Saturday, December 2, 2023

ಹೆಣ್ಣು ಭ್ರೂಣ ಹತ್ಯೆ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಒತ್ತಾಯ

ವಿಜಯಪುರ: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಹೆಣ್ಣುಭ್ರೂಣ ಹತ್ಯೆಯನ್ನು ತಡೆದು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಗರದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಮೈಸೂರಿ, ಮಂಡ್ಯ ಜಿಲ್ಲೆಯಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ- ಹತ್ಯೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಪೆÇಲೀಸ್‍ರ ಕಾರ್ಯ ಪ್ರಶಂಸನಿಯ. ಆದರೆ ಕೇವಲ ಈ ಜಾಲ ದಕ್ಷಿಣ ಕರ್ನಾಟಕವಲ್ಲದೇ ಉತ್ತರ ಕರ್ನಾಟಕದಲ್ಲಿಯೂ ಸಕ್ರಿಯವಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ರಾಜಕಾರಣಿಗಳು ಉದ್ಯಮಿಗಳು ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಆಸ್ಪತ್ರೆಗಳಲ್ಲಿ ಈ ರೀತಿಯ ಪ್ರಕರಣಗಳು ಯಥೇಚ್ಛವಾಗಿ ನಡೆಯುತ್ತಿದೆ ಇದನ್ನು ತಡೆಯುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಪಾಪ ಕೃತ್ಯಗಳು ಬೆಳಕಿಗೆ ಬಂದಿಲ್ಲ. ಸರ್ಕಾರ ಈ ಕೂಡಲೇ ಒಂದು ತನಿಖಾ ತಂಡ ರಚಿಸಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಜಿಲ್ಲೆಯಲ್ಲಿ ನಡೆದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮೈಸೂರು- ಮಂಡ್ಯ ಜಿಲ್ಲೆಯಲ್ಲಿ ಬಂಧನಕ್ಕೆ ಒಳಗಾದ ಈ ಜಾಲದ ಆರೋಪಿಗಳು ಹೇಳುವಂತೆ ಪ್ರತಿ ತಿಂಗಳು 22 ರಿಂದ 25 ಗರ್ಭಪಾತಗಳನ್ನು ಮಾಡಿಸಿದ್ದು, ಕಳೆದ ಎರಡು ವರ್ಷಗಳಲ್ಲಿ ಸುಮಾರು 900 ಭ್ರೂಣ ಹತ್ಯೆಯನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಇದೊಂದು ದೊಡ್ಡ ಅಪರಾಧ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವುದು ಸರ್ಕಾರದ ಕರ್ತವ್ಯ ವ್ಯವಸ್ಥಿತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ರಾಕೇಶ ಇಂಗಳಗಿ, ಹಮೀದ್ ಇನಾಮ್ದಾರ್, ಮಾಳಪ್ಪ ಮಯೂರ, ಶ್ರೀಶೈಲ ಮಠ, ಮೈಬೂಬ ತಾಂಬೋಳಿ, ರಾಘವೇಂದ್ರ ಚಲವಾದಿ, ಸುರೇಂದ್ರ ಕುನಸಲೆ, ಕಾಂತು ಕಗ್ಗೋಡ, ಪ್ರಕಾಶ ದಂಡಿನ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

No comments:

Post a Comment