ಈ ದಿವಸ ವಾರ್ತೆ ವಿಜಯಪುರ: ವಿಜಯಪುರ ವನ್ನು ರಫ್ತು ನಗರವನ್ನಾಗಿಸುವ ಗುರಿ ಹೊಂದಲಾಗಿದ್ದು, ಇಲ್ಲಿನ ಉದ್ದಿಮೆಗಳು ಕೂಡ ಈ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕೆ ಕೇಂದ್ರ, ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಆಶ್ರಯದಲ್ಲಿ ಆಝಾದಿ ಕಾ ಅಮೃತ ಮಹೋತ್ಸ ನಿಮಿತ್ತ ಸೋಮವಾರ ಹಮ್ಮಿಕೊಂಡ ವಾಣಿಜ್ಯ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಪಕ್ಕದ ಜಿಲ್ಲೆಗಳಾದ ಬೆಳಗಾವಿ, ಕಲಬುರಗಿ ಸೇರಿದಂತೆ ಗಡಿ ಭಾಗದ ಸೊಲ್ಲಾಪುರ ಕೂಡ ರಫ್ತು ಮಾಡುವಲ್ಲಿ ವಿಜಯಪುರಕ್ಕಿಂತಲೂ ಮುಂದಿನ ಹೆಜ್ಜೆಯಲ್ಲಿವೆ. ಆದರೆ ನಮ್ಮ ಜಿಲ್ಲೆಯಿಂದ ಮಾತ್ರ ಈ ಕಾರ್ಯ ಸಾಧನೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿಲ್ಲ ಎಂದರು.
ಸದ್ಯ ಒಣ ದ್ರಾಕ್ಷಿ, ದಾಳಿಂಬೆ, ಲಿಂಬೆ ಸೇರಿದಂತೆ ವಾಣಿಜ್ಯ ಬೆಳೆಗಳು ಮಾತ್ರ ರಫ್ತು ಮಾಡಲಾಗುತ್ತಿದ್ದು, ಕೈಗಾರಿಕೆಯ ವಸ್ತುಗಳು ಕೂಡ ರಫ್ತು ಮಾಡುವ ನಿಟ್ಟಿನಲ್ಲಿ, ಕೈಗಾರಿಕೋದ್ಯಮಿಗಳು ತಮ್ಮ ವಸ್ತುಗಳನ್ನು ಉತ್ತಮ ಗುಣಮಟ್ಟದಲ್ಲಿ ಉತ್ಪಾದಿಸಲು ಮುಂದಾಗಬೇಕು. ಇದಕ್ಕೆ ಕೈಗಾರಿಕೋದ್ಯಮಿಗಳ ಶ್ರಮ ಹೆಚ್ಚಿದೆ ಎಂದರು.
ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಇಂದು ವಿಪುಲ ಅವಕಾಶಗಳಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು ಎಂದರು.
ಇಲ್ಲಿ ಮುಳವಾಡ ಹಾಗೂ ಸಿಂದಗಿಯಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡೆಸಲಾಗುತ್ತಿದೆ. ಜಿಲ್ಲೆಯ ನವ ಉದ್ಯಮೆದಾರರಿಗೆ ಇಲ್ಲಿನ ಕೈಗಾರಿಕಾ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಗೊಂಡು, ಉದ್ಯೋಗ ಸೃಜನೆಗೊಂಡಲ್ಲಿ, ಜಿಲ್ಲೆಯ ನಿರುದ್ಯೋಗ ಸಮಸ್ಯೆ ನಿವಾರಣೆ ಆಗಲು ಸಾಧ್ಯೆ ಎಂದರು.
ಜಿಲ್ಲೆಯ ಕೃಷಿ ಉತ್ಪಾನ್ನ ಸೇರಿದಂತೆ ಕೈಗಾರಿಕಾ ವಸ್ತುಗಳ ರಫ್ತು ಮಾಡಲು, ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣದಲ್ಲಿ ಏರ್ ಬಸ್, ಕಾರ್ಗೋ ಹಾರಾಟದ ವ್ಯವಸ್ಥೆಗೆ ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ ಎಂದರು.
ಅಮೃತ ಯೋಜನೆ ನಿಮಿತ್ತ ವಿವಿಧ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಹಲವು ಇಲಾಖೆಗಳ ಆಶ್ರಯದಲ್ಲಿ ವಿಶಿಷ್ಟ ಕಾರ್ಯಕ್ರಮಗಳನ್ನು ಕೈಗೊಳಗಳಲಾಗುತ್ತಿದೆ ಎಂದರು.
ಇಲ್ಲಿನ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿ ಬಸವರಾಜ ಬಿರಾದಾರ ಕೈಗಾರಿಕೆಗಳ ನಿವೇಶನ ಹಂಚಿಕೆ ಹಾಗೂ ಕೈಗಾರಿಕೆ ಬೆಳವಣಿಗೆಯ ನಿಟ್ಟಿನಲ್ಲಿ ಪೂರಕವಾಗಿ ಶ್ರಮಿಸುತ್ತಿದ್ದಾರೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಗೋವಿಂದ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ರಫ್ತು ಮಾಡುವ ಗುಣಮಟ್ಟದ ವಸ್ತುಗಳು ಹೆಚ್ಚಿದ್ದು, ಇನ್ನಷ್ಟು ಬೆಳವಣಿಗೆ ಆಗಬೇಕು ಎಂದರು.
ಅಲ್ಲದ ಕೈಗಾರಿಕೆ ಸ್ಥಾಪನೆಗಳಿಗೆ ಸರ್ಕಾರ ಸರಳಿಕೃತ ನೀತಿ ಜಾರಿಗೆ ತಂದಿದ್ದು, ಈ ಹಿಂದಿನ ಅಡೆ, ತಡೆಗಳನ್ನು ತಗೆದು ಹಾಕಿದೆ. ಹೀಗಾಗಿ ಇಂದು ಕೈಗಾರಿಕಾ ಸ್ಥಾಪನೆಗೆ ಉತ್ತಮ ಅವಕಾಶಗಳು ಇವೆ ಎಂದರು.
ಹಿರಿಯ ಉದ್ಯಮ, ಚೇಂಬರ್ ಆಫ್ ಕಾಮರ್ಸ್ ಇಂಡಿಸ್ಟ್ರೀ, ಅಗ್ರಿಕಲ್ಚರ್ ಅಧ್ಯಕ್ಷ ಡಿ.ಎಸ್. ಗುಡ್ಡೋಡಗಿ ಮಾತನಾಡಿದರು.
ಸಣ್ಣ ಉದ್ಯಮಿದಾರರ ಸಂಘದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ತಮಣ್ಣ ಈಳಗೇರ, ಟಿ.ಸಿ. ವಿಜಯಬಾಸ್ಕರ್ ಮತ್ತಿತರರು ಇದ್ದರು.
ಸಿಡಾಕ್ ಜಂಟಿ ನಿರ್ದೇಶಕಿ ಎಸ್.ಬಿ. ಬಳ್ಳಾರಿ ಸ್ವಾಗತಿಸಿ, ನಿರೂಪಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಬಸವರಾಜ ಬಿರಾದಾರ ವಂದಿಸಿದರು.
No comments:
Post a Comment