Saturday, March 27, 2021

ಸ್ವಾತಂತ್ರ್ಯದ ಅಮೃತ ಮಹೋತ್ಸವ ನಾಳೆ



ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶವು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಎಂಬ ವಿಶೇಷ ಕಾರ್ಯಕ್ರಮವನ್ನು ಮಾ.28ರಂದು ಬೆಳಿಗ್ಗೆ 10 ಗಂಟೆಗೆ ವಿವಿಯ ಕನ್ನಡ ಸಭಾ ಭವನದಲ್ಲಿ ಹಮ್ಮಿಕೊಂಡಿದೆ.

ಈ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಹರ್ಷವರ್ಧನ್ ಶೀಲವಂತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ವಹಿಸಲಿದ್ದಾರೆ. 

ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ರಾಷ್ಟ್ರೀಯ ಸೇವಾ ಯೋಜನೆ ಕೋಶದ ಸಂಯೋಜನಾ ಅಧಿಕಾರಿ ಪ್ರೊ.ನಾಮದೇವ್ ಗೌಡ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಲರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ.

 

No comments:

Post a Comment