Monday, November 8, 2021

ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ :ಅನಿಲ ಹಳ್ಳಿ

 


ಈ ದಿವಸ ವಾರ್ತೆ

ವಿಜಯಪುರ: ಜಿಲ್ಲಾಡಳಿತ , ಜಿಲ್ಲಾ ಪಂಚಾಯತಿ ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಕೆ ವಿಜಯಪುರ ಶಿಶು ಅಭಿವೃದ್ಧಿ ಯೋಜನೆ ಚಡಚಣ ಅವರ ಸಂಯುಕ್ತಾಶ್ರಯದಲ್ಲಿ ಅಂಗನವಾಡಿ ಕೇಂದ್ರಗಳ ಪುನರ್ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ ಹಳ್ಳಿಯವರು ಜ್ಯೋತಿ ಬೆಳಗಿಸಿ ಹಾಗೂ ಅಂಗನವಾಡಿ ಮಕ್ಕಳಿಗೆ ಪುಷ್ಪ ನೀಡುವುದರ ಮೂಲಕ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಠಿಯ ಹಿನ್ನೆಲೆಯಲ್ಲಿ, ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ. ಈ ಶ್ರಮವು ದೇಶದ ಮುಂದಿನ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಹೂಡುತ್ತಿರುವ ಬಂಡವಾಳವಾಗಿರುತ್ತದೆ.

 ಕರ್ನಾಟಕ ರಾಜ್ಯದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಪ್ರಾಯೋಗಿಕವಾಗಿ 2ನೇ ಅಕ್ಟೋಬರ್ 1975 ರಂದು ಮೈಸೂರು ಜಿಲ್ಲೆಯ, ಟಿ. ನರಸೀಪುರ ತಾಲ್ಲೂಕಿನಲ್ಲಿ 100 ಅಂಗನವಾಡಿ ಕೇಂದ್ರಗಳೊಂದಿಗೆ ಪ್ರಾರಂಭಿಸಲಾಯಿತು.

 ಈಗ ರಾಜ್ಯದ ಎಲ್ಲಾ ತಾಲ್ಲೂಕುಗಳಿಗೆ ವಿಸ್ತರಿಸಲಾಗಿದೆ. ಗರ್ಭಿಣಿ, ಬಾಣಂತಿ, ಕಿಶೋರಿಯರು ಮತ್ತು 6 ವರ್ಷ ಒಳಗಿನ ಮಕ್ಕಳ ಕಲ್ಯಾಣವು ಈ ಯೋಜನೆಯ ಮುಖ್ಯ ಗುರಿಯಾಗಿರುತ್ತದೆ ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅರ್ಚನಾ ಬಸವರಾಜ ಬಿರಾದಾರ ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ದೇವರ ನಿಂಬರಗಿ ವಲಯದ ಮೇಲ್ವಿಚಾರಕಿಯರಾದ ತೃಪ್ತಿ ಸಿ. ತಿಳಗುಳ, ಪ್ರತಿಭಾ ಅಂಗಡಿಮಠ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

 ದೇವರ ನಿಂಬರಗಿ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರಾದ ಜ್ಯೋತಿ ಸಿಂಗೆ,, ಸಂಗೀತಾ ಕಾ. ಹೋಕಳೆ, ಎಸ್.ಬಿ. ಬಿರಾದಾರ, ಸುನಂದಾ ಗಾಡಗೆ, ಸಂಗೀತಾ ಚಲವಾದಿ ಸೇರಿದಂತೆ ಸಹಾಯಕಿಯರು ಹಾಗೂ ಮಕ್ಕಳ ಪಾಲಕರು ಉಪಸ್ಥಿತರಿದ್ದರು.

No comments:

Post a Comment