ಈ ದಿವಸ ವಾರ್ತೆ
ವಿಜಯಪುರ: ಅವಧಿ ಮುಕ್ತಾಯವಾಗಲಿರುವ. ಜಿಲ್ಲೆಯ ಯಲಗೂರ, ಬಳಬಟ್ಟಿ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಜಾಲಗೇರಿ, ಕುಂಟೋಜಿ, ಹುಲ್ಲೂರ, ಅಂಜುಟಗಿ ಹಾಗೂ ಗುಬ್ಬೇವಾಡ ಗ್ರಾಮ ಪಂಚಾಯತಿಯ ತೆರವಾದ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ನಿಗದಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಅಧಿಸೂಚನೆ ವೇಳಾಪಟ್ಟಿಯಂತೆ ನಾಮಪತ್ರಗಳನ್ನು ಸಲ್ಲಿಸಲು ದಿನಾಂಕ : 12-07-2023ರಂದು ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆ ದಿನಾಂಕ :13-07-2023, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ದಿನಾಂಕ : 15-07-2023 ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ದಿನಾಂಕ : 23-07-2023 ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯವರೆಗೆ ಮತದಾನ ಹಾಗೂ ದಿನಾಂಕ: 26-07-2023 ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನವಾಗಿದೆ.
No comments:
Post a Comment