ಈ ದಿವಸ ವಾರ್ತೆ
ವಿಜಯಪುರ: ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿನ ಕ್ರೀಡಾ ಇಲಾಖೆ ಕಚೇರಿಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಸರಳ, ಪ್ರಾಮಾಣಿಕ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಪತ್ನಿಯೊಂದಿಗೆ ಮತದಾನ ಮಾಡಿದರು.
ಈ ದಿವಸ ವಾರ್ತೆ
ವಿಜಯಪುರ: ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿನ ಕ್ರೀಡಾ ಇಲಾಖೆ ಕಚೇರಿಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಸರಳ, ಪ್ರಾಮಾಣಿಕ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಪತ್ನಿಯೊಂದಿಗೆ ಮತದಾನ ಮಾಡಿದರು.
ಈ ದಿವಸ ವಾರ್ತೆ
ವಿಜಯಪುರ : ವಿಜಯಪುರ ಜಿಲ್ಲೆಯ ದಕ್ಷ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಬಿಜಾಪೂರ ನಗರ ವಿಧಾನ ಸಭಾ ಮತಕ್ಷೇತ್ರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿನ ಯುವ ಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಸ್ಥಾಪಿಸಲಾದ ಮತಗಟ್ಟೆ ಸಂಖ್ಯೆ 50ರಲ್ಲಿ ಪತ್ನಿ ಶ್ವೇತಾ ದಾನಮ್ಮನವರು ಕುಟುಂಬ ಸಮೇತ ಮತದಾನ ಮಾಡಿದರು.
ಈ ದಿವಸ ವಾರ್ತೆ
ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಅಭ್ಯರ್ಥಿ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ನಗರ ಎಸ್.ಎಸ್.ಹೈಸ್ಕೂಲ್ ದಲ್ಲಿನ ಮತ ಕೇಂದ್ರ 61 ರಲ್ಲಿ ಕುಟುಂಬ ಸಮೇತ ತೆರಳಿ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಪ್ಪದೆ ತಮ್ಮ ಹತ್ತಿರದ ಮತ ಕೇಂದ್ರಕ್ಕೆ ತೆರಳಿ, ಮತಯಾಚನೆ ಮಾಡುವ ಮೂಲಕ ಉತ್ತಮ ಸರ್ಕಾರ ರಚನೆಗೆ ಸಹಕರಿಸಲು ವಿನಂತಿಸಿಕೊಂಡರು.
ಈ ದಿವಸ ವಾರ್ತೆ
ವಿಜಯಪುರ: ಪ್ರಜಾಪ್ರಭುತ್ವ ಬಲಪಡಿಸಲು ಅತಿಮುಖ್ಯವಾದ ಮತದಾನದ ಹಬ್ಬದಲ್ಲಿ 18 ವರ್ಷ ಪೂರೈಸಿದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬ ಅರ್ಹ ಮತದಾರರು ಮೇ.10ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಸಂಬಂಧಿಸಿದ ಮತಗಟ್ಟೆಗೆ ಹೋಗಿ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಕರೆ ನೀಡಿದ್ದಾರೆ.
ಪ್ರತಿ 5 ವರ್ಷಗಳಿಗೊಮ್ಮೆ ಬರುವ ಪ್ರಜಾಪ್ರಭುತ್ವ ಹಬ್ಬದಲ್ಲಿ ಪ್ರತಿಯೊಬ್ಬರು ಉತ್ಸಾಹದಿಂದ ಭಾಗವಹಿಸಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಾಧ್ಯವಾಗುತ್ತದೆ. ಈ ಸಲದ ಚುನಾವಣೆಯಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತನಾಗದೇ ಪ್ರತಿಯೊಬ್ಬರು ಮೇ.10ರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಯುವ ಮತದಾನದಲ್ಲಿ ಭಾಗವಹಿಸಿ, ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಬಲಪಡಿಸಲು ಕೈ ಜೋಡಿಸುವಂತೆ ಅವರು ಕರೆ ನೀಡಿದ್ದಾರೆ.
ಭಾವಚಿತ್ರ ಇರುವ ಪರ್ಯಾಯ ದಾಖಲೆ*: ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡ ಮತದಾರರು ಮತಗಟ್ಟೆಗೆ ತೆರಳಿ ಚುನಾವಣಾ ಆಯೋಗ ಗುರುತಿಸಿ ಈ ಕೆಳಕಾಣಿಸಿದ ದಾಖಲೆಗಳಲ್ಲಿ ಯಾವುದಾದರೊಂದು ದಾಖಲೆಯನ್ನು ಮತಗಟ್ಟೆ ಅಧಿಕಾರಿಗೆ ತೋರಿಸಿ ಮತದಾನ ಮಾಡಬಹುದುದಾಗಿದೆ.
ಎಪಿಕ್ ಕಾರ್ಡ್, ಆಧಾರ ಕಾರ್ಡ್, ಎಂಜಿಎನ್‍ಆರ್‍ಇಜಿಎ ಜಾಬ್ ಕಾರ್ಡ್, ಬ್ಯಾಂಕ್-ಅಂಚೆ ಕಚೇರಿಯ ಭಾವಚಿತ್ರವಿರುವ ಪಾಸ್ ಪುಸ್ತಕ, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಪ್ಯಾನ್ ಕಾರ್ಡ್, ಸರ್ಕಾರಿ, ಸಾರ್ವಜನಿಕ ಕಂಪನಿಗಳ ಗುರುತಿನ ಚೀಟಿ, ಚಾಲನಾ ಪರವಾನಿಗೆ, ಎಂಓಎಲ್ ಮತ್ತು ಇ ಅನ್ವಯ ನೀಡಲಾಗಿರುವ ಸ್ಮಾರ್ಟ್ ಕಾರ್ಡ್, ಪಾಸ್‍ಪೋರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆ ಪತ್ರ, ಎಂಎಲ್‍ಎ, ಎಂಪಿ. ಅಧಿಕೃತ ಗುರುತಿನ ಚೀಟಿ, ವಿಶೇಷಚೇತನ ಗುರುತಿನ ಚೀಟಿಯಲ್ಲಿ ಯಾವುದಾದರೊಂದು ದಾಖಲೆಯನ್ನು ಮತಗಟ್ಟೆ ಅಧಿಕಾರಿಗಳಿಗೆ ತೋರಿಸಿ ಮತದಾನ ಮಾಡಬಹುದಾಗಿದೆ.