ಈ ದಿವಸ ವಾರ್ತೆ
ವಿಜಯಪುರ: ಜಿಲ್ಲೆಯ ಬಹುದಿನದ ಕನಸಾಗಿದ್ದ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ ಕಾಮಗಾರಿಗೆ ನೆನ್ನೆ ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದ್ದು ಸಂತಸದ ವಿಷಯವಾಗಿದೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಎಸ್ ಬಿರಾದಾರ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಶ್ವವಿಖ್ಯಾತ ಗೋಳಗುಮ್ಮಟ ವಿಶ್ವಗುರು ಅಣ್ಣ ಬಸವಣ್ಣನವರು ಜನ್ಮಸ್ಥಳ ಆಲಮಟ್ಟಿ ಜಲಾಶಯ ಸೇರಿದಂತೆ ಪಾರಂಪರಿಕ ಸ್ಮಾರಕಗಳನ್ನು ಒಳಗೊಂಡಿರುವ ಹಾಗೂ ದ್ರಾಕ್ಷಿ ಒಣದ್ರಾಕ್ಷಿ ದಾಳಿಂಬೆ ಲಿಂಬೆ ಸೇರಿದಂತೆ ಅನೇಕ ತೋಟಗಾರಿಕೆ ಬೆಳೆಗಳ ರಫ್ತಿಗೆ ಹೆಸರಾಗಿರುವ ವಿಜಯಪುರ ಜಿಲ್ಲೆಗೆ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭಕ್ಕೆ ಸಚಿವ ಸಂಪುಟ ಸಭೆಯಲ್ಲಿ ಚಾಲನೆ ಸಿಕ್ಕಿತು ಬಹಳ ಸಂತೋಷವಾಗಿದೆ ಈ ಮಹಾನ್ ಕಾರ್ಯಕ್ಕೆ ಶ್ರಮಿಸಿದ ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಅಭಿನಂದನೆಗಳು ತಿಳಿಸಿದ್ದಾರೆ.
No comments:
Post a Comment