Friday, September 30, 2022
ಅನಾವರಣಗೊಂಡ ಪತ್ರಕರ್ತರ ಸಮ್ಮೇಳನ ಲಾಂಛನ ಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಿಎಂ ಲೋಕಾರ್ಪಣೆ
ವಿಜಯಪುರದಲ್ಲಿ ನಡೆಯಲಿರುವ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೆರವೇರಿಸಿದರು.
ಈ ದಿವಸ ವಾರ್ತೆ:
ವಿಜಯಪುರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದಲ್ಲಿ ನಡೆಯಲಿರುವ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು.
ನಗರದಲ್ಲಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಲೋಕಾರ್ಪಣೆ ಹಾಗೂ ವಿವಿಧ ಅಭಿವದ್ಧಿ ಕಾಮಗಾರಿಗಳ ಚಾಲನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ, ಸಮ್ಮೇಳನಕ್ಕೆ ಶುಭಾಶಯ ಕೋರಿದರು. ಅಲ್ಲದೇ ಸಂಘದ ಸದಸ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಎಸ್ಪಿ ಎಚ್.ಡಿ. ಆನಂದಕುಮಾರ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಭವಾನಿಸಿಂಗ್ ಠಾಕೂರ, ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ಕಾರ್ಯದರ್ಶಿ ಅವಿನಾಶ ಬಿದರಿ ಮತ್ತಿತರರಿದ್ದರು.