ಈ ದಿವಸ ವಾರ್ತೆ
ವಿಜಯಪುರ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಮಾರಿ ಮೇಘನಾ ಶಿವಶರಣ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರ ವಲಯ, ವಿಜಯಪುರ ಕಕ್ಷಾ ಪಬ್ಲಿಕ್ ಸ್ಕೂಲ್, ವಿಜಯಪುರ ಸಮೂಹ ಸಂಪನ್ಮೂಲ ಕೇಂದ್ರ, ಕೆಜಿಎಸ್ ನಂ.1 ಗಾಂಧಿ ಚೌಕ 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಲೋಯೋಲಾ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ಮೇಘನಾ ಮಹೇಶ ಶಿವಶರಣ (1 ರಿಂದ 4) ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.
ವಿದ್ಯಾರ್ಥಿನಿ ಮೇಘನಾ ಶಿವಶರಣಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯರು ಸಿಬ್ಬಂಧಿ ವರ್ಗ ಸೇರಿದಂತೆ ಪಾಲಕ, ಪೋಷಕರು ಅಭಿನಂದಿಸಿದ್ದಾರೆ ಎಂದು ಪತ್ರಿಕಾ ಪ್ರಟಕಣೆಯಲ್ಲಿ ಕಲ್ಲಪ್ಪ ಶಿವಶರಣ ಅವರು ತಿಳಿಸಿದ್ದಾರೆ.
No comments:
Post a Comment