Monday, January 31, 2022
Wednesday, January 26, 2022
Tuesday, January 25, 2022
Monday, January 24, 2022
Sunday, January 23, 2022
Saturday, January 22, 2022
ಜಿಲ್ಲೆಯಲ್ಲಿ ಶನಿವಾರ 305 ಮಂದಿಗೆ ಕೊರೋನಾ ದೃಢ
ಈ ದಿವಸ ವಾರ್ತೆ
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ 305 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 79 ಸೋಂಕಿತರು ಗುಣಮುಖಂಡ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ನಗರದಲ್ಲಿ 98, ವಿಜಯಪುರ ಗ್ರಾಮೀಣ 16, ಬಬಲೇಶ್ವರ 7, ತಿಕೋಟಾ 5, ಬಸವನಬಾಗೇವಾಡಿ 29, ಕೊಲ್ಹಾರ 12, ನಿಡಗುಂದಿ 8, ಇಂಡಿ 43, ಚಡಚಣ 20, ಮುದ್ದೇಬಿಹಾಳ 6, ಸಿಂದಗಿ 55, ದೇವರಹಿಪ್ಪರಗಿ 5 ಹಾಗೂ ಇತರೆ ಜಿಲ್ಲೆಯ ಓರ್ವ ಸೇರಿದಂತೆ 305 ಜನರಿಗೆ ಸೋಂಕು ತಗುಲಿದೆ.
ವೃದ್ಧೆ ಸಾವು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 70 ವರ್ಷ ವೃದ್ಧೆಯೊಬ್ಬಳು ಸಾವಿಗೀಡಾಗಿದ್ದಾಳೆ. ವೃದ್ಧೆ ತೀವ್ರ ಉಸಿರಾಟ ತೊಂದರೆ, ಹೊಟ್ಟೆ ನೋವು, ಎಚ್ಟಿಎನ್, ಟೈಪ್ 2 ಡಯಾಬಿಟಿಸ್ ಸಂಬAಧಿತ ಕಾಯಿಲೆಗಳಿಂದ ಬಳಲಿ ಕಲಬುರಗಿಯಿಂದ ಆಗಮಿಸಿ ನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಕೋವಿಡ್ ಎರಡೂ ಪಡೆದುಕೊಂಡಿದ್ದಳು. ಮೃತಳ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.
Friday, January 21, 2022
Thursday, January 20, 2022
ಮಹಿಳಾ ವಿವಿಗೆ ಕೊರೋನಾ ದಾಳಿ
ಈ ದಿವಸ ವಾರ್ತೆ
ವಿಜಯಪುರ: ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮತ್ತು ಕೊರೊನಾ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ಸಲುವಾಗಿ ಈ ತಿಂಗಳ 27ರವರೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿ ಲಯಕ್ಕೆ ರಜೆ ಘೋಷಿಸಲಾಗಿದೆ. ವಿಶ್ವವಿದ್ಯಾನಿಲಯದಲ್ಲಿ ಐದಕ್ಕಿಂತ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾದಲ್ಲಿ ವಿವಿಗೆ ಒಂದು ವಾರ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.ರಜಾ ಅವಧಿಯಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಿರಲು ಮತ್ತು ತುರ್ತು ಕೆಲಸಗಳಿದ್ದಾಗ ವಿವಿಗೆ ಹಾಜರಾಗುವಂತೆ ಆದೇಶ ನೀಡಲಾಗಿದೆ.
Wednesday, January 19, 2022
Tuesday, January 18, 2022
Monday, January 17, 2022
Sunday, January 16, 2022
Saturday, January 15, 2022
Friday, January 14, 2022
Thursday, January 13, 2022
Wednesday, January 12, 2022
Tuesday, January 11, 2022
Monday, January 10, 2022
ಜ.12 ರಂದು ಇಂಡಿ ಹಾಗೂ ಚಡಚಣ ತಾಲೂಕುಗಳಲ್ಲಿ ವಿದ್ಯುತ್ ವ್ಯತ್ಯಯ
ಈ ದಿವಸ ವಾರ್ತೆ
ವಿಜಯಪುರ : ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳಲ್ಲಿ ಜ.12 ರಂದು 220 ಕೆವಿ, 33 ಕೆವಿ ತುರ್ತು ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಎರಡು ತಾಲೂಕಿನಲ್ಲಿ 220/110/11 ಕೆವಿ ವಿದ್ಯುತ್ ವಿತರಣಾ ಉಪ ಕೇಂದ್ರಗಳಲ್ಲಿ ಹಾಗೂ 110/11 ಕೆವಿ ದೇ.ಹಿಪ್ಪರಗಿ, 33 ಕೆವಿ ಕಡ್ಲೆವಾಡ, 33 ಕೆವಿ ಕೋರವಾರಗಳಲ್ಲಿ ಬರುವ ಎಲ್ಲ 11 ಕೆವಿ ಹಾಗೂ ಎಚ್ಟಿ ವಿದ್ಯುತ್ ಮಾರ್ಗಗಳ ಮೇಲೆ ಬೆಳಿಗ್ಗೆ 9-30 ರಿಂದ ಸಂಜೆ 4-30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಇಂಡಿ, ಹೆಸ್ಕಾಂ, ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು (ವಿ) ತಿಳಿಸಿದ್ದಾರೆ.
ಅದರಂತೆ ಈ ಮಾರ್ಗಗಳ ಮೇಲೆ ಬರುವ ಎಲ್ಲ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Sunday, January 9, 2022
Saturday, January 8, 2022
110 ಕೆವ್ಹಿ ಮಮದಾಪೂರ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಈ ದಿವಸ ವಾರ್ತೆ
ವಿಜಯಪುರ : ಜಿಲ್ಲೆಯ 110 ಕೆವ್ಹಿ ಮಮದಾಪುರ ಹಾಗೂ ಅದರ ಕೆಳಗೆ ಬರುವ ವಿದ್ಯುತ್ ಉಪ ಕೇಂದ್ರಗಳ ಮೇಲೆ ಕೆ.ಪಿ.ಟಿ.ಸಿ.ಎಲ್ ವಿಜಯಪುರ ವಿಭಾಗದ ವತಿಯಿಂದ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಪ್ರಯುಕ್ತ ಜನವರಿ 10 ರಂದು ಈ ಉಪಕೇಂದ್ರಗಳಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ವಿಜಯಪುರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಅದರಂತೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಉಪಕೇಂದ್ರಗಳು ಈ ಕೆಳಗಿನಂತಿವೆ. 110 ಕೆವಿ ಮಮದಾಪೂರ, 110 ಕೆವಿ ಶಿರಬೂರ, 110 ಕೆವಿ ಬಬಲೇಶ್ವರ, 110 ಕೆವಿ ಕಂಬಾಗಿ ಮತ್ತು 33 ಕೆವಿ ಲಿಂಗದಳ್ಳಿ ಎಲ್ಐಎಸ್ ಹಾಗೂ 33 ಕೆ ವಿ ದೇವರ ಗೆಣ್ಣೂರ ಆಗಿರುತ್ತವೆ. ಆದ್ದರಿಂದ ವಿದ್ಯುತ್ ಗ್ರಾಹಕರು ಹೆಸ್ಕಾಂ ಜೊತೆ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಮೂರನೇ ಅಲೆಯ ಸಮರ್ಪಕ ನಿಯಂತ್ರಣಕ್ಕಾಗಿ ಸಮರೋಪಾದಿಯಲ್ಲಿ ಸಕಲ ರೀತಿಯ ಅಗತ್ಯ ಕ್ರಮಕೈಗೊಳ್ಳಿ -ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್
ಈ ದಿವಸ ವಾರ್ತೆ ವಿಜಯಪುರ : ಕೋವಿಡ್ ಮೂರನೇ ಅಲೆಯ ಸಮರ್ಪಕ ನಿಯಂತ್ರಣಕ್ಕಾಗಿ ಸಮರೋಪಾದಿಯಲ್ಲಿ ಸಕಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿಂದು ಸಭೆ ನಡೆಸಿದ ಮಾತನಾಡಿದ ಅವರು ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಸರಿಯಾದ ಸಮಯಕ್ಕೆ ಆಸ್ಪತ್ರೆಗಳಲ್ಲಿ ಬೆಡ್ ದೊರೆಯುವಂತೆ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಬೆಡ್ಗಳಿಗಾಗಿ ರೋಗಿಗಳು ಅನಗತ್ಯವಾಗಿ ಪರದಾಡುವಂತಾಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಕೆಪಿಎಮ್ ನಲ್ಲಿ ರಜಿಸ್ಟರ್ ಆದ ಬೆಡ್ಗಳ ಬಗ್ಗೆ ಗಮನ ಹರಿಸಿ, ಪೂರೈಸಲಾದ ಬೆಡ್ಗಳನ್ನು ಗುರುತಿಸಿ ಅವುಗಳ ಸಂಪೂರ್ಣ ಪಟ್ಟಿಮಾಡಿಟ್ಟುಕೊಳ್ಳಿ. ಇದರಿಂದ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತದಲ್ಲದೇ, ರೋಗಿಗಳಿಗೂ ಅನಗತ್ಯ ಗೊಂದಲ ಉಂಟಾಗುವುದಿಲ್ಲ. ಬೆಡ್ ಮ್ಯಾನೇಜ್ಮೆಂಟ್ನಲ್ಲಿ ಯಾವುದೇ ಲೋಪ ಹಾಗೂ ಸಮಸ್ಯೆಗಳಾಗದಂತೆ ಕ್ರಮಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ಸೂಕ್ತ ನಿರ್ವಹಣೆಯೊಂದಿಗೆ ಆಕ್ಸಿಜನ್, ವೆಂಟಿಲೇಟರ್ಗಳಂತಹ ಅಗತ್ಯ ವ್ಯವಸ್ಥೆಯನ್ನೂ ಮಾಡಿಟ್ಟುಕೊಂಡಿರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ತಾಲೂಕುವಾರು ಐಎಲ್ಐ, ಸಾರಿ ಸರ್ವೇ ಕಾರ್ಯಕೈಗೊಂಡು ಈ ಬಗ್ಗೆ ಕೋವಿಡ್ ಪೋರ್ಟಲ್ನಲ್ಲಿ ಅಪ್ಡೇಟ್ ಮಾಡಬೇಕು. ಸ್ವ್ಯಾಬ್ ಸಂಗ್ರಹಿಸುವಾಗಲೇ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಒಂದು ವೇಳೆ ವ್ಯಕ್ತಿಯಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದರೆ ಅಂತಹವರ ಸಂಪೂರ್ಣ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ತಾಲೂಕಾ ಹಂತದಲ್ಲಿ ತಹಶೀಲ್ದಾರರು ಹಾಗೂ ಇಒ ಗಳು ಇನ್ನಷ್ಟು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕಿದ್ದು, ರೋಗಿಗಳನ್ನು ತಾಲೂಕಾಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಕಳುಹಿಸುವಾಗ ಬಹಳ ಗಮನ ಹಾಗೂ ಎಚ್ಚರಿಕೆ ವಹಿಸಿ, ಗಂಭೀರ ಹಾಗೂ ಅಗತ್ಯವೆನಿಸಿದರೆ ಮಾತ್ರ ಕಳುಹಿಸಿಕೊಡಬೇಕು. ಸಾಧ್ಯವಾದರೆ ತಾಲೂಕಾಸ್ಪತ್ರೆಯಲ್ಲಿಯೇ ಅಲ್ಲಿನ ರೋಗಿಗಳನ್ನು ಚಿಕಿತ್ಸೆಗೊಳಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಕೋವಿಡ್ ಪಾಸಿಟಿವ್ ವರದಿ ಬಂದ ಪ್ರತಿ ರೋಗಿಯ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಅಂತಹ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು. ಹಾಗೆಯೇ ಕೂಡಲೇ ಅವರಿಗೆ ಅಗತ್ಯ ಚಿಕಿತ್ಸೆ ಒದಗಿಸಬೇಕು. ಈ ಬಗ್ಗೆ ಪೋರ್ಟಲ್ನಲ್ಲೂ ವಿವರ ದಾಖಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸ್ವ್ಯಾಬ್ ಸಂಗ್ರಹಿಸುವಾಗ ವ್ಯಕ್ತಿಯ ವಿಳಾಸ ಹಾಗೂ ದೂರವಾಣಿ ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಈ ವಿಷಯದಲ್ಲಿ ಲ್ಯಾಬ್ ಟೆಕ್ನಿಶಿಯೆನ್ಗಳು ಬಹಳ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಕೂಡಲೇ ಕ್ರಮಕೈಗೊಳ್ಳಿ, ಹಾಗೆಯೇ ಸರ್ಕಾರದಿಂದ ಮಂಜೂರಾದ ಚಿಕ್ಕಮಕ್ಕಳ ಆಸ್ಪತ್ರೆಗಳ ನಿರ್ಮಾಣ ಹಾಗೂ ಅದರ ಸೂಕ್ತ ನಿರ್ವಹಣೆ ಕಾರ್ಯಕ್ಕೂ ಕ್ರಮಕೈಗೊಳ್ಳಿ, ಇದರಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಹೋಮ್ ಐಸೋಲೇಶನ್ ರೋಗಿಗಳಿಗೆ ಕಾಲಕಾಲಕ್ಕೆ ಸೂಕ್ತ ಚಿಕಿತ್ಸೆ ಒದಗಿಸುವುದರ ಜೊತೆಗೆ ಅಗತ್ಯವಿದ್ದಲ್ಲಿ ಸಕಾಲಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲು ಸೂಕ್ತ ಕ್ರಮಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಪಿಎಮ್ ಕೇರ್, ರಾಜ್ಯ ಸರ್ಕಾರ ಹಾಗೂ ಇನ್ನಿತರ ಎನ್ ಜಿ ಒ ಹಾಗೂ ದಾನಿಗಳಿಂದ ಒದಗಿಸಲಾದ ಆಕ್ಸಿಜನ್ ಕಾನ್ಸಟ್ರೇಟರ್ಗಳನ್ನು ಆದ್ಯತೆ ಮೇಲೆ ಒದಗಿಸಲು ಕ್ರಮಕೈಗೊಳ್ಳಿ. ಆದಷ್ಟು ಜನರೇಟರ್ ಹಾಗೂ ಪವರ್ ಬ್ಯಾಕ್ಅಪ್ ಸೌಲಭ್ಯವಿದ್ದ ಕಡೆಗಳಲ್ಲಿ ಆಕ್ಸಿಜನ್ ಕಾನ್ಸಟ್ರೇಟರ್ಗಳನ್ನು ಒದಗಿಸುವುದು ಹೆಚ್ಚು ಸೂಕ್ತವಾಗಿರುತ್ತದೆ ಎಂದು ಅವರು ಸಲಹೆ ನೀಡಿದರು.
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಆಕ್ಸಿಜನ್ ಪ್ಲಾಂಟ್ಗಳ ಸರಿಯಾದ ಮಾಹಿತಿಯನ್ನೋದಗಿಸಿ, ಅವುಗಳ ನಿರ್ವಹಣೆಯಲ್ಲಿ ಯಾವುದೇ ತಾಂತ್ರಿಕ ತೊಂದರೆಗಳಾಗದಂತೆ ಎಚ್ಚರಿಕೆ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಇಂತಹ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ಬದಲಾವಣೆ ಮಾಡಬಾರದು. ಒಂದು ವೇಳೆ ಯಾರನ್ನಾದರೂ ಬದಲಾಯಿಸುವ ಸನ್ನಿವೇಶ ಉಂಟಾದರೆ ಅದನ್ನು ತಮ್ಮ ಹಾಗೂ ಟಿಎಚ್ಒ ಗಳ ಗಮನಕ್ಕೆ ತಂದು, ಸೂಕ್ತ ಸಲಹೆಯ ಮೇರೆಗೆ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಜಿಲ್ಲೆಯ ಗಡಿಭಾಗಗಳ ಚೆಕ್ಪೋಸ್ಟ್ಗಳಲ್ಲಿ ಟೆಸ್ಟಿಂಗ್ ಕಾರ್ಯವನ್ನು ಅತ್ಯಂತ ಸಮರ್ಪಕವಾಗಿ ಕೈಗೊಳ್ಳಬೇಕು. ಪ್ರಯಾಣಿಕರ ಆರ್ಟಿಪಿಸಿಆರ್ ನೆಗೆಟಿವ್ ಟೆಸ್ಟ್ ವರದಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಅಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದ ವ್ಯಕ್ತಿಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಚಹಾ ಅಂಗಡಿ, ಬೇಕರಿಗಳಂತಹ ಆಹಾರ, ದಿನಸಿ ಮಾರಾಟದ ಅಂಗಡಿಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾ ಆಗದಂತೆ ಎಚ್ಚರಿಕೆ ವಹಿಸಬೇಕು. ಪಾರ್ಸಲ್ ವ್ಯವಸ್ಥೆಗೆ ಅವಕಾಶ ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಹಾಗೆಯೇ ಗಡಿಭಾಗಗಳ ಚೆಕ್ಪೋಸ್ಟ್ಗಳಲ್ಲಿ ಜನರಿಗೆ ತೊಂದರೆಯಾಗದ ಹಾಗೂ ಜಾಗೃತಿಯನ್ನುಂಟು ಮಾಡುವ ರೀತಿಯಲ್ಲಿ, ಇನ್ನಷ್ಟು ಕಟ್ಟುನಿಟ್ಟಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿಗಳಾದ ರಾಹುಲ್ ಸಿಂಧೆ, ಬಲರಾಮ ಲಮಾಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ಧಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜಕುಮಾರ ಯರಗಲ್, ಮಹೇಶ ನಾಗರಬೆಟ್ಟ, ಡಬ್ಲ್ಯೂ ಎಚ್ ಒ ಪ್ರತಿನಿಧಿ ಮುಕುಂದ ಗಲಗಲಿ ಸೇರಿದಂತೆ ವಿವಿಧ ತಾಲೂಕುಗಳ ತಹಶೀಲ್ದಾರರು ಹಾಗೂ ಆರೋಗ್ಯ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Friday, January 7, 2022
Thursday, January 6, 2022
Wednesday, January 5, 2022
Tuesday, January 4, 2022
ಇಂಡಿಯಲ್ಲಿ ಕರಾಟೆ ಶಿಕ್ಷಕರ ಸಭೆ ನಾಳೆ
ಈ ದಿವಸ ವಾರ್ತೆ
ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಎಲ್ಲ ಕರಾಟೆ ಶಿಕ್ಷಕರ ಸಮಾಲೋಚನಾ ಸಭೆಯನ್ನು ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜ.6 ರಂದು ಬೆಳಿಗ್ಗೆ 10ಕ್ಕೆ ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ಗೃಹಗಳಲ್ಲಿರುವ ವಿದ್ಯಾರ್ಥಿನಿಯರಿಗೆ ಹಾಗೂ ಮುಂಬರುವ ವಿವಿಧ ಸರ್ಕಾರಿ ಪ್ರೌಢಶಾಲೆಗಳ 4000ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡುವ ಕುರಿತು ಸರ್ಕಾರದ ತೀರ್ಮಾನ ಕುರಿತು ಚರ್ಚಿಸಲಾಗುತ್ತದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲ ಕರಾಟೆ ಶಿಕ್ಷಕರು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಬೆಂಬಲ ಕೊಡಬೇಕು. ಈ ಸಭೆಯಲ್ಲಿ ವಿಜಯಪುರದ ಹಿರಿಯ ಕರಾಟೆ ತರಬೇತುದಾರ ಹಾಗೂ ಬೋಡೋಕಾನ್ ಕರಾಟೆ ತರಬೇತಿ ಸಂಸ್ಥೆಯ ಮುಖ್ಯಸ್ಥರಾದ ಎ.ಎಸ್.ಪಟೇಲ, ಇಂಡಿಯ ಯಮಾಗುಚ್ಚಿ ಕಿಕ್ ಬಾಕ್ಸಿಂಗ್ ಸಂಸ್ಥೆಯ ಮುಖ್ಯಸ್ಥರಾದ ಎಂ.ಎಲ್.ಚೌಧರಿ, ಉತ್ತರ ಕರ್ನಾಟಕ ಟೈಕೊಂಡೊ ಮುಖ್ಯಸ್ಥ ವಿಜಯಕುಮಾರ ರಾಠೋಡ ಹಾಗೂ ಎಲ್ಲ ತಾಲೂಕುಗಳ ಪ್ರಮುಖ ಕರಾಟೆ ತರಬೇತುದಾರರು ಪಾಲ್ಗೊಂಡು ಸಲಹೆ, ಸೂಚನೆ ನೀಡಲಿದ್ದಾರೆ. ಜಿಲ್ಲೆಯ ಎಲ್ಲ ಕರಾಟೆ ತರಬೇತಿ ನೀಡುವ ಶಿಕ್ಷಕರು ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಬೇಕು ಎಂದು ಕರ್ನಾಟಕ ಕರಾಟೆ ಡೂ ಸಂಸ್ಥೆಯ ರಾಜ್ಯಾಧ್ಯಕ್ಷ ಶಿವಕುಮಾರ ಶಾರದಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.