Thursday, November 9, 2023

ವಿಜಯಪುರ ಜಿಲ್ಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಿ ; ಇಲ್ಲವಾದಲ್ಲಿ ರಾಜೀನಾಮೆ ನೀಡಿ : ಶಿವಸೇನಾ ಮುಖಂಡ ಸತೀಶ ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಗೆ ಮರುನಾಮಕರಣದ ವಿಚಾರ ಜನರ ಮನಸ್ಸು ಬೇರೆಡೆಗೆ ಸೆಳೆಯುವ ಸರ್ಕಾರದ ಹುನ್ನಾರವಾಗಿದೆ ಎಂದು ಶಿವಸೇನಾ ಮುಖಂಡ ಸತೀಶ ಪಾಟೀಲ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ವಿಜಯಪುರ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿದೆ ಹಾಗೂ ವಿದ್ಯುತ್ ಲೋಡ್ ಶೆಡ್ಡಿಂಗ್ ಜೊತೆಗೆ ಹದಗೆಟ್ಟ ರಸ್ತೆಗಳು, ಕುಡಿಯುವ ನೀರಿನ ಸಮಸ್ಯೆ ಇನ್ನು ಅನೇಕ ಜ್ವಲಂತ ಸಮಸ್ಯೆಗಳು ಜಿಲ್ಲೆಯಲ್ಲಿ ಇರುವ ಸಂದರ್ಭದಲ್ಲಿ ಜನಪರ ಕಾರ್ಯಮಾಡುವುದನ್ನು ಬಿಟ್ಟು ಜಿಲ್ಲೆಯ ನಾಮಕರಣಗಳ ಹಿಂದೆ ಬೆನ್ನು ಹತ್ತಿರುವ ಸರ್ಕಾರದ ಈ ಮನೋಧೋರಣೆಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.

ವಿಜಯಪುರದಲ್ಲಿ ಮೂಲಭೂತ ಸೌಕರ್ಯಗಳನ್ನು ಜನರಿಗೆ ಕಲ್ಪಿಸಿ ಸುಂದರ ನಗರವನ್ನಾಗಿ ಮಾಡುವಲ್ಲಿ ಶ್ರಮಿಸದಿರುವುದು ವಿಷಾದದ ಸಂಗತಿ. ಇದಕ್ಕೆ ರಾಜಕಾರಣಿಗಳ ಇಚ್ಚಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಇಂತಹ ತಂತ್ರಜ್ಞಾನದ ಯುಗದಲ್ಲಿ ಅಭಿವೃದ್ಧಿ ಎನ್ನುವುದು ವಿಜಯಪುರ ಜಿಲ್ಲೆಗೆ ಮರಿಚೀಕೆಯಾಗಿದೆ. ಸರ್ಕಾರವು ಎಲ್ಲಾ ರಂಗಗಳಲ್ಲಿ ಅಂದರೆ ಶಿಕ್ಷಣ, ಆರೋಗ್ಯ, ಮೂಲಭೂತ ಸೌಲಭ್ಯ , ನಿರುದ್ಯೋಗ ಸಮಸ್ಯೆಗಳು ಎಂದಿನಂತೆ ಮುಂದೆ ಸಾಗಿವೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯವನ್ನಾಳುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಹೆಸರಿಗೆ ಸ್ಥಾನವನ್ನು ಅಲಂಕರಿಸಿ ಬೆದರುಗೊಂಬೆಯಂತೆ ಕಾರ್ಯಮಾಡುತ್ತಿರುವುದು ರಾಜ್ಯದ ಮುಗ್ದ ಜನತೆ ಎಲ್ಲವನ್ನು  ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಜನ ಆಕ್ರೋಶಗೊಂಡು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಎರಡು ಮಾತಿಲ್ಲ. ಕೂಡಲೇ ಮಾಡಬೇಕಾದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಮಾಡಿ ತಮ್ಮ, ಮಾನ ಮರ್ಯಾದೆ ಹಾಗೂ ಅಧಿಕಾರದ ಗೌರವವನ್ನು ಕಾಯ್ದುಕೊಳ್ಳಬೇಕು. ಇಲ್ಲವಾದಲ್ಲಿ ಕೂಡಲೇ ರಾಜಿನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


No comments:

Post a Comment