ಈ ದಿವಸ ವಾರ್ತೆ
ವಿಜಯಪುರ: ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮತ್ತು ಕೊರೊನಾ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ಸಲುವಾಗಿ ಈ ತಿಂಗಳ 27ರವರೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿ ಲಯಕ್ಕೆ ರಜೆ ಘೋಷಿಸಲಾಗಿದೆ. ವಿಶ್ವವಿದ್ಯಾನಿಲಯದಲ್ಲಿ ಐದಕ್ಕಿಂತ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾದಲ್ಲಿ ವಿವಿಗೆ ಒಂದು ವಾರ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.ರಜಾ ಅವಧಿಯಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಿರಲು ಮತ್ತು ತುರ್ತು ಕೆಲಸಗಳಿದ್ದಾಗ ವಿವಿಗೆ ಹಾಜರಾಗುವಂತೆ ಆದೇಶ ನೀಡಲಾಗಿದೆ.
No comments:
Post a Comment