ವಿಜಯಪುರ : ಪ್ರಸಾರ ಭಾರತಿ, ಭಾರತದ ಸಾರ್ವಜನಿಕ ಪ್ರಸಾರ ಸೇವೆ, ಆಕಾಶವಾಣಿ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಆಕಾಶವಾಣಿ ಕೇಂದ್ರದ ರಜತ್ ಮಹೋತ್ಸವ ಸಂಭ್ರಮ ರಜತ ರವಿ ಉದ್ಘಾಟನಾ ಸಮಾರಂಭವು ಎಂ.ಪಿ.ಸ್ಟುಡಿಯೋದಲ್ಲಿ ಸೆಪ್ಟೆಂಬರ್ 18ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ್ ವಾಲೀಕಾರ, ಬಾಗಲಕೋಟ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ವಿಜಯಪುರ ಆಕಾಶವಾಣಿ ಎಂಜಿನಿಯರ್ ವಿಭಾಗದ ಮುಖ್ಯಸ್ಥರಾದ ಎಸ್.ಎಸ್.ಶೇಖ್ ಅಧ್ಯಕ್ಷತೆ ವಹಿಸುವರು ಎಂದು ವಿಜಯಪುರ ಆಕಾಶವಾಣಿಯ ಕಾರ್ಯಕ್ರಮ ಅಧಿಕಾರಿ ಡಾ.ಸೋಮಶೇಖರ ರುಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment