Tuesday, December 5, 2023

ಕಾರ್ಮಿಕರ ದಾರುಣ ಸಾವಿಗೆ ಕಾರಣರಾದ ಮಾಲೀಕರ ಮೇಲೆ ಹಾಗೂ ಕಾರ್ಮಿಕ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪಾಟೀಲ ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು ಕಾರ್ಮಿಕರ ಮೂಲಭೂತ ಸೌಲಭ್ಯ ಒದಗಿಸದೆ ಕಾನೂನು ಬಾಹೀರವಾಗಿ ಅವರಿಗೆ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವುದು ಮಾಲಿಕರ ಮೇಲೆ ಹಾಗೂ ಕಾರ್ಮಿಕ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಪ್ರಭುಗೌಡ ಪಾಟೀಲ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಟ್ಟಡ ಕಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಸಂಘಟಿತ ವಲಯದಲ್ಲಿ ಹೊರ ರಾಜ್ಯದವರು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಅಂತವರ ಜಾಡನ್ನು ಸರ್ಕಾರ ಗುರುತಿಸಬೇಕಾಗಿದೆ. ಹೊರ ರಾಜ್ಯದ ಕಾರ್ಮಿಕರ ನುಸುಳುವಿಕೆಯನ್ನು ತಡೆಗಟ್ಟುವಲ್ಲಿ ಕಾರ್ಮಿಕ ಇಲಾಖೆಯು ಸಂಪೂರ್ಣ ವಿಫಲವಾಗಿದೆ. ಇಂತಹ ವಿಷಯಗಳನ್ನು ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಬಾರಿ ತಂದರು ಮೌನವಹಿಸಿದ್ದಾರೆ. ಅವರು ಮೌನ ವಹಿಸಿದ್ದರ ಫಲವಾಗಿ ಇಂದು ಇಂತಹ ದುಷ್ಕತ್ಯಗಳು ನಡೆದಿದೆ.

ಈಗಾಗಲೇ ಹೊರ ರಾಜ್ಯದ ಕಾರ್ಮಿಕರನ್ನು ಮೆಕ್ಕೆಜೋಳ ಸಂಗ್ರಹಿಸಿಟ್ಟದ್ದ ಕಭ್ಭಿಣದ ಮೇಲ್ಪಟ್ಟ ಕುಸಿದು ಬಿದ್ದು ಕಲೆದ ರಾತ್ರಿಯಿಂದ ಜೀವನ್ಮರಣದಲ್ಲಿ ನರಳುತ್ತಿದ್ದ ಬಿಹಾರದ 8 ಕಾರ್ಮಿಕರ ಪೈಕಿ 7 ಜನ ಕಾರ್ಮಿಕರು ದಾರುಣ ಸಾವಿಗೀಡಾದ ಹೃದಯವಿದ್ರಾವಕ ಘಟನೆ ನಗರದ ಹೊರ ಭಾಗದಲ್ಲಿ ಕೈಗಾರಿಕಾ ಪ್ರದೇಶದ ರಾಜಗುರು ಫುಡ್ಸ್ ನ ಬೃಹತ್ ಗೋದಾಮಿನಲ್ಲಿ ನಡೆದಿದೆ. ಅದರಂತೆ ಇನ್ನು ಅನೇಕ ಘಟನೆಗಳು ಕೈಗಾರಿಕೆಗಳಲ್ಲಿ ಘಟನೆಗಳು ಸಂಭವಿಸಿರಬಹುದು ಅವುಗಳ ಬೆಳಕಿಗೆ ಬರದಂತೆ ಮಾಲಿಕರು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಇಂತಹ ಘಟನೆಗಳ ಮರುಕಳಿಸಬಾರದಂತಾಗಬಾರದೆಂದರೆ ಕಾರ್ಮಿಕರ ಸುರಕ್ಷತಾ ಕ್ರಮದ ಜಾಗೃತಿ, ಕಾರ್ಮಿಕರ ಹಕ್ಕುಗಳ, ಕರ್ತವ್ಯ, ಸೌಲಭ್ಯಗಳ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು. ಪ್ರತಿ ತಿಂಗಳಿಗೊಮ್ಮೆ ಕಾರ್ಮಿಕ ಕುಂದು ಕೊರತೆ ಸಭೆ ನಡೆಸಬೇಕು. ಅದರಂತೆ ಕಾರ್ಮಿಕ ಅಧಿಕಾರಿಗಳ ಮೇಲೆ ಹಾಗೂ ಮಾಲಿಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕು. ಕಾರ್ಮಿಕರ ಕುಟುಂಬಕ್ಕೆ ಹೆಚ್ಚು ಪರಿಹಾರ ಧನ ನೀಡಬೇಕೆಂದು ಪಾಟೀಲ ಆಗ್ರಹಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

No comments:

Post a Comment