ಈ ದಿವಸ ವಾರ್ತೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸಾಕಷ್ಟು ಉತ್ತಮ ಕೆಲಸಗಳು ನಡೆದಿವೆ ಎಂದು ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅವರ ಕಾರ್ಯಕ್ಕೆ ಸಿದ್ದೇಶ್ವರ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಗರದ ಜ್ಞಾನಯೋಗಾಶ್ರಮಕ್ಕೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಿ, ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯ ಉತ್ತರೋತ್ತರ ಬೆಳವಣಿಗೆಯಾಗಬೇಕು. ಮಹಿಳಾ ವಿವಿಯಲ್ಲಿರುವ ಭಾಸ್ಕಾರಾಚಾರ್ಯ ಪೀಠದವತಿಯಿಂದ ಗಣಿತದ ಕುರಿತ ಚಟುವಟಕೆಗಳು ಹೆಚ್ಚಬೇಕು. ವಿವಿಯ ಆವರಣದಲ್ಲಿ ಹೆಚ್ಚು ಹೆಚ್ಚು ಗಿಡ-ಮರಗಳನ್ನು ಬೆಳಸಬೇಕು. ಹಸುರೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ಮಹಿಳಾ ವಿಶ್ವವಿದ್ಯಾಲಯದಲ್ಲಿ ಸದ್ಯ 35 ಸಾವಿರಕ್ಕೂ ಹೆಚ್ಚು ಸ್ನಾತಕ ಮತ್ತು 2700ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿನಿಯರು ಹಾಗೂ 364 ಸಂಶೋಧನಾ ವಿದ್ಯಾರ್ಥಿನಿಯರು ಅಧ್ಯಯನ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ 1,500 ಆಸನಗಳುಳ್ಳ ಬೃಹತ್ ಹಾಗೂ ಅತ್ಯಾಧುನಿಕ ಸೌಲಭ್ಯ ಉಳ್ಳ ಸಭಾಂಗಣ ನಿರ್ಮಾಣ ಅಂತಿಮ ಹಂತದಲ್ಲಿದ್ದು, ಕೆಲವೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ನಾಲ್ಕು ವರ್ಷಗಳ ಅವಧಿಯಲ್ಲಿ ಕ್ಯಾಂಪಸ್‍ನಲ್ಲಿ ಹಸುರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ವಿವರಣೆ ನೀಡಿದ್ದಾರೆ.
ಕುಲಸಚಿವೆ ಪ್ರೊ.ಆರ್. ಸುನಂದಮ್ಮ ಉಪಸ್ಥಿತರಿದ್ದರು ಎಂದು ಮಹಿಳಾ ವಿವಿ ಪ್ರಕಟಣೆ ತಿಳಿಸಿದೆ.
No comments:
Post a Comment