಗಳು ಮೃತಪಟ್ಟಿದ್ದಾರೆ. ೧೬೪ ಜನರು ಕೋವಿಡ್-೧೯ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ೬೨ ಜನರು ಆಸ್ಪತ್ರೆಯಲ್ಲಿರುವ ಕೋವಿಡ್-೧೯ ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ ೨೬೯೩೦ ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, ೨೬೫೪೨ ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ ೧೫೬ ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
No comments:
Post a Comment