ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ :ಶ್ರೀ ಸಿದ್ದೇಶ್ವರ ಸ್ವಾಮೀಜಿ ಮಂಟಪ, ಕುಮಾರ ಕಕ್ಕಯ್ಯ ಪೋಳ ವೇದಿಕೆ ಗೋಷ್ಠಿ -2:ನಮ್ಮ ಸಂವಿಧಾನ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಹೊಣೆಯಾಗಿದೆ ಸಂವಿಧಾನ ಪ್ರತಿಯೊಬ್ಬ ಭಾರತೀಯರಿಗೆ ಪವಿತ್ರ ಗ್ರಂಥವಾಗಿದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕಿ ಶ್ರೀದೇವಿ ಉತ್ಲಾಸ್ಕರ ಅವರು ಹೇಳಿದರು.ಅವರು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜುಲೈ 29 ಮತ್ತು 30 ರಂದು ಎರಡು ದಿನಗಳ ಕಾಲ ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಸಂಭ್ರಮ ನಿಮಿತ್ಯ ನಡೆಯುತ್ತಿರುವ ಅಖಿಲ ಭಾರತ 10ನೇ ದಲಿತ ಸಾಹಿತ್ಯ ಸಮ್ಮೇಳನದ ಗೋಷ್ಠಿ 2ರಲ್ಲಿ ನಮ್ಮ ಸಂವಿಧಾನ ನಮ್ಮ ರಕ್ಷಣೆ ಕುರಿತು ಡಾ ಸಿದ್ದನಗೌಡ ಪಾಟೀಲ ಅವರು ಮಂಡಿಸಿದ ವಿಷಯಕ್ಕೆ ಅವರು ಪ್ರತಿಕ್ರಿಯಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರಿನ ಸಂದೀಪ ವಿಶ್ವನಾಥ ಅವರು ಸಂವಿಧಾನ ರಕ್ಷಣೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಡಾ. ಸುಜಾತಾ ಚಲವಾದಿ, ಡಾ. ಗಾಂಧೀಜಿ ಮೊಳಕೇರಿ ಡಾ ರಾಮಚಂದ್ರ ಗಾಣೆಪುರೆ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ, ಖಂಜಾಂಚಿ ಡಾ. ಎಚ್. ಬಿ. ಕೋಲ್ಕಾರ, ಕಾರ್ಯದರ್ಶಿ ಸುಭಾಷ ಹೂಡ್ಲೂರ, ಉಪಾಧ್ಯಕ್ಷ ಡಾ.ವೈ.ಎಂ.ಭಜಂತ್ರಿ, ಸಂಯೋಜಕ ಬಸವರಾಜ ಜಾಲವಾದಿ, ಪ್ರಧಾನ ಸಂಯೋಜಕ ಶ್ರೀನಾಥ ಪೂಜಾರ, ಸಹ ಸಂಯೋಜಕ ಉಮೇಶ ಶಿವಶರಣ, ದಸಾಪ ತಾಲೂಕಾ ಅಧ್ಯಕ್ಷೆ ಡಾ. ಪೂರ್ಣಿಮಾ ಧಾಮಣ್ಣನವರ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಇದ್ದರು.
ಆರತಿ ಸವ್ವಾಸೆ ಸ್ವಾಗತಿಸಿದರು. ಡಾ. ಕಪಿಲದೇವ ಚಕ್ರವರ್ತಿ ನಿರೂಪಿಸಿದರು. ಡಾ. ಗೀತಾ ಅಥರ್ಗಾ ವಂದಿಸಿದರು.
No comments:
Post a Comment