ಈ ದಿವಸ ವಾರ್ತೆ
ವಿಜಯಪುರ: ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ಧ ನಡೆಯುವ ಸಂಭವವಿದ್ದು, ಈ ಸಂಧರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ ವಿಜಯಪುರ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬಂಧಿಸಿರುವವರು ವಿಜಯಪುರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ :1077 ಗೆ 08352-221261, ಹಾಗು ರಾಕೇಶ್ ಜೈನಾಪುರ ಅವರ ಮೊಬೈಲ್ : 7019682740
ಕರೆ ಮಾಡಿ ಮಾಹಿತಿಯನ್ನು ನೀಡುವಂತೆ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
No comments:
Post a Comment