ಗೀತಾಂಜಲಿ ಪಾಟೀಲ
ಈ ದಿವಸ ವಾರ್ತೆ
ವಿಜಯಪುರ: ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಗೀತಾಂಜಲಿ ಪಾಟೀಲ ಅವರನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರಾದ ಡಾ. ಬಿ. ಪುಷ್ಪ ಅಮರನಾಥ್ ಅವರು ಆದೇಶ ಹೊರಡಿಸಿದ್ದಾರೆ.ಈ ಕೂಡಲೇ ಗೀತಾಂಜಲಿ ಪಾಟೀಲ ಅವರು ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಸಂಘಟನೆ ಮತ್ತುಬಲವರ್ಧನೆಗಾಗಿ ಶ್ರಮಿಸಲು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
No comments:
Post a Comment