ಈ ದಿವಸ ವಾರ್ತೆ
ವಿಜಯಪುರ : ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ವಿಜಯಪುರ ನಗರಾಧ್ಯಕ್ಷರನ್ನಾಗಿ ಯುವ ಮುಖಂಡ ಅಮೋಘ ಲೋಗಾಂವಿ ಅವರನ್ನ ನೇಮಕ ಮಾಡಲಾಗಿದೆ.
ಸಮಾಜದಲ್ಲಿ ಶೋಷಿತ ,ನೊಂದ ಹಾಗೂ ಧ್ವನಿಇಲ್ಲದವರ ಪರವಾಗಿ ಅಮೋಘ ಅವರು ಸಾಕಷ್ಟು ಹೋರಾಟ ಹಾಗೂ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ರಾದ ಅಮಿತ್ ಎ.ಕೆ. ಹಾಗೂ ಪ್ರಧಾನ ಕಾರ್ಯದರ್ಶಿ ಗಳಾದ ಶಂಕರ್ ಬಿ.ಜೆ. ಅವರು ವಿಜಯಪುರ ನಗರ ಘಟಕದ ಹಿತರಕ್ಷಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸಮಾಜದ ಹಿತದೃಷ್ಟಿಯಿಂದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯ ಪ್ರಗತಿಗಾಗಿ ಮತ್ತು ಸಮಾಜದ ಜಾಗೃತಿಗಾಗಿ ಅಮೋಘ ಅವರು ತೋರಿಸುವ ಕಾಳಜಿಯಿಂದ ಅವರನ್ನ ನೇಮಕ ಮಾಡಲಾಗಿದ್ದು ಮುಂಬರುವ ದಿನಗಳಲ್ಲಿ ಸಮಾಜವನ್ನು ಇನ್ನಷ್ಟು ಒಗ್ಗೂಡಿಸಲು ಹಾಗೂ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಸಮಿತಿಯ ಪದಾಧಿಕಾರಿಗಳು ಆಶಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
No comments:
Post a Comment